Connect with us

DAKSHINA KANNADA

ಪತ್ರಕರ್ತರ ಮೇಲೆ ಹಲ್ಲೆ ಹಾಗೂ ಎಫ್‌ಐಆರ್‌ ಖಂಡಿಸಿ ಮಂಗಳೂರಿನಲ್ಲಿ ಪ್ರತಿಭಟನೆ

Published

on

ಮಂಗಳೂರು: ಉಪ್ಪಿನಂಗಡಿಯ ಸರಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಪತ್ರಕರ್ತರ ಮೇಲಿನ ದಾಳಿ ಖಂಡಿಸಿ ಹಾಗೂ ಸುಳ್ಳು ದೂರಿನಡಿ ಎಫ್‌ಐಆರ್‌ ದಾಖಲಿಸಿದ್ದನ್ನು ಖಂಡಿಸಿ ದಕ್ಷಿಣ ಕನ್ನಡ ಜಿಲ್ಲಾ ಪತ್ರಕರ್ತರ ಸಂಘದಿಂದ ನಗರದ ಕ್ಲಾಕ್‌ ಟವರ್‌ನಿಂದ ಎಸ್ಪಿ ಕಚೇರಿಗೆ ಪ್ರತಿಭಟನಾ ಜಾಥಾ ನಡೆಸಿದರು. ಈ ಜಾಥಾದಲ್ಲಿ ಹಲವು ಪತ್ರಕರ್ತರು ಭಾಗವಹಿಸಿದ್ದರು.


ಕ್ಲಾಕ್‌ ಟವರ್‌ ಬಳಿಯ ಪ್ರತಿಭಟನಾ ಜಾಥಾ ಮೊದಲು ಮಾತನಾಡಿದ, ದ.ಕ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮಾತನಾಡಿ,

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿ ಪತ್ರಿಕಾ ವರದಿಗಾಗಿ ತೆರಳಿದ್ದಾಗ ಅಜಿತ್‌ ಕುಮಾರ್‌ ಎಂಬುವವರ ಮೇಲೆ ವಿದ್ಯಾರ್ಥಿಗಳು ತಡೆದು, ಕೂಡಿಹಾಕಿ ಬಲತ್ಕಾರವಾಗಿ ವೀಡಿಯೋ ಡಿಲೀಟ್‌ ನಡೆಸಿದ್ದಾರೆ. ಈ ಬಗ್ಗೆ ಎಸ್ಪಿ, ಡಿಸಿ ಬಳಿ ಮಾತನಾಡಿದಾಗ ಸೂಕ್ತವಾಗಿ ಸ್ಪಂದಿಸುವ ಭರವಸೆ ನೀಡಿದ್ದರು.

ಈ ಬಗ್ಗೆ ಹಲ್ಲೆ ನಡೆಸಿದವರ ವಿರುದ್ಧ ದೂರು ದಾಖಲಾಗಿತ್ತು. ಆದರೆ ಏಕಾಏಕಿ ವರದಿಗಾರರ ಮೇಲೆ ಪ್ರತಿದೂರು ದಾಖಲಿಸಿದ್ದು, ಖಂಡನೀಯ.

ತಪ್ಪಿತಸ್ಥರ ವಿರುದ್ಧ ಜಿಲ್ಲಾಧಿಕಾರಿ, ಎಸ್ಪಿ ಮನವಿ ಸಲ್ಲಿಸಿದ ಬಳಿಕವೂ ಪತ್ರಕರ್ತರ ಮೇಲೆ ಪ್ರಕರಣ ದಾಖಲಾಗಿದ್ದು, ಇದು ಖಂಡನೀಯ.

ಈ ಬಗ್ಗೆ ಜೂ.8ರೊಳಗೆ ಪತ್ರಕರ್ತರ ಮೇಲೆ ದಾಖಲಿಸಿದ ಎಫ್‌ಐಆರ್‌ಗೆ ಬಿ ರಿಪೋರ್ಟ್‌ ಸಲ್ಲಿಸಬೇಕು.

ಸಬ್‌ಇನ್ಸ್ಪೆಕ್ಟರ್‌ ಎದುರಲ್ಲೇ ಘಟನೆ ನಡೆದಿದ್ದರೂ, ಸುಳ್ಳು ದೂರಿನಡಿ ಎಫ್‌ಐಆರ್‌ ದಾಖಲಿಸಿದ ಸಬ್‌ಇನ್ಸ್ಪೆಕ್ಟರ್‌ ವಿರುದ್ಧ ಕ್ರಮ ಜರುಗಿಸಬೇಕು ಎಂದು ಒತ್ತಾಯಿಸುತ್ತೇವೆ ಎಂದ ಅವರು. ಈ ಬಗ್ಗೆ ಮುಖ್ಯಮಂತ್ರಿ, ಗೃಹಸಚಿವ ಹಾಗೂ ಪುತ್ತೂರು ಶಾಸಕರಿಗೆ ಮನವಿ ಪತ್ರ ಸಲ್ಲಿಸಲಿದ್ದೇವೆ ಎಂದರು.

ನಂತರ ಮಾತನಾಡಿದ ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘದ ಪದಾಧಿಕಾರಿ ಬಾಳ ಜಗನ್ನಾಥ ಶೆಟ್ಟಿ ಮಾತನಾಡಿ, ಈ ಬಗ್ಗೆ ರಾಜ್ಯ ಸಂಘದ ಅಧ್ಯಕ್ಷ ಮತ್ತು ಪದಾಧಿಕಾರಿಗಳ ಗಮನಕ್ಕೆ ತಂದಿದ್ದೇವೆ. ಇದನ್ನು ರಾಜ್ಯ ಕಾರ್ಯನಿರತ ಪತ್ರಕರ್ತರ ಸಂಘವು ತೀವ್ರವಾಗಿ ಖಂಡಿಸುತ್ತೇವೆ ಎಂದ ಅವರು ಈ ಬಗ್ಗೆ ಮುಖ್ಯಮಂತ್ರಿ, ಗೃಹಸಚಿವರಿಗೆ ಮನವಿ ಸಲ್ಲಿಸಲಾಗುವುದು ಎಂದರು.


ನಂತರ ಕ್ಲಾಕ್‌ಟವರ್‌ನಿಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಕಚೇರಿಯವರೆಗೆ ಪ್ರತಿಭಟನಾ ಜಾಥಾ ನಡೆಯಿತು. ಈ ವೇಳೆ ಸ್ಥಳಕ್ಕೆ ಬಂದ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ಹೃಷಿಕೇಷ್‌ ಸೋನಾವಣೆ ಪತ್ರಕರ್ತರ ಅಹವಾಲು ಸ್ವೀಕರಿಸಿ ಆರೋಪಿಗಳ ವಿರುದ್ಧ ಸೂಕ್ತ ತನಿಖೆ ನಡೆಸುತ್ತೇವೆ ಎಂದು ಭರವಸೆ ನೀಡಿದರು.

ಉಪ್ಪಿನಂಗಡಿ: ಹಿಜಾಬ್‌ ಗಲಾಟೆ- ಪತ್ರಕರ್ತನ ಮೇಲೆ ಹಲ್ಲೆ ನಡೆಸಿದ ಮತಾಂಧ ವಿದ್ಯಾರ್ಥಿಗಳು..!

Click to comment

Leave a Reply

Your email address will not be published. Required fields are marked *

BANTWAL

ಮತ ಚಲಾಯಿಸಿದ ನವ ದಂಪತಿ…! ಶುಭ ಹಾರೈಸಿದ ಸ್ನೇಹಿತರು..!

Published

on

ಮಂಗಳೂರು : ಇಂದು ಹೊಸ ಬಾಳಿಗೆ ಕಾಲಿಡುತ್ತಿದ್ದ ಆ ಜೋಡಿಗಳು ಹೊಸ ಬಾಳಿನ ಚಿಂತನೆಯ ಜೊತೆಗೆ ದೇಶದ ಚಿಂತನೆಯನ್ನೂ ಮಾಡಿದ್ದಾರೆ. ಮದುವೆಯ ಸಮಾರಂಭದಲ್ಲಿ ಹಸಮಣೆ ಏರಿ ಪತಿ ಪತ್ನಿಯರಾಗಿ ಒಂದಾದ ಜೋಡಿ ಎಲ್ಲಾ ಸಂಪ್ರದಾಯಗಳು ಪೂರ್ಣಗೊಂಡ ತಕ್ಷಣ ಮದುವೆ ಮನೆಯಿಂದ ಹೊರ ನಡೆದಿದ್ದಾರೆ. ಮದುವೆ ಮನೆಯಿಂದ ಬಂದವರೇ ನೇರವಾಗಿ ಮತಗಟ್ಟೆಗೆ ಹೋಗಿ ತಮ್ಮ ಹಕ್ಕನ್ನು ಚಲಾಯಿಸಿದ್ದಾರೆ.

ಹೌದು ಇದು ನಡೆದಿರುವುದು ಬಂಟ್ವಾಳ ತಾಲೂಕಿನ ಅಜ್ಜಿಬೆಟ್ಟು ಗ್ರಾಮದ ಬೂತ್ ಸಂಖ್ಯೆ 16 ರಲ್ಲಿ . ಇವರ ಮದುವೆ ನಿಗದಿಯಾದ ದಿನಂದಂತೆ ಪ್ರಜಾಪ್ರಭುತ್ವದ ಹಬ್ಬವಾಗಿರೋ ಚುನಾವಣೆ ದಿನಾಂಕ ಕೂಡಾ ಘೋಷಣೆ ಆಗಿದೆ. ಒಂದು ಕಡೆ ಹಸೆಮಣೆ ಏರಿ ತಮ್ಮ ಸ್ವಂತ ಭವಿಷ್ಯ ಕಟ್ಟಿಕೊಳ್ಳುವ ಜೊತೆಗೆ ದೇಶದ ಭವಿಷ್ಯವನ್ನೂ ಕಟ್ಟಲು ತಮ್ಮ ಅಮೂಲ್ಯ ಮತವನ್ನು ಚಲಾಯಿಸಿ ಮಾದರಿಯಾಗಿದ್ದಾರೆ. ಬಂಟ್ವಾಳ ತಾಲೂಕಿನ ಮಲ್ಲೆರ್ಮಳಕೋಡಿ ಜಯರಾಮ ಕುಲಾಲ್ ಎಂಬ ವರ ವದುವಿವೊಂದಿಗೆ ಬಂದು ತನ್ನ ಮತ ಚಲಾಯಿಸಿದ್ದಾರೆ. ಇವರಿಬ್ಬರ ಈ ಕಾಳಜಿಗೆ ಜನರು ಹಾಗೂ ಮತಗಟ್ಟೆ ಅಧಿಕಾರಿಗಳು ಶುಭ ಹಾರೈಸಿದ್ದಾರೆ. ಇದೇ ವೇಳೆ ಜಯರಾಮ್ ಕುಲಾಲ್ ಅವರ ಸ್ನೇಹಿತರು ಹಿತೈಷಿಗಳು ಕೂಡಾ ಶುಭ ಹಾರೈಸಿದ್ದಾರೆ.

Continue Reading

DAKSHINA KANNADA

ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಶೇರ್ ಮಾಡಿದ ಯುವಕ; ಎಫ್ ಐ ಆರ್ ದಾಖಲಿಸಿದ ಚುನಾವಣಾ ಆಯೋಗ

Published

on

ಪುತ್ತೂರು : ಮತಗಟ್ಟೆಯೊಳಗೆ ಮೊಬೈಲ್ ಗೆ ನಿರ್ಬಂಧ ವಿಧಿಸಿದರೂ ಕಾನೂನು ಉಲ್ಲಂಘನೆಯಾಗಿರುವ ಘಟನೆ ಪುತ್ತೂರಿನ ಮತಗಟ್ಟೆಯೊಂದರಲ್ಲಿ ನಡೆದಿದೆ. ಮತದಾನ ಮಾಡುವ ಫೋಟೊ ಕ್ಲಿಕ್ಕಿಸಿ ಗ್ರೂಪ್ ಗೆ ಶೇರ್ ಮಾಡಿದ ಯುವಕನ ವಿರುದ್ಧ ಆಕ್ರೋಶ ಕೇಳಿ ಬಂದಿತ್ತು.

ಪುತ್ತೂರಿನ ಕೋಟಿ-ಚೆನ್ನಯ ಕಂಬಳ ಗ್ರೂಪ್ ಗೆ ಮತದಾನ ಮಾಡುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ಶೇರ್ ಮಾಡಿರುವ ಬಗ್ಗೆ ತಿಳಿದು ಬಂದಿದೆ.

ಇದನ್ನೂ ಓದಿ : ಚುನಾವಣಾ ಕರ್ತವ್ಯದಲ್ಲಿದ್ದ ಶಿಕ್ಷಕಿ ಕುಸಿದು ಬಿದ್ದು ಸಾ*ವು

ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕುವ ಫೋಟೊವನ್ನು ರಂಜಿತ್ ಬಂಗೇರ ಎಂಬ ಯುವಕ ತೆಗೆದಿದ್ದಾನೆ.  ಇದೀಗ ಈ ಘಟನೆಗೆ ಸಂಬಂಧಿಸಿದಂತೆ ಚುನಾವಣಾ ಆಯೋಗದಿಂದ ಎಫ್ ಐ ಆರ್ ದಾಖಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ / ಜಿಲ್ಲಾ ಚುನಾವಣಾಧಿಕಾರಿ ಮುಲೈ ಮುಗಿಲನ್ ಮಾಹಿತಿ ನೀಡಿದ್ದಾರೆ.

Continue Reading

DAKSHINA KANNADA

ಬೈಕ್-ಕಾರು ನಡುವೆ ಅಪ*ಘಾತ; ಓರ್ವ ಮೃ*ತ್ಯು

Published

on

ಅರಂತೋಡು: ಬೈಕ್ ಹಾಗೂ ಕಾರಿನ ನಡುವೆ ಸಂಭವಿಸಿದ ಭೀಕರ ರಸ್ತೆ ಅಪ*ಘಾತದಲ್ಲಿ ಬೈಕ್‌ನ ಹಿಂಬದಿ ಸವಾರ ಮೃ*ತಪಟ್ಟ ಘಟನೆ ಸಂಪಾಜೆ ಕಲ್ಲುಗುಂಡಿ ಸಮೀಪ ದೊಡ್ಡಡ್ಕ ಎಂಬಲ್ಲಿ ಗುರುವಾರ ತಡರಾತ್ರಿ ಸಂಭವಿಸಿದೆ.


ಮತದಾನ ಮಾಡಲು ಊರಿಗೆ ಬರುತ್ತಿದ್ದರು ಎಂದು ಹೇಳಲಾಗುತ್ತಿದ್ದು ಡಿ*ಕ್ಕಿಯ ರಭಸಕ್ಕೆ ಬೈಕ್‌ನ ಹಿಂಬದಿ ಸವಾರನಿಗೆ ಗಂಭೀರ ಗಾಯಗೊಂಡು ಮೃ*ತಪಟ್ಟರೆ ಇನ್ನೋರ್ವನಿಗೆ ಗಾಯವಾಗಿದ್ದು ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಮೃ*ತರ ವಿವರ ಇನ್ನಷ್ಟೇ ತಿಳಿದುಬರಬೇಕಾಗಿದೆ.

Continue Reading

LATEST NEWS

Trending