Connect with us

    LATEST NEWS

    ವಯನಾಡಿನಲ್ಲಿ ಸೇನೆಯ ಕಾರ್ಯಾಚರಣೆ ಮುಕ್ತಾಯ; ಭಾವನಾತ್ಮಕ ಬೀಳ್ಕೊಡುಗೆ

    Published

    on

    ಮಂಗಳೂರು/ವಯನಾಡು : ಕೇರಳದ ವಯನಾಡಿನಲ್ಲಿ ಸಂಭವಿಸಿದ ಭೀ*ಕರ ಭೂಕುಸಿತ ಪ್ರಕರಣದಲ್ಲಿ ತಮ್ಮ ಪ್ರಾ*ಣದ ಹಂಗು ತೊರೆದು ಕಳೆದ 10 ದಿನಗಳಿಂದ ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿದ್ದ ಭಾರತೀಯ ಸೇನೆ ತನ್ನ ಕಾರ್ಯವನ್ನು ಪೂರ್ಣಗೊಳಿಸಿ ವಾಪಸ್ ತೆರಳಿದ್ದು, ಸ್ಥಳೀಯರು ಭಾವುಕರಾಗಿ ಕಣ್ಣೀರು ಹಾಕುತ್ತಾ ಸೈನಿಕರನ್ನು ಕಳುಹಿಸಿ ಕೊಟ್ಟರು.

    ಪ್ರಕೃತಿಯ ಸೌಂದರ್ಯದಿಂದ ಕಂಗೊಳಿಸುತ್ತಿದ್ದ ವಯನಾಡ್​​ ಭ*ಯಾನಕ ಭೂಕು*ಸಿತದಿಂದ ಸ್ಮಶಾನದಂತೆ ಆಗಿತ್ತು. ನೂರಾರು ಜೀವಗಳು ಮಣ್ಣಿನಡಿ ಸಿಲುಕಿ ಪ್ರಾ*ಣ ಬಿಟ್ಟಿದ್ದರು. ಇನ್ನೂ ಕೆಲವರು ಕೈಯಲ್ಲಿ ಜೀ*ವ ಹಿಡಿದು ದೇವರಾದರೂ ಬಂದು ನಮ್ಮನ್ನು ಉಳಿಸಲಿ ಎಂದು ಪ್ರಾರ್ಥಿಸಿದ್ದರು. ಆದರೆ, ದೇವರ ರೂಪದಲ್ಲಿ ಬಂದು ಸಂಕಷ್ಟದಲ್ಲಿದ್ದ ಜನರನ್ನು ಭಾರತೀಯ ಸೇನೆಯ ಸೈನಿಕರು ರಕ್ಷಿಸಿದ್ದರು.

    ಕಣ್ಣೀರು ಹಾಕಿ, ಕೈ ಮುಗಿದು ವಿದಾಯ :

    ಭೂಕುಸಿತ ಸಂಭವಿಸಿದ ದಿನದಿಂದ ಕಳೆದ 10 ದಿನಗಳ ಕಾಲ ಯೋಧರು ರಕ್ಷಣಾ ಕಾರ್ಯ ನಡೆಸಿದ್ದರು. ರಕ್ಷಣಾ ಕಾರ್ಯಾಚರಣೆ ವೇಳೆ ಸೈನಿಕರು ರಾತ್ರೋ ರಾತ್ರಿ ಇರುವಂಜಿಪ್ಪುಳ ನದಿಗೆ ಅಡ್ಡಲಾಗಿ 119 ಅಡಿ ಉದ್ದದ ತಾತ್ಕಾಲಿಕ ಕಬ್ಬಿಣದ ಸೇತುವೆ ನಿರ್ಮಿಸಿ ಚೂರಲ್ಮಲ- ಮುಂಡಕ್ಕೈ ಗ್ರಾಮದ ಮಧ್ಯೆ ಸಂಪರ್ಕ ಕಲ್ಪಿಸಿದ್ದರು. ಸೇನೆಯು ತನ್ನ ರಕ್ಷಣಾ ಕಾರ್ಯಾಚರಣೆಗೆ ಅನುಕೂಲವಾಗಲು ಇದನ್ನು ನಿರ್ಮಿಸಿದ್ದರೂ ಆಲ್ಲಿ ಹೊಸ ಸೇತುವೆ ನಿರ್ಮಾಣವಾಗುವ ತನಕ ಈ ಕಬ್ಬಿಣದ ಸೇತುವೆ ಅಲ್ಲಿಯೇ ಇರಲಿದೆ.

    ಶಾಲೆಯೊಂದರಲ್ಲಿ ಬೀಡು ಬಿಟ್ಟಿದ್ದ ಸೈನಿಕರು ಇಂದು ತಮ್ಮ ಸರಕು ಸರಂಜಾಮುಗಳನ್ನು ತೆಗೆದುಕೊಂಡು ತಮ್ಮ ತಮ್ಮ ಸೇನಾ ವಾಹನಗಳತ್ತ ಸಾಲಾಗಿ ತೆರಳುತ್ತಿದ್ದಂತೆಯೇ ಅಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ್ದ ಸ್ಥಳೀಯರು ರಸ್ತೆಯ ಇಕ್ಕೆಲಗಳಲ್ಲಿ ನಿಂತು ಚಪ್ಪಾಳೆಯ ಮೂಲಕ ಧನ್ಯವಾದ ತಿಳಿಸಿದರು. ಇದನ್ನು ಕಂಡ ಯೋಧರ ಮೊಗದಲ್ಲೂ ಧನ್ಯತಾ ಭಾವವಿತ್ತು. ಕೆಲವರಂತೂ ಕಣ್ಣೀರು ಹಾಕಿ, ಕೈ ಮುಗಿದು ಯೋಧರಿಗೆ ವಿದಾಯ ಹೇಳಿದರು.

    ವಯನಾಡ್ ಜಿಲ್ಲಾಡಳಿತವು ಈ ಬೀಳ್ಕೊಡುಗೆಯನ್ನು ಆಯೋಜಿಸಿತ್ತು. ಜನರು ಬೀಳ್ಕೊಡುತ್ತಿರುವ ವೀಡಿಯೊವನ್ನು ಸೇನೆಯ PRO ಹಂಚಿಕೊಂಡಿದ್ದಾರೆ. ‘ಭೂಕುಸಿತ ರಕ್ಷಣಾ ಕಾರ್ಯಾಚರಣೆಯ ಸಮಯದಲ್ಲಿ ಎಲ್ಲವನ್ನೂ ಪಣಕ್ಕಿಟ್ಟ ನಮ್ಮನ್ನು ರಕ್ಷಿಸಿದ ವೀರರಿಗೆ ನಾವು ತುಂಬಾ ಕೃತಜ್ಞರಾಗಿರುತ್ತೇವೆ. ನಿಮ್ಮ ಧೈರ್ಯ ಮತ್ತು ತ್ಯಾಗವನ್ನು ಮರೆಯಲಾಗುವುದಿಲ್ಲ’ ಎಂದು PRO ಟ್ವೀಟ್ ಮಾಡಿದ್ದಾರೆ.

    ಭೂಕುಸಿತ ಘಟನೆಯ 11 ದಿನಗಳ ಬಳಿಕ ಇಂದು ವಯನಾಡಿನ ಸೂಚಿಪಾರ ಮತ್ತು ಕಂಠಪಾರ ಜಲಪಾತಗಳ ನಡುವಿನ ಪ್ರದೇಶದಲ್ಲಿ ನಾಲ್ವರ ಮೃ*ತದೇಹಗಳು ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿವೆ. ಅವುಗಳನ್ನು ಏರ್ ಲಿಫ್ಟ್ ಮಾಡಲು ಕ್ರಮ ಕೈಗೊಳ್ಳಲಾಗಿದೆ. ಸೇನೆಯು ಶೋಧ ಕಾರ್ಯ ಮುಗಿಸಿ ವಾಪಸ್ಸಾಗಿದ್ದು, ಅಗ್ನಿಶಾಮಕ ದಳ, ಪೊಲೀಸರು ಮತ್ತು ಸ್ವಯಂಸೇವಕರು ಭೂ ಕುಸಿತ ಪೀಡಿತ ಪ್ರದೇಶದಲ್ಲಿ ಶೋಧವನ್ನು ಮುಂದುವರೆಸಿದ್ದಾರೆ.

    ಇದನ್ನೂ ಓದಿ : ವಿನೇಶ್ ಫೋಗಟ್ ಅನರ್ಹ : ಅಧಿಕೃತ ಹೇಳಿಕೆ ಬಿಡುಗಡೆ
    ಭೂಕಂಪದ ಅನುಭವ :
    ಈ ನಡುವೆ ವಯನಾಡು ಮತ್ತು ಕೋಝಿಕೋಡ್‌ ಜಿಲ್ಲೆಗಳ ಕೆಲವು ಭಾಗಗಳಲ್ಲಿ ಇಂದು (ಆ. 9) ಬೆಳಗ್ಗೆ 10.45 ರ ವೇಳೆಗೆ ಭೂಮಿ ಕಂಪನವಾದ ಬಗ್ಗೆ ವರದಿಯಾಗಿದೆ. ಇದು ಭೂ ಕಂಪನ ಹೌದೇ ಎನ್ನುವುದನ್ನು ದೃಢೀಕರಿಸುವಂತೆ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರವನ್ನು ಕೋರಲಾಗಿದೆ.

    BIG BOSS

    ಬಿಗ್ ಬಾಸ್ ಮನೆಯಲ್ಲಿ ಉಗ್ರಂ ಮಂಜು ಆಡಳಿತ !

    Published

    on

    ಮಂಗಳೂರು/ಬೆಂಗಳೂರು: ‘ಕನ್ನಡದ ಬಿಗ್ ಬಾಸ್ ಸೀಸನ್ 11’ ಈಗ, 9ನೇ ವಾರಕ್ಕೆ ಕಾಲಿಟ್ಟಿದೆ. ಈ ವಾರದ ಹೊಸ ಟಾಸ್ಕ್ ಗೆ ಸ್ಪರ್ಧಿಗಳು ಬೆಚ್ಚಿಬಿದ್ದಿದ್ದಾರೆ. ಅದುವೇ ಬಿಗ್ ಬಾಸ್ ಸಾಮ್ರಾಜ್ಯ. ಈ ಸಾಮ್ರಾಜ್ಯದಲ್ಲಿ ಉಗ್ರಂ ಮಂಜು ಅವತಾರಕ್ಕೆ, ಇನ್ನುಳಿದ ಸ್ಪರ್ಧಿಗಳು ಸುಸ್ತಾಗಿದ್ದಾರೆ.


    ಮಹಾರಾಜನಾಗಿರುವ ಉಗ್ರಂ ಮಂಜು ಆಸ್ಥಾನದಲ್ಲಿ, ಪ್ರಜೆಗಳೆಲ್ಲರೂ ಕಕ್ಕಾಬಿಕ್ಕಿಯಾಗಿದ್ದಾರೆ. ಈ ವಾರ ಮಂಜು ಮನೆಯ ಕ್ಯಾಪ್ಟನ್ ಆಗಿದ್ದಾರೆ. ಈಗಾಗೀ ಮಹಾರಾಜನಾಗಿ ಮೆರೆಯುವ ಅವಕಾಶ ಸಿಕ್ಕಿದೆ. ಮಂಜು ಅವರ ಸಾಮ್ರಾಜ್ಯದಲ್ಲಿ ತಪ್ಪು ಮಾಡಿದವರಿಗೆ ಸರಿಯಾದ ಶಿಕ್ಷೆಯನ್ನು ನೀಡುತ್ತಿದ್ದಾರೆ.

    ಇದನ್ನೂ ಓದಿ: ಮಹಿಳೆಯರಿಗೆ ಮಾತ್ರ ಎಂಟ್ರಿ ; ಪುರುಷರು ಈ ಪಬ್‌ಗೆ ಬರುವಂತಿಲ್ಲ  !! 
    ಇನ್ನೂ ದೊಡ್ಮನೆಯಲ್ಲಿ ಯಾವಾಗಲೂ ಸೌಂಡ್ ಮಾಡುತ್ತಿದ್ದ ಚೈತ್ರಾ ಅವರ ಬಾಯಿಗೆ ಆಲೂಗಡ್ಡೆ ತುರುಕುವಂತೆ ಮಹಾರಾಜರು ಆದೇಶಿಸಿದ್ದಾರೆ. ಮಹಾರಾಜರ ಅಪ್ಪನೆಯಂತೆ ಬಾಯಲ್ಲಿ ಆಲೂಗಡ್ಡೆ ಇಟ್ಟುಕೊಂಡಿದ್ದ ಚೈತ್ರಾ ಕೆಲಹೊತ್ತು ಸುಮ್ಮನೆ ಕೂತಿದ್ದರು. ನಂತರ ಇದನ್ನು ನಾನು ಖಂಡಿಸುತ್ತೇನೆ ಎಂದು ಸೌಂಡ್ ಮಾಡೋಕೆ ಪ್ರಾರಂಭಿಸಿದರು.
    ಒಟ್ಟಿನಲ್ಲಿ ಮಂಜು ಅವರ ಆಡಳಿತಕ್ಕೆ ಪ್ರಜೆಗಳು ಉಸಿರಾಡುವುದಕ್ಕೂ ಭಯ ಪಡುತ್ತಿದ್ದಾರೆ. ಅಷ್ಟಕ್ಕೂ ಮಂಜು ಆಡಳಿತ ಇಂದಿನ ಸಂಚಿಕೆಯಲ್ಲಿ ನೋಡಬಹುದು.

    Continue Reading

    DAKSHINA KANNADA

    ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ; 166 ಜೊತೆ ಕೋಣಗಳು ಭಾಗಿ

    Published

    on

    ಮಂಗಳೂರು : ಈ ವರ್ಷದ ಕಂಬಳ ಸೀಸನ್ ನ ಮೊದಲ ಕಂಬಳ ನವೆಂಬರ್‌ 22 ಮತ್ತು 23  ರಂದು ಸಿದ್ದಕಟ್ಟೆಯಲ್ಲಿ ನಡೆಯಿತು. ಇದು ಎರಡನೇ ವರ್ಷದ ಸಿದ್ಧಕಟ್ಟೆ ಕೊಡಂಗೆ ‘ವೀರ – ವಿಕ್ರಮ’ ಜೋಡುಕರೆ ಕಂಬಳ ಆಗಿದ್ದು, ಬರೋಬ್ಬರಿ 166 ಜೊತೆ ಕೋಣಗಳು ಭಾಗವಹಿಸಿದ್ದವು. ಕನೆಹಲಗೆ 6 ಜೊತೆ, ಅಡ್ಡಹಲಗೆ 6 ಜೊತೆ, ಹಗ್ಗ ಹಿರಿಯ 15 ಜೊತೆ, ನೇಗಿಲು ಹಿರಿಯ 34 ಜೊತೆ, ಹಗ್ಗ ಕಿರಿಯ 27 ಜೊತೆ, ನೇಗಿಲು ಕಿರಿಯ 78 ಜೊತೆ ಕೋಣಗಳು ಪಾಲ್ಗೊಂಡಿದ್ದವು.

    ಪ್ರಶಸ್ತಿ ವಿವರ :

    ಕನೆಹಲಗೆ ವಿಭಾಗದಲ್ಲಿ ಬೋಳಾರ ತ್ರಿಶಾಲ್ ಕೆ. ಪೂಜಾರಿ ಪ್ರಥಮ, ವಾಮಂಜೂರು ತಿರುವೈಲು ಗುತ್ತು ಅಭಿಷೇಕ್ ನವೀನ್‌ ಚಂದ್ರ ಆಳ್ವ ದ್ವಿತೀಯ ಸ್ಥಾನ ಪಡೆದರು. ಅಡ್ಡ ಹಲಗೆ ವಿಭಾಗದಲ್ಲಿ ನಾರಾವಿ ಯುವರಾಜ್ ಜೈನ್ ಪ್ರಥಮ ಹಾಗೂ ಆಲದ ಪದವು ಮೇಗಿನ ಮನೆ ಅಜ್ಜಾಡಿ ಬಾಬು ರಾಜೇಂದ್ರ ಶೆಟ್ಟಿ ‘ಬಿ’ ಅವರು ದ್ವಿತೀಯ ಸ್ಥಾನಿಯಾದರು.

    ಹಗ್ಗ ಹಿರಿಯ ವಿಭಾಗದಲ್ಲಿ ನಂದಳಿಕೆ ಶ್ರೀಕಾಂತ್ ಭಟ್ ‘ಎ’ ಕೋಣಗಳು ಪ್ರಥಮ ಹಾಗೂ ಕೊಳಕೆ ಇರ್ವತ್ತೂರು ಭಾಸ್ಕರ ಎಸ್ ಕೋಟ್ಯಾನ್ ದ್ವಿತೀಯ ಸ್ಥಾನ ಪಡೆದರು. ಹಗ್ಗ ಕಿರಿಯ ವಿಭಾಗದಲ್ಲಿ ಬೆಳುವಾಯಿ ಪೆರೋಡಿ ಪುತ್ತಿಗೆ ಗುತ್ತು ಕೌಶಿಕ್ ದಿನಕರ ಬಿ. ಶೆಟ್ಟಿ ಪ್ರಥಮ, ಸುರತ್ಕಲ್ ಪಾಂಚಜನ್ಯ ಯೋಗೀಶ್ ಪೂಜಾರಿ ‘ಎ’ ಕೋಣಗಳು ದ್ವಿತೀಯ  ಸ್ಥಾನ ಪಡೆದಿವೆ.

    ಇದನ್ನೂ ಓದಿ: WATCH : ಚಲಿಸುತ್ತಿದ್ದ ರೈಲಿನಿಂದ ಹಾರಿದ ಮಹಿಳೆಯ ರಕ್ಷಿಸಿದ ರೈಲ್ವೇ ಸಿಬ್ಬಂದಿ

    ನೇಗಿಲು ಹಿರಿಯ ವಿಭಾಗದಲ್ಲಿ ಹೊಸ್ಮಾರು ಸೂರ್ಯ ಶ್ರೀ ರತ್ನ ಸದಾಶಿವ ಶೆಟ್ಟಿ ಪ್ರಥಮ ಹಾಗೂ ಕಕ್ಕೆಪದವು ಪೆಂರ್ಗಾಲು ಬಾಬು ತನಿಯಪ್ಪ ಗೌಡ ದ್ವಿತೀಯ ಸ್ಥಾನ ಗೆದ್ದಿದ್ದಾರೆ. ನೇಗಿಲು ಕಿರಿಯ ವಿಭಾಗದಲ್ಲಿ ಮುನಿಯಾಲು ಉದಯ ಕುಮಾರ್ ಶೆಟ್ಟಿ ಪ್ರಥಮ ಹಾಗೂ ಎರ್ಮಾಳ್ ಪುಚ್ಚೊಟ್ಟು ಬೀಡು ಬಾಲಚಂದ್ರ ಲೋಕಯ್ಯ ಶೆಟ್ಟಿ ‘ಎ’ ಕೋಣಗಳು ದ್ವಿತೀಯ ಸ್ಥಾನ ಪಡೆದಿವೆ.

    Continue Reading

    LATEST NEWS

    ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆ ಸೆರೆ

    Published

    on

    ಉಡುಪಿ : ಉಡುಪಿ ಜಿಲ್ಲೆಯ ಅರಣ್ಯದ ಅಂಚಿನ ಪ್ರದೇಶಗಳಲ್ಲಿ ಚಿರತೆಯ ಕಾಟ ಜೋರಾಗಿದೆ. ಆಹಾರ ಅರಸಿ ಬರುವ ಚಿರತೆಗಳು ಗ್ರಾಮಸ್ಥರಿಗೆ ದೊಡ್ಡ ತಲೆ ನೋವಾಗಿ ಪರಿಣಮಿಸಿವೆ.

    ಕಾರ್ಕಳ ತಾಲೂಕಿನ ನಿಟ್ಟೆ ಗ್ರಾಮದ ಎರ್ಮಂಜಪಲ್ಲ ಬಳಿಯ ಬಾಗಿ ಎನ್ನುವವರ ಮನೆಯ ಬಾವಿಗೆ ರಾತ್ರಿ ಚಿರತೆಯೊಂದು ಬಿದ್ದಿತ್ತು. ಬಾವಿಯ ಪೊಟರೆಯಲ್ಲಿ ಅವಿತು ಕುಳಿತುಕೊಂಡಿದ್ದ ಚಿರತೆಯನ್ನು ಮೇಲಕ್ಕೆ ಬರುವಂತೆ ಮಾಡಲು, ಅರಣ್ಯ ಇಲಾಖೆ ಹರ ಸಾಹಸ ಪಡುವಂತಾಯ್ತು.

    ಹಲವು ಗಂಟೆಗಳ ಕಾರ್ಯಾಚರಣೆ ಬಳಿಕ ಬೋನಿನ ಮೂಲಕ ಚಿರತೆ  ಸೆರೆ ಹಿಡಿಯುವಲ್ಲಿ ಅರಣ್ಯ  ಇಲಾಖೆ  ಸಿಬ್ಬಂದಿ ಯಶಸ್ಸು ಕಂಡಿದ್ದಾರೆ. ಅರಣ್ಯ ಇಲಾಖೆಯ ಕಾರ್ಯ ದಕ್ಷತೆಗೆ ವ್ಯಾಪಕ ಪ್ರಶಂಸೆ ವ್ಯಕ್ತವಾಗಿದೆ.

     

    Continue Reading

    LATEST NEWS

    Trending