ಮಂಗಳೂರು: ಪಶುಸಂಗೋಪನೆ ಮತ್ತು ಪಶು ವೈದ್ಯ ಸೇವಾ ಇಲಾಖೆಯಡಿ 2021-22ನೇ ಸಾಲಿನ ರಾಷ್ಟ್ರೀಯ ಕೃಷಿ ವಿಕಾಸ
ಯೋಜನೆಯಡಿ ಹಸುಗಳಿಗೆ 2 ರಬ್ಬರ್ ನೆಲ ಹಾಸುಗಳನ್ನು ಶೇಕಡಾ 50ರ ಸಹಾಯಧನದೊಂದಿಗೆ ವಿತರಿಸಲಾಗುತ್ತಿದೆ.
ಕನಿಷ್ಠ ಎರಡು ಜಾನುವಾರು ಹೊಂದಿರುವ ರೈತರು ಅರ್ಜಿ ಸಲ್ಲಿಸಬಹುದು. ಆಸಕ್ತರು ಸ್ಥಳೀಯ ಪಶು ವೈದ್ಯರನ್ನು ಸಂಪರ್ಕಿಸಿ ಅರ್ಜಿ ಪಡೆದು,
ಅಗತ್ಯ ದಾಖಲಾತಿಗಳೊಂದಿಗೆ ಮೇ. 25ರೊಳಗೆ ಸಲ್ಲಿಸುವಂತೆ ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.