Friday, August 12, 2022

‘ಯಶ್‌ಪಾಲ್-ಮುತಾಲಿಕ್‌ಗೆ ಜೀವ ಬೆದರಿಕೆ ಹಾಕಿದವರನ್ನು ಬಂಧಿಸಿ’

ಉಡುಪಿ: ಬಿಜೆಪಿ‌ ಮುಖಂಡ ಯಶ್‌ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ ಅವರ ತಲೆ ತೆಗೆದರೆ ತಲಾ 10 ಲಕ್ಷ ರೂ. ನೀಡುವುದಾಗಿ ಇನ್‌ಸ್ಟಾಗ್ರಾಮ್ ಪೇಜೊಂದರಲ್ಲಿ ಬಹಿರಂಗ ಬೆದರಿಕೆ ಹಾಕಿದ ವಿಚಾರಕ್ಕೆ ಸಂಬಂಧಪಟ್ಟಂತೆ ಹಿಂದೂ ಯುವ ಸೇನೆ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳನ್ನು ಭೇಟಿಯಾಗಿ ಮನವಿ ಸಲ್ಲಿಸಿದೆ.


ಇದಕ್ಕೆ ಪ್ರತಿಕ್ರಿಯೆ ನೀಡಿದ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ್ ಅವರು ಸಾಮಾಜಿಕ ಜಾಲತಾಣ ಮೂಲಕ ಬೆದರಿಕೆ ಹಾಕಿದವರ ಮೇಲೆ ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದರು.

ಬಳಿಕ ಸಂಘಟನೆ ಮುಖಂಡ ಮಂಜು ಕೊಳ ಅವರು ಮಾಧ್ಯಮಗಳೊಂದಿಗೆ ಮಾತನಾಡಿ ಇನ್‌ಸ್ಟಾ ಗ್ರಾಮ್ ಮಾರಿಗುಡಿ ಪೇಜ್‌ನಲ್ಲಿ ಬೆದರಿಕೆ ಹಾಕಲಾಗಿದ್ದು ಈ ಪೇಜ್ ಹಾಕಿದ ಕಿಡಿಗೇಡಿಗಳ ವಿರುದ್ಧ ಪೊಲೀಸರು ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು.

ಇದು ಕೇವಲ ಬಿಜೆಪಿ ಮುಖಂಡ ಯಶ್‌ ಪಾಲ್ ಸುವರ್ಣ ಹಾಗೂ ಶ್ರೀರಾಮಸೇನೆ ಮುಖ್ಯಸ್ಥ ಪ್ರಮೋದ್‌ ಮುತಾಲಿಕ್ ಅವರಿಗೆ ಹಾಕಿದ ಬೆದರಿಕೆ ಅಲ್ಲ.

ಬದಲಾಗಿ ಇದು ಇಡೀ ಹಿಂದೂ ಸಮಾಜಕ್ಕೆ ಹಾಕಿರುವ ಬೆದರಿಕೆ ಎಂದು ಭಾವಿಸುತ್ತೇವೆ.ಈ ವಿಚಾರವನ್ನು ಅಷ್ಟು ಸುಲಭವಾಗಿ ಕೈಬಿಡಲು ಸಾಧ್ಯವಿಲ್ಲ.

ಇಂತಹ ಬೆದರಿಕೆಯಿಂದ ಹಿಂದೂ-ಮುಸ್ಲಿಂ ಸೌಹಾರ್ದಕ್ಕೆ ಧಕ್ಕೆ ಆಗುತ್ತೆ.ಇದನ್ನು ಪೊಲೀಸ್ ಇಲಾಖೆ ಗಂಭೀರವಾಗಿ ಪರಿಗಣಿಸಬೇಕು ಎಂದರು.

LEAVE A REPLY

Please enter your comment!
Please enter your name here

Hot Topics

ಉಳ್ಳಾಲ: ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಕಿಂಡರ್‌ ಗಾರ್ಡನ್‌ ಶಿಕ್ಷಕಿಯ ಡೆಡ್‌ಬಾಡಿ ಬಾವಿಯಲ್ಲಿ ಪತ್ತೆ

ಮಂಗಳೂರು: ಇಂದು ಬೆಳಗ್ಗೆಯಿಂದ ನಾಪತ್ತೆಯಾಗಿದ್ದ ಲಿಟಲ್ ಕಿಂಡರ್ ಗಾರ್ಡನಿನ ಶಿಕ್ಷಕಿ ಮೃತದೇಹ ಉಳ್ಳಾಲದ ಸಮುದಾಯ ಆರೋಗ್ಯ ಕೇಂದ್ರದ ಬಾವಿಯಲ್ಲಿ ಪತ್ತೆಯಾಗಿದೆ.ಮೃತರನ್ನು ಹರಿಣಾಕ್ಷಿ(50) ಎಂದು ಗುರುತಿಸಲಾಗಿದೆ.ಇಂದು ಬೆಳಗ್ಗೆ ಮಕ್ಕಳು ಎದ್ದಾಗ ತಾಯಿ ಹರಿಣಾಕ್ಷಿ ಮನೆಯಲ್ಲಿ...

‘ಕಾಡು ಕುದುರೆ ಓಡಿ ಬಂದಿತ್ತಾ’ ಖ್ಯಾತಿಯ ಸುಬ್ಬಣ್ಣ ಇನ್ನಿಲ್ಲ

ಬೆಂಗಳೂರು: ಖ್ಯಾತ ಹಾಡುಗಾರ, ವಕೀಲ ಶಿವಮೊಗ್ಗದ ಸುಬ್ಬಣ್ಣ ಅವರು ಅನಾರೋಗ್ಯದಿಂದ ನಿನ್ನೆ ರಾತ್ರಿ ಬೆಂಗಳೂರಿನಲ್ಲಿ ನಿಧನರಾಗಿದ್ದಾರೆ.ಅವರಿಗೆ 83 ವರ್ಷ ವಯಸ್ಸಾಗಿತ್ತು. 'ಕಾಡುಕುದುರೆ' ಚಿತ್ರದ ಹಾಡಿಗೆ ರಾಷ್ಟ್ರಪ್ರಶಸ್ತಿಯನ್ನೂ ಪಡೆದುಕೊಂಡಿದ್ದ ಅವರು, ವಕೀಲೆ ವೃತ್ತಿಯನ್ನೂ ಮಾಡುತ್ತಿದ್ದರು....

ಬೆಳ್ತಂಗಡಿ: ಅನ್ಯಕೋಮಿನ ಜೋಡಿ ಪತ್ತೆ-ಪೊಲೀಸರಿಗೊಪ್ಪಿಸಿದ ಹಿಂದೂ ಕಾರ್ಯಕರ್ತರು

ಬೆಳ್ತಂಗಡಿ: ಅನ್ಯಕೋಮಿನ ಜೋಡಿಯನ್ನು ಹಿಂದೂ ಕಾರ್ಯಕರ್ತರು ಹಿಡಿದು ಪೊಲೀಸರಿಗೊಪ್ಪಿಸಿದ ಘಟನೆ ಬೆಳ್ತಂಗಡಿಯ ಕಾಪಿನಬಾಗಿಲು ಎಂಬಲ್ಲಿ ನಡೆದಿದೆ.ಗದಗ ಮೂಲದ ರಫೀಕ್(21) ಎಂಬಾತ ಹಿಂದೂ ಯುವತಿಯನ್ನು ಧರ್ಮಸ್ಥಳಕ್ಕೆ ಕರೆ ತಂದಿದ್ದು, ಖಾಸಗಿ ಲಾಡ್ಜ್‌ಗೆ ರೂಮ್ ಬುಕ್ಕಿಂಗ್...