Friday, August 19, 2022

ಕುಂದಾಪುರ: ರಸ್ತೆ ಬದಿ ನಿಂತಿದ್ದ ಮಹಿಳೆ ಮೇಲೆ ಹಲ್ಲೆ ನಡೆಸಿ ಚಿನ್ನ ಕಳವು

ಕುಂದಾಪುರ: ರಸ್ತೆ ಬದಿ ನಿಂತಿದ್ದ ಮಹಿಳೆಯೊಬ್ಬರಿಗೆ ವ್ಯಕ್ತಿಯೊಬ್ಬ ಆಯುಧವೊಂದರಲ್ಲಿ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿರುವ ಘಟನೆ ಕೊರ್ಗಿ-ಹೆಸ್ಕುತ್ತೂರು ತಿರುವಿನ ಬಳಿ ಶುಕ್ರವಾರ ಸಂಜೆ ವೇಳೆ ನಡೆದಿದೆ.

ಕೊರ್ಗಿ ಗ್ರಾಪಂ ವ್ಯಾಪ್ತಿಯ ಕಾಡಿನಬೆಟ್ಟು ನಿವಾಸಿ ದೇವಕಿ(32) ಎಂಬವರು ಹಲಲ್ಎಗೊಳಗಾದ ಮಹಿಳೆ.

ತೆಕ್ಕಟ್ಟೆ- ದಬ್ಬೆಕಟ್ಟೆ ಮುಖ್ಯ ರಸ್ತೆಯ ಸಮೀಪದಲ್ಲಿ ಶಾಲಾ ವಾಹನದಲ್ಲಿ ಬರುವ ತನ್ನ ಮಗುವಿಗಾಗಿ ಕಾಯುತ್ತಿದ್ದರು. ಆಗ ಬಂದ ವ್ಯಕ್ತಿಯೊಬ್ಬ ಮಹಿಳೆಯ ತಲೆಗೆ ಮಾರಕಾಯುಧದಿಂದ ಹಲ್ಲೆ ನಡೆಸಿ ಚಿನ್ನಾಭರಣ ಕಳವು ಮಾಡಿ ಪರಾರಿಯಾಗಿದ್ದಾನೆ.

ಇದರಿಂದ ಗಂಭೀರವಾಗಿ ಗಾಯಗೊಂಡ ದೇವಕಿ ಅವರನ್ನು ಮೊದಲು ಕೋಟೇಶ್ವರ ಖಾಸಗಿ ಆಸ್ಪತ್ರೆಗೆ ಕರೆದೊಯ್ದು, ಬಳಿಕ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಸ್ಥಳಕ್ಕೆ ಆಗಮಿಸಿರುವ ಕುಂದಾಪುರ ಗ್ರಾಮಾಂತರ ಪೊಲೀಸರು ಪರಿಶೀಲನೆ ನಡೆಸಿ ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here

Hot Topics

“ಹಿಂದೂಗಳು ಸತ್ರೆ BJPಗೆ ಓಟು ಬರುತ್ತದೆ-ಅಲ್ಪಸಂಖ್ಯಾತರು ಸತ್ತರೆ ಓಟ್ ಸಿಗಲ್ಲ”

ಮಂಗಳೂರು: ಬಿಜೆಪಿಗರಿಗೆ ಹಿಂದೂಗಳು ಸತ್ತರೆ ಅದ್ರಲ್ಲೂ ಬಿಲ್ಲವರು ಸತ್ತರೆ ಮಾತ್ರ ಓಟು ಬರುತ್ತದೆ. ಅಲ್ಪಸಂಖ್ಯಾತರು ಸತ್ತರೆ ಓಟು ಬರೋದಿಲ್ಲ. ಅದಕ್ಕಾಗಿ ಹರೀಶ್ ಪೂಜಾರಿಯವರ ಹತ್ಯೆಯಾಯ್ತು. ಕಾಂಗ್ರೆಸ್ ಪಕ್ಷ ಯಾವಾಗಲೂ ಸಾಮರಸ್ಯವನ್ನು ಬಯಸುವ ಪಕ್ಷ....

E-Court ಸೇವೆಯಲ್ಲಿ ತಾಂತ್ರಿಕ ವ್ಯತ್ಯಯ: ಲೋಪ ಸರಿಪಡಿಸಲು ಮಂಗಳೂರು ವಕೀಲರ ಸಂಘ ಮನವಿ

ಮಂಗಳೂರು: ಕಳೆದ ಸುಮಾರು 3-4 ವಾರಗಳಿಂದ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಇ-ಕೋರ್ಟ್ ಸೇವೆ ವ್ಯತ್ಯಯ ಉಂಟಾಗಿದೆ. ಈ ಸಮಸ್ಯೆಯಿಂದ ಸಾವಿರಾರು ವಕೀಲರಿಗೆ ಹಾಗೂ ಕಕ್ಷಿದಾರರಿಗೆ ಅಗತ್ಯ ಮಾಹಿತಿಯನ್ನು ಪಡೆದುಕೊಳ್ಳಲು ಅಡ್ಡಿಯಾಗಿದೆ. ಆದ್ದರಿಂದ ಕೇಂದ್ರ...

ಪುಂಡ ಕಾಂಗ್ರೆಸ್ಸಿಗರೇ ನಿಮಗೆ ಎಚ್ಚರಿಕೆ ಕೊಡ್ತೇನೆ ಎಂದ ಯಶ್ಪಾಲ್‌ ಸುವರ್ಣ

ಮಂಗಳೂರು: ಇವತ್ತಿನ ಪೀಳಿಗೆಗೆ ಸಾವರ್ಕರ್ ಅವರ ಆದರ್ಶ, ಕೊಡುಗೆಗಳನ್ನು ತಿಳಿಸುವ ನಿಟ್ಟಿನಲ್ಲಿ ನಾವು ಕೇವಲ ಆ ಭಾಗದಲ್ಲಿ ಫ್ಲೆಕ್ಸ್ ಮಾತ್ರವಲ್ಲ,ಪುತ್ಥಳಿ ನಿರ್ಮಾಣಕ್ಕೆ ಅನುಮತಿ ಕೋರಿ ಉಡುಪಿ ನಗರ ಸಭೆಗೆ ಪತ್ರವನ್ನು ಬರೆದಿದ್ದೇವೆ ಎಂದು...