Thursday, April 22, 2021

ವಿಟ್ಲದಲ್ಲಿ ವಿಜಯೋತ್ಸವ ಮೆರವಣಿಗೆ – ಆಟೋ ಚಾಲಕನ ಮೇಲೆ ಹಲ್ಲೆ..!

ವಿಟ್ಲದಲ್ಲಿ ವಿಜಯೋತ್ಸವ ಮೆರವಣಿಗೆ – ಆಟೋ ಚಾಲಕನ ಮೇಲೆ ಹಲ್ಲೆ..!

ಬಂಟ್ವಾಳ: ಪಕ್ಷವೊಂದರ ಬೆಂಬಲಿಗರ ವಿಜಯೋತ್ಸವ ಮೆರವಣಿಗೆ ವೇಳೆ ಅಟೋ ಚಾಲಕ ಮೇಲೆ ಹಲ್ಲೆ ನಡೆಸಲಾಗಿದೆ.

ಮೆರವಣಿಗೆ ವೇಳೆ ಅಡ್ಡ ಬಂದ ಎಂದು ಬೆಂಬಲಿಗರು ಆಟೋ ಚಾಲಕನ ಮೇಲೆ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಈ ಸಂಬಂಧ ವಿಟ್ಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ವಿಟ್ಲ ಗಡಿ ಭಾಗವಾದ ಕನ್ಯಾನ ಗ್ರಾಮದಲ್ಲಿ ಈ ಘಟನೆ ನಡೆದಿದೆ.

ಪೊಯ್ಯಗದ್ದೆ ನಿವಾಸಿ ಕರೀಂ ಅವರ ಪುತ್ರ ಸಾದಿಕ್ ಹಲ್ಲೆಗೊಳಗಾಗಿದ್ದು, ತುಂಬೆ ಖಾಸಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.

ಘಟನೆ ಸಂಬಂಧ ಉಮ್ಮರ್, ಭಾತಿಷ್, ಆರಿಸ್ ಕುಕ್ಕಾಜೆ, ಮಜೀದ್, ಕೆಪಿ ಅಬ್ದುಲ್ ರೆಹಮಾನ್, ಸಾಬಿತ್, ಇಸ್ಮಾಲಿ ಕುಕ್ಕಾಜೆ, ಆಸೀಫ್, ವಾಜಿಪಾಯಿ ನಾಸೀರ್ ವಿರುದ್ಧ ಪ್ರಕರಣ ದಾಖಲಾಗಿದೆ.

ಕನ್ಯಾನ ಗ್ರಾಮ ಪಂಚಾಯತ್ ಚುನಾವಣೆಯಲ್ಲಿ ಜಯ ಗಳಿಸಿದ ಅಭ್ಯರ್ಥಿಗಳು ತಮ್ಮ ಬೆಂಬಲಿಗರ ಜೊತೆ ಮೆರವಣಿಗೆ ತೆರಳುತ್ತಿದ್ದಾಗ ವಿರುದ್ಧ ದಿಕ್ಕಿನಿಂದ ಆಟೋದಲ್ಲಿ ಬಂದ ಸಾದಿಕ್​ನನ್ನು ತಡೆದು ದೊಣ್ಣೆಯಿಂದ ಹಲ್ಲೆ ನಡೆಸಿದ್ದಾಗಿ ದೂರಿನಲ್ಲಿ ಆರೋಪಿಸಲಾಗಿದೆ.

Hot Topics

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..!

ಕಾಪುವಿನಲ್ಲಿ ಕಾರು ಅಪಘಾತ ಗಂಭೀರವಾಗಿ ಗಾಯಗೊಂಡಿದ್ದ ಯುವತಿ ಸಾವು..! ಉಡುಪಿ : ಉಡುಪಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾರಿ ಮಳೆಯ ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಚಾಲಕನ ನಿಯಂತ್ರಣ ತಪ್ಪಿದ ಕಾರೊಂದು ಕಾಪು ಬಳಿ...

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..!

ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಹಳೆಯಂಗಡಿಯಲ್ಲಿ ಹೃದಯ ವಿದ್ರಾವಕ ಘಟನೆ..! ಮಂಗಳೂರು:  ಎಂಟು ವರ್ಷದ ಮಗು ಸೇರಿದಂತೆ ದಂಪತಿ ಸಾಮೂಹಿಕ ಆತ್ಮಹತ್ಯೆ ಮಾಡಿರುವ ದಾರುಣ ಘಟನೆ ಹಳೆಯಂಗಡಿ ಬಳಿಯ ಕಲ್ಲಾಪು ರೈಲ್ವೇ ಗೇಟ್...

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ: ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..! 

ಫೋನಿನಲ್ಲಿ ಮಾತಾಡುತ್ತಿದ್ದ ಯುವಕ ಮೃತ್ಯು ಕೂಪಕ್ಕೆ ವಿಟ್ಲದಲ್ಲಿ ಹೃದಯ ವಿದ್ರಾವಕ ಘಟನೆ..!  ಮಂಗಳೂರು: ಟೆರೇಸ್ ನಲ್ಲಿ ಫೋನ್ ನಲ್ಲಿ ಮಾತನಾಡುತ್ತಿದ್ದ ವೇಳೆ ಆಯತಪ್ಪಿ ಕೆಳಗೆ ಬಿದ್ದು ಯುವಕ ಸಾವನ್ನಪ್ಪಿರುವ ಘಟನೆ ವಿಟ್ಲದ ಕೇಪು ಎಂಬಲ್ಲಿ...