Connect with us

bengaluru

ಇಸ್ಲಾಂ ಧರ್ಮದ ಅವಹೇಳನಕಾರಿ ಪೋಸ್ಟ್: ಸೌದಿ ಜೈಲಲ್ಲಿ ಮಂಗಳೂರಿನ ಶೈಲೇಶ್‌- ಕೇಂದ್ರದ ಮೌನಕ್ಕೆ ಹೈಕೋರ್ಟ್‌ ಗರಂ..!

Published

on

ಫೇಸ್‌ಬುಕ್‌ನಲ್ಲಿ ಇಸ್ಲಾಂ ಧರ್ಮ ಮತ್ತು ಸೌದಿ ಅರೇಬಿಯಾ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಮಂಗಳೂರಿನ ಶೈಲೇಶ್ ಕುಮಾರ್‌ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ನ್ಯಾಯಾಲಯದ ಆದೇಶ ಪ್ರತಿ ಹಾಗೂ ಅದನ್ನು ದೃಢೀಕರಿಸಿದ ಪ್ರತಿ ಪಡೆದು ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ, ಹೈಕೋರ್ಟ್‌ ನಿರ್ದೇಶನ ನೀಡಿದೆ.

ಬೆಂಗಳೂರು: ಫೇಸ್‌ಬುಕ್‌ನಲ್ಲಿ ಇಸ್ಲಾಂ ಧರ್ಮ ಮತ್ತು ಸೌದಿ ಅರೇಬಿಯಾ ದೊರೆ ವಿರುದ್ಧ ಅವಹೇಳನಕಾರಿ ಪೋಸ್ಟ್ ಹಾಕಿದ ಆರೋಪದ ಮೇರೆಗೆ ಮಂಗಳೂರಿನ ಶೈಲೇಶ್ ಕುಮಾರ್‌ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಸೌದಿ ನ್ಯಾಯಾಲಯದ ಆದೇಶ ಪ್ರತಿ ಹಾಗೂ ಅದನ್ನು ದೃಢೀಕರಿಸಿದ ಪ್ರತಿ ಪಡೆದು ಸಲ್ಲಿಸುವಂತೆ ಕೇಂದ್ರ ಸರಕಾರಕ್ಕೆ, ಹೈಕೋರ್ಟ್‌ ನಿರ್ದೇಶನ ನೀಡಿದೆ.

 

ಶೈಲೇಶ್‌ ಪತ್ನಿ ಕವಿತಾ, ನಕಲಿ ಫೇಸ್‌ಬುಕ್‌ನಲ್ಲಿ ಪ್ರಕಟಸಿದ ವಿಚಾರ ಸಂಬಂಧ” ದಾಖಲಿಸಿರುವ ದೂರಿನ ತನಿಖೆಯನ್ನು ಮಂಗಳೂರು, ಪೊಲೀಸರು ನಿಧಾನ ಮಾಡುತ್ತಿದ್ದಾರೆ ಎಂದು ಆರೋಪಿಸಿ ಸಲ್ಲಿಸಿದ ಅರ್ಜಿ ವಿಚಾರಣೆ ನಡೆಸಿದ ನ್ಯಾ. ಕೃಷ್ಣ ಎಸ್, ದೀಕ್ಷಿತ್ ಪೀಠ, ವಿಚಾರಣೆಯನ್ನು ಆ.17ಕ್ಕೆ ಮುಂದೂಡಿದೆ.

‘ಸೌದಿ ರಾಜರ ಮುಂದೆ ಶೈಲೇಶ್ ಕುಮಾರ್ ಕ್ರಮನ್ಸಿ ಅರ್ಜಿ (ಶಿಕ್ಷೆ ಪ್ರಮಾಣ ಕಡಿತಗೊಳಿಸುವ ಅಥವಾ ಕಮದಾನ ನ್ಯಾಯಾಲಯ) ನೀಡಿರುವ ಆದೇಶದ ಪ್ರತಿ ಮತ್ತು ಅದರ ದೃಢೀಕರಣ ಆದೇಶದ ಪ್ರತಿಯನ್ನು ಕೋರ್ಟ್‌ಗೆ ಸಲ್ಲಿಸಬೇಕು’ ಎಂದು ಕೇಂದ್ರ ಸರಕಾರಕ್ಕೆ ಸೂಚಿಸಿದೆ.

ಸೌದಿ ಅರೇಬಿಯಾದ ಭಾರತೀಯ ರಾಯಭಾರಿ ಕಚೇರಿಯ ಅಧಿಕಾರಿ ಮೋಹಿನ್ ಖಾನ್, ಆನ್ ಲೈನ್‌ ಮೂಲಕ ವಿಚಾರಣೆಗೆ ಹಾಜರಾಗಿ ”ಶೈಲೇಶ್‌ಗೆ ಶಿಕ್ಷೆ ವಿಧಿಸಿರುವ ಆದೇಶದ ಪ್ರತಿ ಪಡೆದುಕೊಳ್ಳುವ ಸಂಬಂಧ ಈಗಾಗಲೇ ಸ್ಥಳೀಯ ಅಧಿಕಾರಿಗಳನ್ನು ಸಂಪರ್ಕಿಸಿ ಚರ್ಚಿಸಲಾಗಿದೆ.

ಆದರೆ, ಈವರೆಗೂ ಆದೇಶದ ಪ್ರತಿ ಲಭ್ಯವಾಗಿಲ್ಲ, ಸೌದಿ ನ್ಯಾಯಾಲಯ ಗಳು ಆದೇಶದ ಪ್ರತಿಯನ್ನು ಶಿಕ್ಷೆಗೆ ಗುರಿಯಾದವರಿಗೆ ಮಾತ್ರ ನೀಡಬಹುದು.

ಇತರರಿಗೆ ನೀಡುವ ಪರಿಪಾಠ ಇಲ್ಲ.

ಆದರೂ ಈ ನಿಟ್ಟಿನಲ್ಲಿ ಪ್ರಯತ್ನ ನಡೆಸಲಾಗುತ್ತಿದ್ದು, ಎಷ್ಟು ದಿನಗಳಲ್ಲಿ ಆದೇಶ ಪ್ರತಿ ಲಭ್ಯವಾಗಲಿದೆ ಎಂಬ ಬಗ್ಗೆ ನಿಖರವಾಗಿ ಹೇಳಲು ಕಷ್ಟಸಾಧ್ಯ,” ಎಂದು ನ್ಯಾಯಪೀಠಕ್ಕೆ ವಿವರಿಸಿದರು.

ಮಂಗಳೂರಿನ ತನಿಖಾಧಿಕಾರಿಗಳು ವಿಚಾರಣೆಗೆ ಹಾಜರಾಗದ ಬಗ್ಗೆ ಬೇಸರಗೊಂಡ ನ್ಯಾಯಪೀಠ, ‘ಭಾರತೀಯ ಪ್ರಜೆ, ವಿದೇಶದಲ್ಲಿ ತೊಂದರೆಯಲ್ಲಿ ಸಿಲುಕಿದ್ದಾರೆ.

ನಮ್ಮ ಪ್ರಜೆಯಾದರೂ ನಮ್ಮ ದೇಶಕ್ಕೆ ಹಿಂದಿರುಗಬೇಕು.

ತನಿಖಾಧಿಕಾರಿಗಳು ತನಿಖೆ ಕುರಿತು ನ್ಯಾಯಾಲಯಕ್ಕೆ ವಿವರಿಸಬೇಕು.

ಹಿಂದಿನ ಆದೇಶದಲ್ಲಿ ನ್ಯಾಯಾಲಯ ಎತ್ತಿರುವ ಪ್ರಶ್ನೆಗಳಿಗೆ ಖುದ್ದು ಹಾಜರಾಗಿ, ಉತ್ತರಿಸಬೇಕು, ತನಿಖಾಧಿಕಾರಿ, ಪ್ರಮಾಣಪತ್ರ ಸಲ್ಲಿಸಿ ವಿಚಾರಣೆಗೆ ಗೈರಾಗುವುದನ್ನು ಸಹಿಸಲಾಗದು.

ಅವರ ವಿರುದ್ಧ ಕಠಿಣ ಕ್ರಮಕ್ಕೆ ಆದೇಶಿಸಬೇಕಾಗುತ್ತದೆ  ಎಂದು ಎಚ್ಚರಿಕೆ ನೀಡಿತು.

ಅಲ್ಲದೆ, ”ತನಿಖಾ ಪ್ರಗತಿ ಕುರಿತು ತನಿಖಾಧಿಕಾರಿ ವಿವರಣೆ ನೀಡಬೇಕು,” ಎಂದು ನ್ಯಾಯಪೀಠ ನಿರ್ದೇಶನ ನೀಡಿತು.

bangalore

FILM: ಎಲ್ಲೆಲ್ಲೂ ‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ’ ಸಾಂಗ್ ಹವಾ

Published

on

‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ’ ಹಾಡು ಸೋಷಿಯಲ್ ಮೀಡಿಯಾದಲ್ಲಿ ಮಿಲಿಯನ್ ಗಟ್ಟಲೇ ವೀಕ್ಷಣೆಯಾಗುವ ಮೂಲಕ ಹೊಸ ಸಂಚಲನ ಸೃಷ್ಟಿಸಿದೆ..

ಬೆಂಗಳೂರು: ಕೆಲ ದಿನಗಳ ಹಿಂದೆ ಕನ್ನಡದ ‘ಅನ್ಯಾಯಕಾರಿ ಬ್ರಹ್ಮ ಈ ಸುಂದರನ ಸನ್ಯಾಸಿ ಮಾಡಬಹುದೇ’ ರೀಲ್ಸ್ ಭಾರೀ ವೈರಲ್ ಆಗಿತ್ತು. ರಾತ್ರಿ ಬೆಳಗಾಗೋದ್ರಲ್ಲಿ ಇದನ್ನು ಹಾಡಿದ ಗಾಯಕ ಮಳವಳ್ಳಿ ಮಹಾದೇವಸ್ವಾಮಿ ಸೆಲೆಬ್ರಿಟಿ ಲೆವೆಲ್ ಗೆ ಸುದ್ದಿಯಾಗಿದ್ರು.

ಇದೀಗ ‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ’ ಹಾಡು ಬಿಡುಗಡೆಗೊಂಡ ದಿನ 5 ಮಿಲಿಯನ್ ವೀಕ್ಷಣೆಯಾಗುವ ಮೂಲಕ ಹೊಸ ಸಂಚಲನ ಸೃಷ್ಟಿಸಿದೆ.. ‘I am barbie girl’ ಎಂಬ ಇಂಗ್ಲಿಷ್ ಹಾಡಿನ ಟ್ಯೂನ್​ಗೆ ‘ನಾನು ನಂದಿನಿ ಬೆಂಗಳೂರಿಗೆ ಬಂದೀನಿ’ ಎಂಬ ಸಾಹಿತ್ಯ ರಚಿಸಿ ಹಾಡಿದ್ದಾರೆ.

ಈಗ ‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ’ ಎಂಬ ರೀಲ್ಸ್ ಸೋಷಿಯಲ್ ಮೀಡಿಯಾದಲ್ಲಿ ಮಾಡುತ್ತಿರುವ ಮೋಡಿ ಅಷ್ಟಿಷ್ಟಲ್ಲ.

‘ನಾನು ನಂದಿನಿ ಬೆಂಗಳೂರಿಗ್ ಬಂದೀನಿ. ಪಿಜಿಲಿ ಇರ್ತೀನಿ ಐಟಿ ಕೆಲಸ ಮಾಡ್ತೀನಿ. ಊಟ ಸರಿ ಇಲ್ಲ ಅಂದ್ರೂನೂ ತಿಂತೀನಿ. ಬಂದಿದ್ ದುಡ್ ಎಲ್ಲಾ ಮನೇಗ್​ ಕಳಸ್ತೀನಿ. ಬಾರೇ ನಂದಿನಿ ಗೋಬಿ ತಿನ್ನಸ್ತೀನಿ. ಬಾರೇ ನಂದಿನಿ

ಬೆಂಗಳೂರ್ ತೋರಸ್ತೀನಿ. ಬಾರೆ ನಂದಿನಿ ಪೇಢಾ ತಿನ್ನಸ್ತೀನಿ. ಬಾರೇ ನಂದಿನಿ ಪಿಚ್ಚರ್ ತೋರಸ್ತೀನಿ ಎನ್ನುವ ವಿಕಿ ಪೀಡಿಯಾ ವಿಕಾಸ್ ಅವರ ರೀಲ್ಸ್ ಗೆ ಜನಾ ಫಿದಾ ಆಗಿದ್ದಾರೆ.

ಒಂದು ದಿನದ ಹಿಂದೆಯಷ್ಟೇ ಫೇಸ್​ಬುಕ್​ನಲ್ಲಿ ಮತ್ತು ಇನ್​ಸ್ಟಾಗ್ರಾಂನಲ್ಲಿ ಈ ವಿಡಿಯೋ ಪೋಸ್ಟ್ ಮಾಡಲಾಗಿದೆ.

ಲಕ್ಷಾಂತರ ಜನರು ಲೈಕ್ ಮಾಡಿದ್ದು ಸಾವಿರಾರು ಜನರು ಈ ಪೋಸ್ಟ್​ ಅನ್ನು ಹಂಚಿಕೊಂಡಿದ್ದಾರೆ.

ಈ ಹಾಡನ್ನು ಕ್ರಿಯೇಟ್ ಮಾಡಿದವರು ವಿಕಿಪಿಡಿಯಾ ಖ್ಯಾತಿಯ ವಿಕ್ಕಿ ಎಂಬುವವರು. ಬಹುತೇಕರಿಗೆ ಇವರ ಪರಿಚಯ ಮಾಡಬೇಕಾಗಿಲ್ಲ. ಸಾಕಷ್ಟು ಹಾಸ್ಯದ ವೀಡಿಯೋಗಳನ್ನು ಇವರು ಕ್ರಿಯೇಟ್ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿ ಬಿಡುತ್ತಿದ್ದಾರೆ.

ಸದ್ಯ ಸಾಮಾಜಿಕ ಜಾಲತಾಣದಲ್ಲಿ ಈ ವೈರಲ್ ಆಗಿದ್ದಲ್ಲದೇ ವಿಕ್ಕಿ ಅವರಿಗೆ ಬಹಳಷ್ಟು ಪ್ರಸಿದ್ದಿ ತಂದುಕೊಟ್ಟಿದೆ.

Continue Reading

bengaluru

ಚೈತ್ರಾ ಕುಂದಾಪುರ ಪ್ರಕರಣ- ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿಕೆ

Published

on

ಚೈತ್ರಾ ಕುಂದಾಪುರ ಮತ್ತು ತಂಡದವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಬಿ ಪೊಲೀಸರು ಉಡುಪಿ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿ ಮಹಜರು, ರಿಕವರಿ ನಡೆಸಿದರು.

ಉಡುಪಿ: ಚೈತ್ರಾ ಕುಂದಾಪುರ ಮತ್ತು ತಂಡದವರ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಸಿಬಿ ಪೊಲೀಸರಿಂದ ತನಿಖೆ ಮುಂದುವರಿದಿದ್ದು, ಸಿಸಿಬಿ ಪೊಲೀಸರು ಉಡುಪಿ ಜಿಲ್ಲೆಯ ಹಲವು ಸ್ಥಳಗಳಿಗೆ ಭೇಟಿ ನೀಡಿ ಮಹಜರು, ರಿಕವರಿ ನಡೆಸಿದರು.

ದೂರುದಾರ ಗೋವಿಂದ ಬಾಬು ಪೂಜಾರಿ ಅವರಿಂದ ಆರೋಪಿಗಳು ಪಡೆದಿದ್ದರೆನ್ನಲಾದ 5 ಕೋಟಿ ರೂಪಾಯಿಗಳನ್ನು ಯಾವ ರೀತಿ ವಿನಿಯೋಗ ಮಾಡಿದ್ದಾರೆ ಎನ್ನುವುದರ ತನಿಖೆಯನ್ನು ಪೊಲೀಸರು ಆರಂಭಿಸಿದ್ದಾರೆ.

ಆರೋಪಿಗಳು ಈ ಹಣದಿಂದ ಆಸ್ತಿ ಪಾಸ್ತಿ, ಜಮೀನು ಖರೀದಿಸಿರುವ ಶಂಕೆ ಇದ್ದು, ಈ ಹಿನ್ನೆಲೆಯಲ್ಲಿ ಬೈಂದೂರು, ಕುಂದಾಪುರ, ಉಡುಪಿ ತಾಲೂಕುಗಳಲ್ಲಿ ತಪಾಸಣಾ ಕಾರ್ಯಾಚರಣೆ ನಡೆಸಿದರು.

ಕೆಲವು ಕಡೆ ಮಹಜರು ಮತ್ತು ರಿಕವರಿ ಮಾಡಿದರು.

ಆರೋಪಿಗಳಲ್ಲಿ ಒಬ್ಬನಾಗಿರುವ ಶ್ರೀಕಾಂತ್ ನಾಯಕ್ ನನ್ನು ಜಿಲ್ಲೆಯ ಖಾಸಗಿ ಸೊಸೈಟಿಯೊಂದಕ್ಕೆ ಕರೆದೊಯ್ದು ಸಿಸಿಬಿ ಪೊಲೀಸರು ವಿಚಾರಣೆ ನಡೆಸಿದ್ದಾರೆ.

ಈ ಸೊಸೈಟಿಯಲ್ಲಿ ಆರೋಪಿಗಳು ಹಣ ಮತ್ತು ಚಿನ್ನ ಅಡವಿರಿಸಿದ ಬಗ್ಗೆ ಆಸ್ತಿ ಪತ್ರ ಸಿಕ್ಕಿದೆ ಎಂದು ಹೇಳಲಾಗಿದೆ.

 

Continue Reading

bangalore

ಮುಂದಿನ ವಾರವೇ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ವರ್ಷನ್‌- ರಿಲೀಸ್ ಡೇಟ್?

Published

on

ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ವರ್ಷನ್   ಸೆ.22ರಂದು ರಿಲೀಸ್ ಆಗುತ್ತಿದೆ. 

ಬೆಂಗಳೂರು: ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ಭಾಷೆಯಲ್ಲಿ ಬರಲು ಸಜ್ಜಾಗಿದೆ.

ಕನ್ನಡಿಗರನ್ನು ಸಪ್ತ ಸಾಗರದಾಚೆ ಎಲ್ಲೋ ಕರೆದೊಯ್ದಿದ್ದ ರಕ್ಷಿತ್‌ ಶೆಟ್ಟಿ ಮತ್ತು ರುಕ್ಮಿಣಿ ವಸಂತ್‌, ಇದೀಗ ಇದೇ ಚಿತ್ರವನ್ನು ತೆಲುಗು ಭಾಷೆಗೂ ಡಬ್‌ ಮಾಡಿ ಅಲ್ಲಿನವರನ್ನು ಸೆಳೆಯಲು ಸಜ್ಜಾಗಿದ್ದಾರೆ.

ಎಸ್. ಸೆ.22ರಂದು ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ವರ್ಷನ್‌ನಲ್ಲಿ ಬರುತ್ತಿದೆ.ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ.

ಮನು-ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ. ಹಾಗಾಗಿ ತೆಲುಗು ಅಂಗಳಕ್ಕೆ ಹಾರಲು ಸಜ್ಜಾಗಿದೆ. ‘ಸಪ್ತ ಸಾಗರಲು ದಾಟಿ’ ಎಂಬ ಟೈಟಲ್‌ನಲ್ಲಿ ತೆಲುಗು ಸಿನಿಮಾ ಸೆ.22ರಂದು ಗ್ರ್ಯಾಂಡಾಗಿ ಬಿಡುಗಡೆಯಾಗುತ್ತಿದೆ.

ತೆಲುಗು ಆಡಿಯನ್ಸ್ ಗೂ ರಕ್ಷಿತ್‌ ಶೆಟ್ಟಿ ಅವರದ್ದು ಪರಿಚಿತ ಮುಖ. ಶ್ರೀಮನ್ನಾರಾಯಣ ಮತ್ತು ಚಾರ್ಲಿ ಸಿನಿಮಾಗಳಿಂದಲೇ ರಕ್ಷಿತ್‌ ಹೆಚ್ಚು ಸದ್ದು ಮಾಡಿದ್ದರು.

ಅದರಲ್ಲೂ 777 ಚಾರ್ಲಿ ಚಿತ್ರವನ್ನು ಬಹುವಾಗಿ ಇಷ್ಟಪಟ್ಟಿದ್ದರು. ಇದೀಗ ಸೂಪರ್ ಡೂಪರ್ ಹಿಟ್ ಸಿನೆಮಾ ತೆಲುಗಿನ ಅಂಗಳಕ್ಕೂ ಕಾಲಿಡಲು ಮುಂದಾಗಿದೆ. ಚಿತ್ರ್ಕೆ ತೆಲುಗು ಆಡಿಯನ್ಸ್ ಎಷ್ಟು ಮಾರ್ಕ್ಸ್ ಕೊಡ್ತಾರೆ ಎನ್ನೋದನ್ನ ಕಾದು ನೋಡಬೇಕು.

Continue Reading

LATEST NEWS

Trending