Connect with us

DAKSHINA KANNADA

ಮಂಗಳೂರು: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಮಾಡಿದ ವ್ಯಕ್ತಿಗಳಿಂದ ರಾಜ್ಯ ಪ್ರಶಸ್ತಿಗೆ ಅರ್ಜಿ ಆಹ್ವಾನ

Published

on

ಮಂಗಳೂರು: ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಸೇವೆ ಸಲ್ಲಿಸಿದ ವ್ಯಕ್ತಿಗಳು ಹಾಗೂ ಸಂಸ್ಥೆಗಳಿಗೆ ರಾಜ್ಯ ಪ್ರಶಸ್ತಿ ನೀಡಿ ಗೌರವಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.

ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಕನಿಷ್ಠ 5 ವರ್ಷ ಅತ್ಯುತ್ತಮ ಸೇವೆ ಸಲ್ಲಿಸಿರುವ ವ್ಯಕ್ತಿಗಳಿಗೆ 25,000ರೂ.ಗಳ ಹಾಗೂ ಸಂಸ್ಥೆಗಳಿಗೆ 1,00,000ರೂ.ಗಳ ನಗದು ಬಹುಮಾನ ಹಾಗೂ ಪ್ರಶಸ್ತಿ ಪತ್ರವನ್ನು ಮಕ್ಕಳ ದಿನಾಚರಣೆಯಂದು ನೀಡಿ ಗೌರವಿಸಲಾಗುವುದು.


ನಗರದ ಜಿಲ್ಲಾ ಪಂಚಾಯತ್ ಕಟ್ಟಡದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿಯಲ್ಲಿ ಅರ್ಜಿ ಪಡೆದು ಸೆಪ್ಟೆಂಬರ್ 31ರೊಳಗೆ ಅದೇ ಕಚೇರಿಗೆ ಸಲ್ಲಿಸಬೇಕು.

ಹೆಚ್ಚಿನ ಮಾಹಿತಿಗಾಗಿ ದೂ.ಸಂಖ್ಯೆ:0824-2451254 ಅನ್ನು ಸಂಪರ್ಕಿಸುವಂತೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ

DAKSHINA KANNADA

ದೇವರಿಗೆ ತುಪ್ಪದಲ್ಲಿ ದೀಪ ಹಚ್ಚುವುದು ಶುಭವೇ..?

Published

on

ಮಂಗಳೂರು: ಮನೆಯ ದೇವರ ಕೊಣೆಯಲ್ಲಿ ಅಥವಾ ದೇವಸ್ಥಾನದಲ್ಲಿ ತುಪ್ಪ, ಎಣ್ಣೆ, ಸಾಸಿವೆ, ಎಳ್ಳು ಅಥವಾ ಮಲ್ಲಿಗೆಯ ಎಣ್ಣೆಯ ದೀಪವನ್ನು ಹಚ್ಚುವ ಪದ್ಧತಿ ಇದೆ. ಈ ರೀತಿಯಾಗಿ ಪ್ರತಿಯೊಂದು ಎಣ್ಣೆಯ ದೀಪವನ್ನು ಸುಡುವುದು ವಿಭಿನ್ನ ಮಹತ್ವವನ್ನು ಹೊಂದಿದೆ. ತುಪ್ಪದ ದೀಪವನ್ನು ಹಚ್ಚುವುದು ದುಬಾರಿಯಾದ ಕಾರಣ ಜನರು ಎಣ್ಣೆಯ ದೀಪಗಳನ್ನು ಹೆಚ್ಚು ಹಚ್ಚುತ್ತಾರೆ. ಎಣ್ಣೆ ಅಥವಾ ತುಪ್ಪದ ದೀಪಕ್ಕಿಂತ ಯಾವುದರ ದೀಪ ಹಚ್ಚುವುದು ಹೆಚ್ಚು ಮಂಗಳಕರ ಎಂಬುದನ್ನು ತಿಳಿದುಕೊಳ್ಳೋಣ.

ಯಾವ ದೀಪವನ್ನು ಬೆಳಗಬೇಕು?

ತುಪ್ಪದ ದೀಪವನ್ನು ಯಾವಾಗಲೂ ಹೂವಿನಾಕಾರದ ದೀಪದಲ್ಲಿ ಬಿಳಿ ಎಂಬ ಬೆಳಕಿನಿಂದ ಬೆಳಗಿಸಲಾಗುತ್ತದೆ ಮತ್ತು ಎಣ್ಣೆ ದೀಪವನ್ನು ಉದ್ದವಾದ ದೀಪದಿಂದ ಬೆಳಗಿಸಲಾಗುತ್ತದೆ. ಆದರೆ, ಎಳ್ಳಿನ ಎಣ್ಣೆಯ ದೀಪವನ್ನು ಹಚ್ಚಿದರೆ ಅದರಲ್ಲಿ ಕೆಂಪು ಅಥವಾ ಹಳದಿ ದೀಪವನ್ನು ಬಳಸಬೇಕು.

ಯಾವ ದೀಪ ಸೂಕ್ತ?

ತುಪ್ಪದ ದೀಪವನ್ನು ದೇವರಿಗೆ ಸಮರ್ಪಿಸಲಾಗುತ್ತದೆ. ಆದರೆ ಇಷ್ಟಾರ್ಥಗಳ ಈಡೇರಿಕೆಗಾಗಿ ಎಣ್ಣೆಯ ದೀಪವನ್ನು ಬೆಳಗಿಸಲಾಗುತ್ತದೆ. ಆರ್ಥಿಕ ಮುಗ್ಗಟ್ಟಿನಿಂದ ಮುಕ್ತಿ ಹೊಂದಲು ತುಪ್ಪದ ದೀಪವನ್ನು ಹಚ್ಚುವುದು ಹೆಚ್ಚು ಪ್ರಯೋಜನಕಾರಿ. ಇದರಿಂದ ದೇವರುಗಳು ಮತ್ತು ದೇವತೆಗಳು ಸಂತೋಷಪಡುತ್ತಾರೆ.

ತುಪ್ಪದ ದೀಪವನ್ನು ಹಚ್ಚುವುದು ಅತ್ಯಂತ ಮಂಗಳಕರ

ಮನೆ ಅಥವಾ ದೇವಸ್ಥಾನದಲ್ಲಿ ತುಪ್ಪದ ದೀಪವನ್ನು ಬೆಳಗಿಸುವುದು ಅತ್ಯಂತ ಮಂಗಳಕರವೆಂದು ಪರಿಗಣಿಸಲಾಗಿದೆ. ಇದು ಎಲ್ಲಾ ರೀತಿಯ ಆರೋಗ್ಯ ಪ್ರಯೋಜನಗಳನ್ನು ನೀಡುತ್ತದೆ ಜೊತೆಗೆ ಮನೆಯ ವಾಸ್ತು ದೋಷಗಳು ಸಹ ನಿವಾರಣೆಯಾಗುತ್ತದೆ. ಇದು ಎಲ್ಲಾ ರೀತಿಯ ನೋವನ್ನು ನಾಶಪಡಿಸುತ್ತದೆ. ಶಿವ ಪುರಾಣದ ಪ್ರಕಾರ ಪ್ರತಿದಿನ ತುಪ್ಪದ ದೀಪವನ್ನು ಹಚ್ಚುವುದರಿಂದ ಮನೆಯಲ್ಲಿ ಸುಖ, ಸಮೃದ್ಧಿ ಮತ್ತು ಶಾಂತಿ ನೆಲೆಸುತ್ತದೆ ಎಂದು ಹೇಳಲಾಗಿದೆ.

ತುಪ್ಪದ ದೀಪವನ್ನು ಹಚ್ಚಿದರೆ ಗಾಳಿಯು ಶುದ್ಧವಾಗುತ್ತದೆ ಮತ್ತು ಗಾಳಿಯಲ್ಲಿರುವ ರೋಗಾಣುಗಳು ನಾಶವಾಗುತ್ತದೆ. ಇದರ ಸುವಾಸನೆಯು ಮನಸ್ಸಿಗೆ ಶಾಂತಿಯನ್ನು ನೀಡುತ್ತದೆ ಮತ್ತು ಖಿನ್ನತೆಯನ್ನು ಹೋಗಲಾಡಿಸುತ್ತದೆ. ತುಪ್ಪವು ಚರ್ಮದ ರಕ್ತ ಕಣಗಳನ್ನು ಸಕ್ರಿಯಗೊಳಿಸುವ ವಿದ್ಯುತ್ಕಾಂತೀಯ ಶಕ್ತಿಯನ್ನು ಉತ್ಪಾದಿಸುವ ಸಾಮರ್ಥ್ಯವನ್ನು ಹೊಂದಿದೆ ಎಂದು ಹೇಳಲಾಗುತ್ತದೆ, ಇದರಿಂದಾಗಿ ಯಾವುದೇ ಚರ್ಮ ರೋಗಗಳು ಬರುವುದಿಲ್ಲ.

Continue Reading

DAKSHINA KANNADA

ಆಂಬುಲೆನ್ಸ್ – ಕಾರು ನಡುವೆ ಭೀಕರ ಅ*ಪಘಾತ..! ಮೂವರ ದುರ್ಮ*ರಣ.!

Published

on

ಕಾಸರಗೋಡು: ಆ್ಯಂಬುಲೆನ್ಸ್ ಮತ್ತು ಕಾರೊಂದರ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿಯ ಮಂಜೇಶ್ವರದಲ್ಲಿ ಇಂದು ನಡೆದಿದೆ.

accident

ಕಾರಿನಲ್ಲಿದ್ದ ತ್ರಿಶೂರು ಗುರುವಾಯೂರು ನಿವಾಸಿಗಳಾದ ಶ್ರೀನಾಥ್, ಶರತ್ ಮೆನೋನ್ ಎಂಬವರು ಸೇರಿದಂತೆ ಮೂವರು ಮೃತಪಟ್ಟಿದ್ದಾರೆ. ಆ್ಯಂಬುಲೆನ್ಸ್ ನಲ್ಲಿದ್ದ ರೋಗಿಯೂ ಗಾಯಗೊಂಡಿದ್ದಾರೆ. ಕಾಸರಗೋಡಿನಿಂದ ಮಂಗಳೂರು ಕಡೆಗೆ ರೋಗಿಯೊಬ್ಬರನ್ನು ಕರೆದೊಯ್ಯುತ್ತಿದ್ದ ಆ್ಯಂಬುಲೆನ್ಸ್ ಮತ್ತು ಮಂಗಳೂರು ಕಡೆಯಿಂದ ಮಂಜೇಶ್ವರದತ್ತ ಬರುತ್ತಿದ್ದ ಕಾರು ನಡುವೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಇಬ್ಬರು ಸ್ಥಳದಲ್ಲೇ ಮೃತಪಟ್ಟರೆ, ಇನ್ನೋರ್ವ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ. ಕಾರು ಸಂಪೂರ್ಣ ನಜ್ಜುಗುಜ್ಜಾಗಿದೆ. ಆ್ಯಂಬುಲೆನ್ಸ್ ರಸ್ತೆಯಲ್ಲಿ ಮಗುಚಿ ಬಿದ್ದಿದೆ.

 ಮುಂದೆ ಓದಿ..; ಆಸ್ಪತ್ರೆ ಸೆಲ್ ನಲ್ಲಿ ಕುಣಿಕೆಗೆ ಕೊರೊಳೊಡ್ಡಿದ ಖೈದಿ..!

accident

 

Continue Reading

DAKSHINA KANNADA

ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯ ಮೃತದೇಹ ಪತ್ತೆ..! ರಕ್ತಸಿಕ್ತ ಸ್ಥಿತಿಯಲ್ಲಿದ್ದ ಶ*ವ.!!

Published

on

ಮಂಗಳೂರು: ಹೆಸರಾಂತ ಮದುವೆ ಸಭಾಂಗಣದ ಆವರಣದಲ್ಲಿ ವ್ಯಕ್ತಿಯೋರ್ವನ ಮೃತದೇಹ ಪತ್ತೆಯಾಗಿದೆ. ತಲಪಾಡಿಯಲ್ಲಿರುವ ಬಂಟವಾಳದ ಭಂಟರ ಭವನದ ಆವರಣದ ಕಂಪೌಂಡ್‌ ಒಳಗಡೆ ವ್ಯಕ್ತಿಯೋರ್ವನ ಮೃತದೇಹ ರಕ್ತಸಿಕ್ತವಾಗಿ ಇದ್ದ ರೀತಿಯಲ್ಲಿ ಮೃತ ದೇಹ ಪತ್ತೆಯಾಗಿದೆ. ಉಪ್ಪಿನಂಗಡಿ ವಳಾಲು ಮೂಲದ ನಿವಾಸಿ ಸಂತೋಷ್ ಅವರ ಮೃತದೇಹ ಎಂದು ಗುರುತಿಸಲಾಗಿದೆ.

bantwala death

ಬಂಟರ ಭವನದ ಹೊರಗಡೆ ಸಂತೋಷ್ ಗೆ ಸೇರಿದ್ದ ಬೈಕ್‌ ಪತ್ತೆಯಾಗಿದೆ. ಬೈಕ್ ನಿಲ್ಲಿಸಿ ಕಂಪೌಂಡ್ ಮೇಲೆ ಕುಳಿತು ಕೊಂಡಿದ್ದು ಈ ವೇಳೆ ಕುಸಿದು ಕೆಳಗೆ ಬಿದ್ದು ಈ ಘಟನೆ ನಡೆದಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

ಮುಂದೆ ಓದಿ.. ಧರ್ಮಸ್ಥಳ: ಸರಣಿ ಅಪ*ಘಾತ, 5 ವಾಹನಗಳಿಗೆ ಹಾನಿ

ಘಟನಾ ಸ್ಥಳಕ್ಕೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಇನ್ಸ್ ಪೆಕ್ಟರ್ ಶಿವಕುಮಾರ್, ಎಸ್.ಐ.ಹರೀಶ್ ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ. ಮರಣೋತ್ತರ ಪರೀಕ್ಷೆ ಬಳಿಕ ಹೆಚ್ಚಿನ ಮಾಹಿತಿ ತಿಳಿದು ಬರಬೇಕಿದೆ.

Continue Reading

LATEST NEWS

Trending