Connect with us

  DAKSHINA KANNADA

  ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಉಪ್ಪಿನಂಗಡಿ : ಉಚಿತ ಆಯುರ್ವೇದ ವೈದ್ಯಕೀಯ ತಪಾಸಣಾ ಶಿಬಿರ

  Published

  on

  ಉಪ್ಪಿನಂಗಡಿ : ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ (ನಿ.) ಮಂಗಳೂರು ಇದರ ಉಪ್ಪಿನಂಗಡಿ ಶಾಖೆಯ ಆರನೇ ವಾರ್ಷಿಕೋತ್ಸವದ ಪ್ರಯುಕ್ತ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ), ಜೇಸಿಐ ಉಪ್ಪಿನಂಗಡಿ ಇವರ ಜಂಟಿ ಸಹಯೋಗದೊಂದಿಗೆ ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್, ದೇರಳಕಟ್ಟೆ ಇವರ ವೈದರ ತಂಡದವರಿಂದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ಉಪ್ಪಿನಂಗಡಿ ಎಚ್. ಎಮ್.ಆಡಿಟೋರಿಯಂನಲ್ಲಿ ಜರುಗಿತು.

  ಈ ಕಾರ್ಯಕ್ರಮವನ್ನು ಉಪ್ಪಿನಂಗಡಿ ಸಹಕಾರಿ ವ್ಯವಸಾಯಿಕ ಸಂಘ ನಿ. ಇದರ ಅಧ್ಯಕ್ಷ ಕೆ.ವಿ.ಪ್ರಸಾದ್‌ರವರು ಉದ್ಘಾಟಿಸಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಇವರ ಮುಂದಾಳತ್ವದಲ್ಲಿ ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಾಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಜನರ ಆರೋಗ್ಯದ ದೃಷ್ಟಿಯಿಂದ ಇಂತಹ ಶಿಬಿರಗಳನ್ನು ಆಯೋಜಿಸಿ ಕಾಳಜಿ ಮಾಡುತ್ತಿರುವುದು ಶ್ಲಾಘನೀಯ ಎಂದರು.

  ಈ ಕಾರ್ಯಕ್ರಮದ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಚಾರಿಟೇಬಲ್ ಟ್ರಸ್ಟ್ (ರಿ) ಇದರ ಅಧ್ಯಕ್ಷ ಪ್ರಶಾಂತ್ ಕುಮಾರ್ ರೈ ಮಾತನಾಡಿ, ಹಲಸು ಹಬ್ಬದ ಕಾರ್ಯಕ್ರಮದ ಜೊತೆಗೆ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘ ಇದರ ಸಹಭಾಗಿತ್ವದೊಂದಿಗೆ ನಡೆಯುತ್ತಿರುವ ಉಚಿತ ವೈದ್ಯಕೀಯ ಶಿಬಿರ ಜನರಿಗೆ ಅನುಕೂಲವಾಗಲಿ. ಇದು ಜೇಸಿಐ ಸಂಸ್ಥೆಗೂ ಕೂಡ ಹೆಮ್ಮೆ ಎಂದು ತಿಳಿಸಿದರು.

  ಈ ಕಾರ್ಯಕ್ರಮದ ಇನ್ನೋರ್ವ ಮುಖ್ಯ ಅತಿಥಿಯಾದ ಜೇಸಿಐ ಉಪ್ಪಿನಂಗಡಿ ಇದರ ಅಧ್ಯಕ್ಷ ಲವೀನ ಪಿಂಟೋ ಮಾತನಾಡಿ, ಉಚಿತ ವೈದ್ಯಕೀಯ ತಪಾಸಣಾ ಶಿಬಿರವು ಗ್ರಾಮೀಣ ಭಾಗದ ಜನರಿಗೆ ತುಂಬಾ ಪ್ರಯೋಜನಕಾರಿಯಾಗಿದ್ದು, ಸಂಘವು ಇನ್ನು ಹೆಚ್ಚು ಹೆಚ್ಚು ಶಿಬಿರ ಗ್ರಾಮೀಣ ಪ್ರದೇಶಗಳಲ್ಲಿ ನಡೆಸಲಿ ಹಾಗೂ ಇನ್ನಷ್ಟು ಜನರು ಇದರ ಪ್ರಯೋಜನ ಪಡೆಯುವಂತಗಲಿ ಎಂದು ಶುಭ ಹಾರೈಸಿದರು.

  ಅದ್ವಿಕ್ ದಂತ ಕ್ಲಿನಿಕ್ ಇದರ ದಂತ ವೈದ್ಯ ಡಾ|| ಆಶಿತ್ ಎಮ್.ವಿ. ಮಾತನಾಡಿ, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿAಗ್ ವ್ಯವಹಾರ ವಲ್ಲದೆ, ಉಚಿತ ವೈದ್ಯಕೀಯ ಶಿಬಿರದ ಜೊತೆಗೆ ಇಂತಹುದೇ ಹಲವು ಸಮಾಜಮುಖಿ ಕಾರ್ಯಕ್ರಮಗಳನ್ನು ನಡೆಸಿಕೊಂಡು ಬಂದಿದೆ ಎಂದು ಸಂಘದ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದರು.

  ಕಣಚೂರು ಆಯುರ್ವೇದ ಆಸ್ಪತ್ರೆ ನಾಟೆಕಲ್, ದೇರಳಕಟ್ಟೆ ಇದರ ವೈದ್ಯರಾದ ಡಾ|| ಜೈನುದ್ದೀನ್ ಮಾತನಾಡಿ, ಕಣಚೂರು ಆಯುರ್ವೇದ ಆಸ್ಪತ್ರೆಯಲ್ಲಿ ಲಭ್ಯವಿರುವ ಸೌಲಭ್ಯಗಳ ಬಗ್ಗೆ ಶಿಬಿರಾರ್ಥಿಗಳಿಗೆ ಮಾಹಿತಿ ಯನ್ನು ನೀಡಿದರು.

  ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್‌ರವರು ಮಾತನಾಡಿ, ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರವನ್ನು ಆಯೋಜಿಸಿದೆ. ಗ್ರಾಮೀಣ ಭಾಗದಲ್ಲಿ ಕೃಷಿ ಉತ್ಪನ್ನಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಸಂಘವು ಕೃಷಿ ಮೇಳ ಹಾಗೂ ಹಲಸಿನ ಹಬ್ಬದಂತಹ ಕಾರ್ಯಕ್ರಮಗಳಿಗೆ ಪ್ರೋತ್ಸಾಹ ನೀಡುತ್ತಾ ಬಂದಿದೆ. ಉಪ್ಪಿನಂಗಡಿ ಪರಿಸರದ ಸದಸ್ಯರ ಸಹಕಾರದಿಂದಾಗಿ ಉಪ್ಪಿನಂಗಡಿ ಶಾಖೆಯು ಉತ್ತಮ ಪ್ರಗತಿಯನ್ನು ಸಾಧಿಸಿದೆ. ಇನ್ನು ಮುಂದಿನ ದಿನಗಳಲ್ಲಿಯೂ ಇದೇ ರೀತಿ ಸಹಕಾರವಿರಲಿ ಹಾಗೆಯೇ ಇಂದಿನ ಈ ಶಿಬಿರವು ಸಾರ್ವಜನಿಕರಿಗೆ ಉಪಯುಕ್ತವಾಗಲಿ ಎಂದು ಹೇಳಿದರು.

  ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಶಿಬಿರಾರ್ಥಿಗಳಿಗೆ ಉಚಿತ ಔಷದಿ ವಿತರಣೆ, ಅಗತ್ಯವುಳ್ಳವರಿಗೆ ಉಚಿತ ಕಣ್ಣಿನ ಪೊರೆಯ ಚಿಕಿತ್ಸೆಯನ್ನು ಸಹಭಾಗಿ ಆಸ್ಪತ್ರೆಗಳಲ್ಲಿ ನಡೆಸುತ್ತಾ ಬಂದಿರುತ್ತದೆ. ನಮ್ಮ ಶಿಬಿರಗಳಲ್ಲಿ ಒಟ್ಟು ೧೫೦೦೦ಕ್ಕೂ ಮಿಕ್ಕಿ ಕನ್ನಡಕವನ್ನು ಉಚಿತವಾಗಿ ವಿತರಿಸಲಾಗಿದೆ. ಸಂಘದ ಸ್ವಂತ ಮಾಲಿಕತ್ವದ ನೂತನ ೩೩ನೇ ಶಾಖೆಯು ಜುಲೈ ೧೫ರಂದು ಕೃಷ್ಣಾಪುರದಲ್ಲಿ ಸಾರ್ವಜನಿಕ ಸೇವೆಗಾಗಿ ಶುಭಾರಂಭಗೊಳ್ಳಲಿದೆ.

  ಈ ಕಾರ್ಯಕ್ರಮದಲ್ಲಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕರಾದ ರಮನಾಥ್ ಸನಿಲ್, ಗೋಪಾಲ್ ಎಂ, ಚಂದ್ರಾವತಿ, ಮೂರ್ತೆದಾರರ ಸೇವಾ ಸಹಕಾರಿ ಸಂಘ, ಉಪ್ಪಿನಂಗಡಿ ಇದರ ಅಧ್ಯಕ್ಷ ಅಜಿತ್ ಪಾಲೇರಿ, ಜೇಸಿಐ ವಲಯ ನಿರ್ದೇಶಕ ಭರತ್ ಶೆಟ್ಟಿ ಮತ್ತಿತರರು ಉಪಸ್ಧಿತರಿದ್ದರು.

  ಇದನ್ನೂ ಓದಿ : ಕೇರಳದಲ್ಲಿ ಅಮೀಬಾ ಸೋಂಕಿಗೆ ನಾಲ್ಕು ಮಕ್ಕಳು ಬಲಿ..! ದ.ಕ ಜಿಲ್ಲೆಯಲ್ಲೂ ಹೈ ಅಲರ್ಟ್..!

  ಕಾರ್ಯಕ್ರಮದಲ್ಲಿ ಸುಮಾರು ೧೬೦ ಕ್ಕೂ ಮಿಕ್ಕಿ ಶಿಬಿರಾರ್ಥಿಗಳು ಶಿಬಿರದ ಪ್ರಯೋಜನವನ್ನು ಪಡೆದುಕೊಂಡರು. ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಹಿರಿಯ ಶಾಖಾಧಿಕಾರಿ ರವಿಕಲಾ ಇವರು ಸ್ವಾಗತಿಸಿ, ಶಾಖಾಧಿಕಾರಿ ಭವ್ಯ ವಂದಿಸಿದರು. ಶಾಖಾಧಿಕಾರಿ ಧನಲಕ್ಷ್ಮೀ ಕಾರ್ಯಕ್ರಮ ನಿರೂಪಿಸಿದರು. ಉಚಿತ ವೈದ್ಯಕೀಯ ತಪಾಸಣಾ ಶಿಬಿರದ ಸಂಯೋಜನೆಯನ್ನು ಶಾಖಾಧಿಕಾರಿ ಕವಿತಾ.ಐ ನಡೆಸಿದರು.

  Click to comment

  Leave a Reply

  Your email address will not be published. Required fields are marked *

  DAKSHINA KANNADA

  ಕಳ್ಳರನ್ನು ಹಿಡಿದ 60 ರ ವೃದ್ಧೆ..!

  Published

  on

  ಮಂಗಳೂರು :ವೃದ್ಧೆ ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದ ಕಳ್ಳರಿಬ್ಬರಿನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುಂಡ್ಯಾ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

  ಅಂಗಡಿಯಲ್ಲಿ ವೃದ್ಧ ಮಹಿಳೆ ಒಬ್ಬರೇ ಇದ್ದ ವೇಳೆ ಸ್ಕೂಟಿಯಲ್ಲಿ ಬಂದಿದ್ದ ಇಬ್ಬರು ವೃದ್ಧೆಯ ಕತ್ತಿನ ಸರ ಕಸಿಯಲು ಯತ್ನಿಸಿದ್ದಾರೆ. ಈ ವೇಳೆ ಜಾಗೃತಗೊಂಡ ಮಹಿಳೆ ತಕ್ಷಣ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

  ತ್ರೇಸಿಯಾಮ್ಮ ಅವರಿಗೆ 60 ವರ್ಷ ವಯಸ್ಸಾಗಿದ್ದು, ಅಡ್ಡಹೊಳೆ ಹೆದ್ದಾರಿಯಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಕಳ್ಳತನ ನಡೆಸಲೆಂದೇ ಬಂದಿದ್ದ ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25), ಎಂಬವರು ಮಂಗಳೂರಿನಲ್ಲಿ ವಾಹನ ಮಾರಾಟಗಾರಿಂದ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿ ಕಳ್ಳತನ ಮಾಡಿದ್ದಾರೆ. ಅದೇ ಸ್ಕೂಟಿಯಲ್ಲಿ ಬೆಂಗಳೂರಿಗೆ ಹೋಗುವ ದಾರಿಯಲ್ಲಿ ಚಿನ್ನದ ಸರ ಎಳೆಯಲು ಹೋಗಿ‌ ಸಿಕ್ಕಿಬಿದ್ದಿದ್ದಾರೆ.

  ಕಳ್ಳರಿಬ್ಬರನ್ನೂ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

  Continue Reading

  DAKSHINA KANNADA

  ಜುಲೈ 16. ದ.ಕ, ಉಡುಪಿ ಶಾಲಾ ಕಾಲೇಜಿಗೆ ರಜೆ..!

  Published

  on

  ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತು ಉಡುಪಿ ಜಿಲ್ಲೆಯಲ್ಲಿ ವ್ಯಾಪಕ ಮಳೆಯಾಗುತ್ತಿದ್ದು,ಸೋಮವಾರ ಜುಲೈ 15 ರಂದು ರಜೆ ನೀಡಲಾಗಿತ್ತು. ನಾಳೆ (ಜುಲೈ 16 )ಕೂಡಾ ರೆಡ್‌ ಅಲರ್ಟ್ ಘೋಷಣೆ ಮಾಡಲಾಗಿದೆ. ಕರಾವಳಿ ಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಬಹುತೇಕ ಹಳ್ಳ ನದಿಗಳು ಉಕ್ಕಿ ಹರಿಯುತ್ತಿದೆ. ಜುಲೈ 15 ರ ಮಳೆಯಿಂದ ಸಾಕಷ್ಟು ಕಡೆಗಳಲ್ಲಿ ಜನರು ತೊಂದರೆ ಅನುಭವಿಸಿದ್ದಾರೆ.

  ತಗ್ಗು ಪ್ರದೇಶಗಳಲ್ಲಿ ಕೆಲವೆಡೆ ಮನೆಗಳಿಗೆ ನೀರು ನುಗ್ಗಿದ ಘಟನೆ ಕೂಡಾ ನಡೆದಿದೆ. ಕೆಲೆವಡೆ ಶಾಲೆಯ ಗೋಡೆ ಕುಸಿತವಾಗಿದ್ದು, ಕೆಲವೆಡೆ ಗಾಳಿಗೆ ಶಾಲೆಯ ಹೆಂಚು ಹಾರಿ ಹೋಗಿದೆ. ನದಿಯ ನೀರು ಉಕ್ಕಿ ಹರಿಯುತ್ತಿದ್ದು, ಅಪಾಯದ ಅಂಚಿನಲ್ಲಿದೆ.

  ಹವಾಮಾನ ಇಲಾಖೆಯ ಸೂಚನೆಯಂತೆ ಜುಲೈ 16 ರಂದು ಕೂಡಾ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದ್ದು, ಜಿಲ್ಲೆಯಲ್ಲಿ ಎಲ್ಲಾ ಸರ್ಕಾರಿ, ಖಾಸಗಿ ಶಾಲೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.
  ಭಾನುವಾರದಿಂದ ಶಾಲೆಗೆ ನಿರಂತರ ರಜೆ ಅನುಭವಿಸಿದ ಮಕ್ಕಳಿಗೆ ಬುಧವಾರ ಮೊಹರಂ ಪ್ರಯುಕ್ತ ಸರ್ಕಾರಿ ರಜೆ ಕೂಡ ಸಿಗಲಿದೆ. ಗುರುವಾರದಿಂದ ಮಳೆ ಕಡಿಮೆ ಆಗುವ ಸೂಚನೆ ಇದೆ.

  Continue Reading

  DAKSHINA KANNADA

  ಶಾಲೆಯೊಳಗೆ RSS ಕಾರ್ಯಕ್ರಮ : DC ಗೆ ದೂರು..!

  Published

  on

  ಮಂಗಳೂರು : ಕಡಬ ತಾಲೂಕಿನ ಕರಿಂಬಿಲ ಕಿ.ಪ್ರಾ. ಶಾಲೆಯಲ್ಲಿ ಜು. 14 ರಂದು ಸಂಜೆ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ವತಿಯಿಂದ ಗುರುಪೂಜೆ ಕಾರ್ಯಕ್ರಮ ನಡೆಸಿರುವುದು ಈಗ ವಿವಾದಕ್ಕೆ ಕಾರಣವಾಗಿದೆ.

  ಸರಕಾರಿ ಶಾಲೆಯ ಆವರಣದೊಳಗೆ ಅಥವಾ ಮೈದಾನವನ್ನು ಕೂಡಾ ಯಾವುದೇ ಸಾರ್ವಜನಿಕ ಕಾರ್ಯಕ್ರಮಗಳಿಗೆ ಕೊಡಬಾರದೆಂಬ ಸುತ್ತೋಲೆ ಇರುವಾಗ ಶಾಲೆಯ ಒಳಗೆಯೇ RSS ಕಾರ್ಯಕ್ರಮವನ್ನು ಮಾಡಲು ಅವಕಾಶ ಕೊಟ್ಟದ್ದು ಹೇಗೆ ಎಂದು ಸ್ಥಳೀಯ ಕೆಲವರು ಶಿಕ್ಷಣ ಇಲಾಖೆಗೆ ಮತ್ತು ಜಿಲ್ಲಾಡಳಿತಕ್ಕೆ ಪ್ರಶ್ನೆ ಮಾಡಿದ್ದಾರೆ. ಶಿಕ್ಷಣ ಇಲಾಖೆಯಿಂದ ಶಾಲಾ ಮುಖ್ಯೋಪಾಧ್ಯಾಯರಿಗೆ ಬುಲಾವ್ ಹೋಗಿ ಅವರಿಂದ ವಿವರಣೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

  ಕಾರ್ಯಕ್ರಮದಲ್ಲಿ ಭಾಗಿಯಾದವರಲ್ಲಿ ಕೆಲವರು ಫೋಟೋವನ್ನು ತಮ್ಮ ಸ್ಟೇಟಸ್‌ನಲ್ಲಿ ಹಾಕಿಕೊಂಡದ್ದರಿಂದ ಈ ಘಟನೆ ಬೆಳಕಿಗೆ ಬಂದಿದೆ.

  ಈ ಭಾವಚಿತ್ರದಲ್ಲಿ ದ.ಕ.ಜಿ.ಪಂ.ಕಿ.ಪ್ರಾ.ಶಾಲೆ ಕರಿಂಬಿಲ ಎಂಬ ಹೆಸರಿರುವ ಕರಿಹಲಗೆ ಮತ್ತು ಕೊಟಡಿಯೊಳಗಿನ ದೃಶ್ಯಗಳು ಕಂಡುಬರುತ್ತಿವೆ.

  ಸರ್ಕಾರಿ ಶಾಲೆಯಲ್ಲಿ RSS ಕಾರ್ಯಕ್ರಮಕ್ಕೆ ಅನುವು ಮಾಡಿಕೊಟ್ಟವರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಲಾಗಿದೆ.

  Continue Reading

  LATEST NEWS

  Trending