Saturday, June 3, 2023

ಬಿಜೆಪಿ ತೊರೆದ 24 ಗಂಟೆಗಳಲ್ಲಿ ಮಾಜಿ ಸಚಿವರ ವಿರುದ್ಧ ಅರೆಸ್ಟ್‌ ವಾರಂಟ್‌ ಜಾರಿ

ಲಕ್ನೋ: ಬಿಜೆಪಿ ತೊರೆದ 24 ಗಂಟೆಗಳಲ್ಲಿ ಮಾಜಿ ಸಚಿವ ಸ್ವಾಮಿ ಪ್ರಸಾದ್‌ ಮೌರ್ಯ ವಿರುದ್ಧ ಸುಲ್ತಾನ್‌ಪುರ ನ್ಯಾಯಾಲಯವು ಬಂಧನ ವಾರಂಟ್‌ ಹೊರಡಿಸಿದೆ ಎಂದು ರಾಷ್ಟ್ರೀಯ ಸುದ್ದಿವಾಹಿನಿಯೊಂದು ವರದಿ ಮಾಡಿದೆ.


2014 ರಲ್ಲಿ  ದ್ವೇಷ ಭಾಷಣ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮೌರ್ಯ ವಿರುದ್ಧ ಬಂಧನ ವಾರಂಟ್ ಹೊರಡಿಸಲಾಗಿದೆ.

ಯೋಗಿ ಆದಿತ್ಯನಾಥ್‌ ಅವರ ಸರ್ಕಾರದಲ್ಲಿ ಕಾರ್ಮಿಕ ಸಚಿವರಾಗಿ ಸ್ವಾಮಿ ಪ್ರಸಾದ್‌ ಮೌರ್ಯ ಕಾರ್ಯನಿರ್ವಹಿಸಿದ್ದರು.

ಹಿಂದುಳಿದ ವರ್ಗಗಳ (ಒಬಿಸಿ) ಪ್ರಭಾವಿ ನಾಯಕರೂ ಆಗಿರುವ ಅವರು ಬಿಜೆಪಿ ತೊರೆದು ಸಮಾಜವಾದಿ ಪಕ್ಷಕ್ಕೆ ಮಂಗಳವಾರ (ಎಸ್‌ಪಿ) ಸೇರಿದ್ದರು.

403 ಸದಸ್ಯ ಬಲವನ್ನು ಹೊಂದಿರುವ ಉತ್ತರ ಪ್ರದೇಶದಲ್ಲಿ ಫೆಬ್ರುವರಿ 10ರಿಂದ ಮಾರ್ಚ್ 7ರ ವರೆಗೆ ಒಟ್ಟು ಏಳು ಹಂತಗಳಲ್ಲಿ ಮತದಾನ ನಡೆಯಲಿದೆ.

LEAVE A REPLY

Please enter your comment!
Please enter your name here

Hot Topics