LATEST NEWS
ಬಿಜೆಪಿ ತೊರೆದ 24 ಗಂಟೆಗಳಲ್ಲಿ ಮಾಜಿ ಸಚಿವರ ವಿರುದ್ಧ ಅರೆಸ್ಟ್ ವಾರಂಟ್ ಜಾರಿ
Published
3 years agoon
By
Adminಲಕ್ನೋ: ಬಿಜೆಪಿ ತೊರೆದ 24 ಗಂಟೆಗಳಲ್ಲಿ ಮಾಜಿ ಸಚಿವ ಸ್ವಾಮಿ ಪ್ರಸಾದ್ ಮೌರ್ಯ ವಿರುದ್ಧ ಸುಲ್ತಾನ್‌ಪುರ ನ್ಯಾಯಾಲಯವು ಬಂಧನ ವಾರಂಟ್ ಹೊರಡಿಸಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ವರದಿ ಮಾಡಿದೆ.
2014 ರಲ್ಲಿ ದ್ವೇಷ ಭಾಷಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌರ್ಯ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ.
ಯೋಗಿ ಆದಿತ್ಯನಾಥ್ ಅವರ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿ ಸ್ವಾಮಿ ಪ್ರಸಾದ್ ಮೌರ್ಯ ಕಾರ್ಯನಿರ್ವಹಿಸಿದ್ದರು.
ಹಿಂದುಳಿದ ವರ್ಗಗಳ (ಒಬಿಸಿ) ಪ್ರಭಾವಿ ನಾಯಕರೂ ಆಗಿರುವ ಅವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷಕ್ಕೆ ಮಂಗಳವಾರ (ಎಸ್‌ಪಿ) ಸೇರಿದ್ದರು.
403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.
LATEST NEWS
ಒಂದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ತಂದೆ, ಮಗ
Published
12 hours agoon
12/01/2025By
NEWS DESK3ಮಂಗಳೂರು/ಮಹಾರಾಷ್ಟ್ರ : ತಂದೆ ಮತ್ತು ಮಗ ಇಬ್ಬರೂ ಒಂದೇ ಮರಕ್ಕೆ ಆತ್ಮಹತ್ಯೆ ಮಾಡಿಕೊಂಡ ಘಟನೆ ಮಹಾರಾಷ್ಟ್ರದ ನಾಂದೇಡ್ ಜಿಲ್ಲೆಯಲ್ಲಿ ಶನಿವಾರ ನಡೆದಿದೆ.
‘ತಂದೆ ತನಗೆ ಸ್ಮಾರ್ಟ್ ಫೋನ್ ಕೊಡಿಸಲಿಲ್ಲ’ ಎಂದು ಮನನೊಂದು 16 ವರ್ಷದ ಬಾಲಕನೊಬ್ಬ ಮರಕ್ಕೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಇನ್ನೊಂದು ವಿಚಿತ್ರವೆಂದರೆ ಮಗನ ಶವ ನೋಡಿ ಆತನ ತಂದೆ ‘ಮಗನಿಗೆ ಸ್ಮಾರ್ಟ್ ಫೋನ್ ಕೊಡಿಸಲು ಆಗಲಿಲ್ಲ’ ಎಂದು ತಾನೂ ಸಹ ಅದೇ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ನಾಂದೇಡ್ ಜಿಲ್ಲೆಯ ಬಿಳೋಳಿ ಮಿನಾಕಿ ಎಂಬಲ್ಲಿ ಈ ದುರ್ಘಟನೆ ನಡೆದಿದೆ.
ರಾಜು ಅವರಿಗೆ ಮೂವರು ಮಕ್ಕಳು. ಕೊನೆಯ ಮಗ ಓಂಕಾರ್ ಹಾಸ್ಟೆಲ್ ಒಂದರಲ್ಲಿ ಇದ್ದುಕೊಂಡು 10 ನೇ ತರಗತಿ ಓದುತ್ತಿದ್ದ. ಮಕರ ಸಂಕ್ರಮಣದ ರಜೆ ಇರುವುದರಿಂದ ಮನೆಗೆ ಬಂದಿದ್ದ.
ಇದನ್ನೂ ಓದಿ: ರೀಲ್ಸ್ ಮಾಡಲು ಹೋಗಿ ನೀರುಪಾಲಾದ ಐವರು ಯುವಕರು
‘ಇದೇ ವೇಳೆ ಬಾಲಕ ಓಂಕಾರ್ ತನ್ನ ತಂದೆಗೆ ಸ್ಮಾರ್ಟ್ ಫೋನ್ ಕೊಡಿಸುವಂತೆ ಒತ್ತಾಯಿಸುತ್ತಿದ್ದ. ಆದರೆ ಬಡ ರೈತ ಕುಟುಂಬದ ರಾಜು, ಮಗನಿಗೆ ಸ್ಮಾರ್ಟ್ ಫೋನ್ ಕೊಡಿಸಲು ಆಗಿರಲಿಲ್ಲ. ಇದರಿಂದ ಡೆತ್ ನೋಟ್ ಬರೆದಿಟ್ಟು ಹೊಲದಲ್ಲಿನ ಮರಕ್ಕೆ ಬಾಲಕ ನೇಣು ಹಾಕಿಕೊಂಡಿದ್ದ. ಅದೇ ರಾತ್ರಿ ಮಗನನ್ನು ಹುಡುಕಿಕೊಂಡು ಹೋಗಿದ್ದ ತಂದೆಯೂ ಮಗ ನೇಣೂ ಹಾಕಿಕೊಂಡಿದ್ದನ್ನು ನೋಡಿ ತಾನೂ ಆತ್ಮಹತ್ಯೆ ಮಾಡಿಕೊಂಡಿದ್ದಾನೆ’ ಎಂದು ನಾಂದೇಡ್ ಎಸ್ ಪಿ ಅವಿನಾಶ್ ಕುಮಾರ್ ತಿಳಿಸಿದ್ದಾರೆ.
ಮೃತ ಬಾಲಕನ ತಾಯಿ ನೀಡಿದ ದೂರು ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ. ಮೃತದೇಹಗಳನ್ನು ಸಿವಿಲ್ ಆಸ್ಪತ್ರೆಗೆ ಸಾಗಿಸಿದ್ದು, ಇಬ್ಬರೂ ಮೃತಪಟ್ಟಿದ್ದಾರೆ ಎಂದು ಘೋಷಿಸಿದ್ದಾರೆ.
LATEST NEWS
ಛೇ! ಇದೆಂಥ ಅಮಾನವೀಯ ಕೃ*ತ್ಯ; ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಕಿ*ಡಿಗೇಡಿಗಳು
Published
13 hours agoon
12/01/2025By
NEWS DESK4ಮಂಗಳೂರು/ಬೆಂಗಳೂರು : ಮಲಗಿದ್ದ ಮೂರು ಹಸುಗಳ ಕೆಚ್ಚಲು ಕೊಯ್ದ ಅಮಾನವೀಯ ಕೃ*ತ್ಯ ಚಾಮರಾಜಪೇಟೆಯ ವಿನಾಯಕನಗರದಲ್ಲಿ ನಡೆದಿದೆ. ತಡರಾತ್ರಿ ದು*ಷ್ಕರ್ಮಿಗಳು ವಿ*ಕೃತಿ ಮೆರೆದಿದ್ದಾರೆ. ರಸ್ತೆಯಲ್ಲಿ ಮಲಗಿದ್ದ ಕೆಚ್ಚಲುಗಳನ್ನು ಕೊಯ್ದು ಕಿ*ಡಿಗೇಡಿಗಳು ಪರಾರಿಯಾಗಿದ್ದಾರೆ.
ರಾತ್ರಿಯಿಡೀ ಹಸುಗಳು ರ*ಕ್ತದ ಮಡುವಿನಲ್ಲಿ ನರಳಾಡಿವೆ. ಇಂದು(ಡಿ.12) ಬೆಳಗ್ಗೆ ಘಟನೆ ಬೆಳಕಿಗೆ ಬಂದಿದ್ದು, ಹಸುಗಳಿಗೆ ಚಾಮರಾಜಪೇಟೆಯ ಪಶು ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಕಾಟನ್ ಪೇಟೆ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದಿದ್ದಾರೆ.
ಸಂಸದ ಪಿಸಿ ಮೋಹನ ಸ್ಥಳಕ್ಕೆ ಭೇಟಿ ನೀಡಿದ್ದಾರೆ. ತಕ್ಷಣ ಕ್ರಮಕ್ಕೆ ಆಗ್ರಹಿಸಿದ್ದಾರೆ. ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರು ಸ್ಥಳಕ್ಕೆ ಭೇಟಿ ನೀಡಿ ಹಸುವಿನ ಮಾಲೀಕರಿಂದ ಮಾಹಿತಿ ಪಡೆದಿದ್ದಾರೆ.
ಮಂಗಳೂರು/ಹೈದರಾಬಾದ್ : ರೀಲ್ಸ್ ಮಾಡಲು ಹೋದ ಐವರು ಯುವಕರು ನೀರುಪಾಲಾದ ಘಟನೆ ತೆಲಂಗಾಣದ ಸಿದ್ದಿ ಪೇಟ್ ಜಿಲ್ಲೆಯ ಕೊಂಡ ಪೋಚಮ್ಮ ಸಾಗರ ಜಲಾಶಯದಲ್ಲಿ ನಡೆದಿದೆ.
ಇಂದು ಏಳು ಮಂದಿ ಯುವಕರ ತಂಡ ಬೆಳಗ್ಗೆ ಒಂಬತ್ತರ ಸುಮಾರಿಗೆ ಜಲಾಶಯದ ಬಳಿ ಬಂದು, ಅಲ್ಲೇ ತಿರುಗಾಡಿ ಕೊನೆಗೆ ನೀರಿಗೆ ಇಳಿದಿದ್ದರು. ನೀರಿಗೆ ಇಳಿದು ನೀರಿನಲ್ಲಿ ಆಟವಾಡುತ್ತಿದ್ದ ದೃಶ್ಯವನ್ನು ಈಜು ಬಾರದ ಇಬ್ಬರು ಬದಿಯಲ್ಲಿ ನಿಂತು ಮೊಬೈಲ್‌ನಲ್ಲಿ ಚಿತ್ರೀಕರಿಸುತ್ತಿದ್ದರು.
ಇದನ್ನೂ ಓದಿ: ಕಡಬ : ಸಂತಾನಹರಣ ಶಸ್ತ್ರಚಿಕಿತ್ಸೆ ಮಾಡಿಸಿಕೊಂಡಿದ್ದ ಬಾಣಂತಿ ಸಾ*ವು
ನೀರಿನಲ್ಲಿ ಆಟವಾಡುತ್ತಿದ್ದ ವೇಳೆ ಐವರೂ ನೀರಿನಲ್ಲಿ ಮುಳುಗುತ್ತಿರುವುದನ್ನು ಗಮನಿಸಿದ ಇಬ್ಬರು ಅವರ ರಕ್ಷಣೆಗೆ ಮುಂದಾದ್ರೂ ಸಾಧ್ಯವಾಗಿಲ್ಲ. ಮುಶೀರಾಬಾದ್‌ನ ಸಹೋದರರಾದ ಧನುಷ್ (20), ಲೋಹಿತ್ (17), ಬನ್ಸಿಲಾಲ್ ಪೇಟೆಯ ದಿನೇಶ್ವರ್ (17), ಖೈರತಾಬಾದ್‌ನ ಚಾಂತಲ್ ಬಸ್ತಿಯ ಜತಿನ್ (17), ಮತ್ತು ಸಾಹಿಲ್ (19) ನೀರು*ಪಾಲಾದ ಯುವಕರು. ಮೃಗಾಂಕ್ (17) ಮತ್ತು ಇಬ್ರಾಹಿಂ (19) ಇಬ್ಬರು ನೀರಿನ ಆಳಕ್ಕೆ ಇಳಿಯದ ಕಾರಣ ಅಪಾಯದಿಂದ ಪಾರಾಗಿದ್ದಾರೆ.
ಜಲಾಶಯದ ಬಳಿ ಜನರ ಓಡಾಟ ಕಡಿಮೆ ಇದ್ದ ಕಾರಣ ಮುಳುಗುತ್ತಿದ್ದ ಐವರ ರಕ್ಷಣೆಗೆ ಯಾರೂ ಸಿಗಲಿಲ್ಲ ಎಂದು, ಬದುಕಿ ಉಳಿದ ಇಬ್ಬರು ಸ್ನೇಹಿತರು ಪೊಲೀಸರ ಬಳಿ ಹೇಳಿದ್ದಾರೆ.
LATEST NEWS
ನರಿಂಗಾನ ಜೋಡುಕರೆ ಕಂಬಳ ಕಣ್ತುಂಬಿಕೊಂಡ ಶಾನ್ವಿ ಶ್ರೀವಾಸ್ತವ್
60 ರೂ. ಗಡಿ ದಾಟಿದ ತೆಂಗಿನಕಾಯಿ ಬೆಲೆ
ಕಾಸರಗೋಡು: ಗಲ್ಫ್ ನಿಂದ ಅಪ್ಪ ತಂದ ಪಿಸ್ತಾದ ಸಿಪ್ಪೆ ಗಂಟಲಲ್ಲಿ ಸಿಲುಕಿ 2 ವರ್ಷದ ಮಗು ಸಾವು
ಪಿಲಿಕುಳ ಕಂಬಳ ವಿಚಾರಣೆ ಜನವರಿ 21 ಕ್ಕೆ ಮುಂದೂಡಿಕೆ
ಈ ವಾರ ಬಿಗ್ಬಾಸ್ ಮನೆಯಿಂದ ಹೊರಬಂದ ಸ್ಪರ್ಧಿ ಇವರೇ..!
ಮಂಗಳೂರು: ಜ. 31 ರಿಂದ ಫೆ. 2 ರ ತನಕ ತಣ್ಣೀರುಬಾವಿ ಬೀಚ್ ಫೆಸ್ಟಿವಲ್
Trending
- FILM7 days ago
ಸುದೀಪ್ ಮಗಳು ಸಾನ್ವಿ ಬಗ್ಗೆ ಯಾಕಿಷ್ಟು ಟ್ರೋಲ್? ಅವರು ಮಾಡಿದ ತಪ್ಪೇನು?
- BIG BOSS2 days ago
BBK11: ಐವರು ನಾಮಿನೇಟ್, ಕಿಚ್ಚನ ಪಂಚಾಯ್ತಿಯಲ್ಲಿ ಗೇಟ್ಪಾಸ್ ಯಾರಿಗೆ..?
- FILM5 days ago
ಗೋವಾದಲ್ಲಿ ಕೇಕ್ ಕತ್ತರಿಸಿ ಯಶ್ ಬರ್ತ್ಡೇ ಸಂಭ್ರಮ
- LATEST NEWS3 days ago
ಹಲ್ಲು ಹುಳುಕಾಗಿದ್ಯಾ.? ಈ ಮನೆಮದ್ದು ಪ್ರಯತ್ನಿಸಿ, ತಕ್ಷಣ ಎಲ್ಲಾ ಹಲ್ಲಲ್ಲಿರುವ ಹುಳುಗಳು ಹೊರ ಬರುತ್ತವೆ.!