Connect with us

    DAKSHINA KANNADA

    ಮಂಗಳೂರು: ಯಕ್ಷಗಾನ ಕಲೆಗೆ ಸಂಘಗಳ ಕೊಡುಗೆ ಅಪಾರ-ಸೇರಾಜೆ

    Published

    on

    ಮಂಗಳೂರು: ಕರ್ನಾಟಕ ಯಕ್ಷಗಾನ ಅಕಾಡೆಮಿಯ ಸಹಯೋಗದಲ್ಲಿ ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘದ ಶತಮಾನೋತ್ಸವ ಕಾರ್ಯಕ್ರಮದ 22 ಸರಣಿಯ ಕಾರ್ಯಕ್ರಮ ಇತ್ತೀಚೆಗೆ ಶ್ರೀ ಮಹಮ್ಮಾಯಿ ದೇವಸ್ಥಾನದಲ್ಲಿ ಜರಗಿತು.


    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರೊಫೆಸರ್ ಜಿ.ಕೆ.ಭಟ್ ಸೇರಾಜೆ ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಯಕ್ಷಗಾನ ಸಂಘಗಳ ಕೊಡುಗೆಯನ್ನು ವಿವರಿಸಿದರು.

    “ತಾಳಮದ್ದಳೆಯ ಸಂಘಗಳಲ್ಲಿ ಅರ್ಥವನ್ನು ಹೇಳುವಂತಹ ಅಥವಾ ಹಿಮ್ಮೇಳವನ್ನು ನುಡಿಸುವಂತಹ ಕಲಾವಿದರು ಯಕ್ಷಗಾನ ಕ್ಷೇತ್ರದಲ್ಲಿ ಸಂಪೂರ್ಣ ಯಶಸ್ಸು ಪಡೆಯುತ್ತಾರೆ.ಹಾಗಾಗಿ ಯಕ್ಷಗಾನ ತಾಳಮದ್ದಳೆಯ ಸಂಘಗಳು ಈ ಕಲೆಯ ಉಳಿಯುವಿಕೆಯಲ್ಲಿ ಅತ್ಯಂತ ಸಹಕಾರಿ ಎಂದು ಹೇಳಿದರೂ ತಪ್ಪಾಗದು ಎಂದರು.

    ಶ್ರೀ ವಾಗೀಶ್ವರಿ ಯಕ್ಷಗಾನ ಕಲಾವರ್ಧಕ ಸಂಘ ಕಲೆಯನ್ನು ಬೆಳೆ ಸುವಂತಹ ಕೆಲಸದ ಜೊತೆ ಕಲಾವಿದರನ್ನು ಗುರುತಿಸಿ ಅವರನ್ನು ಸನ್ಮಾನಿಸುವ ಕಾರ್ಯವನ್ನು ಮಾಡುತ್ತಾ ಬರುತ್ತಿದೆ.22 ವಾರಗಳ ಕಾರ್ಯಕ್ರಮದಲ್ಲಿ 22 ಅರ್ಹ ಕಲಾವಿದರನ್ನು ಗುರುತಿಸಿ ಅಂತಹ ಕಲಾವಿದರಿಗೆ ಸನ್ಮಾನವನ್ನು ಮಾಡಿರುವುದು ನಿಜಕ್ಕೂ ಸ್ತುತ್ಯರ್ಹವಾದದ್ದು.

    ಎಲೆಯ ಮರೆಯ ಕಾಯಿಯಂತೆ ಇದ್ದಂತಹ ಕಲಾವಿದರನ್ನು ಗುರುತಿಸಿ ಮಾಡಿದಂತಹ ಸನ್ಮಾನ ನಿಜಕ್ಕೂ ಅದ್ಭುತ “ಎಂದರು.

    ಸನ್ಮಾನಿಸಲ್ಪಟ್ಟ ಪೆರ್ಲ ಗಣಪತಿ ಭಟ್ ಇವರ ಅಭಿನಂದನೆಯನ್ನು ಸಂಘದ ಪ್ರಧಾನ ಕಾರ್ಯದರ್ಶಿ ಸಂಜಯ ಕುಮಾರ್ ರಾವ್ ಮಾಡಿದರು.

    ಪೆರ್ಲ ಗಣಪತಿ ಭಟ್ಟರು ಎಳವೆಯಲ್ಲಿಯೇ ಯಕ್ಷಗಾನದತ್ತ ಆಕರ್ಷಿತರಾದವರು. ಮುಂದೆ ಶೇಣಿ ಸುಬ್ರಮಣ್ಯ ಭಟ್ಟರಲ್ಲಿ ಶಾಸ್ತ್ರೀಯವಾಗಿ ಹಿಮ್ಮೇಳ ವಾದನವನ್ನು ಕಲಿತರು ಮಂಗಳೂರಿನಲ್ಲಿ ಉದ್ಯೋಗನಿಮಿತ್ತ ನೆಲೆಸಿದ ಸಂದರ್ಭದಲ್ಲಿ ಶ್ರೀ ಮಾಂಬಾಡಿ ಸುಬ್ರಹ್ಮಣ್ಯ ಭಟ್,ಕೃಷ್ಣ ರಾಜ ಭಟ್,ನಂದಳಿಕೆ ಇವರಿಂದ ಹಿಮ್ಮೇಳವನ್ನು ಅಭ್ಯಸಿಸಿ ಸುತ್ತ ಮುತ್ತಲಿನ ಎಲ್ಲಾ ಸಂಘಗಳಲ್ಲಿ ತಮ್ಮ ಕಲಾಸೇವೆಯನ್ನು ಗೈದಿದ್ದಾರೆ.

    1990 ರಲ್ಲಿ ಕೃಷ್ಣರಾಜ ಮತ್ತು ಬಳಗ ಎನ್ನುವಂತಹ ಸಂಘಟನೆಯ ಮೂಲಕ ಆಕಾಶವಾಣಿಯಲ್ಲಿಯೂ ತಾಳಮದ್ದಳೆಯನ್ನು ನೀಡುತ್ತಾ ಬರುತ್ತಿದ್ದಾರೆ. ಅತ್ಯಂತ ವಿನೀತ ಸ್ವಭಾವದ ಗಣಪತಿ ಭಟ್ ಎಲ್ಲರಿಗೂ ಪ್ರೀತಿ ಪಾತ್ರರಾಗಿದ್ದಾರೆ ಎಂದರು.

    ಕೀರ್ತಿಶೇಷ ನಾಗೇಶ ಸಾಲಿಯಾನರ ಸಂಸ್ಮರಣೆಯನ್ನು ಸಂಜಯ ಕುಮಾರ್ ಗೈದರು.
    ಅನೇಕ ವಿಶಿಷ್ಟ ಯಕ್ಷಗಾನ ಪ್ರದರ್ಶನಗಳನ್ನು ಆಯೋಜಿಸುತ್ತಿದ್ದ ನಾಗೇಶ್ ಸಾಲಿಯಾನರು ಒಬ್ಬ ಅದ್ಭುತ ಸಂಘಟಕರಾಗಿದ್ದರು.

    ಹವ್ಯಾಸಿಗಳನ್ನು ಯಕ್ಷಗಾನದತ್ತ ಆಕರ್ಷಿಸುವಲ್ಲಿ ಅವರಿಗಿದ್ದ ಆಸಕ್ತಿ ಇಂದು ಅನೇಕ ಕಲಾವಿದರನ್ನು ಯಕ್ಷಗಾನಕ್ಕೆ ಒದಗಿಸಿಕೊಟ್ಟಿದೆ. ಮಂಗಳೂರಿನ ನೆಹರು ಮೈದಾನದಲ್ಲಿ ಯಕ್ಷಗಾನ ಪ್ರದರ್ಶನಕ್ಕೆ ಒಂದು ಭಾಗವನ್ನು ಮೀಸಲಿರಿ ಸುವಲ್ಲಿ ಅವರ ಹೋರಾಟ ಅವಿಸ್ಮರಣೀಯ ಎಂದರು.

    ಇನ್ನೊಬ್ಬ ಅತಿಥಿ ಬೆಟ್ಟಂಪಾಡಿ ಸುಂದರ ಶೆಟ್ಟಿ, ಯಕ್ಷಗಾನಕ್ಕಾಗಿ ತನ್ನ ಪ್ರಯತ್ನಗಳನ್ನು ವಿವರಿಸಿದರು.
    ವಿವಿಧ ರಾಜ್ಯಗಳಲ್ಲಿ ಉದ್ಯೋಗ ನಿಮಿತ್ತ ವಾಸ್ತವ್ಯವಿದ್ದಾಗ ಅಲ್ಲಿನ ಕನ್ನಡ ಸಂಘಗಳ ಮೂಲಕ ತಾಳಮದ್ದಳೆ ಕಾರ್ಯಕ್ರಮ ಆಯೋಜಿಸುತ್ತಿದ್ದೆ.

    ತಂದೆ ಬೆಟ್ಟಂಪಾಡಿ ಬಾಳಪ್ಪ ಶೆಟ್ಟರ ನೆನಪಿಗಾಗಿ, ಬೆಟ್ಟಂಪಾಡಿ ಬಾಳಪ್ಪ ಶೆಟ್ಟಿ ಯಕ್ಷಗಾನ ಪ್ರತಿಷ್ಟಾನದ ಮೂಲಕ ತಾಳಮದ್ದಳೆ, ಸಂಮಾನ ಕಾರ್ಯಕ್ರಮವನ್ನು ನಡೆಸುತ್ತಾ ಕಲಾ ಸೇವೆಯನ್ನು ಮಾಡುತ್ತಿದ್ದೇನೆ.

    ನೂರು ವರುಷ ಪೂರೈಸಿದ ಈ ಸಂಘದ ಕಾರ್ಯಕ್ರಮದಲ್ಲಿ ಭಾಗವಹಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎಂದರು. ಅಶೋಕ ಬೊಳೂರು ಸಂಮಾನ ಪತ್ರವನ್ನು ವಾಚಿಸಿದರು. ಶಿವಪ್ರಸಾದ್ ಪ್ರಭು,ಪ್ರಫುಲ್ಲಾ ನಾಯಕ್, ಶಿವಾನಂದ ಪೆರ್ಲಗುರಿ ಉಪಸ್ಥಿತರಿದ್ದರು.

    ಸಭಾ ಕಾರ್ಯಕ್ರಮದ ಬಳಿಕ “ಅಂಗದ ಸಂಧಾನ” ತಾಳಮದ್ದಳೆ ಸಂಘದ ಕಲಾವಿದರು ಮತ್ತು ಅತಿಥಿ ಕಲಾವಿದರ ಕೂಡುವಿಕೆಯಿಂದ ಜರಗಿತು.

    BIG BOSS

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ ಸಂಚು ರೂಪಿಸುತ್ತಿದ್ದಾಗಲೇ ಅರೆಸ್ಟ್‌

    Published

    on

    ಮಂಗಳೂರು: ಕುಖ್ಯಾತ ರೌಡಿಶೀಟರ್ ದಾವೂದ್ (43) ಎಂಬಾತನನ್ನು ಮಂಗಳೂರು ಸಿಸಿಬಿ ಪೊಲೀಸರ ತಂಡವು ನವೆಂಬರ್ 22ರ ಸಂಜೆ ಬಂಧಿಸಿದೆ.

    ಆರೋಪಿ ದಾವೂದ್ ಉಳ್ಳಾಲದ ಧರ್ಮನಗರ ನಿವಾಸಿ. ಅವನು ಮಂಗಳೂರಿನ ತಲಪಾಡಿ-ದೇವಿಪುರ ರಸ್ತೆ ಬಳಿ ಪ್ರತಿಸ್ಪರ್ಧಿ ಗ್ಯಾಂಗ್ ಸದಸ್ಯರ ವಿರುದ್ಧ ಅಪರಾಧ ಎಸಗಲು ಸಂಚು ರೂಪಿಸುತ್ತಿದ್ದಾಗಲೇ ಬಂಧಿಸಲಾಗಿದೆ. ಖಚಿತ ಮಾಹಿತಿ ಮೇರೆಗೆ ಪಿಎಸ್ ಐ ನರೇಂದ್ರ ನೇತೃತ್ವದ ಸಿಸಿಬಿ ತಂಡ ರೌಡಿಶೀಟರ್‌ನನ್ನು ಬಂಧಿಸಲು ಮುಂದಾಗಿದೆ.

    ಕಾರ್ಯಾಚರಣೆ ವೇಳೆ ದಾವೂದ್ ಪೊಲೀಸರಿಂದ ತಪ್ಪಿಸಿಕೊಳ್ಳಲು ಅಧಿಕಾರಿಗಳ ಮೇಲೆ ಮಚ್ಚಿನಿಂದ ಹಲ್ಲೆ ನಡೆಸಿದ್ದು, ಪಿಎಸ್ ಐ ನರೇಂದ್ರ ಮತ್ತು ಇತರ ಸಿಬ್ಬಂದಿಗೆ ಗಾಯಗಳಾಗಿವೆ. ದಾಳಿಯ ಹೊರತಾಗಿಯೂ ಪೊಲೀಸ್ ತಂಡ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದು, ಮುಂದಿನ ಕ್ರಮಕ್ಕಾಗಿ ದಾವುದ್‌ನನ್ನು ಉಳ್ಳಾಲ ಪೊಲೀಸ್ ಠಾಣೆಗೆ ಹಸ್ತಾಂತರಿಸಲಾಗಿದೆ.

    ದಾವೂದ್ ವಿರುದ್ಧ ಉಳ್ಳಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪಿಎಸ್ ಐ ನರೇಂದ್ರ ಅವರ ದೂರಿನ ಮೇರೆಗೆ ಆರೋಪಿ ದಾವುದ್ ವಿರುದ್ಧ ವಿವಿಧ ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಲಾಗಿದೆ. ದಾವೂದ್ ಕೊಲೆ ಸೇರಿದಂತೆ ಹಲವು ಅಪರಾಧಗಳಲ್ಲಿ ಭಾಗಿಯಾಗಿರುತ್ತಾನೆ. ಉಳ್ಳಾಲ, ಮಂಗಳೂರು ದಕ್ಷಿಣ ಮತ್ತು ಬಜ್ಪೆ ಸೇರಿದಂತೆ ಇತರ ಸ್ಥಳಗಳಲ್ಲಿ ಕಾನೂನುಬಾಹಿರ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವುದಾಗಿ ವರದಿಯಾಗಿದೆ .

    Continue Reading

    BIG BOSS

    ಕೊಣಾಜೆ: 3 ವರ್ಷದ ಬಾಲೆಗೆ ಕಿ*ರುಕುಳ ನೀಡಿದ 70ರ ಅಜ್ಜ ಅರೆಸ್ಟ್

    Published

    on

    ಕೊಣಾಜೆ: ಬಾಲಕಿಗೆ ಕಿ*ರುಕುಳ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಎಪ್ಪತ್ತರ ಹರೆಯದ ವೃದ್ಧನನ್ನು ಪೊಲೀಸರು ಬಂಧಿಸಿ,‌ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಆರೋಪಿಯನ್ನು ಅಬ್ದುಲ್ಲಾ (70) ಎಂದು ಗುರುತಿಸಲಾಗಿದೆ.

    ಉಳ್ಳಾಲ ತಾಲೂಕು ಬಾಳೆಪುಣಿ ಗ್ರಾಮದಲ್ಲಿ ಘಟನೆ ನಡೆದಿದೆ. 3 ವರ್ಷದ ಬಾಲಕಿ ಆಟವಾಡುತ್ತಿದ್ದಾಗ ಆರೋಪಿ ಲೈಂ*ಗಿಕ ಕಿ*ರುಕುಳ ನೀಡಿದ್ದ ಎಂದು ಆರೋಪಿಸಲಾಗಿದೆ. ಬಾಲಕಿಯ ಅಸ್ವಸ್ಥತೆಯನ್ನು ಗಮನಿಸಿದ ತಾಯಿ ವೈದ್ಯಕೀಯ ತಪಾಸಣೆ ನಡೆಸಿದ್ದು ಬಳಿಕ ಕೊಣಾಜೆ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

    ಈ ಬಗ್ಗೆ ಕೊಣಾಜೆ ಪೊಲೀಸರು ಆರೋಪಿ ವಿರುದ್ಧ ಪೋ*ಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು ಆರೋಪಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.

    Continue Reading

    BIG BOSS

    ಮಂಗಳೂರು: ಮುಂಜಾನೆಯೇ ಸರಣಿ ಅ*ಪಘಾತ; ವಿದ್ಯಾರ್ಥಿಗಳಿದ್ದ ಬಸ್ ಪ*ಲ್ಟಿ

    Published

    on

    ಮಂಗಳೂರು: ಬೆಂಗಳೂರು – ಮಂಗಳೂರು ರಾಷ್ಟ್ರೀಯ ಹೆದ್ದಾರಿಯ ಗುಂಡ್ಯ ಸಮೀಪದ ಅಡ್ಡಹೊಳೆ ಎಂಬಲ್ಲಿ ಬೆಳ್ಳಂಬೆಳಗ್ಗೆ ಸರಣಿ ಅ*ಪಘಾತ ಸಂಭವಿಸಿದೆ. ಕುಂದಾಪುರ ಪ್ರವಾಸಕ್ಕೆ ತೆರಳಿ ಹಿಂದಿರುಗುತ್ತಿದ್ದ ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಟೂರಿಸ್ಟ್ ಬಸ್ ಉರುಳಿ ಬಿದ್ದಿದೆ.

    ಇಂದು (ನ.23) ಬೆಳಗಿನ ಜಾವ ಕಾರೊಂದು ಹಿಂದಿನಿಂದ ಬಂದು ಕೆಎಸ್‌ಆರ್‌ಟಿಸಿ ಬಸ್‌ಗೆ ಡಿ*ಕ್ಕಿ ಹೊಡೆದಿದೆ. ನಂತರ, ಬೆಂಗಳೂರು ಕಾಲೇಜು ವಿದ್ಯಾರ್ಥಿಗಳಿದ್ದ ಖಾಸಗಿ ಬಸ್ ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್‌ಗೆ ಗು*ದ್ದಿದೆ.

    ಟೂರಿಸ್ಟ್ ಬಸ್ ರಸ್ತೆಗೆ ಉರುಳಿದ್ದು, ವಿದ್ಯಾರ್ಥಿಗಳು ಗಾ*ಯಗೊಂಡಿದ್ದಾರೆ. ಗಾ*ಯಾಳುಗಳನ್ನು ನೆಲ್ಯಾಡಿ ಮತ್ತು ಕಡಬದ ಖಾಸಗಿ ಆಸ್ಪತ್ರೆಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲಾಗುತ್ತಿದೆ. ಉಪ್ಪಿನಂಗಡಿ ಪೋಲಿಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

    Continue Reading

    LATEST NEWS

    Trending