ಮಂಗಳೂರು: ಸಮಾಜ ಕಲ್ಯಾಣ ಹಾಗೂ ಪರಿಶಿಷ್ಟ ವರ್ಗದ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳಿಗೆ 2022-23ನೇ ಸಾಲಿಗೆ ಹೊಸ ವಿದ್ಯಾರ್ಥಿಗಳ ಭರ್ತಿಗೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಆಸಕ್ತ ಪರಿಶಿಷ್ಟ ಜಾತಿ ಹಾಗೂ ವರ್ಗದ ವಿದ್ಯಾರ್ಥಿಗಳು ವೆಬ್‍ಸೈಟ್ www.sw.kar.nic.in ನಲ್ಲಿ ಅರ್ಜಿ ಸಲ್ಲಿಸಬಹುದು. ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯಗಳ ವಿವರ ಇದು:
ಕೊಡಿಯಾಲ್ ಬೈಲ್ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ, ಮೂಡಬಿದ್ರೆಯ ಲಾಡಿ ಮೆಟ್ರಿಕ್ ಪೂರ್ವ ಬಾಲಕಿಯರ ವಿದ್ಯಾರ್ಥಿ ನಿಲಯ,
ಮಂಗಳೂರಿನ ಕದ್ರಿಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯ ಹಾಗೂ ಬಜ್ಪೆಯ ಮೆಟ್ರಿಕ್ ಪೂರ್ವ ಬಾಲಕರ ವಿದ್ಯಾರ್ಥಿ ನಿಲಯಗಳಿಗೆ ಅರ್ಜಿ ಸಲ್ಲಿಸಬಹುದು.
ಹೆಚ್ಚಿನ ಮಾಹಿತಿಗೆ ಮೊ:9480843114 ಗೆ ಕರೆ ಮಾಡಬಹುದು. ಸಹಾಯಕ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆ, ರಸಿಕ್ ಛೆಂಬರ್ಸ್,
3ನೇ ಮಹಡಿ, ಮಾರ್ಕೆಟ್ ರಸ್ತೆ, ಮಂಗಳೂರು, ಈ ಕಚೇರಿಗೆ ದಾಖಲಾತಿಗಳನ್ನು ಸಲ್ಲಿಸಬೇಕೆಂದು ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕರು (ಗ್ರೇಡ್-1) ಪ್ರಕಟಣೆ ತಿಳಿಸಿದ್ದಾರೆ.
ಮಂಗಳೂರಿನ ನಾಗುರಿ ಮೆಡಿಕಲ್ ಶಾಪ್‌ನಲ್ಲಿ ಕೆಲಸ ಮಾಡುತ್ತಿದ್ದ ಮಹಿಳಾ ಉದ್ಯೋಗಿಗೆ ಚೂರಿ ತೋರಿಸಿ, ಕೈಯಿಂದ ಹಲ್ಲೆ ಮಾಡಿ, ಶಾಪ್‌ನ ಕ್ಯಾಶ್ ಡ್ರಾವರ್ ನಲ್ಲಿದ್ದ ರೂ. 19,300 ನಗದು ಹಣ ದೋಚಿದ ಪ್ರಕರಣದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬೊಂದೇಲ್ ಪಟ್ರಕೋಡಿಯ ಸುನೀಲ್ (31) ಬಂಧಿತ ಆರೋಪಿ. ಆರೋಪಿ ಸುನೀಲ್ ಫೆಬ್ರವರಿ 28ರಂದು ಮಧ್ಯಾಹ್ನ ಸುಲಿಗೆ ಮಾಡಿಕೊಂಡು ಹೋಗಿರುವ ಬಗ್ಗೆ ಪ್ರಕರಣ ದಾಖಲಾಗಿತ್ತು.
ಆರೋಪಿ ಸುನೀಲ್‌ನನ್ನು ದಸ್ತಗಿರಿ ಮಾಡಿ ದೋಚಿದ್ದ ರೂ. 17,500 ನಗದು ಹಣವನ್ನು ಹಾಗೂ ಸುಲಿಗೆ ಮಾಡಲು ಬಳಸಿದ ಸ್ಕೂಟರ್ ಹಾಗೂ ಇತರೆ ಸೊತ್ತುಗಳು ಸೇರಿದಂತೆ ಒಟ್ಟು ರೂ. 1,20,000 ಬೆಲೆ ಬಾಳುವ ಸೊತ್ತುಗಳನ್ನು ಪೊಲೀಸರು ಸ್ವಾಧೀನಪಡಿಸಿಕೊಂಡಿದ್ದಾರೆ.
ಮಂಗಳೂರು ದಕ್ಷಿಣ ವಿಭಾಗದ ಸಹಾಯಕ ಪೊಲೀಸ್ ಆಯುಕ್ತ ಧನ್ಯಾ ನಾಯಕ್ ಮಾರ್ಗದರ್ಶನದಲ್ಲಿ ಕಂಕನಾಡಿ ನಗರ ಠಾಣೆಯ ನಿರೀಕ್ಷಕ ಟಿ.ಡಿ ನಾಗರಾಜ್ ನೇತೃತ್ವದಲ್ಲಿ ಆರೋಪಿ ಮತ್ತು ಸೊತ್ತು ಪತ್ತೆ ಕಾರ್ಯದಲ್ಲಿ ಭಾಗವಹಿಸಿದ್ದರು.
ಮಂಗಳೂರು/ ನವದೆಹಲಿ : ನವೆಂಬರ್ 2024 ರಂದು ಸಂಸತ್‌ನಲ್ಲಿ ಅನುಮೋದನೆ ಪಡೆದುಕೊಂಡಿರುವ ” ಒಂದು ರಾಷ್ಟ್ರ ಒಂದು ಚಂದಾದಾರಿಕೆ” (One Nation One Susbriber) ಜನವರಿ 1 ರಿಂದ ಜಾರಿಗೆ ಬಂದಿದ್ದು, ನೋಂದಣಿ ಕೂಡ ಆರಂಭವಾಗಿದೆ. ದೇಶದ ಮೂಲೆ ಮೂಲೆಯ ವಿದ್ಯಾರ್ಥಿಗಳಿಗೆ ಇದರ ಪ್ರಯೋಜನ ಸಿಗಲಿದ್ದು, ವಿದ್ಯಾರ್ಥಿಗಳು ತಮ್ಮ ಹೆಸರು ನೋಂದಾಯಿಸಿಕೊಳ್ಳಬಹುದಾಗಿದೆ.
ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಸಂಶೋಧಕರಿಗೆ ಉತ್ತಮ ಗುಣಮಟ್ಟದ ಶಿಕ್ಷಣಕ್ಕಾಗಿ ಈ ONOS ಜಾರಿ ಮಾಡಲಾಗಿದೆ. ಇದರಿಂದ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಗಳು ಸೇರಿದಂತೆ ವಿದೇಶದಲ್ಲಿ ಕಲಿಯುವ ಅವಕಾಶಗಳಿಗೆ ಪರೀಕ್ಷೆ ಬರೆಯಲು ಅನುಕೂಲವಾಗಲಿದೆ. ಈ ಯೋಜನೆ ಎರಡು ಹಂತಗಳಲ್ಲಿ ಜಾರಿಯಾಗಿದ್ದು, ಇದಕ್ಕಾಗಿ ಕೇಂದ್ರ ಸರ್ಕಾರ 6 ಸಾವಿರ ಕೋಟಿಯನ್ನು ಮೀಸಲಿಟ್ಟಿದೆ.
ಒಂದು ರಾಷ್ಟ್ರ ಒಂದು ಚಂದಾದಾರಿಕೆ ಎಂದರೇನು ?
ಈ ಯೋಜನೆಯಲ್ಲಿ ಐಐಟಿ ಸೇರಿದಂತೆ ಎಲ್ಲಾ ಸರ್ಕಾರಿ ಅನುದಾನಿತ ಉನ್ನತ ಸಂಸ್ಥೆಗಳ ಸರಿ ಸುಮಾರು 1.80 ಕೋಟಿ ವಿದ್ಯಾರ್ಥಿಗಳಿಗೆ ಪ್ರಯೋಜನ ಸಿಗಲಿದೆ. ವಿದ್ಯಾರ್ಥಿಗಳು ಒಂದೇ ಸ್ಥಳದಲ್ಲಿ 13400 ಕ್ಕೂ ಹೆಚ್ಚು ಅಂತಾರಾಷ್ಟ್ರೀಯ ನಿಯತಕಾಲಿಕೆಗಳನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಪೋರ್ಟಲ್‌ನಲ್ಲಿ 6300 ಸಂಸ್ಥೆಗಳು ನೋಂದಾಯಿತವಾಗಿದ್ದು, ಐಐಟಿ, ಎನ್‌ಐಟಿಯಂತಹ ಸಂಸ್ಥೆಗಳೂ ಸೇರಿಕೊಳ್ಳಲಿವೆ. ಇದೊಂದು ಸಂಪೂರ್ಣ ಡಿಜಿಟಲ್ ಪೋರ್ಟಲ್ ಆಗಿದ್ದು ವಿದ್ಯಾರ್ಥಿಗಳು ತಮ್ಮ ಅಧ್ಯಯನಕ್ಕೆ ಅಂತಾರಾಷ್ಟ್ರೀಯ ಮಟ್ಟದ ಸಂಶೋಧನೆ ಮತ್ತು ನಿಯತಕಾಲಿಕಗಳು ಬಳಸಲು ಸಹಕಾರಿಯಾಗಲಿದೆ. ಈ ಯೋಜನೆಯಡಿಯಲ್ಲಿ, ಮೊದಲ ಹಂತದಲ್ಲಿ, ಎಂಜಿನಿಯರಿಂಗ್, ತಂತ್ರಜ್ಞಾನ, ವಿಜ್ಞಾನ, ಗಣಿತ, ವೈದ್ಯಕೀಯ, ನಿರ್ವಹಣೆ, ರಾಜ್ಯಶಾಸ್ತ್ರ ಮತ್ತು ಮಾನವಿಕ ವಿಷಯಗಳಿಗೆ 13400 ಕ್ಕೂ ಹೆಚ್ಚು ಜರ್ನಲ್‌ಗಳು ಮತ್ತು ಸಂಶೋಧನೆಗಳು ಲಭ್ಯವಿರುತ್ತವೆ. ಇದರ ಎರಡನೇ ಹಂತವನ್ನು ಸಾರ್ವಜನಿಕ ಖಾಸಗಿ ಸಹಭಾಗಿತ್ವ (ಪಿಪಿಪಿ) ಮಾದರಿಯ ಆಧಾರದ ಮೇಲೆ ಮುಂದಕ್ಕೆ ತೆಗೆದುಕೊಳ್ಳಲಾಗುವುದು.
ಮಂಗಳೂರು/ಬೆಂಗಳೂರು: ಜೀ ಕನ್ನಡ ವಾಹಿನಿಯಲ್ಲಿ ಪ್ರಸಾರವಾಗುತ್ತಿರುವ ಸರಿಗಮಪ ಸಂಗೀತ ರಿಯಾಲಿಟಿ ಶೋನಲ್ಲಿ ಜ್ಯೂರಿ ಪ್ಯಾನೆಲ್‌ನಲ್ಲಿ ಇರುತ್ತಿದ್ದ ಬಹುವಾದ್ಯ ಪರಿಣಿತರಾಗಿ ಎಸ್. ಬಾಲಿ ಎಂದೇ ಪ್ರಖ್ಯಾತರಾಗಿರುವ ಎಸ್ ಬಾಲಸುಬ್ರಹ್ಮಣ್ಯಂ ಅವರು ನಿಧನರಾಗಿದ್ದಾರೆ.
ಮೃದಂಗ, ತಬಲಾ, ಢೋಲಕ್ , ಢೋಲ್ಕಿ, ಖಂಜರಿ, ಕೋಲ್ ಹೀಗೆ ಹತ್ತು ಹಲವು ಲಯವಾದ್ಯಗಳನ್ನು ನುಡಿಸುವಲ್ಲಿ ಪರಿಣಿತರಾಗಿದ್ದ ಅಪರೂಪದ ವಿದ್ವಾಂಸ ಎಸ್ ಬಾಲಸುಬ್ರಹ್ಮಣ್ಯಂ ಅವರಿಗೆ 71 ವರ್ಷವಾಗಿತ್ತು.
ಕನ್ನಡ ಚಿತ್ರರಂಗದ ಅನೇಕ ಸಂಗೀತ ಸಾಧಕರು ಬಾಲಿ ಅವರನ್ನು ರಿದಂ ಕಿಂಗ್ ಎಂದೇ ಕರೆಯುತ್ತಿದ್ದರು. ಸುಗಮ ಸಂಗೀತದಲ್ಲೂ ಇವರು ಮಾಸ್ಟರ್. ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್, ಆಯೋಜಕರು ಮತ್ತು ನಿರ್ದೇಶಕರು ಎಂಬ ಹೆಗ್ಗಳಿಕೆ ಇವರದು.
ಬಯಾಲಜಿ ಸುಂದರೇಶನ್ ಎಂದೇ ಖ್ಯಾತರಾಗಿದ್ದ ಎಂ.ವಿ. ಸುಂದರೇಶನ್ ಮತ್ತು ಸಾವಿತ್ರಿ ದಂಪತಿಯ ಮಗನಾಗಿ 1953ರ ಜನವರಿ 9ರಂದು ಬೆಂಗಳೂರಿನಲ್ಲಿ ಬಾಲಿ ಅವರು ಜನಿಸಿದರು. ಮನೆಯಲ್ಲಿ ಸಂಗೀತದ ವಾತಾವರಣವಿತ್ತು. ಚಿಕ್ಕಂದಿನಿಂದಲೇ ಸಂಗೀತದತ್ತ ಒಲವು ಮೂಡಿಸಿಕೊಂಡ ಬಾಲಿ ಪಾಲಕ್ಕಾಡು ಶ್ರೀ ರವೀಂದ್ರನಾಥ ವಾರಿಯರ್ ಬಳಿ ಮೃದಂಗ ಕಲಿತರು. ಮುಂದೆ ಅವರು ಹಲವಾರು ಶಾಸ್ತ್ರೀಯ ಸಂಗೀತಗಾರರಿಗೆ ಮೃದಂಗ ಪಕ್ಕವಾದ್ಯ ಸಹಕಾರದಲ್ಲಿ ಬಾಗಿಯಾಗಿದ್ದಾರೆ.
ದಕ್ಷಿಣ ಭಾರತದ ಏಕೈಕ ರಿದಂ ಕಂಪೋಸರ್-ಅರೇಂಜರ್-ಕಂಡಕ್ಟರ್ ಎಂಬ ಹೆಗ್ಗಳಿಕೆ ಎಸ್. ಬಾಲಿ ಅವರದ್ದಾಗಿದೆ. ಶಂಕರನಾಗ್ ಅವರ ಸಂಕೇತ್ ಸ್ಟುಡಿಯೊ ಆರಂಭದ ದಿನಗಳಲ್ಲಿ ಎದುರಾದ ಸವಾಲುಗಳನ್ನು ಎದುರಿಸಲು ಬಾಲಿ ಹೆಗಲು ನೀಡಿದರು.
ಬಾಲಿ ಅವರು ಕನ್ನಡದ ಮೊಟ್ಟಮೊದಲ ಧ್ವನಿಸುರಳಿ ಕವಿ ನಿಸಾರ್ ಅಹಮ್‌ದರವರ ನಿತ್ಯೋತ್ಸವದಿಂದ ಮೊದಲುಗೊಂಡು ಮೈಸೂರು ಅನಂತಸ್ವಾಮಿಯವರ ಸಂಯೋಜನೆಗಳಿಗೆ ಸಹಾಯಕರಾಗಿ ವಾದ್ಯದ ನೆರವು ನೀಡಿದವರು. ಹಲವಾರು ಧ್ವನಿಸುರುಳಿಗಳು, ಕಿರುತೆರೆ, ನಾಟಕಗಳಿಗೆ ಸಂಗೀತ ನಿರ್ದೇಶನ ಮಾಡಿದ್ದಾರೆ. ವಿಶ್ವದೆಲ್ಲೆಡೆ ಬಾಲಿ ಅವರ ಲಯ ಸಂಗೀತ ಶಾಶ್ವತವಾಗಿ ಮೊಳಗುತ್ತಲೇ ಇದೆ. 1970ರ ದಶಕದಲ್ಲಿ ಬಾಲಿ ಬಹುಬೇಡಿಕೆಯ ವ್ಯಕ್ತಿಯಾಗಿದ್ದರು. ಅವರಿಗ ರಾಜ್ಯ ಸಂಗೀತ ನೃತ್ಯ ಅಕಾಡೆಮಿ ಗೌರವ, ಕರ್ನಾಟಕ ಕಲಾಶ್ರೀ ಪ್ರಶಸ್ತಿ ಸೇರಿದಂತೆ ಅನೇಕ ಪ್ರಶಸ್ತಿಗಳು ಸಂದಿವೆ.