ಬಂಟ್ವಾಳ : ವಿಟ್ಲ ಜಾತ್ರೋತ್ಸವದಲ್ಲಿ ವ್ಯಾಪಾರಿಗಳ ಮೇಲೆ ಹಲ್ಲೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಲೆಮರೆಸಿಕೊಂಡಿದ್ದ ಮತ್ತೋರ್ವ ಆರೋಪಿಯನ್ನು ವಿಟ್ಲ ಪೊಲೀಸರು ಬಂಧಿಸಿದ್ದಾರೆ.
ವ್ಯಾಪಾರಿಗಳ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಗಣೇಶ್ ಕಡಂಬು, ಮಂಜುನಾಥ ಮತ್ತು ಇತರ ನಾಲ್ಕು ಯುವಕರ ಮೇಲೆ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಕೈಗೆತ್ತಿಕೊಂಡಿದ್ದ ಪೊಲೀಸರು ಪ್ರಮುಖ ಆರೋಪಿ ಗಣೇಶ್ ಕಡಂಬುನನ್ನು ಈಗಾಗಲೇ ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಇನ್ಸ್ ಪೆಕ್ಟರ್ ಹೆಚ್.ಇ ನಾಗರಾಜ್ ಇವರ ನೇತೃತ್ವದಲ್ಲಿ ಸಬ್ ಇನ್ಸ್‍ಪೆಕ್ಟರ್ ಸಂದೀಪ್ ಕುಮಾರ್ ಶೆಟ್ಟಿ ತಂಡ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದರು.
ಇದೀಗ ಮೂರನೇ ಆರೋಪಿ ಹರ್ಷಿತ್ ಎಂಬವನನ್ನು ಮಂಗಳೂರಿನಲ್ಲಿ ಬಂಧಿಸುವಲ್ಲಿ ವಿಟ್ಲ ಪೊಲೀಸರು ಯಶಸ್ವಿಯಾಗಿದ್ದಾರೆ.
ಶ್ರೀ ಪಂಚಲಿಂಗೇಶ್ವರ ದೇವಸ್ಥಾನದ ಜಾತ್ರೆಯ ಸಂದರ್ಭ ಫ್ಯಾನ್ಸಿ ಮಳಿಗೆ ಇಟ್ಟು ವ್ಯಾಪಾರ ಮಾಡಿಕೊಂಡಿದ್ದ ಸುರೇಶ್ ದಾಸ್ ಎಂಬವರಿಗೆ ಆರು ಮಂದಿ ಆರೋಪಿಗಳು ಹಲ್ಲೆ ನಡೆಸಿದ್ದರು.