Thursday, September 29, 2022

ಬಂಧಿತ ಶಂಕಿತ ಉಗ್ರ ಮಾಝ್ ತಂದೆ ಮುನೀರ್ ಅಹಮದ್ ಹೃದಯಘಾತಕ್ಕೆ ಬಲಿ..!

ಮಂಗಳೂರು: ಶಿವಮೊಗ್ಗ ಪೊಲೀಸರಿಂದ‌ ಬಂಧಿತನಾಗಿದ್ದ ಶಂಕಿತ ಉಗ್ರ ಮಾಝ್ ತಂದೆ ಶುಕ್ರವಾರ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ.

53 ವರ್ಷದ ಮಾಝ್ ತಂದೆ ಮಗನ ಬಂಧನದ ಬಳಿಕ ಕುಗ್ಗಿಹೋಗಿದ್ದರು. ಹೀಗಾಗಿ ಅವರಿಗೆ ಹೃದಯಾಘಾತ ಉಂಟಾಗಿ ನಿಧನರಾಗಿದ್ದಾರೆ.
ಮಗನ ಬಂಧನದ ಬಳಿಕ ಮಾನಸಿಕವಾಗಿ ಕುಗ್ಗಿದ್ದ ಮುನೀರ್ ಅಹಮದ್ ಇಂದು ಸಂಜೆ ಎದೆನೋವಿನ ಹಿನ್ನೆಲೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.

ಆದರೆ ಚಿಕಿತ್ಸೆ ಫಲಕಾರಿಯಾಗದೇ ಅವರು ಮೃತಪಟ್ಟಿದ್ದಾರೆ. ಈ ಹಿನ್ನಲೆ ಮಾಝ್‌ನನ್ನು ಶಿವಮೊಗ್ಗ ಪೊಲೀಸರು ರಾತ್ರಿಯೇ ಮಂಗಳೂರಿಗೆ ಕರೆದು ತರಲಿದ್ದಾರೆ.

ಮಾಝ್ ಬಗ್ಗೆ ಅತಿ ಹೆಚ್ಚು ಕಾಳಜಿ ಹೊಂದಿದ್ದ ಮುನೀರ್, ಆತನ ಶಿಕ್ಷಣಕ್ಕಾಗಿ ತೀರ್ಥಹಳ್ಳಿಯಿಂದ ಇಲ್ಲಿ ಮಂಗಳೂರಿಗೆ ಶಿಫ್ಟ್ ಆಗಿದ್ದರು.

ತಮ್ಮ ಮಗ ಸೆಪ್ಟೆಂಬರ್ 14 ರಿಂದ ನಾಪತ್ತೆಯಾಗಿದ್ದಾನೆ ಎಂದು ಹೇಬಿಯಸ್ ಕಾರ್ಪಸ್ ಅರ್ಜಿಯನ್ನು ಕೂಡಾ ಸಲ್ಲಿಸಿದ್ದರು.

ಮನೆ ಕೆಳಗೆ ಪಾರ್ಸೆಲ್ ತೆಗೆದುಕೊಂಡು ಬರಲು ಹೋದವನು ವಾಪಸ್ ಬಂದಿರಲೇ ಇಲ್ಲ ಎಂದು ಹೈಕೋರ್ಟ್‌ನಲ್ಲಿ ಅರ್ಜಿ ಕೂಡ ಸಲ್ಲಿಸಿದ್ದರು.

LEAVE A REPLY

Please enter your comment!
Please enter your name here

Hot Topics

ಅಪರಿಚಿತರಿಂದ ಕಾಲಿವುಡ್‌ ‘ಆ್ಯಕ್ಷನ್‌ ಸ್ಟಾರ್’ ವಿಶಾಲ್ ಮನೆಗೆ ಕಲ್ಲು ತೂರಾಟ

ಚೆನ್ನೈ: ಕಾಲಿವುಡ್‌ನ 'ಆ್ಯಕ್ಷನ್‌ ಸ್ಟಾರ್' ನಟ ವಿಶಾಲ್ ಅವರ ಮನೆಗೆ ಯಾರೋ ಅಪರಿಚಿತ ಗನ್‌ಮ್ಯಾನ್‌ಗಳು ನುಗ್ಗಿ ಆಕ್ರಮಣ ಮಾಡಿ ಕಲ್ಲುತೂರಾಟ ಮಾಡಿದ್ದಾರೆ. ಅದರ ಪರಿಣಾಮವಾಗಿ ಮನೆಯ ಕಿಟಕಿ ಗಾಜುಗಳು ಒಡೆದಿರುವ ಘಟನೆ ಚೆನ್ನೈಯಲ್ಲಿ...

ಮಂಗಳೂರು: ಲೋಕಕಂಟಕ ನಿವೃತ್ತಿಗಾಗಿ ವೆಂಕಟರಮಣ ದೇಗುಲದಲ್ಲಿ ಸಹಸ್ರ ಚಂಡಿಕಾ ಮಹಾಯಾಗ ಪ್ರಾರಂಭ

ಮಂಗಳೂರು: ಶಾರದಾ ಮಹೋತ್ಸವದ 100ನೇ ವರ್ಷದ ಶತಮಾನೋತ್ಸವ ಆಚರಣೆಯ ಸಂದರ್ಭದಲ್ಲಿ ಮಂಗಳೂರಿನ ಶ್ರೀ ವೆಂಕಟರಮಣ ದೇವಸ್ಥಾನದ ರಾಜಾಂಗಣದಲ್ಲಿ ಶ್ರೀ ಸಹಸ್ರ ಚಂಡಿಕಾ ಮಹಾಯಾಗ ಇಂದು ಪ್ರಾರಂಭಗೊಂಡಿತು.ಲೋಕ ಕಂಟಕ ನಿವೃತ್ತಿಗಾಗಿ ಲೋಕದಲ್ಲಿ ಉಂಟಾದ ಕ್ಷೋಭೆಯ...

ಮಂಗಳೂರು: ಗೆಳೆಯನ ಸಾವಿಗೆ ಕಾರಣವಾದ ರಾಷ್ಟ್ರೀಯ ಹೆದ್ದಾರಿ ಅವ್ಯವಸ್ಥೆ-ಯುವಕನ ಏಕಾಂಗಿ ಪ್ರತಿಭಟನೆ

ಮಂಗಳೂರು: ರಾಷ್ಟ್ರೀಯ ಹೆದ್ದಾರಿ ಹಾಗೂ ನಗರದೊಳಗಿನ ರಸ್ತೆಗಳಲ್ಲಿರುವ ಯಮಗಾತ್ರದ ಗುಂಡಿಗಳ ಅವ್ಯವಸ್ಥೆಯಿಂದ ತನ್ನ ಗೆಳೆಯ ಮೃತಪಟ್ಟಿದ್ದು, ಈ ಹಿನ್ನಲೆ ರಸ್ತೆ ದುರಸ್ತಿ ಮಾಡುವಂತೆ ಆಗ್ರಹಿಸಿ ಮಂಗಳೂರು ಮಹಾನಗರ ಪಾಲಿಕೆ ಮುಂಭಾಗ ಏಕಾಂಗಿ ಪ್ರತಿಭಟನೆ...