Connect with us

DAKSHINA KANNADA

ನಮ್ಮ ಮಾತುಗಳಿಗೆ ಅಸ್ತು ಅನ್ನುವ ಅಶ್ವಿನಿ ದೇವತೆಗಳು – ಯಾರಿವರು?

Published

on

ಮಂಗಳೂರು : ಕೆಲವೊಮ್ಮೆ ನಾವು ಕೆಟ್ಟ ಮಾತುಗಳನ್ನಾಡುವಾಗ ನಮ್ಮ ಹಿರಿಯರು ತಡೆಯುತ್ತಾರೆ. ಬಿಡ್ತು ಅಂತಾ ಹೇಳು ಎಂದು ಹೇಳಿದ ಅನುಭವ ನಿಮಗೂ ಆಗಿರಬಹುದು. ನಮ್ಮ ಹಿರಿಯರು ಹೇಳುವ ಪ್ರಕಾರ ನಾವು ಕೆಟ್ಟ ಮಾತುಗಳನ್ನಾಡುವಾಗ ಅಶ್ವಿನಿ ದೇವತೆಗಳು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುತ್ತಾರೆ. ಈ ಕಾರಣಕ್ಕಾಗಿ ಅವರು ನಾವು ಬೇಜಾರಲ್ಲಿ ಏನಾದರೂ ತಪ್ಪಿ ಮಾತನಾಡಿದಾಗ ಬಿಡ್ತು ಎಂದು ಹೇಳುವಂತೆ ನಮಗೆ ಹೇಳುತ್ತಿದ್ದರು. ಹಾಗಾದರೆ ಈ ಅಸ್ತು ದೇವತೆಗಳು ಯಾರು.? ಇವರು ಅಸ್ತು ಅಂದಾಕ್ಷಣ ನಾವು ಆಡಿದ ಮಾತುಗಳು ನಿಜವಾಗುತ್ತದೆಯೇ..?

ಅಶ್ವಿನಿ ದೇವತೆಗಳು ಯಾರು.?

ಅಶ್ವಿನಿ ದೇವತೆಯರು ಅಂದರೆ ಸೂರ್ಯಪುತ್ರರು. ಭಗವಾನ್‌ ಸೂರ್ಯ ದೇವನಿಗೆ ಮತ್ತು ಸಂಧ್ಯಾದೇವಿಗೆ ಜನಿಸಿದ ಅವಳಿ ಮಕ್ಕಳು. ಇವರು ಅದೃಷ್ಟದ ದೇವತೆಗಳಾಗಿದ್ದು, ಅಸ್ತು ಅಸ್ತು ಎಂದು ಸದಾ ಪಠಿಸುವ ದೇವರು. ಇವರನ್ನು ಅಶ್ವಿನಿ ಕುಮಾರರೆಂದು, ದೇವತೆಗಳ ವೈದ್ಯರೆಂದು ಪರಿಗಣಿಸಲಾಗುತ್ತದೆ. ಅಶ್ವಿನಿ ದೇವತೆಗಳ ರೂಪವೇ ವಿಚಿತ್ರ. ಯಾಕೆಂದರೆ ಈ ಅವಳಿ ಅಶ್ವಿನಿ ಕುಮಾರರದ್ದು ಮಾನವ ದೇಹವಾದರೆ, ಕುದುರೆಯ ಮುಖ. ಆದರೂ ನೋಡಲು ಅತ್ಯಂತ ಆಕರ್ಷಕರಾಗಿದ್ದರು.

ಅಶ್ವಿನಿ ದೇವತೆಗಳಿಗೆ ಕುದುರೆ ಮುಖ ಬರಲು ಕಾರಣವೇನು.?

ಒಮ್ಮೆ ಸೂರ್ಯ ದೇವನ ಪತ್ನಿಯಾದ ಸಂಧ್ಯಾ ದೇವಿಯು ಸೂರ್ಯ ದೇವನ ತಾಪವನ್ನು ತಡೆಯಲಾರದೆ ಕಷ್ಟಕ್ಕೆ ಸಿಲುಕಿಕೊಳ್ಳುತ್ತಾಳೆ. ಇದನ್ನು ನೋಡಿದ ಸೂರ್ಯ ದೇವನು ತನ್ನ ತಾಪವನ್ನು ಕಡಿಮೆ ಮಾಡಿಕೊಳ್ಳಲು ಮುಂದಾಗುತ್ತಾನೆ. ಆಗ ಸಂಧ್ಯಾ ದೇವಿಯು ಸೂರ್ಯದೇವನು ನನಗಾಗಿ ತನ್ನ ತಾಪವನ್ನು ಇನ್ನೂ ಕಡಿಮೆ ಮಾಡಿಕೊಂಡರೆ ಜಗತ್ತಿನಲ್ಲಿರುವ ಎಲ್ಲಾ ಜೀವರಾಶಿಗಳಿಗೆ ಅಪಾರ ಕಷ್ಟಗಳು ಉಂಟಾಗುತ್ತವೆ ಎಂದು ಯೋಚಿಸಿ, ಹಿಮಾಲಯ ಪರ್ವತ ದತ್ತ ಸ್ವಲ್ಪ ವಿಶ್ರಾಂತಿಯನ್ನು ಪಡೆದುಕೊಳ್ಳಲು ಹೋಗುತ್ತಾಳೆ.

ಅಲ್ಲಿ ಯಾರಿಗೂ ಗುರುತು ಸಿಗದ ಹಾಗೆ ಕುದುರೆಯ ಅವತಾರವನ್ನು ತಾಳಿ ಹಿಮಾಲಯದ ತಪ್ಪಲಿನಲ್ಲಿ ಹೋಗುತ್ತಿರುವಾಗ ಸೂರ್ಯ ದೇವನು ಕುದುರೆಯ ರೂಪದಲ್ಲಿ ಇರುವ ಸಂಧ್ಯಾ ದೇವಿಯನ್ನು ಗುರುತಿಸಿ ತಾನು ಕೂಡ ಕುದುರೆಯ ರೂಪವನ್ನು ತೆಗೆದುಕೊಳ್ಳುತ್ತಾನೆ. ಅಶ್ವಗಳ ಅವತಾರದಲ್ಲಿ ಇವರಿಬ್ಬರ ನಡುವೆ ನಡೆದ ಮಿಲನದ ಸಂಕೇತವಾಗಿ ಜನಿಸಿದವರೇ ಅಶ್ವಿನಿ ದೇವತೆಗಳು. ಹಾಗಾಗಿ ಅವರಿಗೆ ಹುಟ್ಟಿದ ಮಕ್ಕಳಿಗೂ ಕುದುರೆಯ ಮುಖ ಇರುತ್ತದೆ. ಇನ್ನು ಕೆಲವು ಕಥೆಗಳಲ್ಲಿ ಅಶ್ವಿನಿ ದೇವತೆಗಳು ಸೂರ್ಯ ಮತ್ತು ಮೋಡದ ಪುತ್ರರು ಎಂದು ಹೇಳಲಾಗಿದೆ.

ಅಶ್ವಿನಿ ದೇವತೆಗಳ ಮಹತ್ವ:

ಅಶ್ವಿನಿ ದೇವತೆಗಳಿಗೆ ಹಿಂದೂ ಧರ್ಮದಲ್ಲಿ ಮಹತ್ತರ ಸ್ಥಾನವನ್ನು ನೀಡಲಾಗಿದೆ. ಮುಸ್ಸಂಜೆ ಸಮಯವನ್ನು ಅಂದರೆ ಸೂರ್ಯ ಮುಳುಗುವುದಕ್ಕಿಂತ ಮೊದಲು 24 ನಿಮಿಷಗಳನ್ನು ಅಶ್ವಿನಿ ದೇವತೆಗಳ ಸಮಯವೆಂದು ಹೇಳುತ್ತಾರೆ. ಈ ಸಮಯದಲ್ಲಿ ಅಶ್ವಿನಿ ದೇವತೆಗಳು ಚಿನ್ನದ ಕುದುರೆಯಲ್ಲಿ ಸಂಚಾರವನ್ನು ಮಾಡುತ್ತಾರೆ ಎನ್ನುವುದು ನಂಬಿಕೆ. ಈ ಸಮಯದಲ್ಲಿ ಅಪಶಕುನದಂತಹ ಮಾತುಗಳನ್ನು ಆಡಬಾರದು, ಸುಳ್ಳನ್ನು ಹೇಳಬಾರದು, ಇನ್ನೊಬ್ಬರ ಮನಸ್ಸಿಗೆ ನೋವಾಗುವಂತಹ ಪದಗಳನ್ನು ಬಳಸಬಾರದು, ಮಲಗಬಾರದು ಎಂದು ಹೇಳಲಾಗುತ್ತದೆ. ಅಶ್ವಿನಿ ದೇವತೆಗಳು ಅಸ್ತು, ಅಸ್ತು ಎಂದು ನುಡಿಯುತ್ತಿರುತ್ತಾರೆ. ನಾವು ಒಂದು ವೇಳೆ ಅಪಶಕುನ ಮಾತನಾಡಿದಾಗ ಅವರು ಅಸ್ತು ಎಂದರೆ ಅದು ಖಂಡಿತ ನಡೆಯುತ್ತದೆ ಎನ್ನುವ ಕಾರಣಕ್ಕಾಗಿ ಯಾವಾಗಲೂ ನಾವು ಒಳ್ಳೆಯದನ್ನೇ ಮಾತನಾಡಬೇಕು.

ಒಟ್ಟಾರೆಯಾಗಿ ಹೇಳುವುದಾದರೆ ಅಶ್ವಿನಿ ದೇವತೆಗಳು ನಾವು ಒಳ್ಳೆಯದನ್ನ ಮಾತನಾಡಿದರೆ ಒಳ್ಳೆಯದೇ ಬಯಸುತ್ತಾರೆ ಹಾಗೆಯೇ ಕೆಟ್ಟದ್ದನ್ನೇ ಮಾತನಾಡಿದರೇ ಕೆಟ್ಟದ್ದು ಬಯಸುತ್ತಾರೆ ಎನ್ನುವುದು ಜನರ ನಂಬಿಕೆ.

DAKSHINA KANNADA

ಚಲಿಸುತ್ತಿದ್ದಾಗ ಒಡೆದ ಬಸ್ಸಿನ ಗಾಜು; ಇಬ್ಬರು ಮಕ್ಕಳು, ಚಾಲಕನಿಗೆ ಗಾ*ಯ

Published

on

ವಿಟ್ಲ : ಚಲಿಸುತ್ತಿದ್ದ ಕೇರಳ ರಾಜ್ಯದ ಬಸ್ಸಿನ ಗಾಜು ಒಡೆದ ಪರಿಣಾಮ ಇಬ್ಬರು ಮಕ್ಕಳು ಮತ್ತು ಚಾಲಕ ಗಾಯಗೊಂಡ ಘಟನೆ ಉರಿಮಜಲು ಎಂಬಲ್ಲಿ ಸಂಭವಿಸಿದೆ. ಪುತ್ತೂರು ಕಡೆಯಿಂದ ವಿಟ್ಲ ಮೂಲಕ ಕಾಸರಗೋಡಿಗೆ ಹೊರಟಿದ್ದ ಕೇರಳ ರಾಜ್ಯದ ಮಲಬಾರ್ ಬಸ್ ಉರಿಮಜಲು ಸೊಸೈಟಿ ತಲುಪುತ್ತಿದ್ದಂತೆ ಅದರ ಮುಂಭಾಗ ಗಾಜು ಹೊಡೆದಿದೆ.

ಇದನ್ನೂ ಓದಿ : ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

ಇದರಿಂದ ಮುಂಭಾಗದಲ್ಲಿದ್ದ ಬಾಲಕ ಗಂಭೀರ ಗಾಯಗೊಂಡಿದ್ದು, ಚಾಲಕ ಮತ್ತು ಮತ್ತೊಂದು ಮಗು ಸಣ್ಣಪುಟ್ಟವಿಗೆ ಗಾಯಗಳಾಗಿವೆ. ಗಂಭೀರ ಗಾಯಗೊಂಡ ಬಾಲಕನನ್ನು ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಂಭೀರ ಗಾಯಗೊಂಡಿರುವ ಬಾಲಕ ಕೇರಳದ ಚೆರ್ಕಳ ನೆಲ್ಲಿಕಟ್ಟೆ ನಿವಾಸಿ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಿಸಿಲಿನ ತಾಪಕ್ಕೆ ಈ ಘಟನೆ ಸಂಭವಿಸಿದೆ ಎಂದು ಅಂದಾಜಿಸಲಾಗಿದೆ.

 

Continue Reading

DAKSHINA KANNADA

ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೇಟಾ..! ಕಾರು ಜಖಂ

Published

on

ವಿಟ್ಲ: ನಿಯಂತ್ರಣ ತಪ್ಪಿ ಕ್ರೇಟಾ ಕಾರೊಂದು ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಘಟನೆ ವಿಟ್ಲ ಪುತ್ತೂರು ರಸ್ತೆಯ ಚಂದಳಿಕೆ ಎಂಬಲ್ಲಿ ನಡೆದಿದೆ.

accident

accident

ಕಾರು ಪಲ್ಟಿಯಾದ ಪರಿಣಾಮ ಕಾರು ಸಂಪೂರ್ಣ ನುಜ್ಜು ಗುಜ್ಜಾಗಿದ್ದು ಪವಾಡ ಎಂಬಂತೆ ಎಲ್ಲಾ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ತಿಳಿದು ಬಂದಿದೆ.

ಮುಂದೆ ಓದಿ..; ಪ್ರಾಂಶುಪಾಲೆ, ಶಿಕ್ಷಕಿ ನಡುವೆ ಹೊಯ್‌ ಕೈ..!! ವೀಡಿಯೋ ವೈರಲ್

accident

Continue Reading

DAKSHINA KANNADA

ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ! ಇ ಮೇಲ್ ನಲ್ಲಿ ಏನಿದೆ?

Published

on

ಮಂಗಳೂರು : ಮಂಗಳೂರು ವಿಮಾನ ನಿಲ್ದಾಣಕ್ಕೆ ಬಾಂ*ಬ್ ಬೆದರಿಕೆ ಹಾಕಲಾಗಿದೆ. ಹೀಗಾಗಿ ಪ್ರಯಾಣಿಕರಲ್ಲಿ ಆತಂಕ ಸೃಷ್ಟಿಯಾಗಿದೆ. ಇತ್ತೀಚೆಗೆ ಬೆಂಗಳೂರಿನಲ್ಲಿ ನಡೆದ ರಾಮೇಶ್ವರಂ ಕೆಫೆ ಸ್ಫೋ*ಟ ಪ್ರಕರಣವೇ ಇನ್ನೂ ಜೀವಂತವಿದೆ. ಅಲ್ಲದೇ, ಶಾಲೆಗಳಿಗೂ ಬೆದರಿಕೆ ಕರೆ ಬಂದಿದ್ದವು. ಇದೀಗ ಮಂಗಳೂರು ವಿಮಾನ ನಿಲ್ದಾಣಕ್ಕೆ ಬೆದರಿಕೆ ಕರೆ ಬಂದಿದೆ.


ಇ ಮೇಲ್ ಮೂಲಕ ಬಂತು ಬೆದರಿಕೆ :

ಕಳೆದ ಎಪ್ರಿಲ್‌ 29 ರಂದು ದೇಶದ ವಿವಿಧ ವಿಮಾನ ನಿಲ್ದಾಣಗಳಿಗೆ ಬಾಂಬ್‌ ಬೆದರಿಕೆ ಸಂದೇಶಗಳು ಇ-ಮೇಲ್ ಮೂಲಕ ರವಾನೆಯಾಗಿದ್ದು, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೂ ಅದೇ ದಿನ ಬಾಂಬ್‌ ಬೆದರಿಕೆ ಸಂದೇಶ ಬಂದಿತ್ತು ಎಂದು ತಡವಾಗಿ ಬೆಳಕಿಗೆ ಬಂದಿದೆ.
ಎಪ್ರಿಲ್‌ 29 ರಂದು ಬೆಳಗ್ಗೆ 9.37 ಕ್ಕೆ ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇ – ಮೇಲ್ ಐಡಿ ಗೆ ಅಪರಿಚಿತ ವ್ಯಕ್ತಿಯೊಬ್ಬ ತನ್ನ ಇ – ಮೇಲ್‌ ನಿಂದ ‘ವಿಮಾನ ನಿಲ್ದಾಣದಲ್ಲಿ ಮತ್ತು ವಿಮಾನದ ಒಳಗಡೆ ಸ್ಫೋಟಕಗಳನ್ನು ಇರಿಸಿದ್ದು, ಈ ಸ್ಫೋಟಕಗಳನ್ನು ಸ್ಫೋಟಿಸಿ ಜೀವ ಹಾನಿ ಮಾಡುವುದಾಗಿ’ ಬೆದರಿಕೆ ಸಂದೇಶ ಕಳುಹಿಸಿದ್ದನು.

ಇದನ್ನೂ ಓದಿ : ಉಪ್ಪಿನಂಗಡಿ : ಹೃದಯಾ*ಘಾತದಿಂದ ಮಲಗಿದ್ದಲ್ಲೇ ಇಹಲೋಕ ತ್ಯಜಿಸಿದ ಯುವಕ

ಈ ಬಗ್ಗೆ ವಿಮಾನ ನಿಲ್ದಾಣದ ಮುಖ್ಯ ಭದ್ರತಾ ಅಧಿಕಾರಿ ಮೋನಿಶ ಕೆ.ಜಿ. ಅವರು ನೀಡಿದ ದೂರಿನ ಆಧಾರದಲ್ಲಿ ಬಜಪೆ ಪೊಲೀಸ್‌ ಠಾಣೆಯಲ್ಲಿ ಐಪಿಸಿ 507 ಕಲಂ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ ಎಂದು ಪೊಲೀಸ್‌ ಕಮಿಷನರ್‌ ಅನುಪಮ್‌ ಅಗರ್ವಾಲ್‌ ತಿಳಿಸಿದ್ದಾರೆ.
ಈ ಕುರಿತು ತನಿಖೆ ನಡೆಸಿದಾಗ ಅಪರಿಚಿತ ವ್ಯಕ್ತಿಯು ಇದೇ ರೀತಿ ಮಂಗಳೂರು ವಿಮಾನ ನಿಲ್ದಾಣ ಸೇರಿದಂತೆ ದೇಶದ 25 ಕ್ಕೂ ಹೆಚ್ಚು ವಿಮಾನ ನಿಲ್ದಾಣಗಳಿಗೆ ಬೆದರಿಕೆ ಸಂದೇಶಗಳನ್ನು ಕಳುಹಿಸಿರುವುದು ಕಂಡು ಬಂದಿದೆ. ಆರೋಪಿಯ ಪತ್ತೆಗಾಗಿ ಬಜಪೆ ಪೊಲೀಸರು ತನಿಖೆಯನ್ನು ಮುಂದುವರಿಸಿದ್ದಾರೆ ಎಂದು ಪೊಲೀಸ್‌ ಕಮಿಷನರ್‌ ವಿವರಿಸಿದ್ದಾರೆ.

ಇ ಮೇಲ್ ನಲ್ಲಿ ಏನಿದೆ ?

ಇ ಮೇಲ್ ನಲ್ಲಿ, ‘ಮಂಗಳೂರು ವಿಮಾನ ನಿಲ್ದಾಣದ ಆವರಣದಲ್ಲಿ ಸ್ಪೋಟಕಗಳನ್ನು ಇಡಲಾಗಿದೆ. ಮೂರು ವಿಮಾನದಲ್ಲಿಯೂ ಬಾಂಬ್ ಇಡಲಾಗಿದೆ. ಕೆಲವೇ ಗಂಟೆಗಳಲ್ಲಿ ದೊಡ್ಡಮಟ್ಟದ ರಕ್ತಪಾತ ನಡೆಯಲಿದೆ. ಈ ಕೃತ್ಯದ ಹಿಂದೆ ಟೆರರೈಸರ್ಸ್ 111 ಕೈವಾಡವಿದೆ’ ಎಂದು ಸಂದೇಶದಲ್ಲಿ ಬರೆಯಲಾಗಿದೆ.

Continue Reading

LATEST NEWS

Trending