Connect with us

LATEST NEWS

ಮತಾಂತರ ನಿಷೇಧ ಸುಗ್ರೀವಾಜ್ಞೆ ಬಗ್ಗೆ ಹೈಕೋರ್ಟ್‌ಗೆ ಪಿಐಎಲ್‌: ರಾಜ್ಯ ಸರ್ಕಾರಕ್ಕೆ ನೋಟಿಸ್‌

Published

on

ಬೆಂಗಳೂರು: ಕರ್ನಾಟಕ ರಾಜ್ಯ ಸರಕಾರ ಮತಾಂತರ ನಿಷೇಧ ಕಾಯಿದೆಯ ಸುಗ್ರೀವಾಜ್ಞೆ ಪ್ರಶ್ನಿಸಿರುವ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿರುವ ಕರ್ನಾಟಕ ಹೈಕೋರ್ಟ್‌ ಶುಕ್ರವಾರ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿದೆ. ಅಲ್ಲದೇ, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.


ನವದೆಹಲಿಯ ಎವಾಂಜಲಿಕಲ್‌ ಫೆಲೋಶಿಫ್‌ ಆಫ್‌ ಇಂಡಿಯಾ ಮತ್ತು ಬೆಂಗಳೂರಿನ ಮಾನವ ಹಕ್ಕುಗಳಿಗಾಗಿ ಅಖಿಲ ಭಾರತ ಕ್ರೈಸ್ತ ಒಕ್ಕೂಟ ಸಲ್ಲಿಸಿರುವ ಸಾರ್ವಜನಿಕ ಹಿತಾಸಕ್ತಿ ಮನವಿಯ ವಿಚಾರಣೆಯನ್ನು ಹಂಗಾಮಿ ಮುಖ್ಯ ನ್ಯಾಯಮೂರ್ತಿ ಅಲೋಕ್‌ ಅರಾಧೆ ಮತ್ತು ನ್ಯಾಯಮೂರ್ತಿ ಜೆ ಎಂ ಖಾಜಿ ಅವರ ನೇತೃತ್ವದ ವಿಭಾಗೀಯ ಪೀಠವು ನಡೆಸಿತು.

ಮನವಿಯಲ್ಲೇನಿದೆ?
2022ರ ಮೇ 17ರಂದು ರಾಜ್ಯ ಸರ್ಕಾರ ಮತಾಂತರ ನಿಷೇಧ ಕಾಯಿದೆ ಬಗ್ಗೆ ಸುಗ್ರೀವಾಜ್ಞೆ ಹೊರಡಿಸಿದ್ದು, ಇದು ಜಾತ್ಯತೀತ ವಾದಕ್ಕೆ ವಿರುದ್ಧವಾಗಿದೆ. ಅಲ್ಲದೇ, ಸಾರ್ವಜನಿಕ ಸುವ್ಯವಸ್ಥೆಗೆ ವಿರುದ್ಧವಾಗಿದ್ದು,

ಸಂವಿಧಾನದ 25ನೇ ವಿಧಿಯಡಿ ಕಲ್ಪಿಸಲಾಗಿರುವ ಧರ್ಮ ಪ್ರಚಾರ ಸ್ವಾತಂತ್ರ್ಯಕ್ಕೆ ವಿರುದ್ಧವಾಗಿದೆ. “ಆಕ್ಷೇಪಾರ್ಹವಾದ ಸುಗ್ರೀವಾಜ್ಞೆಯ ನಿಬಂಧನೆಗಳು ಸಂವಿಧಾನದ 21ನೇ ವಿಧಿ ಉಲ್ಲಂಘಿಸಲಿದ್ದು, ವ್ಯಕ್ತಿಯೊಬ್ಬರ ವೈಯಕ್ತಿಕ ಸ್ವಾತಂತ್ರ್ಯವನ್ನು ಹತ್ತಿಕ್ಕುತ್ತದೆ.

ಪಿತೂರಿ ಸಿದ್ಧಾಂತದ ಆಧಾರದ ಮೇಲೆ ಇದನ್ನು ಜಾರಿಗೆ ತರಲಾಗಿದ್ದು, ವಯಸ್ಕರಾಗಿದ್ದರೂ ಅವರನ್ನು ಅಕ್ರಮವಾಗಿ ಮತಾಂತರ ಮಾಡಲಾಗುತ್ತಿದೆ ಎಂದು ಭಾವಿಸಿದಂತಿದೆ. ಸುಗ್ರೀವಾಜ್ಞೆಯ ಸೆಕ್ಷನ್‌ 5ರ ಅಡಿ ಅಕ್ರಮವಾಗಿ ಮತಾಂತರ ಮಾಡಿಸಿದರೆ 3-5 ವರ್ಷ ಶಿಕ್ಷೆ ವಿಧಿಸಬಹುದಾಗಿದೆ.

ಅಕ್ರಮ ಮತಾಂತರದ ಸಂತ್ರಸ್ತರು ಅಪ್ರಾಪ್ತರಾಗಿದ್ದರೆ ಅಥವಾ ಎಸ್‌ಸಿ/ಎಸ್‌ಟಿ ಸಮುದಾಯಕ್ಕೆ ಸೇರಿದ್ದರೆ ಅಥವಾ ಮಹಿಳೆಯಾಗಿದ್ದರೆ 3-10 ವರ್ಷ ಶಿಕ್ಷೆ ವಿಧಿಸಬಹುದಾಗಿದೆ.

ಆಕ್ಷೇಪಾರ್ಹ ಸುಗ್ರೀವಾಜ್ಞೆಯಲ್ಲಿ ಸಂತ್ರಸ್ತರಿಗೆ ಪರಿಹಾರ ನೀಡುವುದರ ಜೊತೆಗೆ ಆರೋಪಿಗೆ ಗರಿಷ್ಠ ಐದು ಲಕ್ಷ ದಂಡ ವಿಧಿಸುವ ಅವಕಾಶವನ್ನು ಕಲ್ಪಿಸಲಾಗಿದೆ.

ಈ ನಿಬಂಧನೆಯು ಜನರನ್ನು ಗುರಿಯಾಗಿಸಿ ಕ್ಷುಲ್ಲಕ ಮತ್ತು ಹುಸಿ ಪ್ರಕರಣ ದಾಖಲಿಸಲು ಅವಕಾಶ ಮಾಡಿಕೊಡಬಹುದು” ಎಂದು ಮನವಿಯಲ್ಲಿ ಆತಂಕ ವ್ಯಕ್ತಪಡಿಸಲಾಗಿದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಮನವಿ ಆಲಿಸಿದ ಕರ್ನಾಟಕ ಹೈಕೋರ್ಟ್‌ ರಾಜ್ಯ ಸರ್ಕಾರಕ್ಕೆ ನೋಟಿಸ್‌ ಜಾರಿ ಮಾಡಿ, ಆಕ್ಷೇಪಣೆ ಸಲ್ಲಿಸಲು ಸರ್ಕಾರಕ್ಕೆ ನಾಲ್ಕು ವಾರಗಳ ಕಾಲಾವಕಾಶ ನೀಡಿದೆ.

DAKSHINA KANNADA

ಎರಡು ಲಾರಿಗಳ ಮಧ್ಯೆ ಅಪಘಾತ; ಚಾಲಕ ಗಂಭೀರ

Published

on

ಮಂಗಳೂರು: ಬೈಕಂಪಾಡಿ ಹೋಟೆಲ್ ಶ್ರೀ ದ್ವಾರದ ಬಳಿ ಲಾರಿಗಳೆರಡರ ನಡುವೆ ಅಪಘಾತ ಸಂಭವಿಸಿ ಲಾರಿ ಚಾಲಕ ಗಂಭಿರ ಗಾಯಗೊಂಡ ಘಟನೆ ನಡೆದಿದೆ. ಒಂದು ಲಾರಿಯೊಂದು ಗ್ರಾನೈಟ್ ಅಂಗಡಿಯೊಳಗೆ ನುಗ್ಗಿದ್ದು, ಅಪಾರ ಮೌಲ್ಯದ ಗ್ರಾನೈಟ್‌ ಹಾನಿಗೊಂಡಿದೆ.

ಮುಂದೆ ಓದಿ..; ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

accident

ಲಾರಿ ಸಾಗಾಟ ಮಾಡುತ್ತಿದ್ದ ಲಾರಿ ಅಪಘಾತದಿಂದ ನಜ್ಜುಗುಜ್ಜಾಗಿದೆ. ಇನ್ನು ಇದೇ ಭಾಗದಲ್ಲಿ ನಿತ್ಯವೂ ಮಹಿಳೆಯರು ಮೀನ ಮಾರಾಟ ಮಾಡುತ್ತಿದ್ದರು. ಅದೃಷ್ಟವಶಾತ್ ಇದೀಗ ಭಾರೀ ಅನಾಹುತ ತಪ್ಪಿದೆ.

 

Continue Reading

LATEST NEWS

60ನೇ ವಯಸ್ಸಿಗೆ “ಮಿಸ್ ಯುನಿವರ್ಸ್” ಕಿರೀಟ ಮುಡಿಗೇರಿಸಿಕೊಂಡ ಈಕೆ ಯಾರು ಗೊತ್ತಾ? ಈಕೆಯ ಸೌಂದರ್ಯಕ್ಕೆ ಬೆರಗಾದ್ರು ಜನ..!!

Published

on

ಹೆಚ್ಚಾಗಿ ಮಿಸ್​ ವರ್ಲ್ಡ್​​​, ಮಿಸ್​​ ಯುನಿವರ್ಸ್ ಇನ್ನೂ ಮುಂತಾದ ಸೌಂದರ್ಯ ಸ್ಪರ್ಧೆಯಲ್ಲಿ ಹದಿಹರೆಯದ ಸುಂದರಿಯರೇ ಭಾಗವಹಿಸುತ್ತಾರೆ. ಆದರೆ ಅಲೆಜಾಂಡ್ರಾ ಮಾರಿಸಾ ರೋಡ್ರಿಗಸ್ ಎಂಬ ಮಹಿಳೆ ತನ್ನ 60ನೇ ವಯಸ್ಸಿನಲ್ಲಿ ಮಿಸ್ ಯುನಿವರ್ಸ್ ಕಿರೀಟವನ್ನು ಮುಡಿಗೇರಿಸಿಕೊಂಡಿದ್ದಾಳೆ.

ವೃತ್ತಿಯಲ್ಲಿ ವಕೀಲ ಮತ್ತು ಪತ್ರಕರ್ತೆಯಾಗಿರೋ ಅಲೆಜಾಂಡ್ರಾ ಅವರು 60ನೇ ವಯಸ್ಸಿನಲ್ಲಿ ಸೌಂದರ್ಯ ಸ್ಪರ್ಧೆಯಲ್ಲಿ ಗೆದ್ದ ಮೊದಲ ಮಹಿಳೆ ಎಂಬ ದಾಖಲೆ ಪಡೆದುಕೊಂಡಿದ್ದಾರೆ. ಅರ್ಜೆಂಟೀನಾದ ಬ್ಯೂನಸ್ ಐರಿಸ್​​ನ ರಾಜಧಾನಿ ಲಾ ಪ್ಲಾಟಾದಲ್ಲಿ ನಡೆದ 2024ರ ಮಿಸ್‌ ಯೂನಿವರ್ಸ್ ಬ್ಯೂನಸ್ ಐರಿಸ್ ಸ್ಪರ್ಧೆಯಲ್ಲಿ ಗೆದ್ದು ಇಡೀ ಜಗತ್ತೆ ತಿರುಗಿ ನೋಡುವಂತೆ ಮಾಡಿದ್ದಾಳೆ.

ಇನ್ನೂ 60ನೇ ವಯಸ್ಸಿನಲ್ಲಿಯೂ ಈಕೆಯ ಸೌಂದರ್ಯ ಕಂಡು ನೆಟ್ಟಿಗರು ಫುಲ್​ ಶಾಕ್​ ಆಗಿದ್ದಾರೆ. ಅನೇಕರು ಆಕೆ ಮಿಸ್​​ ಯುನಿವರ್ಸ್​​ ಕಿರೀಟ ಪಡೆದುಕೊಂಡಿರೋದಕ್ಕೆ ಶುಭಾಶಯ ತಿಳಿಸುತ್ತಿದ್ದು ಇನ್ನೂ ಕೆಲವರು ಕಮೆಂಟ್ಸ್‌ಗಳನ್ನು ಹಾಕುತ್ತಿದ್ದಾರೆ.

Continue Reading

LATEST NEWS

ಪುತ್ತೂರು : ಧರೆಗುರುಳಿದ ಬೃಹದಾಕಾರದ ಮರ; ಮಾವಿನಕಾಯಿಗಾಗಿ ಮುಗಿಬಿದ್ದ ಜನ!

Published

on

ಪುತ್ತೂರು :  ಬೊಳ್ವಾರ್ ಬಸ್ ತಂಗುದಾಣದ ಪಕ್ಕದಲ್ಲಿದ್ದ ಬೃಹದಾಕಾರದ ಮರವೊಂದು ಉರುಳಿ ಬಿದ್ದಿದೆ. ಪರಿಣಾಮ ಹಲವು ವಾಹನಗಳು ಜಖಂಗೊಂಡಿವೆ. ವಾಹನ ಮಾಲಕರು ವಾಹನಗಳನ್ನು ಹೊರತೆಗೆಯಲು ಹರಸಾಹಸ ಪಡುವಂತಾಯಿತು.

ಬಿದ್ದ ಮರದಲ್ಲಿದ್ದ ಮಾವಿನಕಾಯಿಗಳನ್ನು ಕೊಯ್ಯಲು ಜನ ಮುಗಿಬಿದ್ದ ಘಟನೆಯೂ ನಡೆಯಿತು. ಬಳಿಕ ಸ್ಥಳೀಯರು ಮರದ ಕೊಂಬೆಗಳನ್ನು ಕಡಿದು ತೆರವುಗೊಳಿಸಿದರು.

ಮರ ಬೀಳುವ ಸಂದರ್ಭ ಯಾರೂ ಇಲ್ಲದ ಪರಿಣಾಮ ಭಾರೀ ದುರಂತವೊಂದು ತಪ್ಪಿದೆ.

ಇದನ್ನೂ ಓದಿ : ಚಾಲಕನ ನಿಯಂತ್ರಣ ತಪ್ಪಿ ಇನೋವಾ ಕಾರು ಪಲ್ಟಿ; ಯುವತಿ ಸಾವು!

Continue Reading

LATEST NEWS

Trending