Monday, May 23, 2022

ವಿಷಕಾರಿ ಹಾವು ಕಚ್ಚಿ ಕರ್ತವ್ಯ ನಿರತ ಕರ್ನಾಟಕದ ಯೋಧ ಸಾವು

ಬಾಗಲಕೋಟೆ: ಹಾವು ಕಚ್ಚಿದ ಪರಿಣಾಮ ಕರ್ತವ್ಯನಿರತ ಬಾಗಲಕೋಟೆ ಮೂಲದ ಯೋಧನೊಬ್ಬ ಸಾವನ್ನಪ್ಪಿರುವ ಘಟನೆ ಜಮ್ಮು ಕಾಶ್ಮೀರದಲ್ಲಿ ನಡೆದಿದೆ.


ಬಾಗಲಕೋಟೆ ಜಿಲ್ಲೆ ಬಾದಾಮಿ ತಾಲೂಕಿನ ಹಲಕುರ್ಕಿ ಗ್ರಾಮದ ಚಿದಾನಂದ ಚನ್ನಬಸಪ್ಪ ಹಲಕುರ್ಕಿ (25) ಮೃತಪಟ್ಟ ಯೋಧ. ಇಂಡಿಯನ್ ಆರ್ಮಿ (ಮರಾಠಾ ರೆಜಿಮೆಂಟ ಸೈನಿಕ) ನಾಗಿ ಕಳೆದ 6 ವರ್ಷ 9 ತಿಂಗಳಿನಿಂದ ಕರ್ತವ್ಯ ನಿರ್ವಹಿಸುತ್ತಿದ್ದರು.

ಜಮ್ಮು ಕಾಶ್ಮೀರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾಗ ಬುಧವಾರ ರಾತ್ರಿ 8 ಗಂಟೆಯ ಸುಮಾರಿಗೆ ಹಾವು ಕಚ್ಚಿ ಮೃತಪಟ್ಟಿದ್ದಾರೆ.
ಮೃತ ಯೋಧ ಚಿದಾನಂದ ಅವರಿಗೆ ಒರ್ವ ಸಹೋದರ, ತಾಯಿ ರತ್ನಮ್ಮ ಸೇರಿದಂತೆ ಅಪಾರ ಬಂಧು ಬಳಗವನ್ನು ಬಿಟ್ಟು ಅಗಲಿದ್ದಾನೆ.

ಯೋಧನ ಕುಟುಂಬದಲ್ಲಿ ಶೋಕ ಮಡುಕಟ್ಟಿದೆ. ಕುಟುಂಬದವರ ಆಕ್ರಂದನ ಮುಗಿಲು ಮುಟ್ಟಿದೆ. ಯೋಧನ ಪಾರ್ಥಿವ ಶರೀರ ನಾಳೆ ಅಥವಾ ನಾಡಿದ್ದು ಸ್ವಗ್ರಾಮಕ್ಕೆ ಬರುವ ಸಂಭವವಿದೆ ಎಂದು ಮೂಲಗಳು ತಿಳಿಸಿವೆ.

LEAVE A REPLY

Please enter your comment!
Please enter your name here

Hot Topics

ಭಾರತ ಸೇರಿದಂತೆ 15 ದೇಶಗಳಿಗೆ ಪ್ರಯಾಣ ನಿರ್ಬಂಧ ಹೇರಿದ ಸೌದಿ ಅರೇಬಿಯಾ

ಜೆದ್ದಾ: ಸೌದಿ ಅರೇಬಿಯಾದಲ್ಲಿ ಕಳೆದ ಕೆಲವು ವಾರಗಳಿಂದ ಕೋವಿಡ್ ಸೋಂಕು ಮತ್ತೆ ಏರಿಕೆ ಕಂಡುಬಂದಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ತನ್ನ ದೇಶದ ನಾಗರಿಕರು ಭಾರತ ಸೇರಿದಂತೆ ಹದಿನಾರು ದೇಶಗಳಿಗೆ ಪ್ರಯಾಣಿಸುವುದನ್ನು ನಿಷೇಧಿಸಿದೆ.ಲೆಬನಾನ್, ಸಿರಿಯಾ, ಟರ್ಕಿ,...

ಉಡುಪಿ: ಭಾರಿ ಅಲೆಗೆ ದೋಣಿ ಮುಳುಗಡೆ-ಐವರು ಮೀನುಗಾರರ ರಕ್ಷಣೆ

ಉಡುಪಿ: ಭಾರಿ ಗಾತ್ರದ ಅಲೆಗೆ ದೋಣಿಯೊಂದು ಮುಳುಗಡೆಯಾದ ಘಟನೆ ಉಡುಪಿ ಜಿಲ್ಲೆಯ ಶಿರೂರಿನ ಕಡಲ ತೀರದಲ್ಲಿ ನಡೆದಿದೆ. ದೋಣಿಯಲ್ಲಿದ್ದ ಐವರು ಮೀನುಗಾರರನ್ನು ರಕ್ಷಿಸಲಾಗಿದೆ.ಉಡುಪಿ ಜಿಲ್ಲೆಯ ಬೈಂದೂರು ತಾಲೂಕಿನ ಶಿರೂರು ಕಡಲ ತೀರದಿಂದ ಆಳ...

ಉಜಿರೆ SDM ಕಾಲೇಜಿನ ನಿವೃತ್ತ ಪ್ರಾಂಶುಪಾಲ ಡಾ. ಬಿ. ಯಶೋವರ್ಮ ನಿಧನ

ಬೆಳ್ತಂಗಡಿ: ಉಜಿರೆಯ ಎಸ್‌ಡಿಎಂ ಕಾಲೇಜಿನ ನಿವೃತ್ತ ಪ್ರಾಂಶುಪಾಲ, ಎಸ್‌ಡಿಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ. ಬಿ. ಯಶೋವರ್ಮ (66) ಅನಾರೋಗ್ಯದಿಂದಾಗಿ ನಿನ್ನೆ ಮಧ್ಯರಾತ್ರಿ ಸಿಂಗಾಪುರದಲ್ಲಿ ನಿಧನರಾಗಿದ್ದಾರೆ.ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವಿರೇಂದ್ರ...