Monday, May 17, 2021

ಕೋವಿಡ್ ಸೋಂಕಿಗೆ ಬಲಿಯಾದ ಸೀತಾರಾಮ್ ಯೆಚೂರಿ ಪುತ್ರ ಆಶಿಶ್..!

ನವದೆಹಲಿ: ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಹಿರಿಯ ಕಮ್ಯುನಿಸ್ಟ್ ನಾಯಕ ಸೀತಾರಾಂ ಯೆಚೂರಿ ಪುತ್ರ (35) ಆಶಿಶ್ ಕೊರೊನಾ ಸೋಂಕಿನಿಂದ ಸಾವಿಗೀಡಾಗಿದ್ದಾರೆ.

ದೆಹಲಿಯ ಮೆಡಂತಾ ಆಸ್ಪತ್ರೆಯಲ್ಲಿ ಯೆಚೂರಿಯವರ ಮಗ ಆಶಿಶ್ ಕೊರೊನಾ ಸೋಂಕಿಗೆ ಚಿಕಿತ್ಸೆ ಪಡೆಯುತ್ತಿದ್ದರು. ಎರಡು ವಾರಗಳ ಚಿಕಿತ್ಸೆ ಪಡೆದ ಆಶಿಶ್ ಗುರುವಾರ ಬೆಳಗ್ಗೆ 5.30ಗೆ ಹಠಾತ್ ನಿಧನರಾಗಿದ್ದಾರೆಂದು ಕುಟುಂಬದ ಮೂಲಗಳಿಂದ ತಿಳಿದು ಬಂದಿದೆ.

ಆಶಿಶ್ ಯೆಚೂರಿಯವರು ಪ್ರತಿಷ್ಠಿತ ದಿನಪತ್ರಿಕೆಯೊಂದರಲ್ಲಿ ಕಾರ್ಯ ನಿರ್ವಹಿಸುತ್ತಿದ್ದರು. ದಿಲ್ಲಿಯಲ್ಲಿ ವಾಸವಾಗಿದ್ದ ಸೀತಾರಾಂ ಯೆಚೂರಿಯವರು ಸಧ್ಯ ಹೋಂ ಕ್ವಾರಂಟೈನ್ ನಲ್ಲಿದ್ದಾರೆ.

ಕಮ್ಯುನಿಸ್ಟ್ ನಾಯಕ ಸೀತಾರಾಂ ಯೆಚೂರಿಯವರು ತನ್ನ ಹಿರಿಯ ಮಗ ಆಶಿಶ್ ಯೆಚೂರಿ ಕೊರೊನಾದಿಂದ ಸಾವನ್ನಪ್ಪಿರುವುದು ಬಹಳ ದು:ಖದ ಸಂಗತಿ.

ಆತನಿಗೆ ಉತ್ತಮ ಚಿಕಿತ್ಸೆ ನೀಡಿದ ವೈದ್ಯರು ಹಾಗೂ ದಾದಿಯರು ಆರೋಗ್ಯ ಕಾರ್ಯಕರ್ತರಿಗೆ ಧನ್ಯವಾದ ಅರ್ಪಿಸುವುದಾಗಿ ಟ್ವೀಟ್ ಮಾಡಿದ್ದಾರೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...