LATEST NEWS
ರೀಲ್ಸ್ ರಾಣಿ ಪತಿ ಕೊ*ಲೆಯಲ್ಲಿ ಮತ್ತೊಂದು ಟ್ವಿಸ್ಟ್ : ಪ್ರತಿಮಾ ಬಳಸಿದ್ದ ವಿಷ ಯಾವುದು ಗೊತ್ತಾ ?
ಅಜೆಕಾರು: ಬಾಲಕೃಷ್ಣ ಕೊ*ಲೆಗೆ ಸಂಬಂಧಿಸಿದಂತೆ ಕೊಲೆ ಆರೋಪಿ ಪ್ರತಿಮ ಅಹಾರದಲ್ಲಿ ಸೇರಿಸಿದ್ದ ವಿಷ ಪದಾರ್ಥವು ಆರ್ಸೆನಿಕ್ ಟ್ರೈ ಆಕ್ಸೈಡ್ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದುಬಂದಿದೆ.
ಆರ್ಸೆನಿಕ್ ಟ್ರೈ ಆಕ್ಸೈಡ್ ವಿಷ ಪದಾರ್ಥವನ್ನು ಪ್ರಿಯಕರ ದಿಲೀಪ್ ಹೆಗ್ಡೆ ಉಡುಪಿಯ ಲ್ಯಾಬ್ ಒಂದರಿಂದ ಪಡೆದಿದ್ದ ಎನ್ನಲಾಗಿದೆ.
ಈ ಹಿನ್ನೆಲೆಯಲ್ಲಿ ಅಜೆಕಾರು ಪೊಲೀಸರು ಲ್ಯಾಬ್ ಮಾಲಕರನ್ನು ಹಾಗೂ ಅವರ ಮೊಬೈಲ್ ಅನ್ನು ವಶಕ್ಕೆ ಪಡೆದಿದ್ದಾರೆ. ಅದರ ಜತೆ ಆರೋಪಿ ಪ್ರತಿಮಾಳಿಂದ 2 ಮೊಬೈಲ್ ಹಾಗೂ ಮತ್ತೊಬ್ಬ ಆರೋಪಿ ದಿಲೀಪ್ ಹೆಗ್ಡೆಯಿಂದ 1 ಮೊಬೈಲ್ ಮತ್ತು 2 ಸಿಮ್ ಸೇರಿದಂತೆ ಒಟ್ಟು 4 ಮೊಬೈಲ್‌ಗಳನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಯಲ್ಲಿ ತೊಡಗಿಕೊಂಡಿದ್ದಾರೆ.
ಆರೋಪಿ ದಿಲೀಪ್ ಉಡುಪಿಯ ಲ್ಯಾಬ್‌ನಿಂದ ಆರ್ಸೆನಿಕ್ ಟ್ರೈ ಆಕ್ಸೈಡ್ ತರಿಸಿ ಬಾಲಕೃಷ್ಣ ಅವರ ಪತ್ನಿ ಪ್ರತಿಮಾಳಿಗೆ ನೀಡಿದ್ದ. ಪ್ರತಿಮಾ ನಿತ್ಯ ಆಹಾರದ ಜತೆ ಸ್ವಲ್ಪ ಸ್ವಲ್ಪವೇ ಪತಿಗೆ ನೀಡುತ್ತಿದ್ದಳು. ಇದರಿಂದಾಗಿ ಬಾಲಕೃಷ್ಣ ಅವರ ಅಂಗಾಂಗಗಳು ಸಂವೇದನೆ ಕಳೆದುಕೊಂಡು ಆಸ್ಪತ್ರೆ ಸೇರುವಂತಾಯಿತು. ಚಿಕಿತ್ಸೆಯ ಬಳಿಕ ಚೇತರಿಸಿಕೊಂಡಿದ್ದ ಬಾಲಕೃಷ್ಣ ಅವರನ್ನು ಅ. 19ರ ರಾತ್ರಿ ಮನೆಗೆ ಕರೆತರಲಾಗಿತ್ತು. ಆರೋಪಿಗಳಾದ ಪ್ರತಿಮಾ ಹಾಗೂ ಪ್ರಿಯಕರ ದಿಲೀಪ್ ಹೆಗ್ಡೆ ಸೇರಿಕೊಂಡು ಅದೇ ದಿನ ಮಧ್ಯರಾತ್ರಿ ಬಳಿಕ ಉಸಿರುಗಟ್ಟಿಸಿ ಕೊಲೆ ಮಾಡಿದ್ದರು.
ವಿಷದ ಬಾಟಲಿ ಪತ್ತೆಗಾರಿಕೆ :
ಪ್ರತಿಮಾಳು ವಿಷವನ್ನು ಪ್ರತೀನಿತ್ಯ ತನ್ನ ಪತಿಗೆ ಆಹಾರದ ಜತೆ ಮಿಶ್ರಣ ಮಾಡಿ ಕೊಟ್ಟ ಬಳಿಕ ಖಾಲಿಯಾದ ವಿಷದ ಬಾಟಲಿಯನ್ನು ಪ್ರಿಯಕರ ದಿಲೀಪ್ ಹೆಗ್ಡೆಗೆ ನೀಡಿದ್ದು, ಆತ ಕಾರ್ಕಳ ಕುಕ್ಕುಂದೂರಿನ ಅಯ್ಯಪ್ಪನಗರದ ಕುಕ್ಕುಂದೂರು-ಹಿರ್ಗಾನ ಸಂಪರ್ಕ ರಸ್ತೆಯ ಬಳಿ ಬಾಟಲಿ ಎಸೆದಿರುವುದಾಗಿ ಪೊಲೀಸರಲ್ಲಿ ಬಾಯ್ಬಿಟ್ಟಿದ್ದ. ಆದರೆ ಅ. 27ರಂದು ಪೊಲೀಸರು ಬಾಟಲಿ ಪತ್ತೆಗಾಗಿ ಆರೋಪಿಯನ್ನು ಆ ಸ್ಥಳಕ್ಕೆ ಕರೆದೊಯ್ದು ಹುಡುಕಿದಾಗ ಅಲ್ಲಿ ಯಾವುದೇ ಬಾಟಲಿ ಪತ್ತೆಯಾಗಿಲ್ಲ.
ಚೌತಿ ದಿನ ಮೊದಲ ಪ್ರಯೋಗ :
ಹಬ್ಬ ಎಂದರೆ ಜತೆಗೂಡಿ ಪಾಯಸದ ಊಟ ಮಾಡುವುದು ಕ್ರಮ. ಆದರೆ ಇಲ್ಲಿ ಪತ್ನಿಯೇ ತಾಳಿ ಕಟ್ಟಿದ ಪತಿಗೆ ವಿಷ ನೀಡಿರುವುದು ವಿಪರ್ಯಾಸವೇ ಸರಿ. ಪತಿ ಬಾಲಕೃಷ್ಣ ಅವರನ್ನು ಮುಗಿಸಲು ವ್ಯವಸ್ಥಿತ ಷಡ್ಯಂತ್ರ ಹೆಣೆದಿದ್ದ ಪ್ರತಿಮಾ ಚೌತಿಯ ದಿನ ಹಬ್ಬದ ಊಟದಲ್ಲಿ ಪತಿಗೆ ಮೊದಲು ವಿಷ ಬೆರೆಸಿ ಕೊಟ್ಟಿದ್ದಳು. ಆ ದಿನ ಅವರು ವಾಂತಿ ಮಾಡಿದ್ದು ಅನಂತರ ಸ್ವಲ್ಪ ಸ್ವಲ್ಪವೇ ವಿಷ ನೀಡಿದ್ದರಿಂದ ಅವರ ಆರೋಗ್ಯ ಬಿಗಡಾಯಿಸುತ್ತ ಸಾಗಿತ್ತು. ಅದರ ನಡುವೆ ಜ್ವರ ಕೂಡ ಬಂದಿತ್ತು.
ಸಾರ್ವಜನಿಕರಿಂದ ಆರ್ಥಿಕ ನೆರವು :
ಸುಮಾರು ಎರಡು ತಿಂಗಳು ವಿವಿಧ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವಾಗ ಸಾಕಷ್ಟು ಹಣ ಖರ್ಚಾಗಿತ್ತು. ಭಾವನ ಚಿಕಿತ್ಸೆಗಾಗಿ ಸಂದೀಪ್ ಸುಮಾರು ಒಂದು ಲಕ್ಷ ರೂ. ವ್ಯಯಿಸಿದ್ದರು. ಇನ್ನೂ ಹೆಚ್ಚಿನ ಹಣ ಅಗತ್ಯವಾಗಿದ್ದರಿಂದ ಅವರು ಸಾಮಾಜಿಕ ಜಾಲತಾಣದ ಮೂಲಕ ನೆರವಿಗೆ ಮನವಿ ಮಾಡಿದ್ದರು. ಪ್ರತಿಮಾ ಕೂಡ ಜಾಲತಾಣದ ಮೂಲಕ ನೆರವು ಮಾಡುವಂತೆ ಯಾಚಿಸಿದ್ದರು. ಇಬ್ಬರೂ ಪ್ರತ್ಯೇಕ ಖಾತೆ ನೀಡಿದ್ದು ಸಾಕಷ್ಟು ನೆರವು ಸಾರ್ವಜನಿಕರಿಂದ ದೊರಕಿತ್ತು.
ಇಂದು ದಿಲೀಪ್ ಕೋರ್ಟಿಗೆ ಹಾಜರು :
ಆರೋಪಿ ಪ್ರತಿಮಾಳ ಪ್ರಿಯಕರ ದಿಲೀಪ್ ಹೆಗ್ಡೆಯನ್ನು ಇಂದು (ಅ.28) ಬೆಳಗ್ಗೆ ಕಾರ್ಕಳ ನ್ಯಾಯಾಲಯಕ್ಕೆ ಪೊಲೀಸರು ಹಾಜರುಪಡಿಸಿದ್ದಾರೆ. ಆತನನ್ನು ಮೂರು ದಿನ ಪೊಲೀಸರ ಕಸ್ಟಡಿಗೆ ನೀಡಲಾಗಿತ್ತು. ವಿಷದ ಬಾಟಲಿ ಸಹಿತ ಇನ್ನೂ ಕೆಲ ಸೊತ್ತುಗಳನ್ನು ವಶಕ್ಕೆ ಪಡೆಯಬೇಕಾಗಿರುವ ಕಾರಣ ಆರೋಪಿಯನ್ನು ಮತ್ತಷ್ಟು ದಿನ ಪೊಲೀಸರು ಕಸ್ಟಡಿಗೆ ಕೇಳುವ ಸಾಧ್ಯತೆ ಇದೆ. ಇನ್ನೊಂದು ಹಂತದಲ್ಲಿ ದಿಲೀಪ್‌ನನ್ನು ಸದ್ಯ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ, ಈಗಾಗಲೇ ನ್ಯಾಯಾಂಗ ಬಂಧನದಲ್ಲಿ ಹಿರಿಯಡಕ ಸಬ್‌ಜೈಲಿನಲ್ಲಿರುವ ಆರೋಪಿ ಪ್ರತಿಮಾಳನ್ನು ಪೊಲೀಸರು ಕಸ್ಟಡಿಗೆ ಕೇಳುವ ಪ್ರಕ್ರಿಯೆಯನ್ನು ನಡೆಸಬಹುದು. ಅನಂತರ ಇಬ್ಬರನ್ನೂ ಒಟ್ಟಿಗೆ ಕಸ್ಟಡಿಗೆ ಕೇಳುವ ಸಾಧ್ಯತೆ ಹೆಚ್ಚಾಗಿದೆ.
ಆರ್ಸೆನಿಕ್ ಟ್ರೈ ಆಕ್ಸೈಡ್ ಎಂದರೇನು?
ಆರ್ಸೆನಿಕ್ ಟ್ರೈ ಆಕ್ಸೈಡ್ ರಾಸಾಯನಿಕ ಪದಾರ್ಥ ಹೆಚ್ಚು ವಿಷಕಾರಿ ಮತ್ತು ಬಹುಮುಖ ಸಂಯುಕ್ತ ವಸ್ತು ಎನ್ನಲಾಗಿದ್ದು, ಇದನ್ನು ಹೆಚ್ಚಾಗಿ ಶಾಲಾ ಕಾಲೇಜುಗಳ ಲ್ಯಾಬ್‌ಗಳಲ್ಲಿ ಬಳಸಲಾಗುತ್ತದೆ. ಬಿಳಿ ಅಥವಾ ಹಳದಿ ಬಣ್ಣದ ಪುಡಿಯಾಗಿದ್ದು, ವಾಸನೆಯಿಲ್ಲ. ಈ ವಿಷಕಾರಿ ಪದಾರ್ಥ ನೀರು, ಎಥೆನಾಲ್ ಮತ್ತು ಇತರ ಸಾವಯವ ದ್ರಾವಕಗಳಲ್ಲಿ ಕರಗುತ್ತದೆ.
ರೀಲ್ಸ್ ಮಾಡುವಂತೆ ಪತ್ನಿಯಿಂದ ಪೀಡನೆ:
ಕೊರೊನಾ ಬಳಿಕ ಪ್ರತಿಮಾಗೆ ರೀಲ್ಸ್ ಅಭ್ಯಾಸ ಹೆಚ್ಚಾಗಿತ್ತು. ಕೆಲವು ಸಮಯದ ಹಿಂದೆ ಮಾಡಿದ್ದ ‘ಕರಿಮಣಿ ಮಾಲೀಕ ನೀನಲ್ಲ.. ‘ಎಂಬ ಪತಿಯೊಂದಿಗೆ ಮಾಡಿದ್ದ ರೀಲ್ಸ್ ಹೆಚ್ಚು ಜನಪ್ರಿಯವಾಗಿತ್ತು. ಗಂಡ ಬಾಲಕೃಷ್ಣ ಪೂಜಾರಿಗೆ ರೀಲ್ಸ್‌ನಲ್ಲಿ ಅಷ್ಟೊಂದು ಆಸಕ್ತಿ ಇಲ್ಲವಾಗಿದ್ದರೂ ಪತ್ನಿಯ ಒತ್ತಾಯ ತಾಳಲಾರದೆ ಭಾಗವಹಿಸುತ್ತಿದ್ದರು ಎಂದು ಅವರ ತಾಯಿ ತಿಳಿಸಿದ್ದಾರೆ. ರೀಲ್ಸ್‌ನಲ್ಲಿ ಭಾಗವಹಿಸಲೇಬೇಕು ಎಂಬ ಪತ್ನಿಯ ಅತಿಯಾದ ಪೀಡನೆಯಿಂದ ರೋಸಿ ಹೋಗಿದ್ದ ಬಾಲಕೃಷ್ಣ ಅವರು ಹಲವಾರು ಬಾರಿ ಪತ್ನಿಗೆ ಗದರಿದ್ದರು.
ರೀಲ್ಸ್ ಮಾಡದಿರುವಂತೆಯೂ ತಿಳಿಸಿದ್ದರು. ಬ್ಯೂಟಿಪಾರ್ಲರ್ ಆರಂಭಿಸಿದ ಬಳಿಕ ಗೆಳತಿಯರ ಜತೆಯೂ ರೀಲ್ಸ್ ಮಾಡುತ್ತಿದ್ದಳು. ಎಸೆಸೆಲ್ಸಿವರೆಗೆ ಓದಿದ್ದ ಪ್ರತಿಮಾ ಮೊಬೈಲ್‌ನಲ್ಲಿ ರೀಲ್ಸ್ ಮಾಡುವ ಕಲೆಯನ್ನು ಕರಗತಮಾಡಿಕೊಂಡಿದ್ದಳು. 200ಕ್ಕೂ ಹೆಚ್ಚು ರೀಲ್ಸ್ ಮಾಡಿ ಅದನ್ನು ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಹಂಚಿಕೊಂಡಿದ್ದಾಗಿ ತಿಳಿದು ಬಂದಿದೆ.
LATEST NEWS
ನಿಯಂತ್ರಣ ತಪ್ಪಿ ಬೈಕ್ ಗದ್ದೆಗೆ; ಸವಾರ ಸಾ*ವು
ತೆಕ್ಕಟ್ಟೆ : ನಿಯಂತ್ರಣ ತಪ್ಪಿ ಬೈಕ್ ಗದ್ದೆಗೆ ಉರುಳಿ ಬಿದ್ದು ಸವಾರ ಸ್ಥಳದಲ್ಲೇ ದಾರುಣವಾಗಿ ಸಾವಿಗೀಡಾದ ಘಟನೆ ಕುಂದಾಪುರ ತೆಕ್ಕಟ್ಟೆ ಸಮೀಪದ ಕೊಮೆಯಲ್ಲಿ ಸಂಭವಿಸಿದೆ.
ಪಡುಕರೆ ನಿವಾಸಿ ಮಹೇಂದ್ರ (32) ಮೃತ ದುರ್ದೈವಿ.
ಸಂಬಂಧಿಕರ ಮನೆಯಲ್ಲಿ ದೀಪಾವಳಿ ಹಬ್ಬದ ಕಾರ್ಯಕ್ರಮವನ್ನು ಮುಗಿಸಿ ತಡರಾತ್ರಿ ಬೈಕ್ ನಲ್ಲಿ ಮಹೇಂದ್ರ ಬರುತ್ತಿದ್ದ ವೇಳೆ ತೆಕ್ಕಟ್ಟೆ– ಕೊಮೆ ರಸ್ತೆಯ ತಿರುವಿನಲ್ಲಿ ನಿಯಂತ್ರಣ ತಪ್ಪಿ ಬೈಕ್ ಸಹಿತ ರಸ್ತೆ ಬದಿಯ ಗದ್ದೆಗೆ ಆಯತಪ್ಪಿ ಬಿದ್ದಿದ್ದಾರೆ. ಗದ್ದೆಯಲ್ಲಿ ನೀರಿದ್ದುದರಿಂದ ಉಸಿರುಗಟ್ಟಿ ಸ್ಥಳದಲ್ಲೇ ಮೃತ ಪಟ್ಟಿದ್ದಾರೆ ಎಂದು ಹೇಳಲಾಗಿದೆ.
ಕೃಷಿಭೂಮಿಯಲ್ಲಿ ಅಪಾರ ಪ್ರಮಾಣದಲ್ಲಿ ನೀರು ತುಂಬಿ ಕೊಂಡಿದ್ದು, ಬೈಕ್ ಚಾಲಕನ ನಿಯಂತ್ರಣ ತಪ್ಪಿ ಆಕಸ್ಮಿಕವಾಗಿ ಮಗುಚಿ ಬಿದ್ದಿದ್ದರಿಂದ ನೀರಿನಲ್ಲಿ ಉಸಿರುಗಟ್ಟಿ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
DAKSHINA KANNADA
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನಿಂದ ಮೆಸೇಜ್; ಯುವಕರಿಂದ ಹಲ್ಲೆ
ಸುಬ್ರಹ್ಮಣ್ಯ: ಅನ್ಯಕೋಮಿನ ಯುವಕನೋರ್ವ ವಿದ್ಯಾರ್ಥಿನಿಗೆ ಮೆಸೇಜ್ ಮಾಡಿದ್ದಾನೆ ಎಂದು ಆರೋಪಿಸಿ ತಂಡವೊಂದು ಹಲ್ಲೆ ಮಾಡಿದ ಘಟನೆ ಸುಬ್ರಹ್ಮಣ್ಯದ ಗುತ್ತಿಗರುವಿನಲ್ಲಿ ನಡೆದಿದೆ.
ಥಳಿತಕ್ಕೊಳಗಾದ ಯುವಕ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾನೆ.
ನಿಯಾಝ್ ಎಂಬಾತ ಹಲ್ಲೆಗೊಳಗಾದ ಯುವಕ.
ಸ್ಥಳೀಯ ಯುವತಿಯೋರ್ವಳಿಗೆ ನಿಯಾಝ್ ಮೆಸೇಜ್ ಮಾಡುತ್ತಿರುವುದಾಗಿ ತಿಳಿದು ಬಂದ ಬಳಿಕ, ಅವನನ್ನು ಕರೆಸಿಕೊಂಡ ಯುವಕರ ತಂಡವೊಂದು ಹಲ್ಲೆ ನಡೆಸಿದ್ದಾರೆ.
ಈ ಪ್ರಕರಣದ ಕುರಿತು, ಸುಬ್ರಹ್ಮಣ್ಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
LATEST NEWS
ಪ್ರಚಾರದ ವೇಳೆ ಬೈಕ್‌ನಿಂದ ಬಿದ್ದ ನಿಖಿಲ್ ಕುಮಾರಸ್ವಾಮಿ
ಮಂಗಳೂರು/ರಾಮನಗರ : ಚನ್ನಪಟ್ಟಣ ಉಪಚುನಾವಣಾ ಪ್ರಚಾರದ ವೇಳೆ ನಿಖಿಲ್ ಕುಮಾರಸ್ವಾಮಿ ಬೈಕ್‌ನಿಂದ ಬಿದ್ದಿದ್ದಾರೆ.
ಚನ್ನಪಟ್ಟಣ ತಾಲೂಕಿನ ಮಂಗಾಡಹಳ್ಳಿಯಲ್ಲಿ ನಿಖಿಲ್ ಕಾರ್ಯಕರ್ತನ ಬೈಕ್ ಏರಿ ಪ್ರಚಾರ ನಡೆಸುತ್ತಿದ್ದರು. ಈ ಸಂದರ್ಭ ಮಳೆ ನೀರಿನಿಂದ ಕೆಸರಾಗಿದ್ದ ರಸ್ತೆಯಲ್ಲಿ ಆಯತಪ್ಪಿ ಬಿದ್ದಿದ್ದಾರೆ.
ಇದನ್ನೂ ಓದಿ : ಚಲಿಸುತ್ತಿದ್ದ ಬೈಕಿನಲ್ಲಿ ಪಟಾಕಿ ಸಿಡಿಸಿ ಪುಂಡಾಟ; ಇಬ್ಬರ ಬಂಧನ
ತಕ್ಷಣವೇ ಸ್ಥಳೀಯ ಕಾರ್ಯಕರ್ತರು ನಿಖಿಲ್ ನೆರವಿಗೆ ಧಾವಿಸಿದ್ದಾರೆ. ಅವರನ್ನು ಮೇಲಕ್ಕೆತ್ತಿ ಉಪಚರಿಸಿದ್ದಾರೆ. ಸ್ವಲ್ಪಹೊತ್ತು ವಿಶ್ರಾಂತಿ ಪಡೆದ ಬಳಿಕ ಮತ್ತೆ ನಿಖಿಲ್ ಕುಮಾರಸ್ವಾಮಿ ಪ್ರಚಾರ ಕಾರ್ಯ ಮುಂದುವರಿಸಿದರು.
- LATEST NEWS6 days ago
ಮಾರುಕಟ್ಟೆಗೆ ಲಗ್ಗೆಯಿಟ್ಟಿದೆ ʼಡಿಜಿಟಲ್ ಕಾಂಡೋಮ್ʼ !! ಬಳಕೆ ಹೇಗೆ ?
- BIG BOSS7 days ago
BBK 11 : ಸೃಜನ್ ಲೊಕೇಶ್ ಜೊತೆ ಬಂದ ಹೊಸ ಕಾರಲ್ಲಿ ಹೊರ ಹೊಗೋದು ಯಾರು ಗೊತ್ತಾ ??
- BIG BOSS7 days ago
BBK 11 : ಹನುಮಂತನ ನಿಜಬಣ್ಣ ಬಯಲು ಮಾಡಿದ ಭಟ್ರು !!
- LATEST NEWS4 days ago
ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಅಕ್ಕಿಯ ಜೊತೆಗೆ ಉಚಿತವಾಗಿ ಸಿಗಲಿವೆ ಈ 9 ವಸ್ತುಗಳು.!