Friday, August 19, 2022

ಲಾಕ್ ಡೌನ್ ನಿಯಮ ಉಲ್ಲಂಘಿಸಿ ಮಂಗಳೂರು ದೇವಸ್ಥಾನದಲ್ಲಿ ಅದ್ದೂರಿ ಮದುವೆ – ಎಸಿ ನೇತೃತ್ವದಲ್ಲಿ ದಾಳಿ

ಮಂಗಳೂರು : ಮಂಗಳೂರಿನಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘಿಸಿ ದೇವಸ್ಥಾನದಲ್ಲಿ ನಡೆಯುತ್ತಿದ್ದ ಅದ್ದೂರಿ ಮದುವೆ ಹಾಲ್‌ ಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಸ್ಥಳೀಯ ಜನಪ್ರತಿನಿಧಿಯ ಮಗಳ ಮದುವೆ ಸೇರಿ ನಾಲ್ಕು ಮದುವೆಗಳು ಇಲ್ಲಿ ನಡೆಯುತ್ತಿದ್ದವು. ಸರಕಾರದ ಮಾರ್ಗಸೂಚಿ ಗಾಳಿಗೆ ತೂರಿ ಈ ಮದುವೆ ಸಮಾರಂಭ ನಡೆಯುತ್ತಿದೆ ಎಂದು ಸಾರ್ವಜನಿಕರ ದೂರು ಬಂದ ಹಿನ್ನೆಲೆಯಲ್ಲಿ ಮಂಗಳೂರಿನ ಮಂಗಳಾದೇವಿ ದೇವಾಲಯದ ಆವರಣಕ್ಕೆ ಮಂಗಳೂರು ವಿಭಾಗಿಯ ಅಧಿಕಾರಿಗಳ ತಂಡ ದಾಳಿ ನಡೆಸಿದೆ.

ಜಿಲ್ಲಾಡಳಿತದ ಆದೇಶಕ್ಕೆ ಕಿಂಚಿತ್ತು ಬೆಲೆ ಕೊಡದೆ ನಡೆಸಲಾದ ಮದುವೆ ಸಮಾರಂಭ ನಡೆಯುತ್ತಿದೆ ಎಂದು ಆರೋಪಿಸಲಾಗಿದ್ದು ದೇವಾಲಯದ ಹೊರಗೆ 40 ಕ್ಕೂ ಹೆಚ್ಚು ಕಾರುಗಳು ನಿಂತಿದ್ದವು.

ಮಂಗಳೂರು ಸೇರಿದಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ನಿಯಂತ್ರಣಕ್ಕೆ ಬಾರದೇ ದಿನಾ ಜನತೆ ಸಾಯುತ್ತಿರುವಾಗ ಅದರ ಮಧ್ಯೆಯೇ ಅದ್ದೂರಿ ಮದುವೆಗಳನ್ನು ಮಾಡಿ ಬೇಜವಾಬ್ದಾರಿಯಿಂದ ನಡೆದು ಕೊಳ್ಳುತ್ತಿರುವ ಜನರ ಬಗ್ಗೆ ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

LEAVE A REPLY

Please enter your comment!
Please enter your name here

Hot Topics

ಸಿದ್ದರಾಮಯ್ಯಗೆ ಮೊಟ್ಟೆ ಎಸೆತ ಪ್ರಕರಣ: 9 ಮಂದಿಯ ಬಂಧನ

ಕುಶಾಲನಗರ: ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ಕಾರಿನ ಮೇಲೆ ಕೋಳಿ ಮೊಟ್ಟೆ ಎಸೆದ ಘಟನೆ ಕುರಿತು ವಶಕ್ಕೆ ತೆಗೆದುಕೊಳ್ಳಲಾದ 9 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಕುಶಾಲನಗರ ಗ್ರಾಮಾಂತರ ಠಾಣೆ ಪೊಲೀಸರು...

ಸಿದ್ದರಾಮಯ್ಯ ಕಾರಿಗೆ ಮೊಟ್ಟೆ ಎಸೆದಿದ್ದನ್ನು ಖಂಡಿಸಿ ಆ.26 ರಂದು ಮಡಿಕೇರಿ ಎಸ್‌ಪಿ ಕಚೇರಿಗೆ ಮುತ್ತಿಗೆ

ಬೆಂಗಳೂರು: ವಿರೋಧ ಪಕ್ಷದ ನಾಯಕ, ಮಾಜಿ ಸಿಎಂ ಸಿದ್ದರಾಮಯ್ಯ ಮಡಿಕೇರಿ ಭೇಟಿ ವೇಳೆ ಮೊಟ್ಟೆ ಎಸೆದ ಪ್ರಕರಣವನ್ನು ಕಾಂಗ್ರೆಸ್‌ ಖಂಡಿಸಿದ್ದು, ಆ.26 ರಂದು ಎಸ್‌ಪಿ ಕಚೇರಿಗೆ ಮುತ್ತಿಗೆ ಹಾಕಲು ಕಾಂಗ್ರೆಸ್‌ ಕಾರ್ಯಕರ್ತರು ನಿರ್ಧರಿಸಿದ್ದಾರೆ.ಈ...

ಲಾಠಿ ಹಿಡಿದ ಕೈಯಲ್ಲಿ ಪೊರಕೆ ಹಿಡಿದು ಕಲ್ಲಡ್ಕ ಬಸ್ಟ್ಯಾಂಡ್ ಕ್ಲೀನ್: ಮೆಲ್ಕಾರ್ ಟ್ರಾಫಿಕ್ ಪೊಲೀಸರ ಸಮಾಜಮುಖಿ ಕಾರ್ಯ

ಬಂಟ್ವಾಳ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಯಿಂದಾಗಿ‌ ಧೂಳು ಕೆಸರಿನಿಂದ ಕೂಡಿದ್ದ ಬಸ್ ನಿಲ್ದಾಣವನ್ನು ಪ್ರತಿ ವಾರಕ್ಕೊಮ್ಮೆ ಪೊಲೀಸರ ತಂಡ ನೀರು ಹಾಕಿ ತೊಳೆಯುವ ಅದ್ಭುತ ಘಟನೆ ಬಂಟ್ವಾಳದ ಕಲ್ಲಡ್ಕದಲ್ಲಿ ನಡೆಯುತ್ತಿದೆ.ಕಲ್ಲಡ್ಕದ ಪೇಟೆಯಲ್ಲಿರುವ ಬಸ್ ನಿಲ್ದಾಣ...