ಮಂಗಳೂರು: ತಾಲೂಕಿನ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕರ (ಮುಲ್ಕಿ, ಮೂಡುಬಿದರೆ, ಸುಂಕದಕಟ್ಟೆ, ದರೆಗುಡ್ಡೆ, ಕಡಂದಲೆ) ಹಾಗೂ ಬಾಲಕಿಯರ (ಗುರುಪುರ, ಅಶೋಕನಗರ) ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಹಿಂದುಳಿದ ವರ್ಗಗಳು, ಪರಿಶಿಷ್ಟ ಜಾತಿ ಮತ್ತು ಪಂಗಡದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
6ನೇ ತರಗತಿಯಿಂದ 10ನೇ ತರಗತಿಯವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಆನ್‍ಲೈನ್ ಮೂಲಕ ಇಲಾಖೆಯ ವೆಬ್‍ಸೈಟ್‌ನಲ್ಲಿ ಜೂ.30ರ ಒಳಗೆ ಅರ್ಜಿ ಸಲ್ಲಿಸಬಹುದಾಗಿದೆ.
ವಿದ್ಯಾರ್ಥಿ ನಿಲಯದಲ್ಲಿ ಉಚಿತ ಊಟ, ವಸತಿ ಹಾಗೂ ಇನ್ನಿತರ ಸೌಲಭ್ಯಗಳನ್ನು ಒದಗಿಸಲಾಗುವುದು. ಹೆಚ್ಚಿನ ಮಾಹಿತಿಗೆ ಉರ್ವಸ್ಟೋರ್‌ನಲ್ಲಿರುವ ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಕಚೇರಿಯನ್ನು ಅಥವಾ ದೂ.ಸಂಖ್ಯೆ:0824-2453650 ಸಂಪರ್ಕಿಸಬಹುದು ಎಂದು ತಾಲೂಕು ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.