Wednesday, May 18, 2022

ವಿಟ್ಲ: ತೋಟದಲ್ಲಿ ತುಂಬಿಸಿಟ್ಟಿದ್ದ ಹಸಿ ಅಡಿಕೆ ಕಳ್ಳತನ-ದೂರು ದಾಖಲು

ವಿಟ್ಲ: ತುಂಬಿಸಿ ಇಟ್ಟಿದ್ದ ಗೋಣಿ ಚೀಲದಿಂದ ಹಸಿ ಅಡಿಕೆಯನ್ನು ವ್ಯಕ್ತಿಯೊಬ್ಬ ಕದ್ದೊಯ್ದ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.


ಇಡ್ಕಿದು ಗ್ರಾಮದ ಕೊಂಕೋಡಿ ಎಂಬಲ್ಲಿ ತಿರುಮಲೇಶ್ವರ ಭಟ್ ಎಂಬವರು ಜ.17 ರಂದು ತನ್ನ ತೋಟದ ಹಣ್ಣು ಅಡಿಕೆಯನ್ನು ಹೆಕ್ಕಿ ಒಂದು ಚೀಲದಲ್ಲಿ ತುಂಬಿಸಿ ಇಟ್ಟಿದ್ದಾರೆ.

ಸಂಜೆ 5.45 ಗಂಟೆಗೆ ತಿರುಮಲೇಶ್ವರ ಭಟ್ ಮತ್ತೆ ತೋಟದ ಬಳಿ ಹೋದಾಗ ಅದೇ ಗ್ರಾಮದ ಮೋಹನ್‌ ಎಂಬುವವರು ತುಂಬಿಸಿ ಇಟ್ಟಿದ್ದ ಗೋಣಿ ಚೀಲದಿಂದ ಅಡಿಕೆ ಹಣ್ಣನ್ನು ತುಂಬಿಸಿಕೊಂಡು ಹೋಗುತ್ತಿದ್ದರು.

ಈ ವೇಳೆ ತಿರುಮಲೇಶ್ವರ ಭಟ್ ಬೊಬ್ಬೆ ಹಾಕಿದರೂ ಓಡಿ ಹೋಗಿದ್ದಾನೆ. ಕಳವಾದ ಅಡಿಕೆಯ ಮೌಲ್ಯ 2000 ರೂಪಾಯಿ ಆಗಬಹುದು ಎಂದು ಅಂದಾಜಿಸಲಾಗಿದೆ. ಈ ಬಗ್ಗೆ ವಿಟ್ಲ ಪೊಲೀಸ್‌ ಠಾಣೆಯಲ್ಲಿ ದಾಖಲಾಗಿದೆ.

LEAVE A REPLY

Please enter your comment!
Please enter your name here

Hot Topics

ಬಂಟ್ವಾಳದಲ್ಲಿ ಬೈಕ್ ಕಳವು ಪ್ರಕರಣ: ಮೂವರು ಆರೋಪಿಗಳ ಬಂಧನ

ಬಂಟ್ವಾಳ: ಬೈಕ್ ಕಳವು ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಆರೋಪಿಗಳನ್ನು ಬಂಟ್ವಾಳ ನಗರ ಠಾಣಾ ಪೊಲೀಸ್ ಠಾಣೆಯ ‌ಇನ್ಸ್‌ಪೆಕ್ಟರ್ ವಿವೇಕಾನಂದ ಅವರ ನೇತೃತ್ವದ ತಂಡ ಬಂಧಿಸಿದೆ.ಅಕ್ಬರ್, ಸಿದ್ದೀಕ್, ಸಮೀರ್ ಬಂಧಿತ ಆರೋಪಿಗಳು. ಇತ್ತೀಚೆಗೆ ಬಂಟ್ವಾಳ ನಗರ...

MRPL ಉದ್ಯೋಗಿ ನಾಪತ್ತೆ: ಪ್ರಕರಣ ದಾಖಲು

ಸುರತ್ಕಲ್: ಎಂಆರ್‌ಪಿಎಲ್‌ನಲ್ಲಿ ಎಂಜಿನಿಯರ್ ಆಗಿದ್ದ ಸಕಲೇಶಪುರ ಮೂಲದ ಕಾಟಿಪಳ್ಳ ಶಾರದಾ ನಗರ ನಿವಾಸಿ ರಾಘವೇಂದ್ರ ಕೆ.ಆರ್ (52) ಎಂಬವರು ಮೇ 16ರಿಂದ ನಾಪತ್ತೆಯಾಗಿದ್ದಾರೆ.'ಫ್ಲೀಸ್ ತನ್ನನ್‌ನು ಹುಡುಕಬೇಡಿ' ಎಂದು ಚೀಟಿ ಬರೆದಿಟ್ಟು ಹೋಗಿದ್ದಾರೆ.ಹೋಗುವಾಗ ಬಟ್ಟೆ,...

ಬಂಟ್ವಾಳ: ಹೃದಯಾಘಾತದಿಂದ 9ನೇ ತರಗತಿ ವಿದ್ಯಾರ್ಥಿನಿ ಸಾವು

ಬಂಟ್ವಾಳ: 9ನೇ ತರಗತಿಯ ವಿದ್ಯಾರ್ಥಿನಿಯೊಬ್ಬಳು ಹೃದಯಾಘಾತದಿಂದಾಗಿ ಸಾವನ್ನಪ್ಪಿದ ಘಟನೆ ವಿಟ್ಲ ಸಮೀಪದ ಅಳಿಕೆ ಎಂಬಲ್ಲಿ ಇಂದು ನಡೆದಿದೆ.ಮಗಳನ್ನು ಕಳೆದುಕೊಂಡ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಮೃತಳನ್ನು ವಿಠಲ್ ಜೇಸೀಸ್ಆಂಗ್ಲ ಮಾಧ್ಯಮ ಶಾಲೆಯ 9ನೇ ತರಗತಿ...