Connect with us

BANTWAL

ಮಾಣಿ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ‘ಆಟಿಡೊಂಜಿ ಕೂಟ’..!

Published

on

ವೈವಿಧ್ಯಮಯ ತಿನಿಸುಗಳನ್ನು ಒಂದೇ ಬಾರಿ ತಿನ್ನುವ ಕ್ರಮ ಆಟಿಯ ಆಚರಣೆ ಅಲ್ಲ ಅಥವಾ ಒಂದು ದಿನದ ಆಚರಣೆಯೂ ಅಲ್ಲ, ಅದು ಒಂದು ತಿಂಗಳ ಆಚರಣೆಯಾಗಿದೆ ಎಂದು ‌ ಜನಪದ ಚಿಂತಕರು ಹಾಗೂ ಉದ್ಯಾವರ ಎಸ್ ಡಿ ಎಮ್ ಆಯುರ್ವೇದ ವೈದ್ಯಕೀಯ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಡಾ.ವೈ.ಯನ್.ಶೆಟ್ಟಿಯವರು ಹೇಳಿದ್ದಾರೆ.

ಬಂಟ್ವಾಳ : ವೈವಿಧ್ಯಮಯ ತಿನಿಸುಗಳನ್ನು ಒಂದೇ ಬಾರಿ ತಿನ್ನುವ ಕ್ರಮ ಆಟಿಯ ಆಚರಣೆ ಅಲ್ಲ ಅಥವಾ ಒಂದು ದಿನದ ಆಚರಣೆಯೂ ಅಲ್ಲ, ಅದು ಒಂದು ತಿಂಗಳ ಆಚರಣೆಯಾಗಿದೆ ಎಂದು ‌ ಜನಪದ ಚಿಂತಕರು ಹಾಗೂ ಉದ್ಯಾವರ ಎಸ್ ಡಿ ಎಮ್ ಆಯುರ್ವೇದ ವೈದ್ಯಕೀಯ ಕಾಲೇಜಿನ ವಿಶ್ರಾಂತ ಪ್ರಾಧ್ಯಾಪಕ ಡಾ.ವೈ.ಯನ್.ಶೆಟ್ಟಿಯವರು ಹೇಳಿದ್ದಾರೆ.  

ಬಂಟ್ವಾಳ ಮಾಣಿ ಪೆರಾಜೆಯ ವಿದ್ಯಾನಗರಪಾಳ್ಯ ಬಾಲವಿಕಾಸ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಭಾನುವಾರ ನಡೆದ ಆಟಿಡೊಂಜಿ ಕೂಟ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.

ಮನುಷ್ಯ ಪ್ರಕೃತಿಯೊಂದಿಗೆ ಬದುಕಿದ್ದ ಕಾಲ ಆಟಿ ತಿಂಗಳು. ಹಿರಿಯರು ಹೇಳಿಕೊಟ್ಟ ಔಷಧಿಗಳ ಮಹತ್ವ ಇತ್ತೀಚಿನ ದಿನಗಳಲ್ಲಿ ನಶಿಸಿ ಹೋಗುತ್ತಿದೆ. ಇಂದಿನ ವಿದ್ಯಾರ್ಥಿಗಳಿಗೆ ಶಾಲೆಗಳಲ್ಲಿ ತುಳು ಸಂಸ್ಕೃತಿ, ಸಂಪ್ರದಾಯಗಳನ್ನು ತಿಳಿ ಹೇಳುವ ಕೆಲಸವಾಗಬೇಕು. ತುಳು ಭಾಷೆಯನ್ನು ಮಾತಾನಾಡುವ ಮೂಲಕ ತುಳು ನಾಡಿಗೆ ಶಕ್ತಿ ನೀಡುವ ಎಂದು ಕರೆ ನೀಡಿದರು.

ಬಾಲವಿಕಾಸ ಟ್ರಸ್ಟ್ ನ ಅಧ್ಯಕ್ಷರು ಹಾಗೂ ಶಾಲೆಯ ಸಂಚಾಲಕ ಪ್ರಹ್ಲಾದ್ ಶೆಟ್ಟಿ ಜೆ.ರವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿ ಪ್ರಕೃತಿ ಪ್ರತಿ ವರ್ಷ ನಮಗೆ ಹೊಸ ಅನುಭವಗಳನ್ನು ನೀಡುತ್ತದೆ. ಆಟಿ ತಿಂಗಳಲ್ಲಿ ಎಲ್ಲರಿಗೂ ಉತ್ತಮ ಆರೋಗ್ಯ, ಆಯುಷ್ಯ ದೊರೆಯಲಿ ಎಂದು ಶುಭ ಹಾರೈಸಿದರು.

ಇದೇ ಸಂದರ್ಭದಲ್ಲಿ ಶಾಲಾ ವಿದ್ಯಾರ್ಥಿಗಳಿಂದ ತುಳುನಾಡಿನ ಸಂಸ್ಕೃತಿ, ಪರಂಪರೆಯನ್ನು ಸಾರುವ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

ತುಳು ಸಂಸ್ಕೃತಿಯ ಅವಿಭಾಜ್ಯ ಅಂಗಗಳಾದ, ಪಾಡ್ದನ, ಪರಶುರಾಮ, ಕೋಟಿ ಚೆನ್ನಯರ ರೂಪಕ, ಕಂಗೀಲು‌, ಯಕ್ಷಗಾನ ಮತ್ತು ಹುಲಿ ವೇಷವನ್ನು ಪ್ರಸ್ತುತಪಡಿಸಿದರು. ತುಳುನಾಡಿನ ತಿನಿಸುಗಳಾದ ಉಪ್ಪಡಚ್ಚಿಲ್, ತಿಮರೆ ಚಟ್ನಿ, ಕಡ್ಲೆ, ಚೇವು, ಅಂಬಟೆ, ಹಲಸಿನ ಪಾಯಸ ಮುಂತಾದವುಗಳ ವಿಶೇಷ ಭೋಜನವನ್ನು ಏರ್ಪಡಿಸಲಾಗಿತ್ತು.

ಬಾಲವಿಕಾಸ ಟ್ರಸ್ಟಿನ ಉಪಾಧ್ಯಕ್ಷರಾದ ಯತಿರಾಜ್ ಕೆ.ಎನ್., ಕಾರ್ಯದರ್ಶಿ ಮಹೇಶ್ ಶೆಟ್ಟಿ ಜೆ, ಸದಸ್ಯೆ ಸುಭಾಷಿಣಿ ಎ. ಶೆಟ್ಟಿ, ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷೆ ಕಸ್ತೂರಿ ಪಿ. ಶೆಟ್ಟಿ ಮೊದಲಾದವರು‌ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು. ಶಾಲಾ ಮುಖ್ಯೋಪಾಧ್ಯಾಯಿನಿ ವಿಜಯಲಕ್ಷ್ಮಿ ವಿ. ಶೆಟ್ಟಿ ಸ್ವಾಗತಿಸಿ, ಶಾಲಾ ಆಡಳಿತಾಧಿಕಾರಿ ರವೀಂದ್ರ ದರ್ಬೆ ವಂದಿಸಿದರು.

ಶಿಕ್ಷಕಿಯರಾದ‌ ಯಜ್ಞೇಶ್ವರಿ ಎನ್. ಶೆಟ್ಟಿ‌ ಮತ್ತು ಶಿಕ್ಷಾ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮವನ್ನು ವಿದ್ಯಾರ್ಥಿಗಳಾದ ತನ್ವಿ ಎಸ್. ಹಾಗೂ ಚಿನ್ಮಯಿ ನಿರೂಪಿಸಿದರು.

BANTWAL

ವಿಟ್ಲ: ವಿದ್ಯಾರ್ಥಿನಿಗೆ ಕಿರುಕುಳ-ಯುವಕನ ವಿರುದ್ಧ ಪೋಕ್ಸೊ ಪ್ರಕರಣ ದಾಖಲು

Published

on

ಬಂಟ್ವಾಳ: ವಿದ್ಯಾರ್ಥಿನಿಗೆ ಕಿರುಕುಳ ನೀಡಿದ ವಿಚಾರದಲ್ಲಿ ಪೆರುವಾಯಿ ಮೂಲದ ಯುವಕನ ವಿರುದ್ಧ ವಿಟ್ಲ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.

ಕೇಪು ಗ್ರಾಮದ 9ನೇ ತರಗತಿ ವಿದ್ಯಾರ್ಥಿಯೊಬ್ಬಳನ್ನು ಯುವಕ ಕೆಲವು ದಿನಗಳಿಂದ ಹಿಂಬಾಲಿಸುತ್ತಿದ್ದು, ಮೊಬೈಲ್ ನಂಬರ್ ನೀಡುವಂತೆ ಕಿರುಕುಳ ನೀಡಿದ್ದಾನೆ. ಶಾಲೆ ಸಮೀಪ ಬಂದು ಬೈಕ್ ನಲ್ಲಿ ಕೂರುವಂತೆ ಹೇಳಿದ್ದಾನೆ.

ಈ ಎಲ್ಲಾ ವಿಚಾರವನ್ನು ಬೇರೆ ಕಡೆ ಹೇಳಬಾರದೆಂದು ಬೆದರಿಸುವ ಕಾರ್ಯ ಮಾಡಿದ್ದಾನೆ. ಇದರಿಂದ ಭಯಗೊಂಡ ಬಾಲಕಿ ಶಾಲೆಯ ಶಿಕ್ಷಕರಲ್ಲಿ ತಿಳಿಸಿದ್ದು, ಅವರು ಪೋಷಕರಿಗೆ ಮಾಹಿತಿ ನೀಡಿ, ನಂತರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ.

Continue Reading

BANTWAL

Bantwala: ಹೃದಯ ಸಂಬಂಧಿ ಖಾಯಿಲೆಯಿಂದ 4 ವರ್ಷದ ಬಾಲಕಿ ನಿಧನ..!

Published

on

ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ಬಂಟ್ವಾಳದ ಮಿತ್ತೂರಿನಲ್ಲಿ ನಡೆದಿದೆ.

ಬಂಟ್ವಾಳ: ಹೃದಯ ಸಂಬಂಧಿ ಖಾಯಿಲೆಯಿಂದ ಬಳಲುತ್ತಿದ್ದ 4 ವರ್ಷದ ಪುಟ್ಟ ಬಾಲಕಿಯೋರ್ವಳು ಮೃತಪಟ್ಟ ಘಟನೆ ಸೆ.24ರಂದು ನಡೆದಿದೆ.

ಮೃತ ಬಾಲಕಿಯನ್ನು ಬಂಟ್ವಾಳ ಮಿತ್ತೂರು ಸಮೀಪದ ಪಾಟ್ರಕೋಡಿ ನಿವಾಸಿ ಇಬ್ರಾಹಿಂ ಬಾತಿಷಾ ರವರ ಪುತ್ರಿ ಜಮೀಲಾ ಸನಿಕ (4) ಎಂದು ತಿಳಿದು ಬಂದಿದೆ.

ಜಮೀಲಾ  ಬಾಲಕಿ ಪುತ್ತೂರಿನ ಮುರದಲ್ಲಿರುವ ಅಲ್ ಬಿರ್ರ್ ಸ್ಕೂಲ್ ನ ಎಲ್.ಕೆ.ಜಿ. ಯಲ್ಲಿ ಕಲಿಯುತ್ತಿದ್ದಳು.

ಈಕೆ ಅನಾರೋಗ್ಯದಿಂದ ಇದ್ದು, ಬೆಂಗಳೂರಿನ ಹೃದಯಾಲಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾಳೆ.

Continue Reading

BANTWAL

Bantwala: ಓವರ್ ಟೇಕ್ ಮಾಡಲು ಹೋದ ಟೆಂಪೋ ರಿಕ್ಷಾ – ಕರೆಂಟ್ ಕಂಬಕ್ಕೆ ಗುದ್ದಿದ ಬಸ್..!

Published

on

ಬಂಟ್ವಾಳ: ಸರಕಾರಿ ಬಸ್ ಒಂದು ಓವರ್ ಟೇಕ್ ಮಾಡುತ್ತಿದ್ದ ಟೆಂಪೋ ರಿಕ್ಷಾವನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಗುದ್ದಿದ ಘಟನೆ ಬಂಟ್ವಾಳದ ಸಜಿಪಮೂಡ ಗ್ರಾಮದ ಕಂದೂರು ಎಂಬಲ್ಲಿ ನಡೆದಿದೆ.

ಮೆಲ್ಕಾರಿನಿಂದ ಬರುತ್ತಿದ್ದ ಇಲ್ಯಾಸ್ ಟೆಂಪೋ ರಿಕ್ಷಾ ಚಾಲಕನು ಕಂದೂರಿನ ಬಜಾರ್ ಅಡಿಟೋರಿಯಮ್ ಬಳಿ ಬರುತ್ತಿದ್ದ ಆಕ್ಟಿವಾ ಗಾಡಿಯೊಂದನ್ನು ಓವರ್ ಟೇಕ್ ಮಾಡುತ್ತಿದ್ದ.

ಈ ವೇಳೆ ಮುಡಿಪು ಮಾರ್ಗವಾಗಿ ಬರುತ್ತಿದ್ದ ಕಾಸರಗೋಡು ಬಿ.ಸಿ.ರೋಡ್ ಬಸ್ ಡಿಕ್ಕಿ ಹೊಡೆಯುವುದನ್ನು ತಪ್ಪಿಸಲು ಹೋಗಿ ಕರೆಂಟ್ ಕಂಬಕ್ಕೆ ಡಿಕ್ಕಿ ಹೊಡೆದಿದೆ.

ಬಸ್ ಗುದ್ದಿದ್ದ ರಭಸಕ್ಕೆ ಕರೆಂಟ್ ಕಂಬ ತುಂಡಾಗಿದೆ.

ಬಸ್ಸಿನಲ್ಲಿದ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸ್ಥಳಕ್ಕೆ ಬಂಟ್ವಾಳ ಸಂಚಾರಿ ಠಾಣಾ ಪೋಲಿಸರು ಆಗಮಿಸಿ, ಪರಿಶೀಲನೆ ನಡೆಸಿದರು.

Continue Reading

LATEST NEWS

Trending