Connect with us

LATEST NEWS

ಮೈಸೂರು ದಸರಾದಲ್ಲಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಇನ್ನಿಲ್ಲ..!!

Published

on

ಹಾಸನ: ಮೈಸೂರು ದಸರಾದಲ್ಲಿ 8 ಬಾರಿ ಅಂಬಾರಿ ಹೊತ್ತಿದ್ದ ಅರ್ಜುನ ಆನೆ ಸಾವನ್ನಪ್ಪಿದೆ.

 


ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಯಸಳೂರು ಬಳಿ ಕಾಡನೆ ಸೆರೆ ಹಿಡಿದು ಸ್ಥಳಾಂತರ ಮಾಡುವ ಕಾರ್ಯಾಚರಣೆ ನಡೆಯುತ್ತಿದ್ದ ಸಂದರ್ಭ ಆ ಕಾಡನೆಗೆ ಅರವಳಿಕೆ ಚುಚ್ಚುಮದ್ದು ನೀಡುವ ವೇಳೆ ಅರ್ಜುನ ಆನೆಯ ಮೇಲೆ ಒಂಟಿಸಲಗ ದಾಳಿ ಮಾಡಿದೆ. ಈ ಘಟನೆಯಲ್ಲಿ ಅರ್ಜುನ ಆನೆ ಮೃತಪಟ್ಟಿದೆ ಎಂದು ವರದಿಯಾಗಿದೆ. ಕಾಡನೆ ಅರ್ಜುನನ ಮೇಲೆ ದಾಳಿ ನಡೆಸಿದಾಗ ಅಲ್ಲಿದ್ದ ಉಳಿದ ಮೂರು ಸಾಕನೆಗಳು ಓಡಿ ಹೋಗಿವೆ. ಈ ವೇಳೆ ಅರ್ಜುನ ಹಾಗೂ ಕಾಡನೆಗಳ ನಡುವೆ ಯುದ್ಧ ಕಾಳಗವೇ ನಡೆದಿತ್ತು. ಅರ್ಜುನನ ಮೇಲಿದ್ದ ಮಾವುತ ಇಳಿದು ಓಡಿದ್ದಾರೆ. ಮೈಸೂರು ದಸರಾ 2023 ಜಂಬೂ ಸವಾರಿಯ ಆನೆಗಳ ತೂಕದಲ್ಲಿ ನಂಬರ್ ಒನ್‌ ಸ್ಥಾನ ಪಡೆದಿದ್ದ ಅರ್ಜುನ ಆನೆ ಇದೀಗ ಸಾವನ್ನಪ್ಪಿದೆ. ಘಟನಾ ಸ್ಥಳಕ್ಕೆ ಅರಣ್ಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿ ಪರಿಸೀಲನೆ ನಡೆಸಿದ್ದಾರೆ.

 

 

Click to comment

Leave a Reply

Your email address will not be published. Required fields are marked *

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ. ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

LATEST NEWS

ಮುಂದಿನ 5 ದಿನ ರಾಜ್ಯದ 25 ಜಿಲ್ಲೆಗಳಲ್ಲಿ ಬಿಸಿ ಗಾಳಿ ಸಾಧ್ಯತೆ; ಎಲ್ಲೆಲ್ಲಿ?

Published

on

ಮಂಗಳೂರು : ರಾಜ್ಯದಲ್ಲಿ ತಾಪಮಾನವು ದಿನದಿಂದ ದಿನಕ್ಕೆ ಹೆಚ್ಚುತ್ತಲಿದ್ದು, ಬಿಸಿಲಾಘಾತದಿಂದ ಜನ, ಜಾನುವಾರು ಮತ್ತು ಪಕ್ಷಿ ಸಂಕುಲ ತತ್ತರಿಸಿದೆ. ನೀರಿಗೆ ತತ್ವಾರ ಎದುರಾಗಿದೆ. ಇಂತಹ ಪರಿಸ್ಥಿತಿಯಲ್ಲಿಯೇ ಇದೀಗ ಹವಾಮಾನ ಇಲಾಖೆಯು ರಾಜ್ಯದ 25 ಜಿಲ್ಲೆಗಳಿಗೆ ಶಾಖಾಘಾತದ ಮುನ್ಸೂಚನೆ ನೀಡಿದೆ. ಇಂದಿನಿಂದ 5 ದಿನಗಳ ಕಾಲ ಬಿಸಿ ಗಾಳಿ ಹೆಚ್ಚಾಗುವ ಸಾಧ್ಯತೆಯಿದೆ ಎಂದು ಎಚ್ಚರಿಕೆ ನೀಡಿದೆ.

ಯಾವ ಜಿಲ್ಲೆಗಳಿಗೆ ಬಿಸಿಲಾಘಾತ?

ಬೀದರ್, ಕಲಬುರಗಿ, ವಿಜಯಪುರ, ಯಾದಗಿರಿ, ರಾಯಚೂರು, ಬಾಗಲಕೋಟೆ, ಬೆಳಗಾವಿ, ಗದಗ, ಧಾರವಾಡ, ಹಾವೇರಿ, ಕೊಪ್ಪಳ, ವಿಜಯನಗರ, ದಾವಣಗೆರೆ, ಚಿತ್ರದುರ್ಗ, ತುಮಕೂರು, ಕೋಲಾರ, ಮಂಡ್ಯ, ಬಳ್ಳಾರಿ, ಹಾಸನ, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಮೈಸೂರು, ಚಿಕ್ಕಮಗಳೂರು ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಶಾಖದ ಅಲೆಗಳು ಹೆಚ್ಚಾಗುವ ಸಾಧ್ಯತೆ ಇದೆ. ಮೇ 5 ರವರೆಗೂ ಇದೇ ಪರಿಸ್ಥಿತಿ ಇರಲಿದೆ ಎಂದು ಇಲಾಖೆ ತಿಳಿಸಿದೆ.

ಮೇ 4 ರ ವರೆಗೆ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಬಿಸಿ ವಾತಾವರಣವಿರುವ ಸಂಭವವಿದೆ.

ಮಳೆಯಾಗುವ ಸಾಧ್ಯತೆ :

ಚಿಕ್ಕಮಗಳೂರು, ಕೊಡಗು, ಮೈಸೂರು, ಮಂಡ್ಯ, ರಾಮನಗರ ಹಾಗೂ ತುಮಕೂರು ಜಿಲ್ಲೆಯ ಕೆಲವೆಡೆ ಬುಧವಾರ ಹಗುರ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ನಾಲ್ಕುದಿನ ಒಣಹವೆ ಇರಲಿದೆ.
ಮೇ 6 ರಿಂದ ಕೊಡಗು, ಮೈಸೂರು, ಮಂಡ್ಯ ಮತ್ತು ಚಾಮರಾಜನಗರ ಜಿಲ್ಲೆಗಳ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ. ಬಳ್ಳಾರಿ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ, ಶಿವಮೊಗ್ಗ, ತುಮಕೂರು, ವಿಜಯನಗರ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಜಿಲ್ಲೆಯ ಕೆಲವೆಡೆ ಹಗುರ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

ಇದನ್ನೂ ಓದಿ : ಮಂಗಳೂರು ವಿಮಾನ ನಿಲ್ದಾಣವಿನ್ನು ನಿಶ್ಶಬ್ದ ವಲಯ!

ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ :

ಇಂದಿನಿಂದ(ಮೇ 1 ರಿಂದ) ಮುಂದಿನ ಐದು ದಿನಗಳು ಬಾಗಲಕೋಟೆ, ಕಲಬುರಗಿ ಹಾಗೂ ಕೊಪ್ಪಳದಲ್ಲಿ ರಾತ್ರಿಯ ಅವಧಿಯೂ ಬಿಸಿ ವಾತಾವರಣದಿಂದ ಕೂಡಿರುವ ಸಾಧ್ಯತೆಯಿದೆ. ಮಂಗಳವಾರ ಬೆಳಿಗ್ಗೆ 8.30 ರಿಂದ ಬುಧವಾರ ಬೆಳಗ್ಗಿನ ತನಕದ 24 ಗಂಟೆಗಳ ಅವಧಿಯಲ್ಲಿ ರಾಜ್ಯದ ಕಲಬುರಗಿಯಲ್ಲಿ ಗರಿಷ್ಠ ಉಷ್ಣಾಂಶ 42.8 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ.

ಬೆಂಗಳೂರಿನಲ್ಲಿ ಗರಿಷ್ಠ ತಾಪಮಾನ 38.2 ಡಿಗ್ರಿ ಸೆಲ್ಸಿಯಸ್ ವರದಿಯಾಗಿದೆ. ಕಳೆದ ನಾಲ್ಕು ದಿನಗಳಲ್ಲಿ ಮೂರು ದಿನ 38 ಡಿಗ್ರಿ ಸೆಲ್ಸಿಯಸ್ ದಾಟಿದೆ.

Continue Reading

DAKSHINA KANNADA

ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

Published

on

ಮಂಗಳೂರು: ಸಂಗೀತ, ಭರತನಾಟ್ಯದ ಮಾದರಿಯಲ್ಲಿ ಯಕ್ಷಗಾನಕ್ಕೂ ನಿರ್ದಿಷ್ಟ ಚೌಕಟ್ಟಿನಲ್ಲಿ ಪಠ್ಯ ರಚಿಸಿ ಪರೀಕ್ಷೆಗಳನ್ನು ನಡೆಸುವ ಪ್ರಯತ್ನಗಳು ನಡೆಯುತ್ತಿದೆ ಎಂದು ಯಕ್ಷಧ್ರುವ ಪಟ್ಲ ಫೌಂಡೇಶನ್ ಸ್ಥಾಪಕಾಧ್ಯಕ್ಷ ಪಟ್ಲ ಸತೀಶ್ ಶೆಟ್ಟಿ ಹೇಳಿದರು.

ಮಂಗಳೂರಿನ ಪ್ರೆಸ್ ಕ್ಲಬ್‌ ವತಿಯಿಂದ ನಡೆದ ಪ್ರೆಸ್‌ಕ್ಲಬ್ ಗೌರವ ಅತಿಥಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು.

ಯಕ್ಷಗಾನದಲ್ಲಿ ಪ್ರತಿಯೊಬ್ಬ ಗುರು ತಮ್ಮದೇ ಆದ ಶೈಲಿಯಲ್ಲಿ ನಾಟ್ಯವನ್ನು ಕಲಿಸುತ್ತಾರೆ. ಯಕ್ಷಗಾನ ಕಲಿಕೆಗೆ ಒಂದು ಚೌಕಟ್ಟು ರೂಪಿಸುವ ಮೂಲಕ ಏಕರೂಪತೆ ತರಬೇಕಾಗಿದೆ. ಯಕ್ಷಧ್ರುವ ಪಟ್ಲ ಫೌಂಡೇಶನ್‌ನ ಯಕ್ಷ ಶಿಕ್ಷಣ ಯೋಜನೆಯು ಪಠ್ಯ ರೂಪಿಸಿದ್ದು, ಫೌಂಡೇಶನ್‌ನ ಶಿಕ್ಷಕರು ಇದರ ಪ್ರಕಾರವೇ ನಾಟ್ಯ ಕಲಿಸುತ್ತಾರೆ. ಹೀಗಾಗಿ ಮುಂದಿನ ದಿನಗಳಲ್ಲಿ ಯಕ್ಷಗಾನಕ್ಕೆಂದೇ ಒಂದು ಸೀಲೆಬಸ್ ಮಾಡಿ  ಅದರ ಮುಖೇನ ಯಕ್ಷಗಾನ ನಾಟ್ಯ ಕಲಿಯುವ ವಿದ್ಯಾರ್ಥಿಗಳಿಗೆ ಪರೀಕ್ಷೆ ನಡೆಸಲಾಗುವುದು ಎಂದು ಹೇಳಿದರು.

 

Continue Reading

LATEST NEWS

Trending