Connect with us

LATEST NEWS

ಉಲ್ಟಾ ನೇತು ಹಾಕಿ ಹಲ್ಲೆ-ಕೊಲೆಯತ್ನ ಪ್ರಕರಣ: ಆರು ಜನರ ಬಂಧನ

Published

on

ಮಂಗಳೂರು: ಮೀನುಗಾರಿಕಾ ಬೋಟ್ ನಲ್ಲಿ ಮೊಬೈಲ್ ಕದ್ದನೆಂಬ ಆರೋಪದಲ್ಲಿ ಮಂಗಳೂರಿನ ಮೀನುಗಾರಿಕಾ ಬಂದರು ದಕ್ಕೆಯಲ್ಲಿ ವ್ಯಕ್ತಿಯೊಬ್ಬನನ್ನು ಉಲ್ಟಾ ನೇತು ಹಾಕಿ ಹಲ್ಲೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಆರು ಜನರನ್ನು ಬಂದರು ಪೊಲೀಸರು ಬಂಧಿಸಿದ್ದಾರೆ.


ಬಂಧಿತರನ್ನು ಕೊಂಡೂರು ಪೋಲಯ್ಯ (23), ಅವುಲ ರಾಜ್‌ಕುಮಾರ್‌ (26), ಕಾಟಂಗರಿ ಮನೋಹರ್‌ (21), ವೂಟುಕೋರಿ ಜಾಲಯ್ಯ (30), ಕರಪಿಂಗಾರ ರವಿ(27), ಪ್ರಲಯಕಾವೇರಿ ಗೋವಿಂದಯ್ಯ(47) ಎಂದು ಗುರುತಿಸಲಾಗಿದೆ.
ಘಟನೆ ಹಿನ್ನೆಲೆ
ಡಿ.14ರಂದು ರಾತ್ರಿ ಆಂಧ್ರಪ್ರದೇಶ ಮೂಲದ ವೈಲ ಶೀನು ಧಕ್ಕೆಯಲ್ಲಿ ನಿಲ್ಲಿಸಿದ್ದ ತಾನು ಕೆಲಸ ಮಾಡುತ್ತಿದ್ದ ಬೋಟಿನಲ್ಲಿ ಮಲಗಿದ್ದನು.

ಮರುದಿನ ಆರು ಜನ ಆರೋಪಿಗಳು ಏಕಾಏಕಿ ಬಂದು ನಿನ್ನೆ ರಾತ್ರಿ ಬೋಟಿಗೆ ಬಂದವನು ಕಳ್ಳತನ ಮಾಡಿದ್ದೀಯಾ ಎಂದು ಗದರಿಸಿದ್ದಾರೆ.

ನಂತರ ವೈಲಾನನ್ನು ಅಪಹರಿಸಿ ಕೈಕಾಲು ಕಟ್ಟಿ, ಬೊಬ್ಬೆ ಹಾಕದಂತೆ ಬಾಯಿ ಮುಚ್ಚಿಬೀಟಿನ ಆರಿಯ ಕೊಕ್ಕೆಗೆ ಸಿಕ್ಕಿಸಿ ತಲೆಕೆಳಗೆ ಮಾಡಿ ನೇತಾಡಿಸಿದ್ದಾರೆ.

ನಂತರ ಮರದ ರೀಪು ಹಾಗೂ ಕಬ್ಬಿಣದ ಸರಪಳಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದಾರೆ. ಇದಾದ ನಂತರ ಆತನನ್ನು ಸಮುದ್ರಕ್ಕೆ ಬಿಸಾಕಿ ಕೊಲೆ ನಡೆಸಲು ಮಾತುಕತೆ ನಡೆಸಿದ್ದಾರೆ.

ಆ ಸಮಯ ಸಾರ್ವಜನಿಕರು ಬಂದು ವೈಲುವನ್ನು ರಕ್ಷಿಸಿದ್ದಾರೆ. ಈ ಬಗ್ಗೆ ಬಂದರು ಠಾಣೆಯಲ್ಲಿ ಅಪಹರಣ ಹಾಗೂ ಕೊಲೆಯತ್ನ ಪ್ರಕರಣ ದಾಖಲಿಸಿದ್ದಾರೆ.

dehali

ನಾಯಿಗಳಿಗೂ ಬಂತು ಆಧಾರ್‌ ಕಾರ್ಡ್‌.!! ಇನ್ಮುಂದೆ ನಾಯಿಗೂ ಸ್ಕ್ಯಾನ್ ಕಾರ್ಡ್..! ಏನಿದು?

Published

on

ದೆಹಲಿ: ಕೇಂದ್ರ ಸರಕಾರ ದೇಶದಾದ್ಯಂತ ಆಧಾರ್ ಕಾರ್ಡ್‌ಅನ್ನು ಕಡ್ಡಾಯಗೊಳಿಸಿದೆ. ಭಾರತೀಯ ನಾಗರಿಕರನ್ನು ಗುರುತಿಸುವುದಕ್ಕಾಗಿ ಹಾಗೂ ದೇಶದ ಭದ್ರತೆ ದೃಷ್ಠಿಯಿಂದ ಆಧಾರ್ ಕಾರ್ಡ್‌ನ್ನು ಜಾರಿಗೊಳಿಸಿದೆ. ಹಾಗಾಗಿ ಜನರು ತಮ್ಮ ಆಧಾರ್ ಕಾರ್ಡ್‌ಗಳ ಅಪ್ಡೇಟ್ ಮಾಡಲು, ಹೊಸ ಆಧಾರ್‌ ಮಾಡಿಸಲು ಸೈಬರ್ ಸೆಂಟರ್ ಗಳು ಸರಕಾರಿ ಕಛೇರಿಗಳ ಮುಂದೆ ಮುಗಿ ಬೀಳುತ್ತಾರೆ. ಇದೀಗ ನಾಯಿಗಳಿಗೂ ಮುಂದಿನ ದಿನಗಳಲ್ಲಿ ಇಂತಹ ಪರಿಸ್ಥಿತಿ ಬಂದರೆ ಆಶ್ಚರ್ಯವಿಲ್ಲ. ಯಾಕಂದ್ರೆ ಇದೀಗ ನಾಯಿಗಳಿಗೂ ಆಧಾರ್ ಹೊಂದಿರಬೇಕು ಎನ್ನುವ ನಿಯಮ ಜಾರಿಗೆ ಬಂದಿದೆ.

dog

ದೆಹಲಿಯಲ್ಲಿ ಆಧಾರ್ ಕಾರ್ಡ್‌ ಹೋಲ್ಡರ್‌ಗಳಾದ 100 ನಾಯಿಗಳು!

ಈಗಾಗಲೇ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ನಾಯಿಗಳಿಗೆ ಆಧಾರ್ ಕಾರ್ಡ್ ನೀಡಲಾಗಿದೆಯಂತೆ. ಸರ್ವೆ ಪ್ರಕಾರ ಈಗಾಗಲೇ ದೆಹಲಿಯಲ್ಲಿ 100 ನಾಯಿಗಳಿಗೆ ಆಧಾರ್ ಕಾರ್ಡ್‌ಅನ್ನು ನೀಡಲಾಗಿದೆ ಎಂದು ತಿಳಿದು ಬಂದಿದೆ. ಈ 100 ನಾಯಿಗಳು ದೆಹಲಿಯ ಟರ್ಮಿನಲ್ 1 ವಿಮಾನ ನಿಲ್ದಾಣ, ಇಂಡಿಯಾ ಗೇಟ್ ಮತ್ತು ಪ್ರಾಣಿ ಕಾರ್ಯಕರ್ತೆ ಮಾನವಿ ರೈ ನಡೆಸುತ್ತಿರುವ ದೆಹಲಿಯ ನಾಯಿ ಆಶ್ರಯ ಸೇರಿದಂತೆ ವಿವಿಧ ಸ್ಥಳಗಳಿಗೆ ಸೇರಿವೆ ಎನ್ನಲಾಗಿದೆ. ದಾರಿ ತಪ್ಪಿದ ನಾಯಿಗಳನ್ನು ರಕ್ಷಿಸುವ ಹಾಗೂ ಅವುಗಳನ್ನು ಸ್ಥಳಾಂತರಿಸುವ ದೃಷ್ಟಿಯಲ್ಲಿ ಎನ್‌ಜಿಒ ಗಳು ಈ ನಿಯಮವನ್ನು ಜಾರಿಗೆ ತಂದಿದ್ದಾರೆ.

dog

ನಾಯಿಗೂ ಬಂತು ಸ್ಕ್ಯಾನರ್‌ ಒಳಗೊಂಡ ಟ್ಯಾಗ್ ಕಾರ್ಡ್:

ಏಪ್ರಿಲ್ 27ರಂದು ನಾಯಿಗಳಿಗೆ ಆಧಾರ್ ಕಾರ್ಡ್ ನೀಡುವ ಕ್ರಮಕ್ಕೆ ಚಾಲನೆ ನೀಡಿದ್ದು, ಇಂದಿನಿಂದ ಈ ಕೆಲಸ ಪ್ರಾರಂಭವಾಗಿದೆ. ಇದಕ್ಕೆ ಸಂಬಂಧಪಟ್ಟ ನಾಯಿಗಳಿಗೆ ಆಧಾರ್ ಕಾರ್ಡ್ ಟ್ಯಾಗ್ ಮಾಡಲಾಗಿದೆ. ಈ ಬಗ್ಗೆ ಪ್ರಾಣಿ ಕಾರ್ಯಕರ್ತೆ ಮಾನವಿ ರೈ ಅವರು ನಾಯಿಗಳಿಗೆ ಈ ಆಧಾರ್ ಕಾರ್ಡ್ ಜೀವಸೆಲೆ . ಇಂದು ಈ ಕ್ಯೂಆರ್ ಆಧಾರಿತ ಟ್ಯಾಗ್ ಗಳು ನಮ್ಮ ನಾಯಿಗಳಿಗೆ ವಿಶೇಷವಾಗಿ ಸಂಕಷ್ಟದ ಸಮಯದಲ್ಲಿ ಜೀವಸೆಲೆಯಾಗಿ ಕಾರ್ಯ ನಿರ್ವಹಿಸುತ್ತದೆ ಎಂದು ಹೇಳಲು ನನಗೆ ಖುಷಿಯಾಗುತ್ತಿದೆ ಎಂದು ಅವರು ಹೇಳಿದ್ದಾರೆ.

ಮುಂದೆ ನೋಡಿ..; ತಮಿಳು ಚಿತ್ರರಂಗಕ್ಕೆ ಎಂಟ್ರಿಕೊಟ್ಟ ‘ಬಿಗ್‌ ಬಾಸ್’ ರೂಪೇಶ್ ಶೆಟ್ಟಿ

Pawfriend.in ಎಂಬ ಎನ್‌ಜಿಒ ಇದನ್ನು ಆವಿಷ್ಕಾರ ಮಾಡಿದ್ದು  ನಾಯಿಗಳಿಗೆ ನೀಡುವ ಆಧಾರ್ ಕಾರ್ಡ್‌ನಲ್ಲಿ ಕ್ಯೂ ಆರ್‌ ಕೋಡ್‌ಅನ್ನು ಕೂಡಾ ಅಳವಡಿಸಿದ್ದಾರೆ.  ಇದು ಮೈಕ್ರೋಚಿಪ್‌ಗಳನ್ನು ಒಳಗೊಂಡಿದ್ದು, ನಾಯಿಗಳು ಒಂದು ವೇಳೆ ಕಳೆದು ಹೋದಲ್ಲಿ ಈ ಟ್ಯಾಗ್‌ಗಳಲ್ಲಿರುವ ಕ್ಯೂಆರ್‌ಕೋಡ್‌ ಅನ್ನು ಸ್ಕ್ಯಾನ್‌ ಮಾಡಿದ್ರೆ ನಾಯಿಯ ಕುರಿತು ವಿವರಗಳನ್ನು ಪಡೆಯಬಹುದಾಗಿದೆ. ಇದು ನಾಯಿಯ ಯಜಮಾನನಿಗೆ ಬಹಳ ಸಹಾಯಕಾರಿಯಾಗಿದೆ.

 

 

Continue Reading

LATEST NEWS

ಪ್ರಜ್ವಲ್ ರೇವಣ್ಣ ಪ್ರಕರಣ ; ವೀಡಿಯೋ ಹರಿಬಿಟ್ಟ ಕಾರ್ತಿಕ್ ನಾಪತ್ತೆ! ಮಲೇಷ್ಯಾಕ್ಕೆ ಹೋಗಿರುವ ಶಂಕೆ

Published

on

ಬೆಂಗಳೂರು : ಸದ್ಯ ಪ್ರಜ್ವಲ್ ರೇವಣ್ಣ ಪ್ರಕರಣ ರಾಜ್ಯ ರಾಜಕಾರಣದಲ್ಲಿ ಕೋಲಾಹಲ ಎಬ್ಬಿಸಿದೆ. ಅತ್ತ ಲೈಂ*ಗಿಕ ದೌರ್ಜ*ನ್ಯ ಆರೋಪ ಎದುರಿಸುತ್ತಿರುವ ಪ್ರಜ್ವಲ್ ರೇವಣ್ಣ ಜರ್ಮನಿಯಲ್ಲಿದ್ದಾರೆ ಎನ್ನಲಾಗಿದೆ. ಇತ್ತ ಈ ವೀಡಿಯೋ ಹರಿಬಿಟ್ಟಿರುವುದು ತಾನು ಎಂದು ಒಪ್ಪಿಕೊಂಡಿದ್ದ ಕಾರ್ತಿಕ್ ನಾಪತ್ತೆಯಾಗಿರುವ ಬಗ್ಗೆ ವರದಿಯಾಗಿದೆ. ಆತ ಎಸ್ ಐ ಟಿ ಕಣ್ಣು ತಪ್ಪಿಸಿ ಮಲೇಷ್ಯಾ ತೆರಳಿದ್ದಾರೆ ಎನ್ನಲಾಗಿದೆ.


ಹೊಳೆನರಸೀಪುರ ತಾಲೂಕಿನ ಕಡುವಿನಕೋಟೆ ನಿವಾಸಿಯಾಗಿರುವ ಕಾರ್ತಿಕ್, ಪ್ರಜ್ವಲ್ ರೇವಣ್ಣ ಬಳಿ 15 ವರ್ಷ ಕಾರು ಚಾಲಕನಾಗಿ ಕೆಲಸ ಮಾಡಿದ್ದರು.​ ಬಳಿಕ ಪರಸ್ಪರ ಮನಸ್ತಾಪದಿಂದ ಕಾರ್ತಿಕ್ ಕೆಲಸ ಬಿಟ್ಟಿದ್ದರು ಎನ್ನಲಾಗಿದೆ.

ಏನು ಹೇಳಿದ್ದ ಕಾರ್ತಿಕ್?

ಎರಡು ದಿನಗಳ ಹಿಂದೆ ಅಜ್ಞಾತ ಸ್ಥಳದಿಂದ ವಿಡಿಯೋ ಮಾಡಿ ಕಾರ್ತಿಕ್ ಹರಿಬಿಟ್ಟಿದ್ದ. ಈ ವೀಡಿಯೋದಲ್ಲಿ, ಹದಿನೈದು ವರ್ಷದಿಂದ ಪ್ರಜ್ವಲ್‌ ರೇವಣ್ಣ ಹಾಗೂ ಅವರ ಫ್ಯಾಮಿಲಿಗೆ ಕಾರು ಡ್ರೈವರ್ ಆಗಿ ಕೆಲಸ ಮಾಡಿದ್ದೇನೆ. ಒಂದು ವರ್ಷದಿಂದ ಕೆಲಸ ಬಿಟ್ಟಿದ್ದೇನೆ. ನನ್ನ ಜಮೀನು ಬರೆಸಿಕೊಂಡು ನನ್ನ ಪತ್ನಿ ಮೇಲೆ ಹಲ್ಲೆ ಮಾಡಿದರು. ಹಿಂಸೆ ಕೊಟ್ಟರು ಹಲ್ಲೆ ಮಾಡಿದರು. ಆದ್ದರಿಂದ ಅವರ ಮನೆಯಿಂದ ಹೊರಬಂದೆ ಎಂದಿದ್ದರು.
ದೇವರಾಜೇಗೌಡ ಇವರ ಫ್ಯಾಮಿಲಿ ವಿರುದ್ಧ ಹೋರಾಟ ಮಾಡುತ್ತಿದ್ದರು. ಯಾರಿಂದಲೂ ನ್ಯಾಯ ಸಿಗಲ್ಲ ಅಂತ ದೇವರಾಜೇಗೌಡ ಬಳಿ ಹೋದೆ. ಯಾವುದೇ ಅಶ್ಲೀಲ ವಿಡಿಯೋ ರಿಲೀಸ್ ಮಾಡಬಾರದು ಎಂದು ನನ್ನ ವಿರುದ್ಧ ಪ್ರಜ್ವಲ್ ರೇವಣ್ಣ ಸ್ಟೇ ತರುತ್ತಾರೆ. ನಿನ್ನ ಬಳಿ ಇರುವ ವಿಡಿಯೋ, ಫೋಟೋಸ್, ನಾನು ಯಾರಿಗೂ ತೋರಿಸಲ್ಲ ಕೊಡು ಎಂದು ದೇವರಾಜೇಗೌಡ ಕೇಳಿದ್ದರು. ನಾನು ನಂಬಿ ನನ್ನ ಬಳಿಯಿದ್ದ ವಿಡಿಯೋದ ಒಂದು ಕಾಪಿ ಕೊಟ್ಟೆ. ಅವರು ಅದನ್ನು ಸ್ವಾರ್ಥಕ್ಕೆ ಉಪಯೋಗಿಸಿಕೊಂಡರೋ ಗೊತ್ತಿಲ್ಲ ಎಂದಿದ್ದರು.

ಇದನ್ನೂ ಓದಿ  : ಶಾಸ್ತ್ರೋಕ್ತವಾಗಿ ಮದುವೆ ಆಗದೇ ಇದ್ದರೆ ಮದುವೆಯೇ ಊರ್ಜಿತವಲ್ಲ : ಸುಪ್ರೀಂ ಕೋರ್ಟ್‌

ದೇವರಾಜೇಗೌಡರನ್ನು ಬಿಟ್ಟರೆ ಬೇರೆ ಯಾರಿಗೂ ಕೊಟ್ಟಿಲ್ಲ. ಕಾಂಗ್ರೆಸ್‌ನವರಿಗಂತೂ ನಾನು ವಿಡಿಯೋ ಕೊಟ್ಟಿಲ್ಲ. ಕಾಂಗ್ರೆಸ್ ಅವರ ಮೇಲೆ ನಂಬಿಕೆ ಇಲ್ಲದೇ ದೇವರಾಜೇಗೌಡರ ಹತ್ತಿರ ಕೊಟ್ಟಿದ್ದೆ. ಪೆನ್‌ಡ್ರೈವ್ ಯಾರು ಹಂಚಿದರೂ ಗೊತ್ತಿಲ್ಲ. ನನ್ನ ಮೇಲೆ ಇಲ್ಲಸಲ್ಲದ ಆರೋಪ ಮಾಡುತ್ತಿದ್ದಾರೆ. ಎಸ್‌ಐಟಿ ಮುಂದೆ ಹಾಜರಾಗಿ ಎಲ್ಲಾ ಹೇಳಿ ಕೊಳ್ಳುತ್ತೇನೆ. ನಂತರ ಮಾಧ್ಯಮದ ಮುಂದೆ ಎಲ್ಲಾ ವಿವರವಾಗಿ ಹೇಳುತ್ತೇನೆ ಎಂದು ಹೇಳಿದ್ದರು.

ಎಸ್ ಐ ಟಿ ನೋಟೀಸ್ ನೀಡಿಲ್ಲ :

ವೀಡಿಯೋ ಮಾಡಿ ಹರಿಬಿಟ್ಟಿರುವ ಕಾರ್ತಿಕ್, ಎಸ್ಐಟಿ ಮುಂದೆ ಹಾಜರಾಗುವುದಾಗಿ ಹೇಳಿದ್ದರು. ತಾನೇ ಖುದ್ದು ಎಸ್ಐಟಿ ಮುಂದೆ ಹಾಜರಾಗುವ ಹೇಳಿಕೆ ನೀಡಿದ್ದರು. ಪೆನ್ ಡ್ರೈವ್ ವಕೀಲ ದೇವರಾಜೇ ಗೌಡಗೆ ಕೊಟ್ಟಿದ್ದು ನಾನೇ ಎಂದು ಕಾರ್ತಿಕ್ ಹೇಳಿದ್ದ. ವೀಡಿಯೋಗಳ ಮೂಲಕ ವ್ಯಕ್ತಿ ನಾನೇ ಅಂದರೂ ಇನ್ನು ಆತನನ್ನು ವಿಚಾರಣೆಗೆ ಒಳಪಡಿಸಿಲ್ಲ. ವಿಚಾರಣೆಗೆ ಹಾಜರಾಗುವಂತೆ ಕಾರ್ತಿಕ್‌ಗೆ ನೊಟೀಸ್ ಅನ್ನೂ ಎಸ್ಐಟಿ ನೀಡಿರಲಿಲ್ಲ. ಈ ನಡುವೆ ಕಾರ್ತಿಕ್ ನಾಪತ್ತೆಯಾಗಿದ್ದಾರೆ.

Continue Reading

LATEST NEWS

ಶಾಸ್ತ್ರೋಕ್ತವಾಗಿ ಮದುವೆ ಆಗದೇ ಇದ್ದರೆ ಮದುವೆಯೇ ಊರ್ಜಿತವಲ್ಲ : ಸುಪ್ರೀಂ ಕೋರ್ಟ್‌

Published

on

ನವದೆಹಲಿ: ಹಿಂದೂ ವಿವಾಹವೆಂದರೆ ಅದು ಹಾಡು, ನೃತ್ಯ, ಊಟದ ಕಾರ್ಯಕ್ರಮವಾಗಲೀ ಅಥವಾ ಹಣಕಾಸಿನ ವಹಿವಾಟಿನ ವ್ಯವಹಾರವಲ್ಲ. ಬದಲಾಗಿ ಅದೊಂದು ಸಂಸ್ಕೃತಿ ಎಂದು ಸುಪ್ರೀಂಕೋರ್ಟ್‌ ಬಣ್ಣಿಸಿದೆ. ಜೊತೆಗೆ ಸಪ್ತಪದಿ ಸೇರಿದಂತೆ ಅಗತ್ಯ ಶಾಸ್ತ್ರಗಳನ್ನು ಪೊರೈಸದೆ ನಡೆಸುವ ಮದುವೆಗೆ ಕಾನೂನಿನ ಮಾನ್ಯತೆಯೇ ಇಲ್ಲ. ಯಾವುದೇ ಶಾಸ್ಕೋಕ್ತವಾದ ಆಚರಣೆ ಇಲ್ಲದೇ ಮಾಡಿಸುವ ಮದುವೆ ನೋಂದಣಿ ಕೂಡಾ ಮದುವೆಗೆ ಮಾನ್ಯತೆ ದೊರಕಿಸುವುದಿಲ್ಲ ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯ ವ್ಯಕ್ತಪಡಿಸಿದೆ.  ಪೈಲಟ್ ದಂಪತಿಯ ವಿಚ್ಛೇದನ ಪ್ರಕರಣದಲ್ಲಿ ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ನ್ಯಾಅಗಾಸ್ಟಿನ್ ಜಾರ್ಜ್‌ ಅವರನ್ನೊಳಗೊಂಡ ಪೀಠ ಈ ರೀತಿಯಾಗಿ ಹೇಳಿದೆ.

ಮದುವೆಗೆ ಮಾನ್ಯತೆ ನೀಡಲು ಶಾಸ್ತ್ರೋಕ್ತ ಕಾರ್ಯಕ್ರಮಗಳು ನಡೆದಿರಬೇಕು. ಸಮಸ್ಯೆ ಅಥವಾ ವಿವಾದ ಉಂಟಾದಾಗ ಪರಿಹರಿಸಲು ಸಮಾರಂಭದ ಪುರಾವೆಗಳು ನೆರವಿಗೆ ಬರಲಿವೆ. ಅಂತಹ ಆಚರಣೆ ಇಲ್ಲದೆ ನಡೆದ ಮದುವೆಗೆ ಕಾಯಿದೆಯ ಸೆಕ್ಷನ್ 7ರ ಪ್ರಕಾರ ಮಾನ್ಯತೆ ಸಿಗುವುದಿಲ್ಲ. ಕೇವಲ ಇಲಾಖೆಯ ಪ್ರಮಾಣ ಪತ್ರದಿಂದ ವೈವಾಹಿಕ ಸ್ಥಿತಿ ದೃಢೀಕರಿಸಲಾಗದು. ಹಿಂದೂ ವಿವಾಹದ ವಿಧಿ ವಿಧಾನಗಳಂತೆ ಮದುವೆ ನಡೆಯದಿದ್ದರೆ ಅದನ್ನು ಹಿಂದೂ ವಿವಾಹವೆಂದು ಪರಿಗಣಿಸಲಾಗದು ಎಂದು ನ್ಯಾಯಾಲಯ ವಿವರಿಸಿದೆ.

ಹಿಂದೂ ವಿವಾಹ ಕಾಯ್ದೆ ಅಡಿಯಲ್ಲಿ ಮದುವೆ ಎನ್ನುವುದು ಬಹಳ ಪವಿತ್ರ. ಇದು ಇಬ್ಬರು ವ್ಯಕ್ತಿಗಳ ನಡುವಿನ ಜೀವನ ಪರ್ಯಂತ, ಘನತೆಯ ಸಮಾನ ಸಹಮತದ ಮತ್ತು ಆರೋಗ್ಯಕರ ಸಮ್ಮಿಲನ ಎಂದು ಕೋರ್ಟ್‌ ಹೇಳಿದೆ.

ನೋಂದಣಿ ಅಂತಿಮವಲ್ಲ

ಯಾವುದೇ ಶಾಸ್ತ್ರೋಕ್ತ ಆಚರಣೆ ಇಲ್ಲದೇ ಕೇವಲ ಸಂಸ್ಥೆಯೊಂದು ನೋಂದಣಿಯ ದಾಖಲೆ ಪತ್ರ ವಿತರಿಸಿದರೆ ಅದು  ಹಿಂದೂ ವಿವಾಹ ಕಾಯ್ದೆ ಅನ್ವಯ ವಿವಾಹವನ್ನು ಮಾನ್ಯಗೊಳಿಸುವುದಿಲ್ಲ. ಹಿಂದೂ ವಿವಾಹ ವಿಧಿ ವಿಧಾನದಂತೆ ಮದುವೆ ನಡೆಯದೆ ಇರುವಾಗ ಸೆಕ್ಷನ್ 8ರ ಅಡಿಯಲ್ಲಿ ನೋಂದಣಿ ಅಧಿಕಾರಿ ವಿವಾಹವನ್ನು ನೋಂದಾಯಿಸಿಕೊಳ್ಳುವಂತಿಲ್ಲ ಎಂದು ನ್ಯಾಯಾಲಯ ತೀರ್ಪು ನೀಡಿದೆ.

ಹಿಂದೂ ವಿವಾಹ ಕಾಯಿದೆಯ ಸೆಕ್ಷನ್ 7ರ ಪ್ರಕಾರ ವೈವಾಹಿಕ ಸಮಾರಂಭದಲ್ಲಿ ಭಾಗಿಯಾಗಿದ್ದಲ್ಲಿ ಮಾತ್ರವೇ ದೃಢೀಕರಿಸಬೇಕು ಎಂದು ಪೀಠ ಸ್ಪಷ್ಟಪಡಿಸಿದೆ. ಹಿಂದೂ ವಿವಾಹ ಕಾಯಿದೆಯ ಅಡಿಯಲ್ಲಿ ಅಗತ್ಯವಾದ ಧಾರ್ಮಿಕ ವಿಧಿ ವಿಧಾನಗಳನ್ನು ಪೂರೈಸದ ವಿವಾಹಗಳನ್ನು ನೋಂದಣಿ ಮಾಡುತ್ತಿರುವ ಪ್ರವೃತ್ತಿ ಬಗ್ಗೆ ಇಬ್ಬರೂ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿದರು.

ಏನಿದು ಪ್ರಕರಣ?

ಪೈಲಟ್ ದಂಪತಿಯ ವಿಚ್ಛೇದನ ಪ್ರಕರಣದಲ್ಲಿ ಮದುವೆ ನೋಂದಣಿ ಮಾಡಿಸಿದ್ದರೂ ಹಿಂದೂ ವಿವಾಹ ಕಾಯ್ದೆಯ ಅನುಸಾರ ಸಪ್ತಪದಿ ನೆರವೇರಿರಲಿಲ್ಲ ಎಂಬುದು ನ್ಯಾಯಾಲಯಕ್ಕೆ ಗಮನಕ್ಕೆ ಬಂದಿತ್ತು. ಈ ಹಿನ್ನಲೆಯಲ್ಲಿ ನೋಂದಣಿಯನ್ನು ಅಮಾನ್ಯ ಮಾಡಿ ಮದುವೆಯನ್ನು ರದ್ದುಗೊಳಿಸಿ ಪತ್ನಿ ದಾಖಲಿಸಿದ್ದ ವರದಕ್ಷಿಣೆ ಮತ್ತು ವಿಚ್ಛೇದನ ಪ್ರಕರಣವನ್ನೂ ಕೂಡಾ ನ್ಯಾಯಾಲಯ ರದ್ದುಗೊಳಿಸಿದೆ.

ಭಾರತೀಯ ಸಮಾಜದಲ್ಲಿ  ಮದುವೆಗೆ ಹೆಚ್ಚಿನ ಮೌಲ್ಯ ಇದೆ. ದಂಪತಿಯ ಪೋಷಕರು ಕಾಗದದ ನೋಂದಣಿಗಳನ್ನು ಪ್ರೋತ್ಸಾಹಿಸಬಾರದು. ವಿವಾಹದ ಬಗ್ಗೆ ಯುವಜನತೆ ಆತ್ಮಾವಲೋಕನ ಮಾಡಿಕೊಳ್ಳಬೇಕು. ಹಿಂದೂ ವಿವಾಹದ ಶಾಸ್ತ್ರೋಕ್ತ ಆಚರಣೆಗಳನ್ನು ಕ್ಷುಲ್ಲಕವೆಂದು ಪರಿಗಣಿಸುವ ಬದಲು “ಶ್ರದ್ಧೆಯಿಂದ ಕಟ್ಟುನಿಟ್ಟಾಗಿ ಮತ್ತು ಧಾರ್ಮಿಕವಾಗಿ ಪಾಲಿಸಬೇಕು” ಎಂದು ನ್ಯಾಯಪೀಠ ಹೇಳಿದೆ.

Continue Reading

LATEST NEWS

Trending