Connect with us

MANGALORE

ಎ.1-13ರವರೆಗೆ ಇಂಡಿಯಾನ ಆಸ್ಪತ್ರೆಯಲ್ಲಿ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರ

Published

on

ಮಂಗಳೂರು: ಇಲ್ಲಿನ ಇಂಡಿಯಾನ ಆಸ್ಪತ್ರೆಯಲ್ಲಿ ಸಮಗ್ರ ಕಣ್ಣಿನ ಆರೈಕೆ ಸೇವೆಗಳನ್ನು ಒದಗಿಸುವ ಉದ್ದೇಶದಿಂದ ಕಣ್ಣಿನ ಪೊರೆ ಶಸ್ತ್ರಚಿಕಿತ್ಸಾ ಶಿಬಿರವನ್ನು ನಡೆಸುತ್ತಿದೆ. ಎ 1ರಿಂದ ಶಿಬಿರವು ಆರಂಭವಾಗಿದ್ದು ಎ.13 ರವರೆಗೆ ನಡೆಯಲಿದೆ. ರೋಗಿಗಳಿಗೆ ಚಿಕಿತ್ಸೆಯಲ್ಲಿ ವಿಶೇಷ ರಿಯಾಯಿತಿಯನ್ನು ನೀಡಲಾಗಿದೆ. 

Cataract Surgery Camp

ಕಣ್ಣಿನ ಚಿಕಿತ್ಸೆಯನ್ನು ಮಾಡಲು ಇಚ್ಛಿಸುವವರು ನೇತ್ರತಜ್ಞ ಡಾ. ಸ್ಮೃತಿ ಅವರಿಂದ ಉಚಿತ ಕಣ್ಣಿನ ಪರೀಕ್ಷೆಯನ್ನು ಮಾಡಬಹುದಾಗಿದೆ. ಈ ವೇಳೆ ಕಣ್ಣಿನ ಪೊರೆ ಶಸ್ತ್ರ ಚಿಕಿತ್ಸೆ ಮಾಡಿಸುವವರಿಗೆ ಶೇ.25ರಷ್ಟು ರಿಯಾಯಿತಿ ಪಡೆಯಬಹುದಾಗಿದ್ದು, ನೋಂದವಣೆ ಮಾಡಿಕೊಳ್ಳಲು  +91 6361 510 227, 0824 2880 880 ಗೆ ಕರೆ ಮಾಡುವಂತೆ ಪ್ರಕಟಣೆ ತಿಳಿಸಿದೆ.

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

DAKSHINA KANNADA

ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

Published

on

ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ ವತಿಯಿಂದ ನಡೆದ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್‌ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ  ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Continue Reading

DAKSHINA KANNADA

ಅಡ್ಯಾರ್ ಬೊಂಡ ಪ್ಯಾಕ್ಟರಿ ಎಳನೀರು ಪ್ರಕರಣ- ಆರೋಗ್ಯ ಇಲಾಖೆಯ ಕೈ ಸೇರಿದ ಪ್ರಯೋಗಾಲಯ ಪರೀಕ್ಷಾ ವರದಿ ಬಹಿರಂಗ..!

Published

on

ಮಂಗಳೂರು : ಇತ್ತೀಚೆಗೆ ಅಡ್ಯಾರ್ ನಲ್ಲಿರುವ ಬೊಂಡಾ ಪ್ಯಾಕ್ಟರಿಯಲ್ಲಿ ಎಳ ನೀರು ಸೇವಿಸಿ ಅಸ್ವಸ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿದಂತೆ ಇದೀಗ ಪ್ರಯೋಗಾಲಯ ಪರೀಕ್ಷಾ ವರದಿ ಆರೋಗ್ಯ ಇಲಾಖೆಯ ಕೈ ಸೇರಿದ್ದು, ಸಹಜವಾಗಿತ್ತು ಎಳನೀರು ಎಂದು ವರದಿಯಲ್ಲಿ ತಿಳಿಸಲಾಗಿದೆ.

ನಗರದ ಹೊರವಲಯದ ಅಡ್ಯಾರಿನ ಬೊಂಡ ಫ್ಯಾಕ್ಟರಿಯಲ್ಲಿ ಎಪ್ರಿಲ್ 9ರಂದು ಖರೀದಿಸಿದ ಎಳನೀರು ಕುಡಿದವರಲ್ಲಿ 138 ಜನರು ವಾಂತಿ, ಬೇಧಿಯಿಂದ ಅಸ್ವಸ್ಥಗೊಂಡಿದ್ದರು. ಈ ಪ್ರಕರಣ ಗಮನಕ್ಕೆ ಬಂದ ಬೆನ್ನಲ್ಲೇ ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ಹಾಗೂ ಇಲಾಖೆ ಸಿಬ್ಬಂದಿ ಸ್ಥಳಕ್ಕೆ ಭೇಟಿ ನೀಡಿ ಫ್ಯಾಕ್ಟರಿಯನ್ನು ಬಂದ್ ಮಾಡಿಸಿ ಎಳನೀರು ಮಾದರಿ ಸಂಗ್ರಹಿಸಿ ಬೆಂಗಳೂರಿನ ಪ್ರಯೋಗಾಲಯಕ್ಕೆ ಕಳುಹಿಸಿದ್ದರು.ಘಟನೆ ನಡೆದ ಎರಡು ದಿನಗಳ ನಂತರ ಇದು ಗಮನಕ್ಕೆ ಬಂದಿದ್ದು, ಆ ದಿನ ಫ್ಯಾಕ್ಟರಿಯಲ್ಲಿ ಸಂಗ್ರಹಿಸಿದ್ದ ಎಳನೀರನ್ನು ಪರೀಕ್ಷೆಗೆ ಕಳುಹಿಸಲಾಗಿತ್ತು. ಪ್ರಯೋಗಾಲಯ ಪರೀಕ್ಷೆಯ ವರದಿ ಎಪ್ರಿಲ್ 22ರಂದು ಆರೋಗ್ಯ ಇಲಾಖೆಯ ಕೈ ಸೇರಿದೆ.

ಅಸ್ವಸ್ಥಗೊಂಡವರ ಮಲ ಮತ್ತು ರಕ್ತದ ಮಾದರಿ ಸಂಗ್ರಹಿಸಿ, ಪರೀಕ್ಷೆಗೆ ಕಳುಹಿಸಲಾಗಿತ್ತು. ಈ ವರದಿ ಪ್ರಕಾರ ಕೆಲವರ ದೇಹದಲ್ಲಿ ಇಕೊಲೈ ಬ್ಯಾಕ್ಟಿರಿಯಾ ಇರುವುದು ಪತ್ತೆಯಾಗಿದೆ. ಮನುಷ್ಯನ ಕರುಳಿನಲ್ಲಿ ಈ ಬ್ಯಾಕ್ಟಿರಿಯಾ ಇರುತ್ತದೆ. ಆದರೆ ಅವುಗಳ ಪ್ರಮಾಣ ಹೆಚ್ಚಾದರೆ, ಕೆಲವೊಮ್ಮೆ ಆರೋಗ್ಯ ಸಮಸ್ಯೆ ಬರುತ್ತದೆ ಎಂದು ಜಿಲ್ಲಾ ಆರೋಗ್ಯಾಧಿಕಾರಿ ಡಾ. ತಿಮ್ಮಯ್ಯ ತಿಳಿಸಿದರು.ಅಡ್ಯಾರಿನಲ್ಲಿರುವ ಎಳನೀರು ಗಂಜಿಯಿಂದ ಐಸ್‌ಕ್ರೀಮ್ ತಯಾರಿಸುವ ಘಟಕ, ಕಾರ್‌ಸ್ಪೀಟ್ ಮತ್ತು ಕದ್ರಿಯಲ್ಲಿರುವ ಎಳನೀರು ಮಳಿಗೆಗಳನ್ನು ಬಂದ್ ಮಾಡಿಸಲಾಗಿದೆ. ಈಗಲೂ ಅವು ಬಂದ್ ಆಗಿಯೇ ಇವೆ.

ಫ್ಯಾಕ್ಟರಿಯವರು ಸ್ವಯಂ ಪ್ರೇರಿತರಾಗಿ ಎಳನೀರು ನೀಡುವುದನ್ನು ನಿಲ್ಲಿಸಿದ್ದಾರೆ. ಅಡ್ಯಾರ್‌ನಲ್ಲಿ ಪಲ್ಟಿಂಗ್‌ ಘಟಕಗಳು ಮಾತ್ರ ಕಾರ್ಯಾಚರಿಸುತ್ತಿವೆ. ಗ್ರಾಹಕರಿಗೆ ಆಹಾರ ನೀಡುವಾಗ ನಿಯಮ ಪಾಲನೆ, ಶುಚಿತ್ವಕ್ಕೆ ಸಂಬಂಧಿಸಿ ಕೆಲವು ಅಂಶಗಳ ಕಟ್ಟುನಿಟ್ಟು ಪಾಲನೆಗೆ ಆಹಾರ ಸುರಕ್ಷಾ ಅಫಿದಾವಿತನ್ನು ಫ್ಯಾಕ್ಟರಿಯಿಂದ ಪಡೆಯಲು ಆಹಾರಸುರಕ್ಷಾ ಅಧಿಕಾರಿಗೆ ಸೂಚನೆ ನೀಡಲಾಗುವುದು ಎಂದು ಅವರು ಪ್ರತಿಕ್ರಿಯಿಸಿದರು.

Continue Reading

LATEST NEWS

Trending