Connect with us

BELTHANGADY

ಬೆಳ್ತಂಗಡಿ: ‘ನೂತನ್ ಕ್ಲೋತ್ ಸೆಂಟರ್’ನಲ್ಲಿ ಆ.7ರಿಂದ ಆಷಾಢ ಡಿಸ್ಕೌಂಟ್ ಸೇಲ್

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಮಡಂತ್ಯಾರು ರಾಜಮಾರ್ಗದಲ್ಲಿ ನೂತನ್ ಕ್ಲೋತ್ ಸೆಂಟರ್ ರಾರಾಜಿಸುತ್ತಿದೆ.


ಜನಪ್ರಿಯ ಹಾಗೂ ಕರಾವಳಿಯ ಜವಳಿ ಪ್ರಿಯರ ಅಚ್ಚುಮೆಚ್ಚಿನ ಪ್ರಸಿದ್ದ “ನೂತನ್ ಕ್ಲೋತ್ ಸೆಂಟರ್” ಮಡಂತ್ಯಾರು ಕಳೆದ ಹಲವು ವರ್ಷಗಳಿಂದ ಉತ್ತಮ ಗುಣಮಟ್ಟದ ಸೇವೆ ಮೂಲಕ ಗ್ರಾಹಕರ ವಿಶ್ವಾಸ ಗಳಿಸುವಲ್ಲಿ ಯಶಸ್ವಿಯಾಗಿದೆ.

ಗ್ರಾಹಕರ ನೆಚ್ಚಿನ ಶಾಪಿಂಗ್ ತಾಣವಾಗಿದೆ. ಪ್ರತಿಯೊಂದು ಸೀಸನಲ್ಲೂ ಗ್ರಾಹಕರಿಗೆ ಉತ್ತಮ ಆಫರ್ ಗಳೊಂದಿಗೆ ಸೇವೆಗಳನ್ನು ನೀಡುತ್ತಿದ್ದು, ಇದೀಗ ಆಷಾಡದಲ್ಲೂ ತನ್ನ ಗ್ರಾಹಕರಿಗಾಗಿ ಆಗಸ್ಟ್ 7 ರಿಂದ 16 ರವರೆಗೆ ವಿಶೇಷ ದರ ಕಡಿತದ ಆಫರ್ ನೀಡುತ್ತಿದೆ.

ನೂತನ್ ಕ್ಲೋತ್ ಸೆಂಟರ್ ಮಡಂತ್ಯಾರಿನಲ್ಲಿ ಮಹಿಳೆಯರ, ಪುರುಷರ ಹಾಗೂ ಮಕ್ಕಳ, ಮದುವೆ ಸೀರೆಗಳ, ಹಾಗೂ ಎಲ್ಲಾ ವಯೋಮಾನದವರ ವಸ್ತ್ರಗಳ ಭಂಡಾರವೇ ಇದ್ದು ಗ್ರಾಹಕರು ತಮ್ಮ ಇಚ್ಚೆಯ ಬಟ್ಟೆಯನ್ನು ಖರೀದಿಸಬಹುದಾಗಿದೆ.

 

ಈ ಬಾರಿಯ ಆಷಾಡ ಕೊಡುಗೆಯಲ್ಲಿ ಅತ್ಯುತ್ತಮ ಗುಣಮಟ್ಟದ, ಬ್ರ್ಯಾಂಡೆಡ್ ವಸ್ತ್ರಗಳೊಂದಿಗೆ ಆಫರ್ ಕೂಡಾ ಇರಲಿದೆ.

ಆಷಾಡ ಆಫರ್ ಇದೇ ಆಗಸ್ಟ್ 7 ರಿಂದ 16 ರವರೆಗೆ ಇರಲಿದೆ.

BELTHANGADY

ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು

Published

on

ಪುತ್ತೂರು: ಶ್ರೀ ಕ್ಷೇತ್ರ ಧರ್ಮಸ್ಥಳ ಮೇಳದಲ್ಲಿ ಸುದೀರ್ಘ ಕಾಲ ಸೇವೆ ಸಲ್ಲಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು(59 ವ) ಅವರು ಹೃದಯಾಘಾತದಿಂದ ಮೇ.1ರಂದು ರಾತ್ರಿ ನಿಧನರಾಗಿದ್ದಾರೆ.

gangadhar

ಮುಂದೆ ಓದಿ..;ಭರತನಾಟ್ಯದಂತೆ ಯಕ್ಷಗಾನಕ್ಕೂ ಪರೀಕ್ಷೆ..! ಪಟ್ಲ ಸತೀಶ್ ಶೆಟ್ಟಿ

ಕೋಟದಲ್ಲಿ ಮೇ.1ರಂದು ಧರ್ಮಸ್ಥಳ ಕ್ಷೇತ್ರ ಮಹಾತ್ಮೆ ಯಕ್ಷಗಾನದಲ್ಲಿ ಕುಕ್ಕಿತ್ತಾಯನ ವೇಷ ಹಾಕಿದ್ದರು. ಮೇಳದ ಬಳಿಕ ಚೌಕಿಯಲ್ಲಿ ಬಣ್ಣ ತೆಗೆಯುತ್ತಿದ್ದ ವೇಳೆ ಹೃದಯಾಘಾತಕ್ಕೆ ಒಳಗಾಗಿದ್ದಾರೆ ಎನ್ನಲಾಗಿದೆ.

gangadhar

ನಾರಾಯಣ ಮಯ್ಯು ಹಾಗೂ ಲಕ್ಷ್ಮೀ ದಂಪತಿ ಪುತ್ರನಾಗಿದ್ದು 1964ರಲ್ಲಿ ಪುತ್ತೂರಿನ ಸೇಡಿಯಾಪಿನಲ್ಲಿ ಜನಿಸಿದರು. ತನ್ನ 18 ನೇ ವಯಸ್ಸಿನಲ್ಲಿ ಯಕ್ಷಗಾನದಲ್ಲಿ ಬಣ್ಣ ಹಚ್ಚಲು ಆರಂಭಿಸಿದ ಇವರು ಸ್ತ್ರೀ ವೇಷ, ರಾಜ ವೇಷ, ಪುಂಡು ವೇಷಗಳಲ್ಲಿ ನಿಸ್ಸೀಮರಾಗಿದ್ದರು. ಇನ್ನು ಮಾಲಿನಿ, ಚಿತ್ರಾಂಗದೆ, ಮೋಹಿನಿ, ದಾಕ್ಷಾಯಿನಿ, ಪ್ರಮೀಳೆ, ಶ್ರೀ ದೇವಿ, ಸೀತೆ, ದೇವೆಂದ್ರ, ದುಶ್ಯಾಸನ ಮೊದಲಾದ ಪಾತ್ರಗಳ ಅಭಿನಯದಲ್ಲಿಯೂ ಸೈ ಎನಿಸಿಕೊಂಡಿದ್ದರು. ಮೃತರು  ಆರೋಗ್ಯ ಸಹಾಯಕಿಯಾಗಿರುವ ಪತ್ನಿ ಹಾಗೂ ಪುತ್ರನನ್ನು ಅಗಲಿದ್ದಾರೆ.

Continue Reading

BELTHANGADY

ಸಾಕುನಾಯಿಯನ್ನು ಹೊತ್ತೊಯ್ದ ಚಿರತೆ..!! ಭಯ ಭೀತರಾದ ಜನತೆ

Published

on

ಬೆಳ್ತಂಗಡಿ: ಇತ್ತೀಚೆಗೆ ಕಾಡಿನಲ್ಲಿರುವ ಪ್ರಾಣಿಗಳು ನಾಡಿಗೆ ಬರೋದು ಕಾಮನ್‌ ಆಗಿ ಬಿಟ್ಟಿದೆ. ಹೆಚ್ಚಾಗಿ ಕಾಡಾನೆಗಳು ಊರಿಗೆ ಬಂದು ಕೃಷಿಗಳನ್ನು ನಾಶ ಮಾಡ್ತಾಇತ್ತು. ಆದರೆ ಈಗೀಗ ಹುಲಿ ಚಿರತೆಗಳು ಕೂಡ ನಾಡಿನತ್ತ ಮುಖ ಮಾಡ್ತಾ ಇದೆ.

chitha

ಮುಂದೆ ಓದಿ..; ಕಾಗೆ ನಿಜಕ್ಕೂ ನಮ್ಮ ಪಿತೃನಾ..?

ಬೆಳ್ತಂಗಡಿಯ ವೇಣೂರು ಪಚ್ಚೇರಿ ಪರಿಸರದಲ್ಲಿ ಚಿರತೆಯೊಂದು ರಾತ್ರಿ ಹೊತ್ತು ಓಡಾಡುವುದು ಕಂಡು ಬಂದಿದೆ. ಈ ಘಟನೆಯಿಂದ ಊರಿನ ಜನ ಭಯಭೀತರಾಗಿದ್ದಾರೆ. ಹಚ್ಚೇರಿ ಗೋಳಿದಡ್ಕ ನಿವಾಸಿ ಕೃಷ್ಣಾನಂದ ಭಟ್ ಅವರ ಸಾಕುನಾಯಿಯನ್ನು ಚಿರತೆ ಕಚ್ಚಿ ಕೊಂಡೊಯ್ಯುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ಕೃಷ್ಣಾನಂದ ಅವರು ಚಿರತೆಯಿಂದ ರಕ್ಷಣೆ ಕೋರಿ ವೇಣೂರು ಅರಣ್ಯ ಇಲಾಖಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

Continue Reading

BANTWAL

ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

Published

on

ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

drinks ban for 3 days

ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

Continue Reading

LATEST NEWS

Trending