Connect with us

    LATEST NEWS

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಳ್ಳಾಲ : ಉಚಿತ ವೈದ್ಯಕೀಯ ತಪಾಸಣಾ ಶಿಬಿರ

    Published

    on

    ಉಳ್ಳಾಲ: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಉಳ್ಳಾಲ ಶಾಖೆಯ 9ನೇ ವಾರ್ಷಿಕೋತ್ಸವದ ಪ್ರಯುಕ್ತ ಉಚಿತ ದಂತ ಚಿಕಿತ್ಸಾ, ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರವು ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಮತ್ತು ಮಹಿಳಾ ಘಟಕ, ಬಂಡಿಕೊಟ್ಯ, ಉಳ್ಳಾಲ ಹಾಗೂ ವಿದ್ಯಾರಣ್ಯ ಯುವಕ ವೃಂದ (ರಿ.) ಮತ್ತು ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಇವರುಗಳ ಸಂಯುಕ್ತ ಆಶ್ರಯದಲ್ಲಿ ಸಮುದಾಯ ಭವನ ಉಳ್ಳಾಲ ನಗರಸಭೆ ಆವರಣದಲ್ಲಿ  ಜರುಗಿತು.

    ಈ ಕಾರ್ಯಕ್ರಮವನ್ನು ಶ್ರೀ ಚೀರುಂಭ ಭಗವತಿ ಕ್ಷೇತ್ರದ ಪ್ರಧಾನ ಅರ್ಚಕ ಮಂಜಪ್ಪ ಕರ್ನಾವರ್ ಇವರ ಗೌರವ ಉಪಸ್ಥಿತಿಯಲ್ಲಿ, ಉದ್ಯಮಿ ಹಾಗೂ ಅವಿನಾಶ್ ಗ್ಯಾಸ್ ಏಜೆನ್ಸಿಯ ಮಾಲಕ ಬಿ. ಡಿ ಗೋಪಾಲ್ ಇವರು ಉದ್ಘಾಟಿಸಿದರು. ಯೆನೆಪೋಯ ಆಸ್ಪತ್ರೆಯ ವೈದ್ಯರಾದ ಡಾ. ಸುಪ್ರಿಯ ರವರು ಮಾತನಾಡಿ, ಈ ಶಿಬಿರದಲ್ಲಿ ಉಚಿತ ದಂತ ತಪಾಸಣೆ ಮತ್ತು ಸಲಹೆ, ಹಲ್ಲುಗಳ ಶುಚೀಕರಣ, ಹಲ್ಲುಗಳ ಚಿಕ್ಕ ಚಿಕ್ಕ ಭರ್ತಿಗೊಳಿಸುವ ಚಿಕಿತ್ಸೆ, ಚಿಕಿತ್ಸೆಗೆ ಒಳಪಡದ ಮತ್ತು ಬಹಳ ಕೆಟ್ಟಿರುವ ಹಲ್ಲುಗಳನ್ನು ಕೀಳಿಸುವುದರ ಜೊತೆಗೆ ಹೆಚ್ಚಿನ ಚಿಕಿತ್ಸೆಗಾಗಿ ಹಸಿರು ಕಾರ್ಡನ್ನು ನೀಡಿ ಆಸ್ಪತ್ರೆಯಲ್ಲೂ ಹೆಚ್ಚಿನ ಸೇವೆಯನ್ನು ನೀಡಲಾಗುವುದು. ಸಾರ್ವಜನಿಕರು ಇಂತಹ ಶಿಬಿರಗಳ ಪ್ರಯೋಜನವನ್ನು ಹೆಚ್ಚು ಹೆಚ್ಚು ಪಡೆಯಬೇಕು ಎಂದರು.

    ಕೆ.ಎಂ.ಸಿ. ಆಸ್ಪತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿಯಾದ ಹರ್ಬಟ್ ಪಿರೈರಾ ಅವರು ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಯೋಗದೊಂದಿಗೆ ಕೆ.ಎಂ.ಸಿ. ಆಸ್ಪತ್ರೆಯು ಹಲವಾರು ಉಚಿತ ಶಿಬಿರಗಳನ್ನು ಆಯೋಜನೆ ಮಾಡಿದ್ದು, ಈ ಶಿಬಿರದಲ್ಲಿ ಉಚಿತ ಕಣ್ಣಿನ ತಪಾಸಣೆ, ಅಗತ್ಯವುಳ್ಳವರಿಗೆ ಕಣ್ಣಿನ ಪೊರೆಯ ಶಸ್ತ್ರಚಿಕಿತ್ಸೆ ಮಾಡಲಾಗುವುದು. ಬಿ.ಪಿ. ಮತ್ತು ಮಧುಮೇಹ ತಪಾಸಣೆ, ಎಲುಬು, ಕೀಲು, ಕಿವಿ, ಮೂಗು, ಗಂಟಲು ತಪಾಸಣೆ, ಜನರಲ್ ವೈದ್ಯಕೀಯ ಸಮಾಲೋಚನೆ, ಉಚಿತ ಔಷಧಿ ವಿತರಣೆಯನ್ನು ನೀಡಲಾಗುವುದು ಎಂದರು.

    ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಇದರ ಮಾಜಿ ಅಧ್ಯಕ್ಷ ರವೀಂದ್ರ ರಾಜ್ ಮಾತನಾಡಿ, ಉಳ್ಳಾಲವು ರಾಣಿ ಅಬ್ಬಕ್ಕನ ಹೆಸರಿನೊಂದಿಗೆ, ಉಳ್ಳಾಲ ಶ್ರೀನಿವಾಸ ಮಲ್ಯರಂತಹ ಮೇರು ವ್ಯಕ್ತಿತ್ವವನ್ನು ಪರಿಚಯಿಸಿದ ಊರಾಗಿದ್ದು, ಇಂತಹ ಪರಿಸರದಲ್ಲಿ ಶ್ರೀಯುತ ಚಿತ್ತರಂಜನ್ ಬೋಳಾರ್ ಅವರ ನೇತೃತ್ವದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಮಾಡುತ್ತಿರುವ ಇಂತಹ ಸಮಾಜ ಮುಖಿ ಕಾರ್ಯಕ್ರಮಗಳು ಶ್ಲಾಘನೀಯ ಎಂದರು.

    ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ  ಚಿತ್ತರಂಜನ್ ಬೋಳಾರ್  ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಪ್ರತೀ ವರ್ಷ ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ನಿರಂತರವಾಗಿ ಆರೋಗ್ಯ ಶಿಬಿರವನ್ನು ಏರ್ಪಡಿಸುತ್ತಾ ಬಂದಿದ್ದು, ಇದು ಸಂಘದ 66ನೇ ಉಚಿತ ವೈದ್ಯಕೀಯ ಶಿಬಿರವಾಗಿದೆ. ಈ ಕಾರ್ಯಕ್ರಮವು ಉಳ್ಳಾಲದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ಇದರಿಂದ ಸಾರ್ವಜನಿಕರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಲ್ಲಿ ನಮ್ಮ ಸಹಕಾರಿ ಸಂಘವು ಮುಖ್ಯ ಪಾತ್ರ ವಹಿಸಿದೆ. ಸಂಘವು ಏರ್ಪಡಿಸುವ ಕಾರ್ಯಕ್ರಮಗಳಲ್ಲಿ ಸ್ಥಳೀಯ ಸಂಘ ಸಂಸ್ಥೆಗಳು ಸಹಕಾರವನ್ನು ನೀಡಿದೆ. ಆರೋಗ್ಯ ಶಿಬಿರದ ಯಶಸ್ವಿಗೆ ಕಳೆದ 8 ವರ್ಷಗಳಿಂದ ಉಚಿತ ಕನ್ನಡಕವನ್ನು ನೀಡಿ ಸಹಕರಿಸುತ್ತಿರುವ ಉದ್ಯಮಿ ಹಾಗೂ ಅವಿನಾಶ್ ಗ್ಯಾಸ್ ಏಜೆನ್ಸಿಯ ಮಾಲಕ ಬಿ. ಡಿ ಗೋಪಾಲ್ ಇವರ ಜನಪರ ಕಾಳಜಿ ಶ್ಲಾಘನೀಯ ಎಂದರು.

    ಅದೇ ರೀತಿ ಇಂತಹ ಆರೋಗ್ಯ ಶಿಬಿರವನ್ನು ಏರ್ಪಡಿಸಲು ಸಹಕರಿಸುತ್ತಿರುವ ಕೆ.ಎಂ.ಸಿ. ಆಸ್ಪತ್ರೆ ಹಾಗೂ ಯೆನೆಪೋಯ ಆಸ್ಪತ್ರೆಯ ಆಡಳಿತ ವರ್ಗ, ವೈದ್ಯರು ಹಾಗೂ ಸಿಬ್ಬಂದಿವರ್ಗದವರಿಗೂ ಕ್ರತಜ್ನತೆಯನ್ನು ಸಲ್ಲಿಸಿದರು. ಸಂಘವು ಕಳೆದ ಆರ್ಥಿಕ ಸಾಲಿನಲ್ಲಿ 3.3 ಕೋಟಿಗೂ ಮಿಕ್ಕಿ ಲಾಭವನ್ನು ಗಳಿಸಿದ್ದು, ಅತೀ ಶೀಘ್ರದಲ್ಲಿ 33ನೇ ನೂತನ ಕೃಷ್ಣಾಪುರ ಶಾಖೆಯು ತನ್ನ ಸ್ವಂತ ಕಟ್ಟಡದಲ್ಲಿ ಕಾರ್ಯಾರಂಭಗೊಳ್ಳಲಿದೆ ಎಂದು ತಿಳಿಸಿದರು.

    ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಉಪಾಧ್ಯಕ್ಷ  ನೇಮಿರಾಜ್ ಪಿ. ನಿರ್ದೇಶಕ ರಮನಾಥ್ ಸನಿಲ್, ಗೋಪಾಲ್ ಎಮ್., ಬ್ರಹ್ಮಶ್ರೀ ನಾರಾಯಣ ಗುರು ಸ್ವಾಮಿ ಪ್ರಕಾಶನ ಮತ್ತು ಚಾರಿಟೇಬಲ್ ಟ್ರಸ್ಟ್ (ರಿ.) ಮಂಗಳೂರು ಇದರ ಉಪಾಧ್ಯಕ್ಷ  ಚಂದ್ರಹಾಸ ಮರೋಳಿ, ಕೆ.ಎಂ.ಸಿ. ಆಸ್ಪತ್ರೆಯ ವೈದ್ಯ ಡಾ. ತನುಶ್ರೀ ಅರೋರ, ಯೆನೆಪೊಯ ಆಸ್ಪೆತ್ರೆಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಭರತ್, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘ (ರಿ.) ಬಂಡಿಕೊಟ್ಯ, ಉಳ್ಳಾಲ ಇದರ ಗೌರವ ಅಧ್ಯಕ್ಷ ಅಶೋಕ್ ಧರ್ಮನಗರ, ಅಧ್ಯಕ್ಷ ಪ್ರಶಾಂತ್, ಬ್ರಹ್ಮಶ್ರೀ ನಾರಾಯಣಗುರು ಬಿಲ್ಲವ ಸೇವಾ ಸಂಘದ ಮಹಿಳಾ ಘಟಕದ ಅಧ್ಯಕ್ಷ ರೂಪ ಧರ್ಮನಗರ, ವಿದ್ಯಾರಣ್ಯ ಯುವಕ ವೃಂದದ ಗೌರವ ಅಧ್ಯಕ್ಷ ವಿಜಯ ಕುಮಾರ್, ವಿದ್ಯಾರಣ್ಯ ಕಲಾವೃಂದ ಉಳ್ಳಾಲ ಇದರ ಅಧ್ಯಕ್ಷ ಜಯ ಉಳ್ಳಾಲ, ದಕ್ಷಿಣ ಕನ್ನಡ ಜಿಲ್ಲಾ ಗಿಲ್ ನೆಟ್ ಯೂನಿಯನ್‌ನ ಅಧ್ಯಕ್ಷ ಸತೀಶ್ ಕೋಟ್ಯಾನ್ ಉಪಸ್ಥಿತರಿದ್ದರು. ಕಾರ್ಯಕ್ರಮದಲ್ಲಿ ಸುಮಾರು 250 ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ, ಉಚಿತ ಓಷಧಿ, ವಿತರಣೆ, ದಂತ ಚಿಕಿತ್ಸಾ ಹಾಗೂ ನೇತ್ರ ತಪಾಸಣೆಯನ್ನು ನಡೆಸಲಾಯಿತು.

    ಇದನ್ನೂ  ಓದಿ : WATCH : ಚಲಿಸುತ್ತಿದ್ದ ಟ್ರಕ್ ನಲ್ಲಿ ಕಳ್ಳರ ಕರಾಮತ್ತು; ಸಿನಿಮೀಯ ರೀತಿಯಲ್ಲಿ ಸರಕು ಕದ್ದ ಖದೀಮರು! ನಿಬ್ಬೆರಗಾದ ನೆಟ್ಟಿಗರು!

    ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಸಹಾಯಕ ಪ್ರಬಂಧಕ ವಿಶ್ವನಾಥ್ ಸ್ವಾಗತಿಸಿ, ಸಿಬ್ಬಂದಿ ಕುಮಾರಿ ಸ್ವಾತಿ ಎಸ್. ವಂದಿಸಿದರು. ಕಾರ್ಯಕ್ರಮದ ನಿರೂಪಣೆಯನ್ನು ಹಿರಿಯ ಶಾಖಾಧಿಕಾರಿ ಸೌಮ್ಯಲತಾ ಹಾಗೂ ಕುಮಾರಿ ಹರ್ಷಿತಾ ಮಾಡಿದರು. ಉಚಿತ ದಂತ ಚಿಕಿತ್ಸಾ, ನೇತ್ರ ತಪಾಸಣಾ ಮತ್ತು ಸಾಮಾನ್ಯ ವೈದ್ಯಕೀಯ ಶಿಬಿರದ ಸಂಯೋಜನೆಯನ್ನು ಹಿರಿಯ ಶಾಖಾಧಿಕಾರಿಯಾದ ಸಚಿನ್ ನಡೆಸಿದರು.

    Click to comment

    Leave a Reply

    Your email address will not be published. Required fields are marked *

    LATEST NEWS

    ವಯನಾಡಿನಿಂದ ಪ್ರಿಯಾಂಕಾ ಗಾಂಧಿ ಸ್ಪರ್ಧೆ..!

    Published

    on

    ನವದೆಹಲಿ / ಮಂಗಳೂರು : ರಾಯ್‌ ಬರೇಲಿ ಹಾಗೂ ವಯನಾಡು ಎರಡೂ ಕಡೆಯಿಂದ ಗೆಲುವು ಸಾಧಿಸಿದ್ದ ರಾಹುಲ್ ಗಾಂಧಿ, ವಯನಾಡು ಕ್ಷೇತ್ರವನ್ನು ಬಿಟ್ಟುಕೊಟ್ಟಿದ್ದಾರೆ. ಈ ಮೂಲಕ ಪ್ರಿಯಾಂಕಾ ಗಾಂಧಿ ವಯನಾಡಿನಲ್ಲಿ ಚುನಾವಣೆ ಸ್ಪರ್ಧಿಸುವುದು ಖಚಿತವಾಗಿದೆ. ಈ ಬಗ್ಗೆ ಮಾಧ್ಯಮಗಳಿಗೆ ರಾಹುಲ್ ಗಾಂಧಿ ಮಾಹಿತಿ ನೀಡಿದ್ದಾರೆ.


    2019 ರ ಚುನಾವಣೆಯಲ್ಲಿ ರಾಹುಲ್‌ ಗಾಂಧಿಗೆ ಮರು ಜೀವ ನೀಡಿದ ಕ್ಷೇತ್ರ ವಯನಾಡು. ಅಮೇಠಿ ಹಾಗೂ ವಯನಾಡಿನಿಂದ ಸ್ಪರ್ಧೆ ಮಾಡಿದ್ದ ರಾಹುಲ್ ಗಾಂಧಿ ಅಮೇಠಿಯಲ್ಲಿ ಸೋಲು ಕಂಡಿದ್ದರು. ಬಿಜೆಪಿಯ ಸ್ಮೃತಿ ಇರಾನಿ ಗೆಲುವು ಸಾಧಿಸಿ ಸಚಿವೆ ಕೂಡಾ ಆಗಿದ್ದರು. 2024 ರ ಚುನಾವಣೆಯಲ್ಲಿ ಅಮೇಠಿಯಲ್ಲಿ ಗಾಂಧಿ ಕುಟುಂಬದ ಆಪ್ತ ಕಿಶೋರಿಲಾಲ್ ಶರ್ಮ ಸ್ಪರ್ಧೆ ಮಾಡಿ ಗೆಲುವು ಸಾಧಿಸಿದ್ದಾರೆ.
    ರಾಯಬರೇಲಿ ಕ್ಷೇತ್ರದಲ್ಲಿ ಸೋನಿಯಾ ಗಾಂಧಿ ಸ್ಪರ್ಧೆ ಮಾಡುತ್ತಿದ್ದು, ಈ ಬಾರಿ ಅವರು ರಾಜ್ಯಸಭೆಯಿಂದ ಸಂಸದರಾಗಿ ಕ್ಷೇತ್ರವನ್ನು ರಾಹುಲ್ ಗಾಂಧಿಗೆ ಬಿಟ್ಟುಕೊಟ್ಟಿದ್ದರು. ರಾಯಬರೇಲಿಯಲ್ಲಿ ರಾಹುಲ್‌ ಗಾಂಧಿ ನಾಲ್ಕು ಲಕ್ಷಕ್ಕೂ ಅಧಿಕ ಮತಗಳಿಂದ ಗೆಲುವು ಸಾಧಿಸಿದ್ದರು. ಇನ್ನು ವಯನಾಡಿನಲ್ಲೂ ನಿರೀಕ್ಷೆಯಂತೆ ಗೆಲುವು ಸಾಧಿಸಿದ್ದರು. ಇದೀಗ ವಯನಾಡು ಕ್ಷೇತ್ರವನ್ನು ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿಗೆ ಬಿಟ್ಟುಕೊಟ್ಟಿದ್ದಾರೆ.


    ಈ ಎರಡೂ ಕ್ಷೇತ್ರಗಳ ಜನರ ಜೊತೆ ನನ್ನ ಉತ್ತಮ ಬಾಂಧವ್ಯವಿದ್ದು, ವಯನಾಡು ಕ್ಷೇತ್ರ ಬಿಟ್ಟಿರುವುದಕ್ಕೆ ತುಂಬಾ ಬೇಸರವಾಗಿದೆ. ಆದ್ರೆ, ನನ್ನ ಸಹೋದರಿ ಅಲ್ಲಿ ಗೆದ್ದು ಜನರ ಜೊತೆ ಇರಲಿದ್ದಾರೆ ಎಂದು ರಾಹುಲ್ ಗಾಂಧಿ ಹೇಳಿದ್ದಾರೆ.

    ಇದನ್ನು ಓದಿ:ಪ್ರತಿಭಟನೆ ವೇಳೆ ಸುಸ್ತಾದ ಬಿಜೆಪಿಯ ಹಿರಿಯ ನಾಯಕ ಭಾನುಪ್ರಕಾಶ್ ನಿಧನ

    Continue Reading

    LATEST NEWS

    ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ ರೈಲು ಅಪಘಾತ; 8 ಮಂದಿ ಸಾವು

    Published

    on

    ನವದಹಲಿ: ಪಶ್ಚಿಮ ಬಂಗಾಳದ ರಂಗಪಾಣಿ ನಿಲ್ದಾಣದ ಬಳಿ ಸೋಮವಾರ(ಜೂ.17) ಗೂಡ್ಸ್ ರೈಲು ಸೀಲ್ದಾಹ್ ಕಡೆಗೆ ಹೋಗುವ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದ ನಂತರ ಕನಿಷ್ಠ 19 ರೈಲುಗಳನ್ನು ರದ್ದುಗೊಳಿಸಲಾಗಿದೆ. ಈ ದುರ್ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು, ಸುಮಾರು 50 ಮಂದಿ ಗಾಯಗೊಂಡಿದ್ದಾರೆ.

    ಪಶ್ಚಿಮ ಬಂಗಾಳದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರಿಗೆ ಪ್ರಧಾನಿ ನರೇಂದ್ರ ಮೋದಿ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬಕ್ಕೆ ಪ್ರಧಾನಮಂತ್ರಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ತಲಾ ಎರಡು ಲಕ್ಷ ರೂಪಾಯಿ ಮತ್ತು ಗಾಯಗೊಂಡವರಿಗೆ 50,000 ರೂಪಾಯಿ ಪರಿಹಾರ ಘೋಷಿಸಿದ್ದಾರೆ.

    Read More..; ಉಪ್ಪಿನಂಗಡಿ: ಮಹಿಳೆ ಸಾ*ವಿನಲ್ಲಿ ಅನುಮಾನ; ಕೊ*ಲೆ ಶಂಕೆ

    ನ್ಯೂ ಜಲ್ಪೈಗುರಿ ಬಳಿ ಗೂಡ್ಸ್ ರೈಲು ಸಿಗ್ನಲ್ ಅನ್ನು ನಿರ್ಲಕ್ಷಿಸಿದ ಕಾರಣ ಮತ್ತು ಅಗರ್ತಲಾದಿಂದ ಸೀಲ್ದಾಹ್‌ಗೆ ತೆರಳುತ್ತಿದ್ದ ಕಾಂಚನ್‌ಜುಂಗಾ ಎಕ್ಸ್‌ಪ್ರೆಸ್‌ಗೆ ಡಿಕ್ಕಿ ಹೊಡೆದಿದ್ದರಿಂದ ಸಂಭವಿಸಿದೆ ಎಂದು ರೈಲ್ವೇ ಮಂಡಳಿಯ ಅಧ್ಯಕ್ಷ ಜಯ ವರ್ಮ ಸಿನ್ಹಾ ಹೇಳಿದ್ದಾರೆ.

    Continue Reading

    DAKSHINA KANNADA

    ಚಿಕ್ಕಮೇಳದ ಹೆಸರಿನಲ್ಲಿ ಯಕ್ಷಗಾನ ಕಲೆಗೆ ಅಪಚಾರ ಮಾಡದಿರಿ; ಒಕ್ಕೂಟ ಮನವಿ

    Published

    on

    ಮಂಗಳೂರು: ಇಂದು ದೇಶ, ವಿದೇಶಗಳಲ್ಲಿ ಯಕ್ಷಗಾನದ ಹಿರಿಮೆ ಸಾರಲಾಗುತ್ತಿದೆ. ಆದರೆ ಇತ್ತೀಚಿನ ದಿನಗಳಲ್ಲಿ ಕಲೆಯ ಹೆಸರಿನಲ್ಲಿ ಕಲೆಯ ಗಂಧಗಾಳಿ ಇಲ್ಲದವರು ಕೂಡಾ ಯಕ್ಷ ಕಲೆಯನ್ನು ವಿರೂಪಗೊಳಿಸುತ್ತಿವುದು ವಿಷಾದನೀಯ ಸಂಗತಿ. ಇತ್ತೀಚಿನ ದಿನಗಳಲ್ಲಿ ಮಳೆಗಾಲದಲ್ಲಿ ತಿರುಗಾಟದ ಇಲ್ಲದ ಸಂದರ್ಭದಲ್ಲಿ ಮನೆ ಮನೆಗೆ ಚಿಕ್ಕ ಮೇಳಗಳು ಹೊರಡುತ್ತವೆ. ಆದರೆ ಯಕ್ಷಗಾನದ ಬಾಲಪಾಠವೂ ಆಗದವರಿಂದ ಚಿಕ್ಕ ಮೇಳ ಎಂದು ಹೆಸರಿಟ್ಟುಕೊಂಡು ಅದೊಂದು ದಂಧೆಯಾಗಿ ವ್ಯಾಪಕವಾಗಿರುವುದು ನೋವಿನ ಸಂಗತಿ ಎಂದು ತೆಂಕುತಿಟ್ಟು ಚಿಕ್ಕಮೇಳಗಳ ಒಕ್ಕೂಟ ದಕ್ಷಿಣ ಕನ್ನಡ ಜಿಲ್ಲೆ ಕೇಂದ್ರ ಸಮಿತಿ ದೂರಿದೆ.

    ಸಂಪ್ರದಾಯಕ್ಕೆ ಬದ್ಧವಾಗಿ, ಶಿಸ್ತುಬದ್ಧವಾಗಿ ಯಕ್ಷಗಾನ ಮಾಡಲು ಕಲಾವಿದರಲ್ಲಿ ಒಟ್ಟು ಮಾಡಿಕೊಂಡು ತೆಂಕುತಿಟ್ಟು ಚಿಕ್ಕಮೇಳ ಹೆಸರಿನಲ್ಲಿ ತಿರುಗಾಟವನ್ನು ಆರಂಭಿಸಲಾಗಿದೆ. ಒಕ್ಕೂಟದ ಪರವಾನಿಗೆ ಇದ್ದವರಿಗೆ ಮಾತ್ರ ಮನೆಯಲ್ಲಿ ಆಟವಾಡಿಸಲು ಜನತೆ ಅನುವು ಮಾಡಿಕೊಡಬೇಕು ಎಂದು ಒಕ್ಕೂಟದ ಅಧ್ಯಕ್ಷ ಸರಪಾಡಿ ಅಶೋಕ್ ಶೆಟ್ಟಿ ಹೇಳಿದ್ದಾರೆ.

    ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿದ ಅವರು ನಿಜವಾದ ಕಲಾವಿದರಿಗೆ ಅನ್ಯಾಯವಾಗಬಾರದು ಎನ್ನುವ ನಿಟ್ಟಿನಲ್ಲಿ ಒಕ್ಕೂಟವನ್ನು ರಚನೆ ಮಾಡಲಾಗಿದೆ. ಒಕ್ಕೂಟದ ಅಧಿಕೃತ ಪರವಾಣಿಗೆ ಪಡೆದು ತಿರುಗಾಟ ಮಾಡುವವರು ಸಂಜೆ 6ರಿಂದ ರಾತ್ರಿ 10.30ರವರೆಗೆ ಕನ್ನಡ ಇಲ್ಲವೇ ತುಳುಭಾಷೆಗಳ ಗರಿಷ್ಠ 20 ನಿಮಿಷಗಳ ಸಂದೇಶ ಇರುವ ಸನ್ನಿವೇಶದ ಪ್ರದರ್ಶನ ಮಾಡಲಿರುವರು ಎಂದರು.

    ಸುದ್ದಿಗೋಷ್ಠಿಯಲ್ಲಿ ಪದಾಧಿಕಾರಿಗಳಾದ ರಮೇಶ ಕುಲಶೇಖರ, ಕುಮಾರ್ ಮಾಲೆಮಾರ್‌, ದಿವಾಕರ ದಾಸ್, ಕಡಬ ದಿನೇಶ ರೈ ಮೊದಲಾದವರಿದ್ದರು.

    Continue Reading

    LATEST NEWS

    Trending