Thursday, March 4, 2021

ಡ್ರೋನ್ ಬಳಕೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ಕಡ್ಡಾಯ..!

ಡ್ರೋನ್ ಬಳಕೆಗೆ ನಾಗರಿಕ ವಿಮಾನಯಾನ ನಿರ್ದೇಶನಾಲಯದ ಅನುಮತಿ ಕಡ್ಡಾಯ..!

ಮಂಗಳೂರು: ಮಂಗಳೂರು ನಗರದಲ್ಲಿ ಅವ್ಯಾಹತವಾಗಿ ಡ್ರೋನ್‍ಗಳನ್ನು ಬಳಕೆ ಮಾಡುತ್ತಿರುವುದು ಕಂಡು ಬಂದಿದೆ.

ಯಾವುದೇ ಖಾಸಗಿ ಕಾರ್ಯಕ್ರಮಗಳಲ್ಲಿ ಡಿಜಿಸಿಎ ನಿಯಮ ಉಲ್ಲಂಸಿ ಡ್ರೋನ್ ಬಳಕೆ ಮಾಡಿದರೆ,ಅದನ್ನು ವಶಪಡಿಸಿ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಮಂಗಳೂರು ನಗರ ಪೊಲೀಸ್‌ ಆಯುಕ್ತರಾದ ಎನ್. ಶಶಿಕುಮಾರ್ ಎಚ್ಚರಿಕೆ ನೀಡಿದ್ದಾರೆ.

ಮಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಡ್ರೋನ್ ಬಳಸುವವರು ಅಥವಾ ಡ್ರೋನ್ ಹೊಂದಿರುವವರು ಸಂಬಂಧಪಟ್ಟ  ನಾಗರಿಕ ವಿಮಾನಯಾನ ನಿರ್ದೇಶನಾಲಯದ  ಅನುಮತಿ ಪಡೆಯುವುದು ಕಡ್ಡಾಯ ಎಂದು ಹೇಳಿದ್ದಾರೆ.

2 ದಿನಗಳ ಹಿಂದೆ ಮಂಗಳೂರಿನಲ್ಲಿ ನಡೆದ ಎಸ್ ಡಿ ಪಿ ಐ ಪ್ರತಿಭಟನೆಯಲ್ಲಿ ಶೂಟ್  ಮಾಡಲು ಬಳಕೆ ಮಾಡಿದ್ದ ಡ್ರೋನನ್ನು ಪೊಲೀಸರು ವಶ ಪಡಿಸಿಕೊಂಡಿದ್ದರು.

ಡ್ರೋನ್ ಬಳಕೆಗೆ ಸ್ಥಳೀಯ ಪೊಲೀಸ್ ಇಲಾಖೆಯ ಅನುಮತಿ ಮತ್ತು ವಿಮಾನ ನಿಲ್ದಾಣ ನಿರ್ದೇಶಕರ ಎನ್ ಒ ಸಿ   ಕಡ್ಡಾಯವಾಗಿ ಪಡೆಯಬೇಕಿತ್ತು.

ಆದರೆ ಮಂಗಳೂರು ನಗರ ಸೇರಿದಂತೆ ಕರಾವಳಿಯಲ್ಲಿ  ಬೇಕಾ ಬಿಟ್ಟಿ ಡ್ರೋನ್ ಗಳು ಬಳಕೆಯಾಗುತ್ತಿದ್ದು. ಇದು ಸುರಕ್ಷತೆಯ ದೃಷ್ಟಿಯಿಂದ ಅಪಾಯವನ್ನು ತಂದೊಡ್ಡುವ ಸಾಧ್ಯತೆಗಳಿವೆ ಎನ್ನಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...