Connect with us

DAKSHINA KANNADA

 12 ದೈವನರ್ತನಗಳಲ್ಲಿ ಕಾಣಿಸಿದ್ದು 13ದೈವಗಳು, ಇದು ಪವಾಡ ಪುರುಷ ಕೊರಗಜ್ಜನ ಕಾರಣೀಕವೇ..?

Published

on

12 ದೈವನರ್ತನಗಳಲ್ಲಿ ಕಾಣಿಸಿದ್ದು 13ದೈವಗಳು, ಇದು ಪವಾಡ ಪುರುಷ ಕೊರಗಜ್ಜನ ಕಾರಣೀಕವೇ..?

ಪುತ್ತೂರು: 12ಜನ ದೈವ ಕಟ್ಟಿ ನಡೆದ ನೇಮೋತ್ಸವದಲ್ಲಿ 12ಕೊರಗಜ್ಜ ದೈವಗಳ ಬದಲು 13ದೈವಗಳು ಕಾಣಿಸಿಕೊಂಡಿವೆ. ಈ ದೈವದ ತಲೆಗೆ ಮುಟ್ಟಾಳೆಯಿರಲಿಲ್ಲ ದೈವ ಮುಟ್ಟಾಳೆಯನ್ನ ಕೇಳಿ ಪಡೆದುಕೊಂಡ ಘಟನೆ ಸುಳ್ಯ ತಾಲೂಕಿನ ಸಂಪಾಜೆ ಗ್ರಾಮದ ದೊಡ್ಡಡ್ಕ ರಾಜರಾಂಪುರದಲ್ಲಿನ ಕೊರಗಜ್ಜನ ಸಾನಿಧ್ಯದಲ್ಲಿ ನಡೆದಿದೆ. ದೇವರಷ್ಟೇ ದೈವಗಳನ್ನು ಆರಾಧನೆ ಮಾಡುವ ತುಳುನಾಡಿನ  ಜನಗಳು ದೈವಗಳಿಂದಲೂ ಒಳಿತನ್ನು ಕಂಡಿದ್ದಾರೆ. ನಂಬಿದವರಿಗೆ ಇಂಬನ್ನು ಕೊಟ್ಟು ಕಾಪಾಡೋ ದೈವಗಳ ಸಾಲಲ್ಲಿ ಕೊರಗಜ್ಜನ ಕಾರಣೀಕ ಪ್ರಖ್ಯಾತಿ ಪಡೆದಿದೆ.

ಜನರ ನಂಬಿಕೆಯನ್ನು  ಉಳಿಸಿಕೊಂಡು ಬಂದಿರುವ ದೈವಗಳು ಹಲವು ಪವಾಡಗಳನ್ನು ನಡೆಸಿವೆ. ಕಳೆದ ಶನಿವಾರ ರಾತ್ರಿ ಇಲ್ಲಿಯ ಶ್ರೀ ಆದಿಬ್ರಹ್ಮ ಮೊಗೇರ್ಕಳ ದೈವಸ್ಥಾನದಲ್ಲಿ ಆದಿಬ್ರಹ್ಮ ಮೊಗೇರ್ಕಳ 40 ನೇ ವರ್ಷದ ನೇಮೋತ್ಸವ ಮತ್ತು ಮಂತ್ರಮೂರ್ತಿ ಗುಳಿಗ ದೈವದ ಕೋಲ ನಡೆಯಿತು.

ಬಳಿಕ ಮರುದಿನ ಅಂದ್ರೆ ಭಾನುವಾರ ಬೆಳಿಗ್ಗೆ ಕೊರಗಜ್ಜನ ನೇಮೋತ್ಸವ ನಡೆಸಲಾಯಿತು. ಇದರಲ್ಲಿ 11 ಹರಕೆ ಕೋಲ ಹಾಗೂ ಒಂದು ಕಾಲಾವಧಿ ಕೋಲ ಇತ್ತು.

ಅಂತೆಯೇ  12 ಅಗೇಲಿಗೆ ತಯಾರಿ ಮಾಡಿ 12 ದೈವದ ತಲೆಗೆ ಇಡುವ ಮುಟ್ಟಾಳೆ ಹಾಗೂ ಇತರ ವಸ್ತುಗಳನ್ನು ಜೋಡಣೆ ಮಾಡಲಾಗಿತ್ತು.

ಹೀಗೆ 12 ಜನ ದೈವ ಕಟ್ಟಿದ್ದು ನೇಮೋತ್ಸವ ಹೊರಟು ದೈವಗಳ ನರ್ತನ ಪ್ರಾರಂಭವಾಯಿತು. ಸ್ವಲ್ಪ ಹೊತ್ತಲ್ಲಿ 12 ಕೊರಗಜ್ಜ ದೈವಗಳ ಬದಲು ಕೆಲವರಿಗೆ 13 ಕಾಣಿಸಿಕೊಂಡವು.

ಈ ದೈವದ ತಲೆಗೆ ಮಡಪ್ಪಾಳೆ  ಇರಲಿಲ್ಲ. ಮಡಪ್ಪಾಳೆಯನ್ನು ದೈವ ಕೇಳಿತು. ಮತ್ತೆ ಮಡಪ್ಪಾಳೆ ತಯಾರಿ ಮಾಡಿ ಕೊಡಲಾಯಿತು. ಹೀಗೆ ಮಡಪ್ಪಾಳೆ ತಯಾರಿ ಮಾಡಿ ಕೊಟ್ಟ ನಂತರ ಆ ಕೊರಗಜ್ಜ ಕುಣಿದಿದೆ.

ಕೊನೆಗೆ ಅಗೆಲು ಬಳಸುವ ಸಂದರ್ಭದಲ್ಲಿ 13 ದೈವಗಳ ಬದಲು 12 ದೈವಗಳು ಮಾತ್ರ ಉಳಿದು ಆ ದೈವ ಕಾಣದಂತೆ ಮಾಯವಾಗಿದೆ ಎನ್ನಲಾಗಿದೆ. ಇನ್ನೂ ಕೆಲವರಿಗೆ 13 ದೈವಗಳು ಕಾಣಿಸಿಕೊಂಡಿವೆ. ಇದು ಭಕ್ತರಲ್ಲಿ ಕುತೂಹಲಕ್ಕೆ ಕಾರಣವಾಗಿದೆ.

Click to comment

Leave a Reply

Your email address will not be published. Required fields are marked *

DAKSHINA KANNADA

ಪ್ರಜ್ವಲ್‌ ಅಶ್ಲೀಲ್ ವಿಡಿಯೋ ಡಿಲೀಟ್ ಮಾಡಿ..! ಎಸ್‌ಐಟಿ ವಾರ್ನಿಂಗ್..!

Published

on

ಮಂಗಳೂರು : ಸದ್ಯ ಸಂಸದ ಪ್ರಜ್ವಲ್ ರೇವಣ್ಣ ವೀಡಿಯೋ ಪ್ರಕರಣ ಭಾರೀ ಸದ್ದು ಮಾಡುತ್ತಿದೆ. ಪ್ರಕರಣ ಬೆಂಬತ್ತಿರುವ ಎಸ್ ಐ ಟಿ ಖಡಕ್ ವಾರ್ನ್ ಮಾಡಿದೆ. ಅಶ್ಲೀಲ ವಿಡಿಯೋಗಳನ್ನು ಶೇರ್ ಮಾಡದಂತೆ ಹೇಳಿದೆ. ಅಷ್ಟೇ ಅಲ್ಲದೆ, ಅಶ್ಲೀಲ ವಿಡಿಯೋ ಮೊಬೈಲ್ ನಲ್ಲಿ ಸ್ಟೋರ್ ಮಾಡಿಕೊಂಡಿದ್ದರೆ, ಒಂದು ವೇಳೆ ಡಿಲೀಟ್‌ ಮಾಡದೇ ಇದ್ದರೆ ಕಾನೂನು ಕ್ರಮಗಳನ್ನು ಎದುರಿಸಬೇಕಾದೀತು ಎಂದು ಎಸ್ಐಟಿ ಮುಖ್ಯಸ್ಥ ಬಿ.ಕೆ. ಸಿಂಗ್ ಮಾಧ್ಯಮ ಪ್ರಕಟಣೆ ಮೂಲಕ ಎಚ್ಚರಿಕೆ ನೀಡಿದ್ದಾರೆ.

ಅಲ್ಲದೇ, ಯಾವುದೇ ಅಶ್ಲೀಲ ವೀಡಿಯೋ ಹಾಗೂ ಧ್ವನಿ ಮುದ್ರಣವನ್ನು ಇಟ್ಟುಕೊಂಡಿದ್ದರೆ ಅದು ಅಪರಾಧವಾಗುವುದರಿಂದ ಜನರು ತಮ್ಮ ಮೊಬೈಲ್‌ ಅಥವಾ ಯಾವುದೇ ಎಲೆಕ್ಟ್ರಾನಿಕ್ ಉಪಕರಣಗಳಲ್ಲಿ ಇಟ್ಟುಕೊಳ್ಳಬಾರದು. ಒಂದು ವೇಳೆ ಇಟ್ಟುಕೊಂಡಿದ್ದರೆ ಕೂಡಲೇ ಡಿಲೀಟ್‌ ಮಾಡಿಬಿಡಿ. ಮೊಬೈಲ್ ನಲ್ಲಿ ಅಶ್ಲೀಲ ವಿಡಿಯೋ ಇದ್ದರೆ ಅದರ ರಚನಕಾರರು ನೀವು ಎಂದು ಪರಿಗಣಿಸಿ ಕ್ರಿಮಿನಲ್ ಕೇಸ್ ಬೀಳುತ್ತದೆ. ಆದ್ದರಿಂದ, ಡಿಲೀಟ್ ಮಾಡುವುದರಿಂದ ಕಾನೂನು ಕ್ರಮಗಳಿಂದ ಪಾರಾಗುವ ಸಾಧ್ಯತೆ ಇರುತ್ತದೆ ಎಂದು ಬಿ.ಕೆ. ಸಿಂಗ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Continue Reading

BANTWAL

ಸಾಲದ ಶೂಲಕ್ಕೆ ಜೀವಾಂತ್ಯಗೊಳಿಸಿದ ಯುವಕ…!

Published

on

ಮಂಗಳೂರು : ತಾನು ತಂಗಿದ್ದ ಲಾಡ್ಜ್ ನಲ್ಲಿಯೇ ಅವಿವಾಹಿತ ಯುವಕನೋರ್ವ ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ‌ಘಟನೆ ಬಿಸಿರೋಡಿನಲ್ಲಿ ನಡೆದಿದೆ.

ಮಂಗಳೂರು ಅತ್ತಾವರ ನಿವಾಸಿ ಪ್ರಜ್ವಲ್ ( 30) ನೇಣು ಬಿಗಿದು ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಮೇ. 5 ರಂದು ಬಿಸಿರೋಡಿನ ಖಾಸಗಿ ಬಸ್ ನಿಲ್ದಾಣದ ಹತ್ತಿರವಿರುವ ಹೋಟೆಲೊಂದರಲ್ಲಿ ರೂಂ ಮಾಡಿದ್ದ. ಈತ ಮೇ.6 ರಂದು ರಾತ್ರಿ ಊಟ ಮುಗಿಸಿ, ಬಾಗಿಲು ಹಾಕಿಕೊಂಡಿದ್ದ. ಮಂಗಖವಾರ ಬೆಳಿಗ್ಗೆ ರೂಂನ ಬಾಗಿಲು ತೆರೆಯದ ಇದ್ದ ಕಾರಣ ಹೋಟೆಲ್ ಸಿಬ್ಬಂದಿ ಕರೆದರೂ ಸ್ಪಂದಿಸಿರಲಿಲ್ಲ. ಹೀಗಾಗಿ ಪೊಲೀಸರಿಗೆ ಮಾಹಿತಿ ನೀಡಿ ಬಾಗಿಲು ತೆರೆದಾಗ ನೇಣು ಬಿಗಿದ ಸ್ಥಿತಿಯಲ್ಲಿ ಪ್ರಜ್ವಲ್ ಮೃ*ತದೇಹದ ಪತ್ತೆಯಾಗಿದೆ.


ಓನ್ ಲೈನ್ ಕಂಪೆನಿಯೊಂದರಲ್ಲಿ ಉದ್ಯೋಗದಲ್ಲಿದ್ದ ಪ್ರಜ್ವಲ್ ಇತ್ತೀಚಿನ ದಿನಗಳಲ್ಲಿ ಮಾನಸಿಕವಾಗಿ ತೀವ್ರವಾಗಿ ನೊಂದಿದ್ದ ಎನ್ನಲಾಗಿದೆ. ತಾನು ಕೆಲಸ ಮಾಡಿಕೊಂಡಿದ್ದ ಕಂಪೆನಿಯ ಮಾಲಕರಿಂದ 60 ಸಾವಿರ ಸಾಲ ಪಡೆದು ಬಳಿಕ ಹಣ ಹೊಂದಿಸಲಾಗದೆ, ಸರಿಯಾದ ಸಮಯಕ್ಕೆ ಹಿಂದುರುಗಿಸಲಾಗಿಲ್ಲ ಎಂಬ ಕಾರಣಕ್ಕೆ ಕೊರುಗುತ್ತಿದ್ದ ಎಂದು ಹೇಳಲಾಗಿದೆ. ಸಾಲದ ವಿಚಾರವಲ್ಲದೆ ಪ್ರೀತಿಸಿದ ಯುವತಿ ಕೈಕೊಟ್ಟಿದ್ದು, ಪ್ರೇಮ ವೈಫಲ್ಯದ ನೋವಿನಲ್ಲೂ ಇದ್ದ ಎಂದು ವರದಿಯಾಗಿದೆ. ಈ ಬಗ್ಗೆ ಬಂಟ್ವಾಳ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

DAKSHINA KANNADA

ಕಾಮಿಡಿ ಕಿಲಾಡಿಗಳು ಸೀಸಲ್-7ರಲ್ಲಿ ಮಿಂಚಲಿದ್ದಾರೆ ಪುತ್ತೂರಿನ ಪ್ರತಿಭೆಗಳು .!!

Published

on

ಮಂಗಳೂರು:  ಜೀ ಕನ್ನಡ ವಾಹಿನಿಯ ಕಾಮಿಡಿ ಕಿಲಾಡಿಗಳು  ಪ್ರೀಮಿಯರ್ ಲೀಗ್ ಮೆಗಾ ಆಕ್ಷನ್‌ ಆರಂಭಗೊಂಡಿದ್ದು ಈ ಬಾರಿ ವಿಭಿನ್ನ ರೀತಿಯಲ್ಲಿ ಮೂಡಿ ಬರುತ್ತಿದೆ. ಈ ಶೋನಲ್ಲಿ ನಟ ಜಗ್ಗೇಶ್ ಮಹಾ ತೀರ್ಪುಗಾರರಾಗಿದ್ದರೆ, ಐದು ಸ್ಟಾರ್  ನಿರೂಪಕರುಗಳಾದ ಅನುಶ್ರೀ, ಮಾಸ್ಟರ್‌ ಆನಂದ್‌, ಅಕುಲ್‌ ಬಾಲಾಜಿ, ಶ್ವೇತಾ ಚಂಗಪ್ಪ ಹಾಗೂ ಕುರಿ ಪ್ರತಾಪ್‌ ರವರು ಜಡ್ಜಸ್‌ಗಳಾಗಿದ್ದಾರೆ. ರಾಜ್ಯದ 20 ಪ್ರತಿಭೆಗಳಿಂದ ಪ್ರೇಕ್ಷಕರಿಗೆ ಕಾಮಿಡಿಯ ರಸದೌಣ ನೀಡಲು ತಯಾರುಗುತ್ತಿದೆ.  ಇನ್ನು ಕಿಲಾಡಿ ಪ್ಲೇಯರ್‌ಗಳಲ್ಲಿ ಪುತ್ತೂರಿನ ಪ್ರತಿಭೆ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿ ಆಯ್ಕೆಯಾಗಿದ್ದಾರೆ.

comedy kiladi

ಮಂಗಳೂರಿನ 150 ಸ್ಪರ್ಧಿಗಳ ಪೈಕಿ ಪವಿತ್ರಾ ಹೆಗ್ಡೆ ಹಾಗೂ ಗಣರಾಜ್ ಭಂಡಾರಿಯವರು ಆಯ್ಕೆಯಾಗಿದ್ದಾರೆ. ಕರ್ನಾಟಕದ 2,500ಕ್ಕು ಮಿಕ್ಕಿ ಸ್ಪರ್ಧಿಗಳ ಮೂರು ಹಂತದ ಆಯ್ಕೆ ಪ್ರಕ್ರಿಯೆಯಲ್ಲಿ ಆಯ್ಕೆಯಾದ 10 ನಟರಲ್ಲಿ ಇವರಿಬ್ಬರು ಆಯ್ಕೆಯಾಗಿದ್ದಾರೆ.

ಮುಂದೆ ಓದಿ..; ಹೊಸ ಅವತಾರದಲ್ಲಿ ZEE ಕನ್ನಡ ‘ಕಾಮಿಡಿ ಕಿಲಾಡಿಗಳು’… ಸ್ಟಾರ್ ನಿರೂಪಕರು ಈಗ ಜಡ್ಜಸ್? ಏನಿದು ಟ್ವಿಸ್ಟ್?

ಪುತ್ತೂರಿನ ಪವಿತ್ರ ಹೆಗ್ಡೆ  ಆಯ್ಕೆ:

ಪವಿತ್ರ ಹೆಗ್ಡೆ ಕಳೆದ 10 ವರ್ಷಗಳಿಂದ ಮಂಗಳೂರಿನಲ್ಲಿ ಕಿಶೋರ್ ಡಿ ಶೆಟ್ಟಿ ನಿರ್ದೇಶನದ ಲಕುಮಿ ತಂಡದ ಕುಸಾಲ್ದ ಕಲಾವಿದರು ಮಂಗಳೂರು ತಂಡದಲ್ಲಿ ಹಾಸ್ಯ ಕಲಾವಿದೆಯಾಗಿ ಅಭಿನಯಿಸುತ್ತಿದ್ದಾರೆ. ಹಲವಾರು ನಾಟಕ, ಸಿನಿಮಾ ಮತ್ತು ಧಾರಾವಾಹಿಗಳಲ್ಲಿ ನಟನೆ ಮಾಡಿದ್ದಾರೆ. ಬಾಲ್ಯದಲ್ಲೇ ಕಲಾ ಕ್ಷೇತ್ರಕ್ಕೆ ಧುಮುಕಿದ ಇವರು 6ನೇ ತರಗತಿಯಿಂದ ನಾಟಕ ಅಭಿನಯ, 2012ರಿಂದ ಮಂಗಳೂರಿನ ತಂಡವಾದ ಮಾನಸ ಕಲಾವಿದರು ತಂಡದಲ್ಲಿ 3 ವರ್ಷ ಅಭಿನಯ, ಹೀಗೆ ಹಲವಾರು ತಂಡಳದಲ್ಲಿ ತಮ್ಮ ಅಭಿನಯ ಪಾತ್ರ ಮಾಡಿದ್ದಾರೆ. ತುಳು ಸಿನೆಮಾ ಮತ್ತು ತುಳು ಮತ್ತು ಕನ್ನಡ ಧಾರಾವಾಹಿಯಲ್ಲಿಯೂ ಅಭಿನಯಿಸಿದ್ದಾರೆ. ನಮ್ಮ ಟಿವಿಯಲ್ಲಿ ಪ್ರಸಾರವಾಗುತ್ತಿರುವ ‘ಬಲೆತಲಿಪಾಲೆ’ ಸೀಸನ್ 7ರಲ್ಲಿ ರನ್ನರ್ ಅಪ್ ಆಗಿದ್ದಾರೆ. ವಿ4 ನ್ಯೂಸ್‌ನಲ್ಲಿ ಪ್ರಸಾರವಾಗುತ್ತಿದ್ದ ಕಾಮಿಡಿ ಪ್ರೀಮಿಯರ್ ಲೀಗ್ ಸೀಸನ್ 2ನಲ್ಲಿ ಮತ್ತು ಸೀಸನ್ 3ಯಲ್ಲಿ ಅಭಿನಯಿಸಿ ಬೆಸ್ಟ್ ಫರ್ಫಾಮೆನ್ಸ್ ಅವಾರ್ಡ್ ಪಡೆದಿದ್ದಾರೆ. ವಿದೇಶದಲ್ಲೂ ನಾಟಕ ಪ್ರದರ್ಶನ ನೀಡಿದ್ದಾರೆ. ಕನ್ನಡ ಕಸ್ತೂರಿ ಚಾನಲ್‌ನಲ್ಲಿ ಪ್ರಸಾರವಾಗುತ್ತಿದ್ದ ಕಂಜೂಸ್ ಕಮಂಗಿರಾಯ, ಪುತ್ತೂರು ಚಾನೆಲ್ ದ ಚಾನಲ್ 9ನಲ್ಲಿ ಪುಸಾರವಾಗುತ್ತಿದ್ದ ಕುಡ ತೆಲಿಪುಗ, ಡಾಯಿಜಿ ವರ್ಲ್ಡ್‌ನಲ್ಲಿ ಪ್ರಸಾರವಾಗುತ್ತಿದ್ದ ಬಾಬಣ್ಣ ಬೂಬಣ್ಣ, ಕಿರುಚಿತ್ರವಾದ ಕಲ್ಕುಡ ಕಲ್ಲುರ್ಟಿ, ವಾತ್ಸಲ್ಯ, ನೋ ಬಾಲ್, ಕೊಕೊನಾಟ್ ಸಹಿತ ಹಲವು ಚಲನಚಿತ್ರದಲ್ಲಿ ಪಾತ್ರ ನಿರ್ವಹಿಸಿದ್ದರು. ಇವರಿಗೆ ಹಲವಾರು ಸನ್ಮಾನ ಪತ್ರಗಳು ಲಭಿಸಿದೆ. ಇವರು ಪುತ್ತೂರು ಚಂದ್ರಶೇಖ‌ರ್ ಹೆಗ್ಡೆ ಮತ್ತು ಮಯಾದೇವಿ ಅವರ ಪುತ್ರಿಯಾಗಿದ್ದು ಪುಜ್ವಲ್ ಹೆಗ್ಡೆಯವರ ಪತ್ನಿಯಾಗಿದ್ದಾರೆ.

ವೈರಲ್ ಸ್ಟಾರ್ ಗಣರಾಜ್ ಭಂಡಾರಿ:

ಪುತ್ತೂರಿನ ಸಂಸಾರ ಕಲಾವಿದೆರ್ ತಂಡದ ವೈರಲ್ ಸ್ಮಾರ್ ಖ್ಯಾತಿಯ ಗಣರಾಜ್ ಭಂಡಾರಿ ಕಾಮಿಡಿ ಕಿಲಾಡಿಗಳು ಶೋಗೆ ಆಯ್ಕೆಯಾಗಿದ್ದಾರೆ. ನಾಗೇಶ್ ಬಲ್ನಾಡು ನಿರ್ದೇಶನದ ಸೂಪರ್ ಹಿಟ್ ನಾಟಕ “ಮಲ್ಲಕ್ಕನ ಇಲ್ಲೊಕ್ಕೆಲ್” ಮೂಲಕ ರಂಗಪ್ರವೇಶ ಮಾಡಿದ ಇವರು ಬದ್‌ರೆ ಕಲ್ಪಿ, ಊರುಗೊರಿ ವಿಶ್ವನಾಥ, ಮಗೆ ಮಲ್ಲಯೆ, ಒವುಲಾ ಒರಿಯುಜಿ, ಸತ್ಯನಾ ಭಕ್ತಿ, ತಪ್ಪು ಎನ್ನೊಡ್ಡಿ, ಭಾಗ್ಯ ಬೋಡು ಅಲ್ಲದೆ ಈ ವರ್ಷದ ಸೂಪರ್ ಹಿಟ್ ಯಶಸ್ವಿ ನಾಟಕ ನಂಬಿಕೆದಾಯೆ ನಾಟಕಗಳಲ್ಲಿ ಪ್ರಮುಖ ಹಾಸ್ಯ ಪಾತ್ರಗಳನ್ನು ನಿರ್ವಹಿಸಿದ್ದಾರೆ.  ಪುತ್ತೂರಿನ ಕೋರ್ಟ್ ರಸ್ತೆಯ ಶ್ರೀನಿಧಿ ಸೆಲೂನ್’ನಲ್ಲಿ ಕ್ಷೌರಿಕ ವೃತ್ತಿ ನಡೆಸುತ್ತಿದ್ದಾರೆ. ಇವರು ತನ್ನ ಸ್ವಂತ ರೀಲ್ಸ್ ಪೇಜ್’ನಲ್ಲಿ 25 ಸಾವಿರ ಕ್ಕು ಅಧಿಕ ಫಾಲೋವರ್ಸ್ ಹೊಂದಿದ್ದಾರೆ.

 

Continue Reading

LATEST NEWS

Trending