ಚಿತ್ರದುರ್ಗ: ಜಿಲ್ಲೆಯ ಚಳ್ಳಕೆರೆ ತಾಲೂಕಿನ ನಾಯಕನಹಟ್ಟಿ ಪೊಲೀಸ್ ಠಾಣೆಯ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸ್ಥಳಕ್ಕೆ ಪೊಲೀಸರು ಧಾವಿಸಿದ್ದು ಪರಿಶೀಲನೆ ನಡೆಸುತ್ತಿದ್ದಾರೆ.
ಮೃತಪಟ್ಟವರನ್ನು ಎಎಸ್‌ಐ ಗುರುಮೂರ್ತಿ (50) ಎಂದು ಗುರುತಿಸಲಾಗಿದೆ. ಇಂದು ಗುರುಮೂರ್ತಿ ಅವರ ಶವ ದಂಡಿನಕುರುಬರಹಟ್ಟಿ ಗ್ರಾಮದ ಬಳಿ ಮರದಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.
ಗುರುಮೂರ್ತಿ ನಾಯಕನಹಟ್ಟಿ ಪೊಲೀಸ್ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಹಿಂದೆ ಹಿರಿಯೂರು ತಾಲ್ಲೂಕಿನ ಐಮಂಗಲದಲ್ಲಿ ಐಓ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಇತ್ತೀಚಿಗೆ ಎಎಸ್‌ಐ ಆಗಿ ಬಡ್ತಿ ಪಡೆದಿದ್ದರು.
ಶನಿವಾರ ಚಿತ್ರದುರ್ಗದ ಹಿಂದೂ ಮಹಾಗಣಪತಿ ವಿಸರ್ಜನೆ ಬಂದೋಬಸ್ತ್‌ಗೆ ಅವರೇ ಮನವಿ ಮಾಡಿ ನಿಯೋಜನೆಗೊಂಡಿದ್ದರು.
ಆದರೆ ಕರ್ತವ್ಯಕ್ಕೆ ಹಾಜರಾಗಿರಲಿಲ್ಲ ಎಂಬ ಮಾಹಿತಿ ಇದೆ.
ಮಹಿಳೆಯ ಜೊತೆ ಅಕ್ರಮ ಸಂಬಂಧದ ವಿಚಾರದ ಪತ್ನಿಯ ಜೊತೆ ಶನಿವಾರ ಮನೆಯಲ್ಲಿ ಜಗಳವಾಡಿದ್ದರು.
ಬಳಿಕ ತೀವ್ರವಾಗಿ ಬೇಸರಗೊಂಡಿದ್ದರು ಎಂಬ ಮಾಹಿತಿ ಸಿಕ್ಕಿದೆ. ಬಳಿಕ ಕರ್ತವ್ಯಕ್ಕೂ ಹಾಜರಾಗಿರಲಿಲ್ಲ. ಚಿತ್ರದುರ್ಗ ತಾಲ್ಲೂಕಿನ ದಂಡಿನ ಕುರುಬರಹಟ್ಟಿ ಗ್ರಾಮದ ಬಳಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಆತ್ಮಹತ್ಯೆ ಮಾಡಿಕೊಂಡ ಸ್ಥಳದಲ್ಲಿ ಬೈಕ್ ಸಹ ಪತ್ತೆಯಾಗಿದೆ. ಚಿತ್ರದುರ್ಗ ಎಸ್ಪಿ ರಾಧಿಕಾ ಗುರುಮೂರ್ತಿ ಅವರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ತಿಳಿಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಪೋಲಿಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.