FILM
ಬಾಲಿವುಡ್ ಜೋಡಿ ಅರ್ಜುನ್ ಕಪೂರ್ ಹಾಗೂ ಮಲೈಕಾ ಆರೊರಾಗೆ ಕೊರೊನಾ
ಮುಂಬೈ: ಬಾಲಿವುಡ್ ಜೋಡಿ ಅರ್ಜುನ್ ಕಪೂರ್ ಹಾಗೂ ಮಲೈಕಾ ಅರೊರಾಗೆ ಕೊರೊನಾ ಸೊಂಕು ತಗುಲಿರುವುದು ದೃಢಪಟ್ಟಿದ್ದು. ಸಾಮಾಜಿಕ ಜಾಲತಾಣದಲ್ಲಿ ಈ ಬಗ್ಗೆ ಮಾಹಿತಿ ನೀಡಿದ್ದಾರೆ.
ಸಾಮಾಜಿಕ ಜಾಲತಾಣಗಳಲ್ಲಿ ಸೋಂಕು ತಗುಲಿರುವುದನ್ನು ಅರ್ಜುನ್ ಕಪೂರ್ ಖಚಿತಪಡಿಸಿದ ನಂತರ ಮಲೈಕಾ ಅರೊರಾಗೂ ಕೋವಿಡ್-19 ಪಾಸಿಟಿವ್ ಬಂದಿರುವುದನ್ನು ಆಕೆಯ ಸಹೋದರಿ ಅಮೃತಾ ಅರೋರಾ ಮಾಧ್ಯಮಗಳಿಗೆ ತಿಳಿಸಿದ್ದಾರೆ.
ಈ ಬಗ್ಗೆ ಮಲೈಕಾ ಅರೋರಾ ಕೂಡಾ ಖಚಿತಪಡಿಸಿದ್ದು,ಯಾವುದೇ ರೀತಿಯ ರೋಗ ಲಕ್ಷಣ ಕಂಡುಬಂದಿಲ್ಲ, ಮನೆಯಲ್ಲಿಯೇ ಸ್ವಯಂ ಕ್ವಾರಂಟೈನಲ್ಲಿರುವುದಾಗಿ ಅವರು ತಿಳಿಸಿದ್ದಾರೆ.
ಇದಕ್ಕೂ ಮುನ್ನ ಸಾಮಾಜಿಕ ಜಾಲತಾಣಗಳಲ್ಲಿ ಕೋವಿಡ್-19 ಪಾಸಿಟಿವ್ ಹೊಂದಿರುವುದನ್ನು ನಟ ಅರ್ಜುನ್ ಕಪೂರ್ ಹಂಚಿಕೊಂಡಿದ್ದರು.
FILM
ಹೃದಯಾಘಾತದಿಂದ ಸಾವನ್ನಪ್ಪಿದ ಕೇವಲ 24 ವರ್ಷದ ನಟಿ
ಕೇರಳ : ಮಲೆಯಾಳಂ ನಟಿ ಲಕ್ಷ್ಮಿಕಾ ಸಂಜೀವನ್ ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರಿಗೆ 24 ವರ್ಷ ವಯಸ್ಸಾಗಿತ್ತು.
ಚಲನಚಿತ್ರ ಮತ್ತು ದೂರದರ್ಶನದಲ್ಲಿ ಜನಪ್ರಿಯ ಹೆಸರಾಗಿರುವ ಮಲಯಾಳಂ ನಟಿ ಲಕ್ಷ್ಮಿಕಾ ಸಂಜೀವನ್ ಡಿ. 9ರಂದು ಯುನೈಟೆಡ್ ಅರಬ್ ಎಮಿರೇಟ್ಸ್‌ನ ಶಾರ್ಜಾದಲ್ಲಿ ನಿಧನರಾದರು.
ವರದಿಗಳ ಪ್ರಕಾರ ಹಠಾತ್ ಹೃದಯಾಘಾತದಿಂದ ನಿಧನರಾದರು. ಅಂಚಿನಲ್ಲಿರುವ ಸಮುದಾಯಗಳ ಹೋರಾಟದ ಸುತ್ತ ಸುತ್ತುವ ಕಾಕ್ಕಾದಲ್ಲಿ ಪಂಚಮಿ ಪಾತ್ರಕ್ಕಾಗಿ ಅವರು ಜನಪ್ರಿಯರಾಗಿದ್ದಾರೆ. ಆಕೆಯ ನಿಧನದ ಸುದ್ದಿ ಮಾಲಿವುಡ್‌ನಲ್ಲಿ ಆಘಾತವನ್ನುಂಟು ಮಾಡಿದೆ.
ಕನ್ನಡದ ಬ್ಯೂಟಿ ಶ್ರೀಲೀಲಾ ಏಕಾಏಕಿ ಶ್ರೀಲಂಕಾಕ್ಕೆ ಹೋಗಿದ್ದಾರೆ. ಭರ್ತಿ ಎರಡು ದಿನ ಅಲ್ಲಿ ಕಳೆಯಲಿದ್ದಾರೆ. ಅದರಲ್ಲೇನು ವಿಶೇಷ ಎನ್ನಬೇಡಿ. ಒಂದೊಂದು ಗಂಟೆ ಟೈಮ್‌ಗೂ ಒದ್ದಾಡುತ್ತಿದ್ದಾರೆ ಶ್ರೀಲೀಲಾ. ಶೂಟಿಂಗ್, ಮೆಡಿಕಲ್ ಪರೀಕ್ಷೆ, ಪ್ರಚಾರಕ್ಕೆಲ್ಲಾ ಸಮಯ ಕೊಡಲಾರದ ಹುಡುಗಿ ಶ್ರೀಲಂಕಾಕ್ಕೆ ಹೋಗಿದ್ಯಾಕೆ? ಇಲ್ಲಿದೆ ಮಾಹಿತಿ.
‘ಗುಂಟೂರು ಖಾರಂ’ ಶೂಟಿಂಗ್ ನಡೆಯುತ್ತಿದೆ. ಪ್ರಿನ್ಸ್ ಮಹೇಶ್ ಬಾಬು ಜೊತೆ ನಟಿ ಬ್ಯುಸಿ. ಇದರ ನಡುವೆ ನಿತಿನ್ ಜೊತೆಗಿನ ‘ಎಕ್ಸಾರ್ಡನರಿ ಮ್ಯಾನ್’ ಬಿಡುಗಡೆ ಪ್ರಚಾರಕ್ಕೆ ಹೋಗಬೇಕು.
ಇದು ಸಾಲದು ಎಂಬಂತೆ ಜನವರಿಗೆ ಮೆಡಿಕಲ್ ಪರೀಕ್ಷೆ ಕೂಡ ಇದೆ. ಒಂದೇ ಒಂದು ಗಂಟೆಗಾಗಿ ನಿರ್ಮಾಪಕರು ಕಾಯುತ್ತಿದ್ದಾರೆ. ಶ್ರೀಲೀಲಾ ಸಮಯ ಹೊಂದಿಸಲು ಒದ್ದಾಡುತ್ತಿದ್ದಾರೆ. ಹೀಗಿರುವಾಗ ಪುರುಸೊತ್ತು ಇಲ್ಲದ ಸಮಯದಲ್ಲಿ ಶ್ರೀಲೀಲಾ ಶ್ರೀಲಂಕಾಕ್ಕೆ ಹಾರಿದ್ದಾರೆ. ‘ಬಾಹುಬಲಿ’ ನಟ ರಾಣಾ ದಗ್ಗುಬಾಟಿ ಸಹೋದರ ಅಭಿರಾಮ್ ಮದುವೆ ಇಂದು (ಡಿ.6) ನಡೆಯುತ್ತಿದೆ. ಹುಡುಗಿ ಪ್ರತ್ಯೂಶಾ. ಈಕೆಗಾಗಿ ಶ್ರೀಲೀಲಾ ಶ್ರೀಲಂಕಾಕ್ಕೆ ಹೋಗಿದ್ದಾರೆ. ಬಾಲ್ಯದ ಗೆಳತಿ ಪ್ರತ್ಯೂಶಾ- ಶ್ರೀಲೀಲಾ ಅಮೆರಿಕಾದಲ್ಲಿ ಇಬ್ಬರೂ ಒಂದೇ ಕಾಲೇಜಿನ ಗೆಳತಿಯರು. ಹೀಗಾಗಿ ಇದ್ದ ಬದ್ದ ಕೆಲಸವೆಲ್ಲಾ ಪಕ್ಕಕ್ಕಿಟ್ಟು ಶ್ರೀಲೀಲಾ ಮದುವೆಗೆ ಹಾಜರಾಗಿದ್ದಾರೆ.
ಬ್ಯಾಕ್ ಟು ಬ್ಯಾಕ್ ಸಿನಿಮಾಗಳ ಶೂಟಿಂಗ್ ಮತ್ತು ಸಿನಿಮಾ ರಿಲೀಸ್‌ನಲ್ಲಿ ಬ್ಯುಸಿಯಿದ್ದ ‘ಕಿಸ್’ ನಟಿ. ಕೊಂಚ ತೆಗೆದುಕೊಂಡು ಶ್ರೀಲಂಕಾಗೆ ಹಾರಿದ್ದಾರೆ. ಅಂದಹಾಗೆ, ಮತ್ತೆ ಕನ್ನಡ ಸಿನಿಮಾದಲ್ಲಿ ನಟಿಸುವ ಬಗ್ಗೆ ಶ್ರೀಲೀಲಾ ಗುಡ್ ನ್ಯೂಸ್ ಕೊಟ್ಟಿದ್ದಾರೆ. ಸದ್ಯದಲ್ಲೇ ಈ ಚಿತ್ರದ ಬಗ್ಗೆ ಹೆಚ್ಚಿನ ಅಪ್‌ಡೇಟ್ ಸಿಗಲಿದೆ.
bangalore
ಸ್ನೇಹಿತ್ ಔಟ್- ನಮ್ರತಾ- ಸ್ನೇಹಿತ್ ಲವ್ ಸ್ಟೋರಿಗೆ ಬ್ರೇಕ್..!
ಬಿಗ್ ಬಾಸ್: ಬಿಗ್ ಬಾಸ್ ಮನೆ ಆಟ ಇದೀಗ 60 ದಿನಗಳ ಪೂರೈಸಿದೆ. ಪ್ರತಿ ವಾರವು ಸ್ಪರ್ಧೆಗಳ ಸಂಖ್ಯೆ ಇಳಿಕೆಯಾಗುತ್ತಿದ್ದು, ಎಲಿಮಿನೆಟ್ ಆಗುತ್ತಿದ್ದಾರೆ. ಈ ವಾರವು ಸ್ನೇಹಿತ್ ಔಟ್ ಆಗಿದ್ದಾರೆ.
ಹಿಂದಿನ ವಾರದಲ್ಲಿ ಸ್ನೇಹಿತ್ ನಮ್ರತಾ ಜೊತೆ ಲವ್ವಿ-ಡವ್ವಿ ವಿಷಯಗಳನ್ನು ಮಾತನಾಡುತ್ತಿದ್ದರು. ನಮ್ರತಾ ಜೊತೆ ಬೆಸ್ಟ್ ಫ್ರೇಂಡ್ ಆಗಿದ್ದ ಸ್ನೇಹಿತ್ ಟಾಸ್ಕ್ ಗಳಲ್ಲಿ ಗೆಲ್ಲುತ್ತಿದ್ದರೂ, ಕೊನೆ ಕೊನೆಗೆ ಆಟದ ವಿಚಾರದಲ್ಲಿ ಬಹಳಷ್ಟು ಕಡೆ ಎಡವಿದ್ದರು. ಸ್ನೇಹಿತ್ ಕ್ಯಾಪ್ಟನ್ಸಿ ಆಗಿದ್ದಾಗ ಎರಡು ತಂಡಗಳ ಜೊತೆ ಪಕ್ಷಪಾತ ಮಾಡುತ್ತಿದ್ದರು. ಒಂದು ಟೀಮ್ ಗೆ ಮಾತ್ರ ಸಪೋರ್ಟ್ ಮಾಡುತ್ತಿದ್ದರು.
ಸ್ನೇಹಿತ್ ನಿರ್ಧಾರದಿಂದ ಕ್ಯಾಪ್ಟನ್ ಆಗಿ ಮುಂದೆ ಬರಬೇಕಿದ್ದ ಕಡೆಯಲ್ಲಾ ಎಡವಿದ್ದೇ ಜಾಸ್ತಿ. ಹಾಗಾಗಿ ಗಂಧರ್ವರು- ರಾಕ್ಷಸರು ಎಂಬ ತಂಡಗಳ ನಡುವೆ ಜಗಳಗಳು ಹೆಚ್ಚಾಗಿತ್ತು. ಇದೇ ಟಾಸ್ಕ್ ನಲ್ಲಿ ಡ್ರೋನ್ ಪ್ರತಾಪ್ ಸಂಗೀತಾ ಕಣ್ಣಿಗೆ ಪೆಟ್ಟಾಗಿದ್ದು, ಇದಕ್ಕೆ ಪರೋಕ್ಷವಾಗಿ ಸ್ನೇಹಿತೇ ಕಾರಣರಾದರು. ಟಾಸ್ಕ್ ನಿಲ್ಲಿಸುವ ಅಧಿಕಾರ ಕೈಯಲ್ಲಿತ್ತು. ಆದರೆ ಏನೂ ಮಾತನಾಡಲೂ ಮುಂದೆ ಹೋಗಿಲ್ಲ. ಸ್ನೇಹಿತ್ ನಿರ್ಧಾರಕ್ಕೆ ಪ್ರೇಕ್ಷಕರು ಕೂಡ ಅಸಮಾಧಾನ ವ್ಯಕ್ತಪಡಿಸಿದ್ದರು. ಸ್ನೇಹಿತ್ ನ ನಡೆತೆಯಿಂದ ಇದೀಗ ಅವರ ಬಿಗ್ ಬಾಸ್ ನಿಂದ ಹೊರ ಹೋಗಿದ್ದಾರೆ.
ವಿನಯ್ ಗೌಡ ಮತ್ತು ನಮೃತಾ ಗೌಡ ಜೊತೆಯಷ್ಟೇ ಕಂಫರ್ಟ್ ಝೋನ್ ಕ್ರಿಯೇಟ್ ಮಾಡಿಕೊಂಡು, ಕ್ಯಾಪ್ಟನ್ ಆಗಿದ್ರೂ ಅವರ ಪರವಾಗೇ ಆಡುತ್ತಿದ್ದ ಸ್ನೇಹಿತ್ ಎಲಿಮಿನೇಟ್ ಆಗಿದ್ದಾರೆ. ಸದ್ಯ ಸ್ನೇಹಿತ್ ಎಲಿಮಿನೇಷನ್ ನಿಂದ ವಿನಯ್ & ಟೀಮ್ ಶಾಕ್ ಆಗಿದೆ. ನಮ್ರತಾ ಗೌಡ ಜೊತೆ ಲವ್ವಿ ಡವ್ವಿ ಅಂತ ಹಿಂದೆ ಬೀಳತ್ತಿದ್ದ ಸ್ನೇಹಿತ್ ಮುಂದಿನ ನಡೆಯೇನು? ಬಿಗ್ ಬಾಸ್ ಆಟದ ನಂತರ ಮುಂದಿನ ದಿನಗಳಲ್ಲಿ ನಮ್ರತಾ ಮೆಚ್ಚಿ ಸ್ನೇಹಿತ್ ಒಪ್ಪಿಕೊಳ್ತಾರಾ ಕಾಯಬೇಕಿದೆ.
ಅಂತೂ ಬಿಗ್ ಬಾಸ್ ನಿಂದ ಸ್ನೇಹಿತ್ ಔಟ್ ಆದಾಗ ನಮ್ರತಾ ಬಿಕ್ಕಿ ಬಿಕ್ಕಿ ಬಿಕ್ಕಿ ಅತ್ತಿದ್ದಾರೆ. ಇವರ ಲವ್ ಸ್ಟೋರಿ ಬ್ರೇಕ್ ಆಗುತ್ತಾ ಅಲ್ಲ ಬಿಗ್ ಮನೆಯಿಂದ ಹೊರ ಹೋದ ಬಳಿಕ ಮುಂದುವರಿಯುತ್ತಾ ಅನ್ನೋದು ಕಾದು ನೋಡಬೇಕಷ್ಟೇ.
bangalore
ಬಿಗ್ ಬಾಸ್ ಮನೆಯಲ್ಲಿ ನಮ್ರತಾ-ಸ್ನೇಹಿತ್ ಲವ್ವಿ-ಡವ್ವಿ
Bigboss: ಬಿಗ್ ಬಾಸ್ ಮನೆಯಲ್ಲಿ ಕಾರ್ತಿಕ್- ಸಂಗೀತಾ ಇಬ್ಬರ ಒಂದು ಜೋಡಿ ಆದರೆ ಇತ್ತ ಸ್ನೇಹಿತ್ ಮತ್ತು ನಮ್ರತಾ ಇವರಿಬ್ಬರ ಪ್ರೇಮ ಕತೆ ಶುರುವಾಗಿದೆ.
ಕ್ಯಾಪ್ಟೆನ್ಸಿ ವಿಚಾರದಲ್ಲಿ ನಮ್ರತಾ ಹಾಗೂ ಸ್ನೇಹಿತ್ ಮುನಿಸಿಕೊಂಡಿದ್ದು, ಇದೀಗ ಮತ್ತೇ ಅವರ ಫ್ರೆಂಡ್‌ಶಿಪ್ ಶುರುವಾಗಿದೆ. ‘ ನಾನು ನಿಮ್ಮ ಪ್ರೀತಿನ ಒಪ್ಪಿಕೊಂಡ್ರೆ ಏನು ಮಾಡ್ತೀರಾ ಎಂದು ಸ್ನೇಹಿತ್ ಗೆ ನಮ್ರತಾ ಹೇಳಿದ್ದಾರೆ. ಅವರ ಮಾತಿಗೆ ಸ್ನೇಹಿತ್ ನಾಚಿ ನೀರಾಗಿದ್ದಾರೆ. ಇದೀಗ ಇವರಿಬ್ಬರ ಲವ್ವಿ-ಡವ್ವಿಯಲ್ಲಿ ಹೊಸ ಟ್ವಿಸ್ಟ್ ಸಿಕ್ಕಿದೆ. ಸ್ನೇಹಿತ್ ಕ್ಯಾಪ್ಟನ್ ಆಗಿದ್ದಾಗ ಟಾಸ್ಕ್‌ನಿಂದ ನಮ್ರತಾ ಅವರನ್ನು ಹೊರಗೆ ಹಾಕಿದ್ದರು. ಬಳಿಕ ನಮ್ರತಾ ಅವರ ಜೊತೆ ಮಾತನಾಡುವುದನ್ನೇ ನಿಲ್ಲಿಸಿದ್ದರು.
ಕಳೆದ 60 ದಿನಗಳಿಂದ ನಡೆಯುತ್ತಿರೋ ಸೀನ್ ಅಂದರೆ ನಮ್ರತಾ ಹಿಂದೆ ಹೋಗೋದನ್ನ ಸ್ನೇಹಿತ್ ಬಿಟ್ಟಿಲ್ಲ. ನಮ್ರತಾಗೆ ಆಗಾಗ ಪ್ರೇಮ ನಿವೇದನೆ ಮಾಡುತ್ತಲೇ ಬಂದಿದ್ದಾರೆ. ನಮ್ರತಾ ಬೀಳಲ್ಲ, ಸ್ನೇಹಿತ್ ಬಿಡಲ್ಲ. ಇದೀಗ ಇದೆನ್ನೆಲ್ಲಾ ಗಮನಿಸಿ ನಮ್ರತಾ, ಸರಿ ನಾನು ನಿಮ್ಮ ಪ್ರೀತಿಯನ್ನ ಒಪ್ಪಿಕೊಂಡರೆ ಮುಂದೇನು? ಫ್ಯೂಚರ್ ಪ್ಲ್ಯಾನ್ ಏನು ಎಂದು ಕೇಳಿದ್ದಾರೆ. ಹೇಳಿ ಈಗ ನಾನು ಪ್ರೀತಿ ಮಾಡ್ತೀನಿ ಅಂದ್ರೆ ಏನು ಮಾಡ್ತೀರಿ ಎಂದು ನೇರವಾಗಿ ಪ್ರಶ್ನೆ ಎಸೆದರು.
ಆದರೆ, ಈ ಪ್ರಶ್ನೆಗೆ ಏನು ಉತ್ತರಿಸಬೇಕು ಎಂಬುದೇ ಸ್ನೇಹಿತ್‌ಗೆ ತಿಳಿಯಲಿಲ್ಲ. ಅವರು ನಕ್ಕು ಸುಮ್ಮನಾದರು. ಹೇಳಿ ಈಗ ನಾನು ಪ್ರೀತಿಸುತ್ತೇನೆ ಎಂದರೆ ಏನು ಮಾಡ್ತೀರಾ. ಇಷ್ಟು ದಿನ ಸುಮ್ಮನೆ ಕಾಳು ಹಾಕಿದ್ರಾ ಎಂದು ಮರು ಪ್ರಶ್ನೆ ಹಾಕಿದರು. ಬಿಗ್ ಬಾಸ್‌ನಿಂದ ಹೊರಗೆ ಹೋದ ಬಳಿಕ ಮನೆಯವರ ಜೊತೆ ಮಾತನಾಡೋಣ.
ಒಂದು ವರ್ಷ ಮದುವೆ ಆಗೋದು ಬೇಡ. ನಿಮ್ಮಿಷ್ಟದ ಜಾಗಕ್ಕೆ ಹೊಗೋಣ. ಸ್ವಿಜರ್‌ಲೆಂಡ್‌ಗೆ ಮೊದಲು ಹೋಗೋಣ ಎಂದರು ಸ್ನೇಹಿತ್. ಅವರ ಮಾತನ್ನು ಕೇಳಿ ನಮ್ರತಾ ನಕ್ಕರು. ನಮ್ರತಾ ನಗುತ್ತಲೇ ಪ್ರೀತಿಗೆ ಗ್ರೀನ್ ಸಿಗ್ನಲ್ ಕೊಟ್ರಾ? ಈ ಬಗ್ಗೆ ಕ್ಲ್ಯಾರಿಟಿ ಇಲ್ಲ. ಆದರೆ ನಮ್ರತಾ ನಗುವಿಗೆ ಸ್ನೇಹಿತ್ ಮಾತ್ರ ನಾಚಿ ನೀರಾಗಿದ್ದಾರೆ. ಅಂತೂ ಇಂತೂ ಕೋಪ ಮಾತನಾಡುತ್ತಿದ್ದಲ್ಲಾ ಅಂತ ಸಮಾಧಾನದಲ್ಲಿದ್ದಾರೆ ಸ್ನೇಹಿತ್.
- FILM5 days ago
ರಾತ್ರಿ 12.30ಕ್ಕೆ ಆಡಿಷನ್..2.30ಕ್ಕೆ ಆಯ್ಕೆ-ಬೃಂದಾವನ ಸೀರಿಯಲ್ ಹೀರೋ ಕ್ಲಾರಿಟಿ
- FILM4 days ago
ನಮೃತಾ ಗೌಡ ಆವಾಜ್ ಗೆ ಸಂಗೀತಾ ಕಣ್ಣೀರು
- bengaluru5 days ago
ಹೈಕೋರ್ಟ್ ಕಲಾಪವನ್ನೂ ಬಿಡದ ಸೈಬರ್ ಹ್ಯಾಕರ್ಸ್-ವಿಡಿಯೋ ಕಾನ್ಫರೆನ್ಸ್ ಆ್ಯಪ್ನಲ್ಲಿ ಅಶ್ಲೀಲ ದೃಶ್ಯ ಅಪ್ಲೋಡ್
- bangalore3 days ago
ದೈವದ ರೀಲ್ಸ್ ಮಾಡಬೇಡಿ ಎಂದು ರಿಕ್ವೆಸ್ಟ್ ಮಾಡಿದ ಕಾಂತಾರ ರಿಷಬ್ ಶೆಟ್ಟಿ..!!