LATEST NEWS
ಸರ್ಕಾರದ ಆದೇಶದಂತೆ ಕೊಲ್ಲೂರು ದೇಗುಲದಲ್ಲೂ ಸಲಾಂ ಆರತಿ ರದ್ದು: ಅರ್ಚಕರಿಂದ ಸ್ವಾಗತ
ಉಡುಪಿ: ಸರಕಾರದ ಆದೇಶವನ್ನು ಸ್ವಾಗತಿಸಿರುವ ಧಾರ್ಮಿಕ ದತ್ತಿ ಇಲಾಖೆ ದೇವಸ್ಥಾನಗಳಲ್ಲಿ ಒಂದಾಗಿರುವ ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಸ್ಥಾನದಲ್ಲಿಯೂ ಇದೀಗ ಸಲಾಂ ಆರತಿಯನ್ನು ರದ್ದುಗೊಳಿಸಲಾಗಿದೆ.
ಕೊಲ್ಲೂರು ದೇವಾಲಯ ಸೇರಿದಂತೆ ಎಲ್ಲಾ ದೇವಾಲಯಗಳಲ್ಲಿ ಸಲಾಂ ಹೆಸರಿನ ಮಂಗಳಾರತಿ ರದ್ದುಗೊಳಿಸುವಂತೆ ಸರಕಾರ ಆದೇಶವನ್ನು ಹೊರಡಿಸಿದ್ದು, ಸರ್ಕಾರದ ಆದೇಶವನ್ನು ಕೊಲ್ಲೂರು ದೇವಳದ ಅರ್ಚಕ ಸುಬ್ರಮಣ್ಯ ಅಡಿಗ ಹೇಳಿಕೆ ನೀಡಿದ್ದಾರೆ.
ಧಾರ್ಮಿಕ ಪರಿಷತ್ತು ತೆಗೆದುಕೊಂಡ ನಿರ್ಧಾರ ಅತ್ಯಂತ ಸ್ವಾಗತಾರ್ಹ. ಕೊಲ್ಲೂರು ದೇವಸ್ಥಾನದಲ್ಲಿ ತ್ವರಿತ ಮಂಗಳಾರತಿ ಮಾಡುತ್ತಿದ್ದೆವು.
ಜನರು ಆಡುಭಾಷೆಯಲ್ಲಿ ಇದನ್ನು ಸಲಾಂ ಎಂಬ ಹೆಸರಲ್ಲಿ ಕರೆಯುತ್ತಿದ್ದರು. ಜನರು ವಾಡಿಕೆಯಂತೆ ಕರೆಯುತ್ತಿದ್ದರೆ ವಿನಾಃ ಯಾವುದೇ ಆಚರಣೆ ಇರಲಿಲ್ಲ. ಇನ್ನು ಮುಂದೆ ಸಂಧ್ಯಾರತಿ ಅಥವಾ ದೀವಟಿಕೆ ಮಂಗಳಾರತಿ ಇತ್ಯಾದಿ ಹೆಸರಿನಿಂದಲೇ ಸಂಭೋದಿಸಲು ಹೇಳಿದ್ದಾರೆ.
ಜನರು ಕೂಡ ಈ ಬದಲಾವಣೆ ಗಮನಿಸಬೇಕು ಎಂದು ಮನವಿ ಮಾಡುತ್ತೇನೆ. ಎಲ್ಲರೂ ಧಾರ್ಮಿಕ ಪರಿಷತ್ತಿನ ನಿರ್ಧಾರದಂತೆ ನಡೆದುಕೊಳ್ಳೋಣ ಎಂದವರು ಹೇಳಿದ್ದಾರೆ.
bangalore
‘ಸಪ್ತ ಸಾಗರದಾಚೆ ಎಲ್ಲೋ’ ಸೈಡ್ ಬಿ ರಿಲೀಸ್ ಡೇಟ್ ಚೇಂಜ್…!
ರಕ್ಷಿತ್ ಶೆಟ್ಟಿ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಸಿನೆಮಾದ ಸೈಡ್ ಬಿ ಅಕ್ಟೋಬರ್ 20ರ ಬದಲಿಗೆ ಅಕ್ಟೋಬರ್ 27ರಂದು ರಿಲೀಸ್ ಆಗಲಿದೆ.
ರಕ್ಷಿತ್ ಶೆಟ್ಟಿ ನಟಿಸಿರುವ ‘ಸಪ್ತ ಸಾಗರದಾಚೆ ಎಲ್ಲೋ’ ಸಿನಿಮಾ ತೆಲುಗಿನಲ್ಲೂ ಭರ್ಜರಿ ರೆಸ್ಪಾನ್ಸ್ ಪಡೆದುಕೊಂಡಿದ್ದು ಚಿತ್ರತಂಡ ಮೊದಲೇ ಘೋಷಿಸಿದಂತೆ ಅಕ್ಟೋಬರ್ 20ಕ್ಕೆ ಬಿಡುಗಡೆ ಆಗಬೇಕಿತ್ತು.
ಆದ್ರೆ ಅಕ್ಟೋಬರ್ 20ಕ್ಕೆ ಸಪ್ತ ಸಾಗರದಾಚೆ ಸಿನೆಮಾ ರಿಲೀಸ್ ಆಗುತ್ತಿಲ್ಲ.
ಸೈಡ್ ಬಿ ಪಾರ್ಟ್ ನೋಡಲು ಅಭಿಮಾನಿಗಳು ತುದಿಗಾಲಲ್ಲಿ ನಿಂತು ಕಾಯುತ್ತಿದ್ದರು. ಭಾರೀ ಬಜೆಟ್ ಚಿತ್ರಗಳು, ಸ್ಟಾರ್ ನಟರ ಚಿತ್ರಗಳು, ಪರಭಾಷೆಯ ಚಿತ್ರಗಳ ಹಾವಳಿಯಿಂದಾಗಿ ಚಿತ್ರ ಬಿಡುಗಡೆಯ ದಿನಾಂಕ ಬದಲಾಗಿದೆ.
ಹೀಗಾಗಿ ಚಿತ್ರತಂಡ ಅಕ್ಟೋಬರ್ 27ಕ್ಕೆ ಪಾರ್ಟ್ ಬಿ ರಿಲೀಸ್ ಮಾಡುವ ಘೋಷಣೆಯನ್ನು ಮಾಡಿದೆ.
ಹೌದು ..ಅಕ್ಟೋಬರ್ 20ರ ಬದಲಿಗೆ ಅಕ್ಟೋಬರ್ 27ರಂದು ‘ಸಪ್ತ ಸಾಗರದಾಚೆ ಎಲ್ಲೋ ಸೈಡ್ ಬಿ’ ರಿಲೀಸ್ ಆಗಲಿದೆ.
ರಕ್ಷಿತ್ ಶೆಟ್ಟಿ, ರುಕ್ಮಿಣಿ ವಸಂತ್ ನಟನೆಯ ‘ಸಪ್ತಸಾಗರದಾಚೆ ಎಲ್ಲೋ’ ತೆಲುಗು ನೆಲದಲ್ಲೂ ಸದ್ದು ಮಾಡಿದೆ. ಸ್ಯಾಂಡಲ್‌ವುಡ್‌ನಲ್ಲಿ ಕಮಾಲ್ ಮಾಡಿದ ಈ ಸಿನಿಮಾ, ಈಗ ತೆಲುಗಿನಲ್ಲೂ ಅತ್ಯುತ್ತಮ ಪ್ರತಿಕ್ರಿಯೆನ್ನು ಕಂಡಿದೆ.
ಹೇಮಂತ್ ನಿರ್ದೇಶಿಸಿದ ದೃಶ್ಯ ಕಾವ್ಯಕ್ಕೆ ಕನ್ನಡಿಗರು ಫಿದಾ ಆಗಿದ್ದಾರೆ. ಮನು- ಪ್ರಿಯಾ ಜೋಡಿಯ ಪ್ರೇಮ್ ಕಹಾನಿ ನೋಡಿ ಪ್ರೇಕ್ಷಕರು ಚಪ್ಪಾಳೆ ತಟ್ಟಿದ್ದಾರೆ.
ಫೈನಲಿ ಜನ ಕಾತುರದಿಂದ ಕಾಯುತ್ತಿರುವ ಸಪ್ತ ಸಾಗರದಾಚೆ ಸಿನೆಮಾದ ಪಾರ್ಟ್ ಬಿ ಅಕ್ಟೋಬರ್ 27ರಂದು ಅದ್ದೂರಿಯಾಗಿ ಬಿಡುಗಡೆಗೆ ಸಿದ್ದವಾಗಿದೆ.
DAKSHINA KANNADA
ಮನೆಯ ಯಜಮಾನನ್ನು ಕಟ್ಟಿ ಹಾಕಿ ನಗ, ನಗದು ದರೋಡೆ- 6 ಜನ ಬಂಧನ..!
ಪುತ್ತೂರು: ಮನೆ ಬಾಗಿಲು ಮುರಿದು ಮನೆಯೊಳಗೆ ನುಗ್ಗಿದ ದರೋಡೆಕೋರರ ತಂಡವೊಂದು ಮನೆ ಮಂದಿಯನ್ನು ಕಟ್ಟಿ ಹಾಕಿ ನಗ-ನಗದು ದರೋಡೆ ಮಾಡಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರಿನ ಬಡಗನ್ನೂರು ಗ್ರಾಮಪಂಚಾಯತ್ ವ್ಯಾಪ್ತಿಯ ಕುದ್ಕಾಡಿ ಎಂಬಲ್ಲಿ ಸೆ. 7ರಂದು ನಡೆದಿದ್ದು, ಇದೀಗ ಪೊಲೀಸರು ಆರು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಸುಧೀರ್ ಪೆರುವಾಯಿ, ಕೇರಳದ ಕಾಸರಗೋಡು ಜಿಲ್ಲೆಯ ನಿವಾಸಿಗಳಾದ ಪಚ್ಚಂಬಳ ರವಿ, ಕಿರಣ್, ವಸಂತ, ಫಸಲ್, ನಿಝಾರ್ ಎಂದು ಗುರುತಿಸಲಾಗಿದ್ದು, ಇವರೆಲ್ಲರೂ ಕ್ರಿಮಿನಲ್ ಹಿನ್ನಲೆಯುಳ್ಳ ಆರೋಪಿಗಳಾಗಿದ್ದಾರೆ.
ಪಚ್ಚಂಬಳ ರವಿಯು ಮಂಗಳೂರಿನ ತಾಲೂಕು ಪಂಚಾಯತ್ ಅಧ್ಯಕ್ಷ ಜಬ್ಬಾರ್ ಹತ್ಯೆಯ ಆರೋಪಿಯಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಜೀವಾವಧಿ ಶಿಕ್ಷೆ ಎದುರಿಸುತ್ತಿದ್ದ ಆರೋಪಿಯಾಗಿದ್ದಾನೆ.
ಪೆರೋಲ್ ಮೂಲಕ ಜೈಲಿನಿಂದ ಹೊರಗೆ ಬಂದು ಕಳ್ಳವು ಕೃತ್ಯ ನಡೆಸಿದ್ದಾನೆ.
ಆರೋಪಿಗಳಿಂದ ಕೃತ್ಯಕ್ಕೆ ಬಳಸಿದ ಕಾರು, ಚಿನ್ನ ವಶಕ್ಕೆ ಪಡೆದುಕೊಳ್ಳಲಾಗಿದ್ದು, ಪುತ್ತೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಬಡಗನ್ನೂರು ಗ್ರಾಮಪಂಚಾಯತ್ ನ ಮಾಜಿ ಸದಸ್ಯರಾಗಿರುವ ಗುರುಪ್ರಸಾದ್ ರೈ ಯವರ ಮನೆಯಲ್ಲಿ ಈ ದರೋಡೆ ಕೃತ್ಯ ನಡೆದಿತ್ತು.
ನಸುಕಿನ ಜಾವ ಸುಮಾರು 2 ಗಂಟೆಗೆ ಮನೆಯ ಮುಂದಿನ ಬಾಗಿಲ ಮೂಲಕ ಮನೆಯೊಳಗೆ ನುಗ್ಗಿದ ಸುಮಾರು 8 ಜನರಿದ್ದ ಮುಸುಕುಧಾರಿಗಳ ತಂಡ ಗುರುಪ್ರಸಾದ್ ಅವರನ್ನು ಕಟ್ಟಿ ಹಾಕಿ, ಕುತ್ತಿಗೆಗೆ ಚಾಕು ಹಿಡಿದು ಕಪಾಟಿನಲ್ಲಿದ್ದ ಸುಮಾರು 40 ಸಾವಿರ ರೂಪಾಯಿ ಮತ್ತು ಸುಮಾರು 15 ಪವನ್ ನಷ್ಟು ಚಿನ್ನವನ್ನು ದರೋಡೆ ಮಾಡಿತ್ತು. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿ.ಬಿ ರಿಷ್ಯಂತ್ ವಿಶೇಷ ತಂಡ ರಚಿಸಿ ತನಿಖೆಗೆ ಆದೇಶಿಸಿದ್ದರು.
DAKSHINA KANNADA
ಲೈಂಗಿಕವಾಗಿ ಬಳಸಿಕೊಂಡು ಬ್ಲಾಕ್ ಮೇಲ್ ಮಾಡಿದ ಭಟ್- ಪ್ರಕರಣ ದಾಖಲು..!
ಪುತ್ತೂರು: ಬಣ್ಣದ ಮಾತುಗಳಿಂದ ವಿಶ್ವಾಸಗಳಿಸಿ ವಿವಾಹಿತ ಮಹಿಳೆಯನ್ನು ಲೈಂಗಿಕವಾಗಿ ಬಳಸಿಕೊಂಡು ಪುತ್ತೂರಿನ ವ್ಯಕ್ತಿಯೊಬ್ಬ ಕೊನೆಗೆ ಮಹಿಳೆಯನ್ನೇ ಬ್ಲಾಕ್ ಮೇಲ್ ಮಾಡಿ ಹಣ ಕೀಳಲು ಯತ್ನಿಸಿದ ಬಗ್ಗೆ ಕಾರವಾರ ಮಹಿಳಾ ಠಾಣೆಯಲ್ಲಿ ದೂರು ದಾಖಲಾಗಿದೆ.
ಪುತ್ತೂರಿನ ಆರ್ಲಪದವು ಮೂಲದ ಪ್ರಶಾಂತ ಭಟ್ ಮಾಣಿಲ ಪ್ರಕರಣದ ಆರೋಪಿ.
ದೂರು ನೀಡಿದ ಮಹಿಳೆಯು ಸಂಗೀತದಲ್ಲಿ ಆಸಕ್ತಿ ಇದ್ದು, ಕ್ಲಬ್ ಹೌಸ್ ಆ್ಯಪ್ ನಲ್ಲಿ ಹಾಡುತ್ತಿದ್ದಳು.
2020 ರಲ್ಲಿ ಆ್ಯಪ್ ಮೂಲಕವೇ ಆರೋಪಿಯ ಪರಿಚಯವಾಗಿದೆ. ಪರಿಚಯ ಸ್ನೇಹಕ್ಕೆ ತಿರುಗಿ ಕ್ರಮೇಣ ಪರಸ್ಪರ ಇಷ್ಟಪಟ್ಟಿದ್ದಾರೆ.
2023 ರ ಜನವರಿ ತಿಂಗಳಲ್ಲಿ ಆರೋಪಿಯು ಮಹಿಳೆಯನ್ನು ಭೇಟಿಯಾಗಲು ಬಂದು ಖಾಸಗಿ ಲಾಡ್ಜ್ ಒಂದರಲ್ಲಿ ರೂಂ ಮಾಡಿದ್ದಾನೆ.
ಅಲ್ಲಿ ಮಹಿಳೆಯ ಮೇಲೆ ಆರೋಪಿಯು ಲೈಂಗಿಕ ಹಲ್ಲೆ ನಡೆಸಿದ್ದಾನೆ.
ಅಲ್ಲದೇ ಅದೇ ಲಾಡ್ಜಿನಲ್ಲಿ ಘಟನೆಯು ಮತ್ತೊಮ್ಮೆ ನಡೆದಿದೆ ಎಂದು ಮಹಿಳೆಯು ದೂರಿನಲ್ಲಿ ದಾಖಲಿಸಿದ್ದಾರೆ.
ಈ ವೇಳೆ ಆರೋಪಿಯು ಮಹಿಳೆಯೊಂದಿಗಿರುವ ಖಾಸಗಿ ಕ್ಷಣಗಳ ಫೋಟೋ ಕ್ಲಿಕ್ಕಿಸಿಕೊಂಡಿದ್ದಾನೆ.
ಜತೆಗೆ ವಿಡಿಯೋ ಕಾಲ್ ಮಾಡಿ ಅಲ್ಲಿಯೂ ನಗ್ನ ದೃಶ್ಯಗಳನ್ನು ಸೆರೆ ಹಿಡಿದಿದ್ದಾನೆ ಎಂದು ದೂರಲಾಗಿದೆ.
ಆರೋಪಿಯು ಮಹಿಳೆಯಿಂದ ಹಣಕ್ಕೂ ಬೇಡಿಕೆ ಇಟ್ಟಿದ್ದು, ಮಹಿಳೆಯು ಒಮ್ಮೆ 25 ಸಾವಿರ ಹಣ ನೀಡಿದ್ದಾಳೆ.
ಬಳಿಕ ಆರೋಪಿಯು ಖಾಸಗಿ ಚಿತ್ರಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿ ಬಿಡುವುದಾಗಿ ಬೆದರಿಕೆ ನೀಡಿ ಏಳು ಲಕ್ಷ ರೂಪಾಯಿಗಳಿಗೆ ಬೇಡಿಕೆ ಇಟ್ಟಿದ್ದಾನೆ.
ಅಲ್ಲದೇ ಮಹಿಳೆಯ ತಾಯಿ ಹಾಗು ಸ್ನೇಹಿತರಿಗೂ ಖಾಸಗಿ ಕ್ಷಣಗಳ ಚಿತ್ರಗಳನ್ನು ಕಳುಹಿಸಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಕಾರವಾರದ ಮಹಿಳಾ ಠಾಣೆಯಲ್ಲಿ ಈ ಬಗ್ಗೆ ಪ್ರಕರಣ ದಾಖಲಾಗಿದೆ.
- FILM7 days ago
Film: ಹಂದಿ ಮಾಂಸ ಸೇವಿಸಿದ ಟಿಕ್ಟಾಕ್ ಸ್ಟಾರ್ಗೆ 2 ವರ್ಷ ಜೈಲು ಶಿಕ್ಷೆ..!
- bangalore6 days ago
ಹುಡುಗಿ ಚೇಂಜ್ ಆದ್ರೂ ಡ್ರೆಸ್ ಚೇಂಜ್ ಆಗಿಲ್ಲ ಅಲ್ವಾ ಶೆಟ್ರೇ?
- bengaluru5 days ago
ಕಟೀಲು ದುರ್ಗಾಪರಮೇಶ್ವರೀ ದೇವಸ್ಥಾನಕ್ಕೆ ನಟ ವಿಜಯ ರಾಘವೇಂದ್ರ ಭೇಟಿ..!
- DAKSHINA KANNADA5 days ago
ಮುಂದಿನ ವರ್ಷದಿಂದ ಎಸ್.ಎಸ್.ಎಲ್.ಸಿ. ವಿದ್ಯಾರ್ಥಿಗಳಿಗೆ 3 ಬೋರ್ಡ್ ಎಕ್ಸಾಮ್- ಮಧು ಬಂಗಾರಪ್ಪ