DAKSHINA KANNADA
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ : ಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ
Published
5 months agoon
By
NEWS DESK4ಉಪ್ಪಿನಂಗಡಿ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಉಪ್ಪಿನಂಗಡಿ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ), ಜೇಸಿಐ ಉಪ್ಪಿನಂಗಡಿ ಇವರ ಜಂಟಿ ಸಹಯೋಗದೊಂದಿಗೆ ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್, ದೇರಳಕಟ್ಟೆ ಇವರ ವೈದರ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉಪ್ಪಿನಂಗಡಿ ಎಚ್. ಎಮ್.ಆಡಿಟೋರಿಯಂನಲ್ಲಿ ಜರುಗಿತು.
ಈ ಕಾರ್ಯಕ್ರಮವನ್ನು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ನಿ. ಇದರ ಅಧ್ಯಕ್ಷ ಕೆ.ವಿ.ಪ್ರಸಾದ್‌ರವರು ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯದ ದೃಷ್ಟಿಯಿಂದ ಇಂತಹ ಶಿಬಿರಗಳನ್ನು ಆಯೋಜಿಸಿ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ ಎಂದರು.
ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಮಾತನಾಡಿ, ಹಲಸು ಹಬ್ಬದ ಕಾರ್ಯಕ್ರಮದ ಜೊತೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇದರ ಸಹಭಾಗಿತ್ವದೊಂದಿಗೆ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರ ಜನರಿಗೆ ಅನುಕೂಲವಾಗಲಿ. ಇದು ಜೇಸಿಐ ಸಂಸ್ಥೆಗೂ ಕೂಡ ಹೆಮ್ಮೆ ಎಂದು ತಿಳಿಸಿದರು.
ಈ ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಇದರ ಅಧ್ಯಕ್ಷ ಲವೀನ ಪಿಂಟೋ ಮಾತನಾಡಿ, ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಗ್ರಾಮೀಣ ಭಾಗದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಸಂಘವು ಇನ್ನು ಹೆಚ್ಚು ಹೆಚ್ಚು ಶಿಬಿರ ಗ್ರಾಮೀಣ ಪ್ರದೇಶಗಳಲ್ಲಿ ನಡೆಸಲಿ ಹಾಗೂ ಇನ್ನಷ್ಟು ಜನರು ಇದರ ಪ್ರಯೋಜನ ಪಡೆಯುವಂತಗಲಿ ಎಂದು ಶುಭ ಹಾರೈಸಿದರು.
ಅದ್ವಿಕ್ ದಂತ ಕ್ಲಿನಿಕ್ ಇದರ ದಂತ ವೈದ್ಯ ಡಾ|| ಆಶಿತ್ ಎಮ್.ವಿ. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರ ವಲ್ಲದೆ, ಉಚಿತ ವೈದ್ಯಕೀಯ ಶಿಬಿರದ ಜೊತೆಗೆ ಇಂತಹುದೇ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್, ದೇರಳಕಟ್ಟೆ ಇದರ ವೈದ್ಯರಾದ ಡಾ|| ಜೈನುದ್ದೀನ್ ಮಾತನಾಡಿ, ಕಣಚೂರು ಆಯುರ್ವೇದ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ಯನ್ನು ನೀಡಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದೆ. ಗ್ರಾಮೀಣ ಭಾಗದಲ್ಲಿ ಕೃಷಿ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಘವು ಕೃಷಿ ಮೇಳ ಹಾಗೂ ಹಲಸಿನ ಹಬ್ಬದಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಉಪ್ಪಿನಂಗಡಿ ಪರಿಸರದ ಸದಸ್ಯರ ಸಹಕಾರದಿಂದಾಗಿ ಉಪ್ಪಿನಂಗಡಿ ಶಾಖೆಯು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಹಕಾರವಿರಲಿ ಹಾಗೆಯೇ ಇಂದಿನ ಈ ಶಿಬಿರವು ಸಾರ್ವಜನಿಕರಿಗೆ ಉಪಯುಕ್ತವಾಗಲಿ ಎಂದು ಹೇಳಿದರು.
ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶಿಬಿರಾರ್ಥಿಗಳಿಗೆ ಉಚಿತ ಔಷದಿ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು ೧೫೦೦೦ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಸಂಘದ ಸ್ವಂತ ಮಾಲಿಕತ್ವದ ನೂತನ ೩೩ನೇ ಶಾಖೆಯು ಜುಲೈ ೧೫ರಂದು ಕೃಷ್ಣಾಪುರದಲ್ಲಿ ಸಾರ್ವಜನಿಕ ಸೇವೆಗಾಗಿ ಶುಭಾರಂಭಗೊಳ್ಳಲಿದೆ.
ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮನಾಥ್ ಸನಿಲ್, ಗೋಪಾಲ್ ಎಂ, ಚಂದ್ರಾವತಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ, ಉಪ್ಪಿನಂಗಡಿ ಇದರ ಅಧ್ಯಕ್ಷ ಅಜಿತ್ ಪಾಲೇರಿ, ಜೇಸಿಐ ವಲಯ ನಿರ್ದೇಶಕ ಭರತ್ ಶೆಟ್ಟಿ ಮತ್ತಿತರರು ಉಪಸ್ಧಿತರಿದ್ದರು.
ಇದನ್ನೂ ಓದಿ : ಕೇರಳದಲ್ಲಿ ಅಮೀಬಾ ಸೋಂಕಿಗೆ ನಾಲ್ಕು ಮಕ್ಕಳು ಬಲಿ..! ದ.ಕ ಜಿಲ್ಲೆಯಲ್ಲೂ ಹೈ ಅಲರ್ಟ್..!
ಕಾರ್ಯಕ್ರಮದಲ್ಲಿ ಸುಮಾರು ೧೬೦ ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಇವರು ಸ್ವಾಗತಿಸಿ, ಶಾಖಾಧಿಕಾರಿ ಭವ್ಯ ವಂದಿಸಿದರು. ಶಾಖಾಧಿಕಾರಿ ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಕವಿತಾ.ಐ ನಡೆಸಿದರು.
You may like
ಮಂಗಳೂರು: ಭಾರತೀಯ ದೂರ ಸಂಪರ್ಕ ನಿಯಂತ್ರಣ ಪ್ರಾಧಿಕಾರದಿಂದ ಕರೆ ಮಾಡುವುದಾಗಿ ತಿಳಿಸಿ, ಮೊಬೈಲ್ ಸಿಮ್ ಖರೀದಿಸಿ ಕಾನೂನು ಬಾಹಿರ ಚಟುವಟಿಕೆ ಕುರಿತು ಆರೋಪಿಸಿ 1.71 ಕೋ.ರೂ ವಂಚಿಸಿರುವ ಕುರಿತು ಸೆನ್ ಠಾಣೆಯಲ್ಲಿ ಪ್ರಕರಣ ದಾಖಲಾಗದೆ.
ನ.11 ರಂದು ಅಪರಿಚಿತ ವ್ಯಕ್ತಿಯೋರ್ವರು ಟ್ರಾಯ್ ಪ್ರತಿನಿಧಿ ಎಂದು ಕರೆ ಮಾಡಿದ್ದು, ‘ನಿಮ್ಮ ಹೆಸರಿನಲ್ಲಿ ಇನ್ನೊಂದು ಮೊಬೈಲ್ ನಂಬರ್ ರಿಜಿಸ್ಟರ್ ಆಗಿದೆ, ಮುಂಬೈನ ಅಂಧೇರಿ ಯ ಮೂಲಕ ಕಾನೂನು ಬಾಹಿರ ಚಟುವಟಿಕೆ ನಡೆದಿದೆ . ಮಾರ್ಕೆಟಿಂಗ್ ನೆಪದಲ್ಲಿ ಈ ನಂಬರ್ ಮೂಲಕ ಕರೆ ಮಾಡಿ ಕಿರುಕುಳ ನೀಡುತ್ತಿರುವ ಕುರಿತು ಎಫ್‌ಐಆರ್ ದಾಖಲಾಗಿದೆ. ಈಗಲೇ ನೀವು ಅಂಧೇರಿ ಠಾಣೆಯನ್ನು ಸಂಪರ್ಕ ಮಾಡಬೇಕು. ಇಲ್ಲದಿದ್ದರೆ ನಿಮ್ಮ ಎರಡು ಮೊಬೈಲ್ ಸೇವೆಯನ್ನು ಕೊನೆಗಳಿಸಲಾಗುವುದು’ ಎಂದು ಹೇಳಿದ್ದಾರೆ.
ಅನಂತರ ವಾಟ್ಸಪ್ ಮೂಲಕ ವೀಡಿಯೋ ಕರೆ ಮಾಡಿದ್ದು, ನ.13 ರಿಂದ 19 ರ ನಡುವೆ 53 ಲಕ್ಷ, 74 ಲಕ್ಷ ರೂ, 44 ಲಕ್ಷ ರೂ, ಹೀಗೆ ಒಟ್ಟು 1.71 ಕೋ.ರೂ ವರ್ಗಾಯಿಸಿಕೊಂಡು ಮೋಸ ಮಾಡಿದ್ದಾನೆ. ದೂರುದಾರರು ಅಮೆರಿಕಾದ ಐಟಿ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದು, ವಾಪಾಸಾದ ಬಳಿಕ ಮಂಗಳೂರಿನಲ್ಲಿ ಫ್ಲ್ಯಾಟ್ ಒಂದನ್ನು ಖರೀದಿ ಮಾಡಿದ್ದರು. ಅವರು ಅವಿವಾಹಿತರಾಗಿದ್ದು, ಒಬ್ಬರೇ ವಾಸ ಮಾಡುತ್ತಿದ್ದರು. ಉದ್ಯೋಗದ ಮೂಲಕ ಉಳಿತಾಯ ಮಾಡಿದ ಸಂಪಾದನೆಯನ್ನು ಈ ಮೂಲಕ ಕಳೆದುಕೊಂಡಿದ್ದಾರೆ.
DAKSHINA KANNADA
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
Published
18 hours agoon
21/11/2024By
NEWS DESK3ಮಂಗಳೂರು/ಆಂಧ್ರಪ್ರದೇಶ: ಭಕ್ತರು ದೇವರಿಗೆ ಹಾಲಿನ ಅಭಿಷೇಕ, ಹೂವಿನ ಅಭಿಷೇಕ ನೀರು, ಚಂದನ ಅಥವಾ ಗಂಧದ ಅಭಿಷೇಕ ಮುಂತಾದವುಗಳನ್ನು ಅರ್ಪಿಸುವುದು ಸಾಮಾನ್ಯವಾಗಿದೆ. ಆದರೆ, ಆಂಧ್ರಪ್ರದೇಶದ ಏಲೂರು ಜಿಲ್ಲೆಯ ಶ್ರೀ ಶಿವದತ್ತ ಸ್ವಾಮಿಜಿ ಭಕ್ತರಿಂದ ಮೆಣಸಿನ ಪುಡಿ ಅಭಿಷೇಕ ಮಾಡಿಸಿಕೊಂಡಿರುವ ಸುದ್ಧಿ ಫುಲ್ ವೈರಲ್ ಆಗುತ್ತಿದೆ.
ಆಂಧ್ರಪ್ರದೇಶದ ಪ್ರತ್ಯಂಗಿರ ಆಶ್ರಮದಲ್ಲಿ ಈ ವಿಶಿಷ್ಟವಾದ ಅಭಿಷೇಕ ನಡೆದಿದ್ದು, ಸುಮಾರು 100 ಕೆಜಿ ಮೆನಸಿನಕಾಯಿಯನ್ನು ಬಳಸಲಾಗಿದ್ದು, ಇದನ್ನು ಮಾಡುವುದರಿಂದ ಭಕ್ತರ ಕಷ್ಟಗಳು ದೂವಾಗುತ್ತದೆ ಎಂಬ ನಂಬಿಕೆ ಇದೆ. ಪ್ರತ್ಯಂಗಿರಿ ದೇವಿಗೆ ಮೆಣಸಿನಕಾಯಿ ಎಂದರೆ ತುಂಬಾ ಇಷ್ಟ. ದೇವಿಯ ಕೊರಳಿಗೆ ಕೆಂಪು ಮೆಣಸಿನಕಾಯಿ ಮಾಲೆ ಹಾಕಿ ಪೂಜಿಸಲಾಗಿದ್ದು, ಇದನ್ನು ‘ಕರಂ ಅಭಿಷೇಕ’ ಎಂದು ಕೂಡ ಕರೆಯಲಾಗುತ್ತದೆ.
ಇದನ್ನು ಓದಿ:ಯೂಟ್ಯೂಬ್ನಲ್ಲಿ ಸಿನಿಮಾ ವಿಮರ್ಶೆ ಮಾಡುವುದರ ಮೇಲೆ ಬಿತ್ತು ನಿಷೇಧ
ಕಳೆದ 14 ವರ್ಷಗಳಿಂದ ಪ್ರತ್ಯಂಗಿರ ಆಶ್ರಮದಲ್ಲಿ ಮೆಣಸಿನಕಾಯಿಯಿಂದ ಅಭಿಷೇಕ ನಡೆಸಿಕೊಂಡು ಬರುತ್ತಿದೆ. ಪ್ರತೀ ವರ್ಷ ಈ ಅಭಿಷೇಕದಲ್ಲಿ ಸಾವಿರಾರು ಭಕ್ತರು ಪಾಲ್ಗೊಂಡು ಮೆಣಸಿನ ಪುಡಿ ಸಮರ್ಪಿಸುತ್ತಾರೆ. ಈ ಕ್ರಮ ಭಕ್ತರ ನಂಬಿಕೆಯೋ, ದೇವರ ಪವಾಡವೋ ಗೋತ್ತಿಲ್ಲ, ಆದರೆ ಇಂತಹ ಆಚರಣೆ ಆಧುನಿಕ ಯುಗದಲ್ಲಿ ಎಷ್ಟು ಸರಿ ಎಂಬುವುದು ಚಿಂತಾದಾಯಕ ವಿಷಯವಾಗಿದೆ.
bangalore
ಯಜಮಾನಿಯರಿಗೆ ಸ್ಟಾಪ್ ಆಗುತ್ತಾ ಗೃಹಲಕ್ಷ್ಮಿ ಹಣ ?
Published
20 hours agoon
21/11/2024By
NEWS DESK3ಮಂಗಳೂರು/ಬೆಂಗಳೂರು: ಕಾಂಗ್ರೇಸ್ ಸರ್ಕಾರದ ಮಹತ್ವಕಾಂಕ್ಷೆ ಯೋಜನೆಗಳಲ್ಲಿ ಒಂದಾದ ಗೃಹಲಕ್ಷ್ಮಿ ಯೋಜನೆ ಹಣ ಸ್ಟಾಪ್ ಆಗುತ್ತಾ ಅನ್ನುವಂತಹ ಭಯ ಯಜಮಾನಿಯರಲ್ಲಿ ಕಾಡುತ್ತಿದೆ. ಇದಕ್ಕೆ ಕಾರಣ ಇತ್ತೀಚೆಗೆ, ರಾಜ್ಯದಲ್ಲಿ ಕೆಲವು ದಿನಗಳಿಂದ ಚರ್ಚೆಯಲ್ಲಿರುವ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ.
ರಾಜ್ಯದಲ್ಲಿ ಅಕ್ರಮ ಬಿಪಿಎಲ್ ಕಾರ್ಡ್ ರದ್ದತಿ ವಿಚಾರ ಬಾರಿ ಸದ್ದು ಮಾಡುತ್ತಿದೆ. ಇದರ ನಡುವೆ ಮಹಿಳೆಯರಿಗೆ ಬಿಪಿಎಲ್ ಕಾರ್ಡ್ ರದ್ದಾದರೆ ಅಥವಾ ಬಿಪಿಎಲ್ ಕಾರ್ಡ್ ನಿಂದ ಎಪಿಎಲ್ ಗೆ ವರ್ಗಾವಣೆಯಾದರೆ 2000 ರೂ. ಬರುತ್ತೋ, ಇಲ್ಲವೋ ಎಂಬುವುದು ರಾಜ್ಯದ ಮಹಿಳೆಯರ ತಲೆನೋವಿಗೆ ಕಾರಣವಾಗಿದೆ.
ಇದನ್ನು ಓದಿ :ನಾಯಕನಾಗಿ ಕಾಣಿಸಿಕೊಳ್ಳಲಿರುವ ರಜತ್ ಪಾಟಿದಾರ್
ಈ ಬಗ್ಗೆ ಸ್ಪಷ್ಟನೆ ನೀಡಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಸಚಿವೆ ಲಕ್ಮೀ ಹೆಬ್ಬಾಳ್ಕರ್, ರಾಜ್ಯದಲ್ಲಿ ಬಿಪಿಎಲ್ ಗೆ ಅರ್ಹವಲ್ಲದ ಸುಮಾರು 80,000 ಕಾರ್ಡುಗಳನ್ನು ಎಪಿಎಲ್ ಗೆ ವರ್ಗಾವಣೆ ಮಾಡಲಾಗಿದೆ. ಇದರಿಂದಾಗಿ ಮಹಿಳೆಯರು ಯಾವುದೇ ರೀತಿಯ ಗೊಂದಲ ಪಡುವುದು ಬೇಡ. ಅಕ್ರಮ ಬಿಪಿಎಲ್ ಕಾರ್ಡ್ ರದ್ದಾದ ಕೂಡಲೇ ಗೃಹಲಕ್ಷ್ಮಿಯರ ಖಾತೆಗೆ 2000 ರೂ. ಹಣ ಜಮೆ ಆಗುವುದು. ತೆರಿಗೆ ಪಾವತಿಸುವವರಿಗೆ ಮಾತ್ರ 2000 ರೂ. ಹಣ ಬರುವುದಿಲ್ಲ. ಬಿಪಿಎಲ್ ಕಾರ್ಡ್ ಎಪಿಎಲ್ ಆಗಿ ಬದಲಾದರೂ ಹಣ ಬರುತ್ತದೆ, ಆದರೆ ಅಂತವರು ತೆರಿಗೆ ಪಾವತಿಸದಿದ್ದರೆ ಮಾತ್ರ ಬರುವುದು ಎಂದು ಹೇಳಿದ್ದಾರೆ.
LATEST NEWS
ಎಚ್ಚರ!! ಪ್ರೀತಿ ಪಾತ್ರರ ಸಾವೇ ಟಾರ್ಗೆಟ್; ಸೈಬರ್ ಕ್ರೈಂನಲ್ಲಿ ಅಂತ್ಯಸಂಸ್ಕಾರ
ಮಾರ್ಚ್ 14 ರಿಂದ ಐಪಿಎಲ್ ಆರಂಭ
ಮಂಗಳೂರು: ಟ್ರಾಯ್‌ನಿಂದ ಕರೆ; 1.71 ಕೋ.ರೂ ವಂಚನೆ
ಭಜನಾ ಗುರು ಅಶೋಕ್ ನಾಯ್ಕ್ ಕಳಸಬೈಲ್ ಗೆ ‘ಕಲಾಭೂಮಿ ರಾಜ್ಯೋತ್ಸವ ಪ್ರಶಸ್ತಿ’
ಆಶ್ರಮದ ಸ್ವಾಮಿಜಿಗೆ ಮೆಣಸಿನ ಪುಡಿಯಿಂದ ಅಭಿಷೇಕ; ಏನಿದು ಸುದ್ಧಿ !?
ಪ್ರೊಡಕ್ಷನ್ ನಂಬರ್ 1 ತುಳು ಸಿನಿಮಾದ ಭಾಗ 1ರ ಮುಹೂರ್ತ ಸಮಾರಂಭ
Trending
- LATEST NEWS2 days ago
ಪ್ರತಿದಿನ ಈ ಹಣ್ಣನ್ನು ತಿಂದರೆ ತೂಕ ಕಡಿಮೆಯಾಗುತ್ತೆ!
- LATEST NEWS4 days ago
ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟು ನೋಡಿ; ಹಣದ ಸಮಸ್ಯೆಯೇ ಬರುವುದಿಲ್ಲ..!
- BIG BOSS5 days ago
BBK11: ನೇರ ನಡೆ, ನುಡಿಯಿಂದ ಗಮನ ಸೆಳೆದಿದ್ದ ಈ ಸ್ಪರ್ಧಿ; ಮನೆಯಿಂದ ಹೊರಕ್ಕೆ?
- LATEST NEWS2 days ago
ಡೇಟಿಂಗ್ಗೆ 11,650 ರೂ. , ಫೋಟೋಗೆ 760 ರೂ. ಕ್ಯಾಶ್ ರಿವಾರ್ಡ್: ಟೆಕ್ ಕಂಪನಿ