DAKSHINA KANNADA
ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಶುಭಾರಂಭ
ಮಂಗಳೂರು : ಸಹಕಾರಿ ಕ್ಷೇತ್ರದ ಅಗ್ರಗಣ್ಯ ಸಹಕಾರಿ ಸಂಘ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ, ರಾಜ್ಯ ಮತ್ತು ರಾಷ್ಟ್ರೀಯ ಪುರಸ್ಕಾರ ಪಡೆದಿರುವ ಮಂಗಳೂರು ಪಡೀಲ್‍ನ ಆತ್ಮಶಕ್ತಿ ಸೌಧದಲ್ಲಿ ಕೇಂದ್ರ ಕಚೇರಿಯನ್ನು ಹೊಂದಿರುವ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಇದರ 31ನೇ ನೂತನ ಎಲ್ಯಾರ್ ಪದವು ಶಾಖೆ ಹೋಲಿಕ್ರಾಸ್ ಚರ್ಚ್ ನ ಬಳಿಯಿರುವ ಶರೂನ್ ಸ್ಟ್ರಕ್ಟರ್ ನ ಮೊದಲನೇ ಮಹಡಿಯಲ್ಲಿ ಬುಧವಾರ ಶುಭಾರಂಭಗೊಂಡಿತು.
ಸಾಮಾಜಿಕ ಕಳಕಳಿ ಶ್ಲಾಘನೀಯ : ಯು.ಟಿ.ಖಾದರ್
ಕರ್ನಾಟಕ ವಿಧಾನಸಭೆಯ ಸಭಾಧ್ಯಕ್ಷ ಯು.ಟಿ.ಖಾದರ್ ಅವರು ನೂತನ ಶಾಖೆಯನ್ನು ಉದ್ಘಾಟಿಸಿ ಮಾತನಾಡಿ, ಶ್ರೀಮಂತ ವರ್ಗದವರಿಗೆ ನಗರಪ್ರದೇಶದಲ್ಲಿ ರಾಷ್ಟ್ರೀಕೃತ ಬ್ಯಾಂಕುಗಳು ಸಾಲ ನೀಡುತ್ತದೆ. ಆದರೆ, ಗ್ರಾಮೀಣ ಪ್ರದೇಶದ ಜನರ ಆರ್ಥಿಕ ಮಟ್ಟವನ್ನು ಉತ್ತಮ ಪಡಿಸುವ ನಿಟ್ಟಿನಲ್ಲಿ ಸಹಕಾರಿ ಸಂಘಗಳ ಸ್ಥಾಪನೆಗೆ ಆದ್ಯತೆ ನೀಡಿದ್ದು, ಇದೀಗ ಎಲ್ಯಾರ್ ಪದವಿನಂತಹ ಹಿಂದುಳಿದ ಪ್ರದೇಶದಲ್ಲಿ ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನೂತನ ಶಾಖೆಯನ್ನು ಆರಂಭಿಸುವ ಮೂಲಕ ಸಹಕಾರಿ ಕ್ಷೇತ್ರದ ನಿಜವಾದ ಧ್ಯೇಯ ಉದ್ಧೇಶವನ್ನು ಈ ಸಂಘ ಮಾಡಿ ತೋರಿಸಿದೆ. ಮೂರು ಗ್ರಾಮಗಳ ಸಮ್ಮಿಲನದ ಈ ಪ್ರದೇಶ ವಾಣಿಜ್ಯವಾಗಿ ಅಭಿವೃದ್ಧಿ ಹೊಂದಿಲ್ಲ. ಇಂತಹ ಪ್ರದೇಶದಲ್ಲಿ ಜನರಿಗೆ ಸಹಕಾರಿ ಸೇವೆಯನ್ನು ನೀಡುವ ಸಾಮಾಜಿಕ ಕಳಕಳಿ ಶ್ಲಾಘನೀಯವಾಗಿದ್ದು, ಈ ಪ್ರದೇಶದ ಜನರ ಆರ್ಥಿಕ ಕಾರ್ಯಕ್ಕೆ ಬೆಂಬಲ ನೀಡುವ ಮೂಲಕ ಉತ್ತಮ ಗ್ರಾಹಕ ಸೇವೆಯೊಂದಿಗೆ ಪ್ರದೇಶದ ಅಭಿವೃದ್ಧಿಗೂ ಕೊಡುಗೆ ನೀಡಲಿ ಎಂದರು.’
ಲಾಭದಾಯಕವಾಗಿ ನಡೆಯುತ್ತಿರುವ ಸಂಸ್ಥೆ : ಚಿತ್ತರಂಜನ್ ಬೋಳಾರ್
ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ ಮಾತನಾಡಿ, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘದ ಎರಡನೇ ಶಾಖೆ ಆರಂಭಗೊಂಡಿದ್ದು, ಉಳ್ಳಾಲದ ಮಾಡೂರಿನಲ್ಲಿ ಅಂದಿನಿಂದ ಇಂದಿನವರೆಗೆ ಯು.ಟಿ.ಖಾದರ್ ಅವರು ಸಂಘದ ಶಾಖೆಯನ್ನು ಉದ್ಘಾಟಿಸಿದ್ದು ಲಾಭದಾಯಕವಾಗಿ ನಡೆಯುತ್ತಿದೆ. ಸಂಘ ಯಶಸ್ವಿಯಾಗಿ ಇಷ್ಟು ಶಾಖೆಗಳು ಆರಂಭಗೊಳ್ಳಲು ಮತ್ತು ಹತ್ತನೇ ವರ್ಷದಲ್ಲಿ ಸ್ವಂತ ಪ್ರಧಾನ ಕಚೇರಿ ನಿರ್ಮಾಣಕ್ಕೆ ಮುಖ್ಯ ಕಾರಣ ಸಂಘದ ಗ್ರಾಹಕರು, ಸದಸ್ಯರು ಮತ್ತು ಸಂಘದ ಆಡಳಿತ ಮಂಡಳಿಯೊಂದಿಗೆ ಸಿಬಂದಿ ವರ್ಗ ಕಾರಣವಾಗಿದ್ದಾರೆ ಎಂದರು.
ಭದ್ರತಾಕೋಶ ಉದ್ಘಾಟನೆ :
ಎಲ್ಯಾರ್ ಪದವು ಹೊಲಿ ಕ್ರಾಸ್ ಚರ್ಚ್‌ನ ಧರ್ಮಗುರು ಎಫ್.ಆರ್.ಜಾನ್ ಡಿ’ಸೋಜ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಕುತ್ತಾರು ಶ್ರೀ ಪಂಜದಾಯ ಬಂಟ ದೈವಗಳ ಆದಿ ಕೊರಗತನಿಯ ಸೇವಾ ಟ್ರಸ್ಟ್‌ನ ಉಪಾಧ್ಯಕ್ಷ ದೆಬ್ಬೇಲಿ ಮಹಾಬಲ ಹೆಗ್ಡೆ ಮಾಗಣ್ತಡಿ ಭದ್ರತಾಕೋಶ ಉದ್ಘಾಟಿಸಿದರು.
ಕೊಣಾಜೆ ಬೆಳ್ಮ ಸಿಎಸ್‍ಐ ಬೆತಾನೀಯ ಚರ್ಚ್‌ನ ಧರ್ಮಗುರು ರೆ| ವಿನಯಲಾಲ್ ಬಂಗೇರ ನಿರಖು ಠೇವಣಿ ಪತ್ರ ಬಿಡುಗಡೆಗೊಳಿಸಿದರು. ಕೊಣಾಜೆ ಗ್ರಾ. ಪಂ. ಅಧ್ಯಕ್ಷೆ ಗೀತಾ ದಾಮೋದರ ಗಣಕೀಕೃತ ಬ್ಯಾಂಕಿಂಗ್‍ಗೆ ಚಾಲನೆ ನೀಡಿದರು. ಅಂಬ್ಲಮೊಗರು ಗ್ರಾ. ಪಂ. ಎಸ್.ಮಹಮ್ಮದ್ ಇಕ್ಬಾಲ್ ಇ ಮುದ್ರಾಂಕ ಸೇವೆಗೆ ಚಾಲನೆ ನೀಡಿದರು.
ಗ್ರಾಮಚಾವಡಿ ಬ್ರಹ್ಮಶ್ರೀ ನಾರಾಯಣಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಆವರ್ತನ ಠೇವಣಿಗೆ ಚಾಲನೆ ನೀಡಿದರು. ಶ್ರೀ ಆದಿಮಾಯೆ ರಾಮ ದತ್ತಾಂಜನೇಯ ಭಜನಾ ಮಂದಿರದ ಅಧ್ಯಕ್ಷ ಚಂದ್ರಹಾಸ್ ನಾಯ್ಕ ಉಳಿತಾಯ ಖಾತೆಗೆ ಚಾಲನೆ ನೀಡಿದರು.
ಇದನ್ನೂ ಓದಿ : ವೇಷ ಕಳಚುವ ಮುನ್ನ ಇಹಲೋಕ ತ್ಯಜಿಸಿದ ಯಕ್ಷಗಾನ ಕಲಾವಿದ ಗಂಗಾಧರ ಪುತ್ತೂರು
ನಿವೃತ್ತ ಮುಖ್ಯ ಶಿಕ್ಷಕ ರವೀಂದ್ರ ರೈ ಕಲ್ಲಿಮಾರು, ಎಲ್ಯಾರ್ ಪದವು ಹಾಲು ಉತ್ಪಾದಕರ ಸಂಘದ ಅಧ್ಯಕ್ಷೆ ಎಡ್‍ಲೈನ್ ಐಮನ್, ಕಟ್ಟಡದ ಮಾಲಕ ರೆನೋಲ್ಡ್ ಜಿ ಅಮ್ಮಣ್ಣ .ಪಜೀರ್ ಗೋಶಾಲೆಯ ಟ್ರಸ್ಟಿ ಶಿವಪ್ರಸಾದ್, ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದರು. ನಿರ್ದೇಶಕರಾದ ಪಿ. ಪರಮೇಶ್ವರ ಪೂಜಾರಿ, ಆನಂದ ಎಸ್. ಕೊಂಡಾಣ, ಚಂದ್ರಹಾಸ ಮರೋಳಿ, ಗೋಪಾಲ್ ಎಂ. ಸಲಹೆಗಾರರಾದ ಅಶೋಕ್ ಕುಮಾರ್ ಉಪಸ್ಥಿತರಿದ್ದರು.
ಮುಖ್ಯಕಾರ್ಯನಿರ್ವಹಣಾಧಿಕಾರಿ ಸೌಮ್ಯವಿಜಯ್ ಸ್ವಾಗತಿಸಿದರು. ಉಪಾಧ್ಯಕ್ಷ ನೇಮಿರಾಜ್ ಪಿ. ವಂದಿಸಿದರು. ಸಿಬ್ಬಂದಿ ಹರ್ಷಿತಾ ಕಾರ್ಯಕ್ರಮ ನಿರ್ವಹಿಸಿದರು.
”ಕೊರೊನಾ ಸಂದರ್ಭದಲ್ಲಿ 10 ಕೋಟಿ ಇದ್ದ ಚಿನ್ನಾಭರಣ ಸಾಲ ಒಮ್ಮೆಲೇ 90 ಕೋಟಿ ರೂ.ವರೆಗೆ ಕಡಿಮೆ ಬಡ್ಡಿದರದಲ್ಲಿ ಸಾಲ ನೀಡಿ ರಾಷ್ಟ್ರಮಟ್ಟದಲ್ಲಿ ಗುರುತಿಸಿಕೊಂಡಿತ್ತು. ಸಂಘ ಸಾಮಾಜಿಕ, ಶೈಕ್ಷಣಿಕ, ಆರೋಗ್ಯ ಕ್ಷೇತ್ರದಲ್ಲಿಯೂ ಸಾಧನೆ ಮಾಡಿದೆ. ನೂತನ ಶಾಖೆಯಿಂದ ಬೇರೆ ಬ್ಯಾಂಕ್‍ಗಳಿಗೆ ಡಿಪಾಸಿಟ್ ಮಾಡಲು ಆರ್ ಟಇ ಜಿ ಎಸ್ ಸೌಲಭ್ಯ, ಇ ಮುದ್ರಾಂಕ, ಆರೋಗ್ಯ ವಿಮೆ, ಸಾಲ ವಿಮಾ ಭದ್ರತೆ ಸೇರಿದಂತೆ ವಿವಿಧ ಬ್ಯಾಂಕಿಂಗ್ ಸವಲತ್ತುಗಳನ್ನು ಗ್ರಾಹಕರು ಪಡೆದುಕೊಳ್ಳಬಹುದು.”
ಸಹಕಾರ ರತ್ನ ಚಿತ್ತರಂಜನ್ ಬೋಳಾರ, ಅಧ್ಯಕ್ಷರು, ಆತ್ಮಶಕ್ತಿ ವಿವಿಧೋದ್ಧೇಶ ಸಹಕಾರಿ ಸಂಘ ನಿಯಮಿತ ಮಂಗಳೂರು
DAKSHINA KANNADA
ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಗೆ ಗೌರವ ಡಾಕ್ಟರೇಟ್ ಪ್ರದಾನ
ಮಂಗಳೂರು : ಕರಾವಳಿ ಮೂಲದ ಕನ್ನಡ ಚಲನ ಚಿತ್ರ ರಂಗದ ಖ್ಯಾತ ಸಂಗೀತ ನಿರ್ದೇಶಕ ಗುರುಕಿರಣ್ ಅವರಿಗೆ ಗೌರವ ಡಾಕ್ಟರೇಟ್ ಲಭಿಸಿದೆ.
ಬೆಂಗಳೂರು ವಿವಿಯು ಈ ಗೌರವ ಡಾಕ್ಟರೇಟ್ ನೀಡಿ ಗುರುಕಿರಣ್ ಅವರನ್ನು ನೀಡಿ ಗೌರವಿಸಿದೆ. ಸೆಪ್ಟಂಬರ್ 10 ರಂದು ನಡೆದಿದ್ದ ವಿವಿ ಘಟಿಕೋತ್ಸವದಲ್ಲಿ ಈ ಪ್ರಶಸ್ತಿ ಪ್ರದಾನ ಮಾಡಲಾಗಿದೆ.
ಸಂಗೀತ ಕ್ಷೇತ್ರದಲ್ಲಿ ಮಾಡಿರುವ ಸಾಧನೆಗಾಗಿ ಈ ಪ್ರಶಸ್ತಿಯನ್ನು ನೀಡಲಾಗಿದೆ. ಬೆಂಗಳೂರು ವಿವಿಯ ಈ ಪ್ರಶಸ್ತಿಯಿಂದ ಗುರು ಕಿರಣ್ ಇನ್ನು ಮುಂದೆ ಡಾಕ್ಟರ್ ಗುರುಕಿರಣ್ ಆಗಲಿದ್ದಾರೆ.
DAKSHINA KANNADA
ಮಂಗಳೂರು : ತಾಯಿಯನ್ನು ರಕ್ಷಿಸಿದ ವಿದ್ಯಾರ್ಥಿನಿಗೆ ಜಿಲ್ಲಾಡಳಿತದಿಂದ ಸನ್ಮಾನ
ಮಂಗಳೂರು : ಆಟೋರಿಕ್ಷಾದಡಿಗೆ ಬಿದ್ದ ಅಮ್ಮನನ್ನು ರಕ್ಷಿಸಲು ಆಟೋರಿಕ್ಷಾವನ್ನೇ ಮೇಲಕ್ಕೆತ್ತಿ ಶೌರ್ಯ ಮೆರೆದ ಕಿನ್ನಿಗೋಳಿಯ ವೈಭವಿಗೆ ಇದೀಗ ಅಭಿನಂದನೆಗಳ ಮಹಾಪೂರವೇ ಹರಿದು ಬರುತ್ತಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯ ಕೂಡ ಬಾಲಕಿಯ ಶೌರ್ಯವನ್ನು, ಸಕಾಲಿಕ ಪ್ರಜ್ಞೆಯನ್ನು ಕೊಂಡಾಡಿದ್ದರು.
ಜೊತೆಗೆ ಜಿಲ್ಲಾಡಳಿತವೂ ಬಾಲಕಿಯ ಕಾರ್ಯ ಮೆಚ್ಚಿಕೊಂಡಿದೆ. ದ.ಕ.ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಮಂಗಳವಾರ(ಸೆ.10) ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ವೈಭವಿಯನ್ನು ಸನ್ಮಾನಿಸಿದರು. ಪೇಟ, ಹಾರ ತೊಡಿಸಿ ಸನ್ಮಾನಿಸಿದರಲ್ಲದೆ, ಬಾಲಕಿಯ ಸಮಯ ಪ್ರಜ್ಞೆ ಮತ್ತು ಧೈರ್ಯವನ್ನು ಶ್ಲಾಘಿಸಿದರು.
ಈ ಸಂದರ್ಭ ಅಪರ ಜಿಲ್ಲಾಧಿಕಾರಿ ಡಾ.ಜಿ.ಸಂತೋಷ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಹೇಮಲತಾ, ಸಹಾಯಕ ನಿರ್ದೇಶಕ ಸುರೇಶ್ ಅಡಿಗ ಮತ್ತು ವೈಭವಿಯ ಪಾಲಕರು ಉಪಸ್ಥಿತರಿದ್ದರು.
ಪೊಲೀಸ್ ಕಮಿಷನರ್ ಸನ್ಮಾನ :
ಬಾಲಕಿ ವೈಭವಿಯ ಕಾರ್ಯವನ್ನು ಮೆಚ್ಚಿರುವ ಕಮಿಷನರ್ ಅನುಪಮ್ ಅಗರ್‌ವಾಲ್ ಅವರೂ ಪ್ರಶಂಸಿದ್ದಾರೆ. ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಕಚೇರಿ ವತಿಯಿಂದ ಕಮಿಷನರ್ ಅನುಪಮ್ ಅಗರ್‌ವಾಲ್ ಅವರು ಬಾಲಕಿಯ ಸಮಯಪ್ರಜ್ಞೆಯನ್ನು ಕೊಂಡಾಡಿದರಲ್ಲದೇ, ಆಕೆಗೆ ಪ್ರಶಂಸನಾ ಪತ್ರವನ್ನು ನೀಡಿ ಅಭಿನಂದಿಸಿದ್ದಾರೆ.
ಇದನ್ನೂ ಓದಿ : ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಅ*ಗ್ನಿ ಅವಘ*ಡ
ಏನಿದು ಘಟನೆ?
ಸೆಪ್ಟೆಂಬರ್ 6ರಂದು ಸಂಜೆ ಕಿನ್ನಿಗೋಳಿ ರಾಮನಗರ ಎಂಬಲ್ಲಿ ಚೇತನಾ ಯಾನೆ ಶ್ವೇತಾ ಎಂಬವರು ರಸ್ತೆ ದಾಟುತ್ತಿದ್ದಾಗ ಆಟೋರಿಕ್ಷಾವೊಂದು ಡಿ*ಕ್ಕಿ ಹೊಡೆದಿತ್ತು. ಆಟೋರಿಕ್ಷಾ ಪಲ್ಟಿಯಾಗಿ ಚೇತನ ಅವರು ರಿಕ್ಷಾದಡಿಗೆ ಬಿದ್ದಾಗ ಅಲ್ಲೇ ಇದ್ದ 13 ವರ್ಷದ ಮಗಳು ವೈಭವಿ ಯಾರ ಸಹಾಯಕ್ಕೂ ಕಾಯದೇ, ತಕ್ಷಣ ಕಾರ್ಯಪ್ರವೃತ್ತಳಾಗಿ ಆಟೋವನ್ನು ಎತ್ತಿ ಅಮ್ಮನ ಪ್ರಾ*ಣ ಉಳಿಸಿದ್ದರು.
DAKSHINA KANNADA
ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಅ*ಗ್ನಿ ಅವಘ*ಡ
ಪುತ್ತೂರು : ಖಾಸಗಿ ಆಸ್ಪತ್ರೆಯಲ್ಲಿ ಬುಧವಾರ ಬೆಳಗ್ಗಿನ ಜಾವ ಬೆಂ*ಕಿ ಕಾಣಿಸಿಕೊಂಡಿದ್ದು, ಅ*ಗ್ನಿಶಾಮಕ ದಳದವರು ಬೆಂ*ಕಿ ನಂದಿಸುವಲ್ಲಿ ಯಶಸ್ಸಿಯಾಗಿದ್ದಾರೆ.
ಬೊಳುವಾರಿನ ಮುಖ್ಯ ರಸ್ತೆಯಲ್ಲಿರುವ ಖಾಸಗಿ ಆಸ್ಪತ್ರೆಯಲ್ಲಿ ಬೆಳಗ್ಗಿನ ಜಾವ 5 ಗಂಟೆ ಸುಮಾರಿಗೆ ವಿದ್ಯುತ್ ಮೀಟರ್ ಬೋರ್ಡ್‌ನ ಲ್ಲಿ ಶಾರ್ಟ್ ಸರ್ಕ್ಯೂಟ್ ಆಗಿದೆ. ಜಂಕ್ಷನ್ ಬಾಕ್ಸ್ ಸಂಪೂರ್ಣ ಸುಟ್ಟು ಕರಕಲಾಗಿದೆ.
ಇದನ್ನೂ ಓದಿ : ಛೀ! ಎಂಥ ಹೇಯ ಕೃ*ತ್ಯ; ಜೀವಂತ ಸಾಕು ನಾಯಿಯನ್ನು ಕಸ ವಿಲೇವಾರಿ ವಾಹನಕ್ಕೆ ತುಂಬಿಸಿದ ಮಾಲಕ
ಆಸ್ಪತ್ರೆಯ ತುಂಬಾ ಹೊಗೆ ತುಂಬಿಕೊಂಡಿದ್ದು, ತಕ್ಷಣ ಆಗ್ನಿಶಾಮಕ ದಳದವರು ಆಗಮಿಸಿ ಮುನ್ನೆಚ್ಚರಿಕೆಯನ್ನು ತೆಗೆದುಕೊಂಡಿದ್ದಾರೆ. ರೋಗಿಗಳಿಗೆ ಯಾವುದೇ ಸಮಸ್ಯೆಯಾಗಿಲ್ಲ ಎಂದು ಹೇಳಲಾಗಿದೆ.
- LATEST NEWS7 days ago
ಪೇಟಿಎಂ ಮೂಲಕ ಲಕ್ಷ ಹಣ ವರ್ಗಾವಣೆ..! ಆರೋಪಿಯ ಬಂಧನ
- LATEST NEWS2 days ago
ಕನ್ನಡದಲ್ಲೇ ಔಷಧ ಚೀಟಿ ಬರೆಯಲಾರಂಭಿಸಿದ ವೈದ್ಯರು..! ವೈರಲ್ ಆಗ್ತಿದೆ ಈ ಪ್ರಿಸ್ಕ್ರಿಪ್ಶನ್
- DAKSHINA KANNADA6 days ago
ದ.ಕ ಜಿಲ್ಲಾ ಮಟ್ಟದ ಉತ್ತಮ ಶಿಕ್ಷಕರ ಪಟ್ಟಿ ಪ್ರಕಟ; 21 ಶಿಕ್ಷಕರಿಗೆ ಪ್ರಶಸ್ತಿ
- FILM6 days ago
ಅಮ್ಮನಾದ ಮಿಲನಾ ನಾಗರಾಜ್; ಸಂತಸ ಹಂಚಿಕೊಂಡ ನಟ ಡಾರ್ಲಿಂಗ್ ಕೃಷ್ಣ