Monday, January 24, 2022

ಮುಸ್ಲಿಮರಿಗೆ ಖಬರಸ್ತಾನಕ್ಕೆ ಭೂಮಿ ಪಡೆಯುವುದೂ ಕಷ್ಟವಾಗಿದೆ: ಅನ್ವರ್‌ ಮಾಣಿಪ್ಪಾಡಿ

ಬೆಂಗಳೂರು: ಬಿಜೆಪಿ ಮುಖಂಡ ಮತ್ತು ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಮಾಜಿ ಅಧ್ಯಕ್ಷ ಅನ್ವರ್ ಮಾಣಿಪ್ಪಾಡಿ, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಮಹತ್ವದ ಪತ್ರವೊಂದನ್ನು ಬರೆದಿದ್ದಾರೆ.


ರಾಜ್ಯದಲ್ಲಿ ಮುಸ್ಲಿಮರಿಗೆ ಕಿರುಕುಳ ನೀಡಲಾಗುತ್ತಿದೆ. ಮುಸ್ಲಿಮರಿಗೆ ಖಬರಸ್ತಾನಕ್ಕೆ ಭೂಮಿ ಪಡೆಯುವುದೂ ಕಷ್ಟಕರವಾಗಿ ಪರಿಣಮಿಸಿದೆ.
ನಮ್ಮ ಪಕ್ಷ ಹಾಗೂ ನಮ್ಮ ಸರ್ಕಾರ ಮುಸ್ಲಿಮರನ್ನು ಕಡೆಗಣಿಸುತ್ತಿದೆ ಮತ್ತು ಕೀಳಾಗಿ ಕಾಣುತ್ತಿದೆ. ಮುಸ್ಲಿಂ ಸಮುದಾಯವನ್ನು ತೀವ್ರ ಸಂಕಷ್ಟಕ್ಕೆ ತಳ್ಳುವ ಮೂಲಕ ನಿರ್ಲಕ್ಷಿಸಲಾಗುತ್ತಿದೆ ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ.
ವಕ್ಫ್ ಮಂಡಳಿಯ ವಿಚಾರದಲ್ಲಿ ಸರ್ಕಾರವನ್ನು ತರಾಟೆಗೆ ತೆಗದುಕೊಂಡ ಅನ್ವರ್ ಮಾಣಿಪ್ಪಾಡಿ, ಸರ್ಕಾರದ ಅನುದಾನವನ್ನು ಮತ್ತು ವಕ್ಫ್ ಆಸ್ತಿಗಳನ್ನು ಕಬಳಿಸಿದ ಆರೋಪ ಎದುರಿಸುತ್ತಿರುವ

ಅಧಿಕಾರಿಗಳನ್ನು ಬೆಂಬಲಿಸುವ ಮೂಲಕ ಸರ್ಕಾರ ನಮ್ಮ ಸಮೃದ್ಧ ವಕ್ಫ್ ಮಂಡಳಿಯನ್ನು ಬಡತನಕ್ಕೆ ತಳ್ಳುತ್ತಿದೆ. ಇವರು ಖಚಿತವಾಗಿ ಮಂಡಳಿಯನ್ನು ಮತ್ತು ಸಂಪತ್ತನ್ನು ಮಾಡುತ್ತಾರೆ ಎಂದು ಹೇಳಿದ್ದಾರೆ.

ಪ್ರಧಾನಿ ನರೇಂದ್ರ ಮೋದಿಯವರ ಸಬ್ಕಾ ಸಾಥ್ ಸಬ್ಕಾ ವಿಕಾಸ್ ತತ್ವವನ್ನು ರಾಜ್ಯ ಅನುಸರಿಸುತ್ತಿಲ್ಲ.
ಕರ್ನಾಟಕದ ಎಲ್ಲೆಡೆ ಮುಸ್ಲಿಮರು ಸಮಸ್ಯೆಗೆ ಒಳಗಾಗಿದ್ದಾರೆ ಎಂದು ಬಸವರಾಜ್ ಬೊಮ್ಮಯಿಗೆ ಅನ್ವರ್ ಮಾಣಿಪ್ಪಾಡಿ ಪತ್ರ ಬರೆದಿದ್ದಾರೆ

Hot Topics

“ಪೂಜಾರಿಯವರನ್ನು ನಡು ನೀರಲ್ಲಿ ಕೈ ಬಿಟ್ಟು ಓಡಿಹೋದ ಮಹಾನುಭಾವ”

ಮಂಗಳೂರು: ಮಾಜಿ ಕೇಂದ್ರ ಸಚಿವ ಜನಾರ್ದನ ಪೂಜಾರಿಯವರನ್ನು ನಡು ನೀರಲ್ಲಿ ಕೈ ಬಿಟ್ಟು ಓಡಿಹೋದ ಮಹಾನುಭಾವ. ಈ ಸಮಾಜದ ಯುವಕರನ್ನು ಪೂಜಾರಿಯವರಿಂದ ದೂರ ಮಾಡಿದ ಶ್ರೇಯಸ್ಸು ಯಾರಿಗಿದೆ ಎಂದರೆ ಅದೇ ಮಹಾನುಭಾವನಿಗೆ ಎಂದು...

ಯಕ್ಷಗಾನ ಕಲಾವಿದ ಗೋವಿಂದ ಶೇರಿಗಾರ್ ನಿಧನ: ಯಕ್ಷಗಾನ ಕಲಾರಂಗ ಸಂತಾಪ

ಕುಂದಾಪುರ: ಗಂಡುಕಲೆಯಲ್ಲಿ ಸ್ತ್ರೀ ವೇಷಧಾರಿ ಪಾತ್ರ ಮಾಡುತ್ತಿದ್ದ ಮಾರ್ಗೋಳಿ ಗೋವಿಂದ ಶೇರಿಗಾರ್ (96) ನಿಧನರಾಗಿದ್ದು ಇಬ್ಬರು ಪುತ್ರರು ಹಾಗೂ ಪುತ್ರಿಯರನ್ನು ಅಗಲಿದ್ದಾರೆ.ಬಡಗುತಿಟ್ಟು ಪುರಾಣ ಪ್ರಸಂಗಗಳಲ್ಲಿ ಅತ್ಯಂತ ಪ್ರಸಿದ್ಧವಾದ ದೇವಿ ಮಹಾತ್ಮೆ ಪ್ರಸಂಗಗಳಲ್ಲಿ ಮೊದಲು...

‘ಸುಳ್ಳುಗಳ ಮೂಲಕ ನಾರಾಯಣಗುರುವಿಗೆ ಮಾಡಿದ ಅಪಚಾರವನ್ನು ಮುಚ್ಚಿಟ್ಟುಕೊಳ್ಳಲಾಗದು’

ಮಂಗಳೂರು: ಸುಳ್ಳುಗಳ ಮೂಲಕ ಸಾಮಾಜಿಕ ಸುಧಾರಣೆಯ ಹರಿಕಾರ  ನಾರಾಯಣ ಗುರು ಅವರಿಗೆ ಮಾಡಿದ ಅಪಚಾರವನ್ನು ಬಿಜೆಪಿ ಮುಚ್ಚಿಟ್ಟುಕೊಳ್ಳಲಾಗದು ಎಂದು ಸಿಪಿಐಎಂ ಹೇಳಿದೆ.ಕೇರಳ ರಾಜ್ಯ ಸರಕಾರ ಸೂಚಿಸಿದ ನಾರಾಯಣಗುರು ಇರುವ ಸ್ಥಬ್ದ ಚಿತ್ರವನ್ನು ಪರಿಗಣಿಸದೇ...