Connect with us

    DAKSHINA KANNADA

    ಮಂಗಳೂರು: ಟೈಲರಿಂಗ್, ಫ್ಯಾಷನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನ

    Published

    on

    ಮಂಗಳೂರು: 2021-22ನೇ ಸಾಲಿನ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ದಿ ನಿಗಮದ ಕೈಮಗ್ಗ ಮತ್ತು ಜವಳಿ ಇಲಾಖೆ ಹಾಗೂ ಕಿಯೊನಿಕ್ಸ್ ಸಂಸ್ಥೆಯ ಸಹಯೋಗದಲ್ಲಿ ಪರಿಶಿಷ್ಟ ಪಂಗಡದ ಯುವಕ, ಯುವತಿಯರಿಗೆ ಟೈಲರಿಂಗ್ ಮತ್ತು ಫ್ಯಾಷನ್ ಡಿಸೈನಿಂಗ್ ತರಬೇತಿಗೆ ಅರ್ಜಿ ಆಹ್ವಾನಿಸಲಾಗಿದೆ.


    ಎಸ್.ಎಸ್.ಎಲ್.ಸಿ ತೇರ್ಗಡೆಯಾದ ಅರ್ಹ ಅಭ್ಯರ್ಥಿಗಳು ಜೂ.15ರೊಳಗೆ ಅರ್ಜಿ ಸಲ್ಲಿಸಬೇಕು.
    ತರಬೇತಿಯನ್ನು ಬೆಂಗಳೂರು, ದಾವಣಗೆರೆ ಮತ್ತು ಧಾರವಾಡ ಕೇಂದ್ರದಲ್ಲಿ ನಡೆಸಲಾಗುತ್ತದೆ.

    ಮತ್ತು ಮಾಹಿತಿಗೆ ನಗರದ ಜಿ.ಎಚ್.ಎಸ್ ರಸ್ತೆಯ ಜನತಾ ಬಜಾರ್ ಕಟ್ಟಡದ 2ನೇ ಮಹಡಿಯಲ್ಲಿರುವ ಕರ್ನಾಟಕ ಮಹರ್ಷಿ ವಾಲ್ಮಿಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮ ಅಥವಾ ದೂ.ಸಂ:0824-2951814 ಅನ್ನು ಸಂಪರ್ಕಿಸುವಂತೆ ಜಿಲ್ಲಾ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃಧ್ಧಿ ನಿಗಮದ ವ್ಯವಸ್ಥಾಪಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    Click to comment

    Leave a Reply

    Your email address will not be published. Required fields are marked *

    DAKSHINA KANNADA

    ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?

    Published

    on

    ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.


    ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.

    ಇದನ್ನು ಓದಿ:ಯೂಟ್ಯೂಬ್​ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ

    ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.

    Continue Reading

    bangalore

    ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?

    Published

    on

    ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.


    ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.

    ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.

    Continue Reading

    DAKSHINA KANNADA

    ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್

    Published

    on

    ಮಂಗಳೂರು/ಮಧ್ಯಪ್ರದೇಶ: ಐಪಿಎಲ್ 2025ರ ಮೆಗಾ ಹರಾಜು ಪ್ರಕ್ರಿಯೆ ನವೆಂಬರ್ 24 ಮತ್ತು 25 ರಂದು ಸೌದಿ ಅರೇಬಿಯಾದ ಜೆಡ್ಡಾದಲ್ಲಿ ನಡೆಯಲಿದೆ. ಇನ್ನೂ ಕೆಲವೇ ದಿನಗಳು ಬಾಕಿ ಉಳಿದಿವೆ. ಐಪಿಎಲ್ ಮೆಗಾ ಹರಾಜಿಗೂ ಮುನ್ನ ರಜತ್ ಪಾಟಿದಾರ್ ಅವರಿಗೆ ನಾಯಕತ್ವ ಒದಗಿ ಬಂದಿದೆ.


    ರಜತ್ ಪಟಿದಾರ್ ಆರ್ ಸಿಬಿ ತಂಡದಲ್ಲಿ ಪ್ರಮುಖ ಆಟಗಾರ ಹಾಗೂ ಈ ಬಾರಿ ತಂಡ ಅವರನ್ನು ಬರೋಬ್ಬರಿ 11 ಕೋಟಿ ರೂ. ನೀಡಿ ರಿಟೈನ್ ಮಾಡಿಕೊಂಡಿದೆ. ಇದೀಗ ಐಪಿಎಲ್ ಮೆಗಾ ಹರಾಜಿಗೂ ಮುನ್ನವೇ ರಜತ್ ಪಾಟಿದಾರ್ ಗೆ ರಾಜ್ಯ ತಂಡದ ನಾಯಕತ್ವ ನೀಡಲಾಗಿದೆ.
    ನವೆಂಬರ್ 23 ರಿಂದ ಶುರುವಾಗಲಿರುವ ಈ ಟೂರ್ನಿಗಾಗಿ 15 ಸದಸ್ಯರ ಮಧ್ಯಪ್ರದೇಶ ತಂಡವನ್ನು ಘೋಷಿಸಲಾಗಿದೆ.

    ಇದನ್ನು ಓದಿ: ಎಕ್ಸ್ಪ್ರೆಸ್ ರೈಲು ಡಿ*ಕ್ಕಿ; ವಿದ್ಯಾರ್ಥಿನಿಯ ದು*ರಂತ ಅಂ*ತ್ಯ

    ಮಧ್ಯಪ್ರದೇಶ ತಂಡದ ನಾಯಕರಾಗಿ ರಜತ್ ಪಾಟಿದಾರ್ ಆಯ್ಕೆಯಾಗಿದ್ದಾರೆ. ಒಂದು ವೇಳೆ ಮುಂಬರುವ ಸೈಯದ್ ಮುಷ್ತಾಕ್ ಅಲಿ ಟೂರ್ನಿಯಲ್ಲಿ ಮಧ್ಯಪ್ರದೇಶ ತಂಡವು ಫೈನಲ್ ಗೆ ತಲುಪಿದರೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದ ನಾಯಕತ್ವ ರೇಸ್ ನಲ್ಲಿ ರಜತ್ ಪಾಟಿದಾರ್ ಕೂಡ ತೀವ್ರ ಪೈಪೋಟಿ ಕೊಡಲಿದ್ದಾರೆ.


    ಆರ್ ಸಿಬಿ ಪರ 24 ಇನ್ನಿಂಗ್ಸ್ ಆಡಿರುವ ರಜತ್ ಪಾಟಿದಾರ್ 1 ಶತಕ 7 ಅರ್ಧಶತಕಗಳೊಂದಿಗೆ ಒಟ್ಟು 799 ರನ್ ಕಲೆಹಾಕಿದ್ದಾರೆ. ಈಗಗಾಲೇ ಆರ್ ಸಿ ಬಿ ತಂಡದಿಂದ ನಾಯಕ ಫಾಫ್ ಡುಪ್ಲೆಸಿಸ್ ತಂಡದಿಂದ ಹೊರಬಿದಿದ್ದಾರೆ. ಇದರಿಂದ ನಾಯಕತ್ವ ಯಾರ ಪಾಲಾಗಲಿದೆ ಎಂಬುವುದು ತ್ರೀವ್ರ ಕುತೂಹಲ ಮೂಡಿಸಿದೆ.

    Continue Reading

    LATEST NEWS

    Trending