Thursday, September 29, 2022

ಉದ್ದೀಪನ ಮದ್ದು ಸ್ವೀಕಾರ : ಅಥ್ಲೀಟ್ ಪೂವಮ್ಮಗೆ ಎರಡು ವರ್ಷ ನಿಷೇಧ

ನವದೆಹಲಿ: ಕರ್ನಾಟಕದ ಅಥ್ಲೀಟ್‌ ಮಂಗಳೂರು ಮೂಲದ ಎಂ.ಆರ್. ಪೂವಮ್ಮ ಅವರಿಗೆ ಆ್ಯಂಟಿ ಡೋಪಿಂಗ್ ಅಪೀಲ್ ಪ್ಯಾನಲ್‌ ಎರಡು ವರ್ಷಗಳ ನಿಷೇಧ ಶಿಕ್ಷೆ ವಿಧಿಸಿದೆ.


32 ವರ್ಷದ ಪೂವಮ್ಮ ಅವರು ಕಳೆದ ವರ್ಷ ಫೆಬ್ರುವರಿಯಲ್ಲಿ ಪಟಿಯಾಲದಲ್ಲಿ ನಡೆದಿದ್ದ ಇಂಡಿಯನ್ ಗ್ರ್ಯಾನ್‌ಪ್ರಿ ಕೂಟದಲ್ಲಿ ಭಾಗವಹಿಸಿದ್ದಾಗ ಅದರಲ್ಲಿ ಅವರು ಪರೀಕ್ಷೆಗೆ ನೀಡಿದ್ದ ಮಾದರಿಯಲ್ಲಿ ನಿಷೇಧಿತ ಮೆಥೈಲ್‌ಹೆಕ್ಸಾನೀಮೈನ್ ಮದ್ದಿನ ಅಂಶ ಇರುವುದು ಪತ್ತೆಯಾಗಿತ್ತು.

ಈ ಹಿನ್ನೆಲೆಯಲ್ಲಿ ಈ ವರ್ಷದ ಜೂನ್‌ನಲ್ಲಿ ಅವರಿಗೆ ಎಡಿಡಿಪಿ ಮೂರು ತಿಂಗಳ ನಿಷೇಧ ಶಿಕ್ಷೆ ವಿಧಿಸಿತ್ತು.
ಆದರೆ ಈ ಆದೇಶವನ್ನು ಪ್ರಶ್ನಿಸಿ ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ (ನಾಡಾ) ಮೇಲ್ಮನವಿ ಸಲ್ಲಿಸಿತ್ತು. ಈ ಮನವಿಯನ್ನು ಪುರಸ್ಕರಿಸಿರುವ ಎಡಿಎಪಿ ಶಿಕ್ಷೆಯನ್ನು ಎರಡು ವರ್ಷಕ್ಕೆ ವಿಸ್ತರಿಸಿದೆ.

‘ಪೂವಮ್ಮ ಅವರಿಂದ ಪರೀಕ್ಷೆಗಾಗಿ 2021ರ ಫೆಬ್ರುವರಿ 18ರಂದು ಮಾದರಿ ಸಂಗ್ರಹಿಸಲಾಗಿತ್ತು.
ಅಂದಿನಿಂದ ಅವರು ಸ್ಪರ್ಧಿಸಿದ್ದ ಎಲ್ಲ ಫಲಿತಾಂಶಗಳನ್ನು ಅಮಾನ್ಯಗೊಳಿಸಲಾಗುತ್ತದೆ. ಗೆದ್ದ ಪದಕಗಳನ್ನೂ ಮುಟ್ಟುಗೋಲು ಹಾಕಿಕೊಳ್ಳಲಾಗುವುದು ಎಂದು ಎಡಿಎಪಿ ಮುಖ್ಯಸ್ಥ ಅಭಿನವ್ ಮುಖರ್ಜಿ ಇದೇ 16ರಂದು ನೀಡಿದ ಆದೇಶದಲ್ಲಿ ತಿಳಿಸಿದ್ದಾರೆ.

2018ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 4X400 ಮೀ ರಿಲೆಯಲ್ಲಿ ಚಿನ್ನ ಗೆದ್ದ ಭಾರತ ತಂಡದಲ್ಲಿ ಪೂವಮ್ಮ ಇದ್ದರು. 2012ರ ಏಷ್ಯನ್ ಗೇಮ್ಸ್‌ನಲ್ಲಿ ಮಹಿಳೆಯರ 400 ಮೀಟರ್ಸ್ ಓಟದಲ್ಲಿ ಅವರು ಕಂಚಿನ ಪದಕ ಗಳಿಸಿದ್ದರು.

LEAVE A REPLY

Please enter your comment!
Please enter your name here

Hot Topics

5 ವರ್ಷ PFI ಬ್ಯಾನ್ : ಮಂಗಳೂರಿನ ಕಚೇರಿಗಳಿಗೆ ಬೀಗ ಜಡಿದು ಸೀಲ್ ಡೌನ್ ಮಾಡಿದ ಪೊಲೀಸರು..!

ಮಂಗಳೂರು : ಪಿಎಫ್‌ಐ ಮತ್ತು ಅದರ ಅಂಗ ಸಂಘಟನೆಗಳನ್ನು 5 ವರ್ಷ ಕೇಂದ್ರ ಸರ್ಕಾರ ನಿಷೇಧ ಹೇರಿದೆ. ಈ ಹಿನ್ನೆಲೆಯಲ್ಲಿ ದೇಶಾದ್ಯಂತ ಕೇಂದ್ರ ಸರ್ಕಾರದ ನಿರ್ದೇಶನದ ಮೇಲೆ ಪಿಎಫ್‌ಐ ಕಚೇರಿಗಳನ್ನು ಸೀಲ್ ಡೌನ್...

PFIನ್ನು ಕರ್ನಾಟಕದಲ್ಲಿ ಪೋಷಿಸಿದ್ದು ಕಾಂಗ್ರೆಸ್‌-ಸಚಿವ ಸುನಿಲ್ ವಾಗ್ದಾಳಿ

ಉಡುಪಿ: 'ಪಿಎಫ್‌ಐ ಸಂಘಟನೆಯ ಕಾರ್ಯಕರ್ತರನ್ನು ಕಾಂಗ್ರೆಸ್ ಪೋಷಿಸಿದ್ದೆ ಪಿಎಫ್ ಐ ಇಷ್ಟು ದೊಡ್ಡ ಪ್ರ‌ಮಾಣದಲ್ಲಿ ಕರ್ನಾಟಕದಲ್ಲಿ ಬೆಳೆಯಲು ಕಾರಣವಾಗಿತ್ತು. 175 ಜನರ ಮೇಲೆ ಇದ್ದ ಕೇಸ್ ಅನ್ನು ಸಿದ್ದರಾಮಯ್ಯ ಕಾಲದಲ್ಲಿ ವಾಪಾಸ್ ಪಡೆದಿತ್ತು....

ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಎಂದಿಗೂ ಅವಕಾಶವಿಲ್ಲ-CM ಬೊಮ್ಮಾಯಿ

ಬೆಂಗಳೂರು: ವಿಧ್ವಂಸಕ ಕೃತ್ಯಗಳಿಗೆ ಈ ದೇಶದಲ್ಲಿ ಅವಕಾಶವಿಲ್ಲ. ಅದೂ ನರೇಂದ್ರ ಮೋದಿಯವರು ಹಾಗೂ ಅಮಿತ್ ಶಾ ಅವರ ನಾಯಕತ್ವದಲ್ಲಿ ಇಂಥವುಗಳಿಗೆ ಎಡೆಯಿಲ್ಲ ಎಂಬ ನಿರ್ಣಯ ಸ್ಪಷ್ಟವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.ಅವರು...