Connect with us

BELTHANGADY

ನಕ್ಸಲರಿಗೆ ನೆರವಾದ ಪ್ರಕರಣ: ವಿಚಾರಣೆಗೆ ಮತ್ತೆ ಗೈರುಹಾಜರಾದ ಪೊಲೀಸರು

Published

on

ಮಂಗಳೂರು: ಮಂಗಳೂರು ವಿ.ವಿ ಪತ್ರಿಕೋದ್ಯಮ ವಿದ್ಯಾರ್ಥಿ ವಿಠಲ ಮಲೆಕುಡಿಯ ವಿರುದ್ಧ ನಕ್ಸಲರಿಗೆ ನೆರವಾದ ಆರೋಪ ಹೊರಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಂಗಳವಾರ ವಿಚಾರಣೆಗೆ ಹಾಜರಾಗಬೇಕಿದ್ದ ಪೊಲೀಸ್‌ ಅಧಿಕಾರಿಗಳು ವಿಚಾರಣೆಗೆ ಮತ್ತೆ ಗೈರುಹಾಜರಾಗಿದ್ದು, ವಿಚಾರಣೆ ಜು.27ಕ್ಕೆ ಮುಂದೂಡಿದೆ.


ಪ್ರಕರಣ ನಡೆದ ಸಮಯದಲ್ಲಿ ಪುತ್ತೂರು ಎಎಸ್ಪಿ ಎಂ.ಎನ್. ಅನುಚೇತನ್ ಮತ್ತು ಅಂದಿನ ಬೆಳ್ತಂಗಡಿ ಸರ್ಕಲ್ ಇನ್‌ಸ್ಪೆಕ್ಟರ್ ಭಾಸ್ಕರ ರೈ ಸಹಿತ ಮೂವರು ಮತ್ತೆ ಗೈರು ಹಾಜರಾಗಿದ್ದಾರೆ. ಹಾಗಾಗಿ ನ್ಯಾಯಾಧೀಶರು ಮುಂದಿನ ವಿಚಾರಣೆಯನ್ನು ಜು.27ಕ್ಕೆ ಮುಂದೂಡಿದ್ದಾರೆ.
2021ರ ಮಾ.1ರಂದು ಬೆಳ್ತಂಗಡಿ ಎಸ್ಸೈ ಆಗಿದ್ದ ಉಮೇಶ್ ಉಪ್ಪಳಿಗೆ ಮೂರನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ವಿಚಾರಣೆ ಎದುರಿಸಿದ್ದರು. ಆದರೆ ಅನುಚೇತನ್ ಮತ್ತು ಭಾಸ್ಕರ ರೈ ಗೈರು ಹಾಜರಾದ ಕಾರಣ ಮಾ.23ಕ್ಕೆ ವಿಚಾರಣೆಗೆ ಹಾಜರಾಗಲು ಸೂಚಿಸಲಾಗಿತ್ತು.

ಆವತ್ತೂ ಈ ಅಧಿಕಾರಿಗಳು ಗೈರಾಗಿದ್ದರು. ಬಳಿಕ ಎ.12ರಂದು ಹಾಜರಾಗಲು ನ್ಯಾಯಾಲಯ ಸೂಚಿಸಿತ್ತು. ಆವಾಗಲೂ ಅಧಿಕಾರಿಗಳು ಗೈರಾಗಿದ್ದರು. ಬಳಿಕ ಮೇ 5ಕ್ಕೆ ಹಾಜರಾಗಲು ಸೂಚಿಸಲಾಗಿತ್ತು. ಆದರೆ ಕೋವಿಡ್-19 ಹಿನ್ನಲೆಯಲ್ಲಿ ಲಾಕ್‌ಡೌನ್ ಹೇರಿದ ಕಾರಣ ನ್ಯಾಯಾಲಯದ ಕಲಾಪ ನಡೆದಿರಲಿಲ್ಲ. ಹಾಗೇ ಮಂಗಳವಾರ (ಜು.6) ವಿಚಾರಣೆಗೆ ಹಾಜರಾಗಲು ತಿಳಿಸಲಾಗಿತ್ತು. ಆದರೆ ಮಂಗಳವಾರವೂ ಯಾರೂ ಹಾಜರಾಗದ ಕಾರಣ ವಿಚಾರಣೆಯನ್ನು ಮತ್ತೆ ಮುಂದೂಡಲಾಗಿದೆ.
ವಿಠಲ ಮಲೆಕುಡಿಯ ನಕ್ಸಲರಿಗೆ ನೆರವಾಗಿದ್ದಾರೆ ಎಂದು ಆರೋಪ ಹೊರಿಸಿ 2012ರ ಮಾರ್ಚ್ 3ರಂದು ಪ್ರಕರಣ ದಾಖಲಿಸಲಾಗಿತ್ತು. ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ 45 ಸಾಕ್ಷಿಗಳ ವಿಚಾರಣೆ ನಡೆದಿದೆ ಎಂದು ನ್ಯಾಯವಾದಿ ದಿನೇಶ್ ಉಳೇಪ್ಪಾಡಿ ತಿಳಿಸಿದ್ದಾರೆ.

Click to comment

Leave a Reply

Your email address will not be published. Required fields are marked *

BELTHANGADY

ಚಾರ್ಮಾಡಿ ಘಾಟ್ ನಲ್ಲಿ ಒಂಟಿ ಸಲಗ ಪ್ರತ್ಯಕ್ಷ..!

Published

on

ಬೆಳ್ತಂಗಡಿ: ಚಾರ್ಮಾಡಿ ಬಣಕಲ್‌ ಘಾಟಿಯ 3ನೇ ತಿರುವಿನಲ್ಲಿ ಒಂಟಿ ಸಲಗವೊಂದು ರವಿವಾರ ಸಂಜೆ ವಾಹನ ಸವಾರರಿಗೆ ಪ್ರತ್ಯಕ್ಷವಾಗಿದ್ದರಿಂದ ಸವಾರರು ಭಯಭೀತರಾದ ಘಟನೆ ನಡೆದಿದೆ.

ಘಾಟಿಯ 3ನೇ ತಿರುವಿನಲ್ಲಿ ಸಂಜೆ ಒಂಟಿ ಸಲಗವೊಂದು ರಸ್ತೆಗೆ ದಾಟಲು ಮುಂದಾಗಿದೆ. ಇದರಿಂದ ಘಾಟ್‌ ರಸ್ತೆಯಲ್ಲಿ ವಾಹನಗಳು ಸರತಿ ಸಾಲುಗಟ್ಟಿ ನಿಂತಿದ್ದವು. ಒಂಟಿ ಸಲಗವು ಒಂದು ಗಂಟೆಗೂ ಅಧಿಕ ಕಾಲ ರಸ್ತೆಯಲ್ಲೇ ಇದ್ದು ಅನಂತರ ತಿರುವಿನಲ್ಲಿ ಅರಣ್ಯಕ್ಕೆ ಸಾಗಿದ್ದು ವಾಹನ ಸವಾರರು ಕಾಡಾನೆಯ ವೀಡಿಯೋವನ್ನು ಮೊಬೈಲ್‌ನಲ್ಲಿ ಚಿತ್ರೀಕರಿಸಿದ್ದಾರೆ. ಆದರೆ ವಾಹನ ಸವಾರರಿಗೆ ಯಾವುದೇ ತೊಂದರೆ ಉಂಟು ಮಾಡಿಲ್ಲ. ಪ್ರತಿ ಬಾರಿ ಚಾರ್ಮಾಡಿ ರಸ್ತೆಯಲ್ಲಿ ಈ ಆನೆ ಆಗಾಗ ಕಂಡುಬರುತ್ತಿರುವುದರಿಂದ ವಾಹನ ಸವಾರರು, ದ್ವಿಚಕ್ರ ಸವಾರರು ಒಂಟಿ ಸಲಗದ ಭೀತಿಯಲ್ಲೇ ಸಾಗಬೇಕಿದೆ. ತಿರುವು ರಸ್ತೆಯಲ್ಲಿ ವಾಹನ ಸವಾರರು ಸಾಗುವುದೇ ಅಪಾಯಕರವಾಗಿದ್ದು, ಈ ಮಧ್ಯೆ ಕಾಡಾನೆಗಳು ಎದುರಾದರೆ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಮುನ್ನೆಚ್ಚರಿಕೆಯಾಗಿ ಅರಣ್ಯ ಇಲಾಖೆ ಹಾಗೂ ರಾಷ್ಟ್ರೀಯ ಹೆದ್ದಾರಿ ಇಲಾಖೆಯಿಂದ ಘಾಟ್‌ ರಸ್ತೆ ಇಕ್ಕೆಲಗಳಲ್ಲಿ ತಡೆಬೇಲಿ ರಚಿಸಿದರೆ ಮುಂದೆ ಸಂಭವನೀಯ ಜೀವ ಹಾನಿ ತಪ್ಪಿಸಬಹುದಾಗಿದೆ ಎಂದು ಸಾರ್ವಜನಿಕರು ಒತ್ತಾಯಿಸಿದ್ದಾರೆ. ಕಳೆದ ನ.27ರಂದು ನೆರಿಯದಲ್ಲಿ ಒಂಟಿಸಲಗವೊಂದು ಕಾರಿನ ಮೇಲೆ ದಾಳಿ ಮಾಡಿ ಮೂವರಿಗೆ ಗಾಯಗೊಳಿಸಿತ್ತು. ಇದಾದ ಬೆನ್ನಲ್ಲೆ ನ.29ರಂದು ಒಂಟಿ ಸಲಗ ಶಿಶಿಲ ಪೇಟೆಯಲ್ಲಿ ಶಿರಾಡಿ ಕಡೆ ಸಂಚರಿಸುತ್ತಿರುವಾಗ ವಾಹನ ಸವಾರರಿಗೆ ಎದುರಾಗಿತ್ತು. ಇದೀಗ ವಾರಗಳ ಅಂತರದಲ್ಲಿ ಮೂರನೇ ಬಾರಿ ಒಂಟಿ ಸಲಗ ಪ್ರತ್ಯೇಕ ಮೂರು ಕಡೆಗಳಲ್ಲಿ ಕಾಣಸಿಕ್ಕಿ ಸವಾರರನ್ನು ಭಯದಲ್ಲಿ ಸಂಚರಿಸುವಂತೆ ಮಾಡಿದೆ.

Continue Reading

BELTHANGADY

Belthangady: ರಸ್ತೆ ಪಕ್ಕದ ಗೂಡಂಗಡಿಯನ್ನು ಧ್ವಂಸಗೊಳಿಸಿದ ಕಿಡಿಗೇಡಿಗಳು..!

Published

on

ಬೆಳ್ತಂಗಡಿ: ಬೆಳ್ತಂಗಡಿ ನಿಡ್ಲೆ ಗ್ರಾಮದ ಬೂಡುಜಾಲು ಎಂಬಲ್ಲಿ ರಸ್ತೆ ಬದಿಯಲ್ಲಿದ್ದ ಗೂಡಂಗಡಿಯನ್ನು ಕಿಡಿಗೇಡಿಗಳು ರಾತ್ರಿಯ ವೇಳೆ ಧ್ವಂಸಗೊಳಿಸಿದ ಘಟನೆ ಸಂಭವಿಸಿದ್ದು, ಈ ಬಗ್ಗೆ ಧರ್ಮಸ್ಥಳ ಪೊಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

ಕೊಕ್ಕಡ ಗ್ರಾಮದ ಮಲ್ಲಿಗೆಮಜಲು ನಿವಾಸಿ ಅಬ್ದುಲ್ ಅಝೀಝ್ ಎಂಬವರು ತಮ್ಮ ಜೀವನೋಪಾಯಕ್ಕಾಗಿ ರಾಜ್ಯ ಹೆದ್ದಾರಿಯ ಬದಿಯಲ್ಲಿ ಗೂಡಂಗಡಿಯನ್ನು ಹಾಕಿ ವ್ಯಾಪಾರ ನಡೆಸುತ್ತಿದ್ದರು.

ಕಳೆದ ಮೂರು ವರ್ಷಗಳಿಂದ ಈ ಗೂಡಂಗಡಿ ಕಾರ್ಯ‌ ನಿರ್ವಹಿಸುತ್ತಿತ್ತು. ರಸ್ತೆ ಸಂಚಾರಕ್ಕೆ ಯಾವುದೇ ಅಡಚಣೆಯಾಗದಂತೆ ಗೂಡಂಗಡಿಯನ್ನು ನಿರ್ಮಿಸಲಾಗಿತ್ತು. ಎಂದಿನಂತೆ ಶುಕ್ರವಾರ ರಾತ್ರಿಯ ವೇಳೆ ಅಂಗಡಿಯನ್ನು ಮುಚ್ಚಿ ಹೋಗಿದ್ದ ಅಬ್ದುಲ್ ಅಝೀಝ್ ಶನಿವಾರ ಬೆಳಗ್ಗೆ ಬಂದು ನೋಡಿದಾಗ ಅಂಗಡಿಯನ್ನು ಧ್ವಂಸಗೊಳಿಸಿರುವುದು ಕಂಡು ಬಂದಿದೆ. ಅಂಗಡಿಯಲ್ಲಿದ್ದ ವಸ್ತುಗಳೆಲ್ಲವನ್ನು ಹೊರಗೆಳೆದು ನಾಶಗೊಳಿಸಲಾಗಿದೆ. ತಂಪು ಪಾನೀಯಗಳ ಬಾಟ್ಲಿಗಳನ್ನು ಒಡೆದು ಹಾಕಲಾಗಿದೆ. ಅಂಗಡಿಯನ್ನು ಬಹುತೇಕ ಧ್ವಂಸಗೊಳಿಸಲಾಗಿದೆ. ಈ ಬಗ್ಗೆ ಧರ್ಮಸ್ಥಳ ಪೊಲೀಸರಿಗೆ ದೂರು ನೀಡಲಾಗಿದೆ.

Continue Reading

BELTHANGADY

Belthangady: ಕಾರಿನ ಮೇಲೆ ಕಾಡಾನೆ ದಾಳಿ- 6 ಮಂದಿಗೆ ಗಾಯ..!

Published

on

ಬೆಳ್ತಂಗಡಿ: ಕಾರಿನ ಮೇಲೆ ಕಾಡಾನೆ ದಾಳಿ ನಡೆಸಿ ಪ್ರಯಾಣಿಕರಿಗೆ ಗಾಯವಾಗಿರುವ ಘಟನೆ ದ.ಕ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ನೆರಿಯಾ ಎಂಬಲ್ಲಿ ನಡೆದಿದ್ದು, ಅಲ್ಟೋ ಕಾರಿನ ಮೇಲೆ ಏಕಾಏಕಿ ದಾಳಿ ನಡೆಸಿದ ಪರಿಣಾಮ ಆರು ಮಂದಿಗೆ ಗಾಯವಾಗಿದೆ.

ಈ ಘಟನೆ ನೆರಿಯಾದ ಪೋಸ್ಟ್ ಆಫೀಸ್ ಬಳಿ ನಡೆದಿದೆ. ನೆರಿಯಾ ಗ್ರಾಮ ಕಾಡಿನ ಅಂಚಿನಲ್ಲಿರೋ ಕಾರಣ ಕಾಡಾನೆ ಆತಂಕ ಹೆಚ್ಚಾಗಿದೆ. ಕಾಡಾನೆ ದಾಳಿಯಿಂದ ಕಾರಿಗೆ ಹಾನಿಯಾಗಿದ್ದು, ಗಾಯಗೊಂಡವರಿಗೆ ಬೆಳ್ತಂಗಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

Continue Reading

LATEST NEWS

Trending