Connect with us

    KADABA

    ಉಪ್ಪಿನಂಗಡಿ: ವ್ಯಕ್ತಿಯೋರ್ವರ ಮೇಲೆ ಯುವಕರಿಂದ ಹಲ್ಲೆ-ದರೋಡೆಗೆ ಯತ್ನ

    Published

    on

    ಉಪ್ಪಿನಂಗಡಿ: ವ್ಯಕ್ತಿಯೋರ್ವರ ಮೇಲೆ ಯುವಕರ ತಂಡವೊಂದು ಹಲ್ಲೆ ನಡೆಸಿ ದರೋಡೆಗೆ ಯತ್ನಿಸಿದ ಘಟನೆ ನಿನ್ನೆ ರಾತ್ರಿ ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

    ಜೋಯ್ ವಿ.ಡಿ ಇಚಲಂಪಾಡಿ ಹಲ್ಲೆಗೊಳಗಾದ ವ್ಯಕ್ತಿ.


    ನವನೀತ್ ಮೋಹನ್, ಸುಜಿತ್ ಸುಗತನ್, ರಾಹುಲ್ ಅಡ್ಡಹೊಳೆ ಆರೋಪಿಗಳು ಎಂದು ತಿಳಿದುಬಂದಿದೆ.
    ಮೂವರು ಆರೋಪಿಗಳ ತಂಡ ಆಟೋದಲ್ಲಿ ಬಂದು ಜೋಯ್ ಎಂಬವರ ಮೊಬೈಲ್, ಹಣ ದೋಚಿದ್ದಾರೆ.

    ಬಳಿಕ ಹಣಕ್ಕೆ ಬೇಡಿಕೆ ಇಟ್ಟು ಹಲ್ಲೆ, ದರೋಡೆ, ಕೊಲೆ ಯತ್ನ ನಡೆಸಿದ್ದಾರೆ. ಬಳಿಕ ಪ್ರವಾಸಿಗರ ಕಾರು ಬಂದಾಗ, ಆರೋಪಿಗಳು ಗಾಯಳುವನ್ನು ರಸ್ತೆಯಲ್ಲೇ ಬಿಟ್ಟು ಪರಾರಿಯಾಗಿದ್ದಾರೆ.

    ಇದೀಗ ಗಾಯಾಳು ಜೋಯ್ ಇವರು ಕಡಬದ ಸರಕಾರಿ ಆಸ್ಪತ್ರೆಯಲ್ಲಿ ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

    ಆರೋಪಿಗಳ ವಿರುದ್ಧ ಪ್ರಕರಣ ದಾಖಲಾಗಿದೆ.

     

    DAKSHINA KANNADA

    ಕಳ್ಳರನ್ನು ಹಿಡಿದ 60 ರ ವೃದ್ಧೆ..!

    Published

    on

    ಮಂಗಳೂರು :ವೃದ್ಧೆ ಮಹಿಳೆಯ ಕತ್ತಿನಿಂದ ಚಿನ್ನದ ಸರ ಎಗರಿಸಲು ಯತ್ನಿಸಿದ್ದ ಕಳ್ಳರಿಬ್ಬರಿನ್ನು ಮಹಿಳೆಯೇ ಹಿಡಿದು ಪೊಲೀಸರಿಗೆ ಒಪ್ಪಿಸಿದ ಘಟನೆ ಗುಂಡ್ಯಾ ಸಮೀಪದ ಅಡ್ಡಹೊಳೆ ಎಂಬಲ್ಲಿ ನಡೆದಿದೆ.

    ಅಂಗಡಿಯಲ್ಲಿ ವೃದ್ಧ ಮಹಿಳೆ ಒಬ್ಬರೇ ಇದ್ದ ವೇಳೆ ಸ್ಕೂಟಿಯಲ್ಲಿ ಬಂದಿದ್ದ ಇಬ್ಬರು ವೃದ್ಧೆಯ ಕತ್ತಿನ ಸರ ಕಸಿಯಲು ಯತ್ನಿಸಿದ್ದಾರೆ. ಈ ವೇಳೆ ಜಾಗೃತಗೊಂಡ ಮಹಿಳೆ ತಕ್ಷಣ ಇಬ್ಬರನ್ನು ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ.

    ತ್ರೇಸಿಯಾಮ್ಮ ಅವರಿಗೆ 60 ವರ್ಷ ವಯಸ್ಸಾಗಿದ್ದು, ಅಡ್ಡಹೊಳೆ ಹೆದ್ದಾರಿಯಲ್ಲಿ ಅಂಗಡಿ ನಡೆಸುತ್ತಿದ್ದಾರೆ. ಬೆಂಗಳೂರಿನಿಂದ ಕಳ್ಳತನ ನಡೆಸಲೆಂದೇ ಬಂದಿದ್ದ ಬೆಂಗಳೂರು ಯಶವಂತಪುರ ಮೂಲದ ರೋಹಿತ್ (25) ಮತ್ತು ಅಶೋಕ್ (25), ಎಂಬವರು ಮಂಗಳೂರಿನಲ್ಲಿ ವಾಹನ ಮಾರಾಟಗಾರಿಂದ ಟೆಸ್ಟ್ ಡ್ರೈವ್ ಮಾಡುತ್ತೇವೆ ಎಂದು ಸ್ಕೂಟಿ ಕಳ್ಳತನ ಮಾಡಿದ್ದಾರೆ. ಅದೇ ಸ್ಕೂಟಿಯಲ್ಲಿ ಬೆಂಗಳೂರಿಗೆ ಹೋಗುವ ದಾರಿಯಲ್ಲಿ ಚಿನ್ನದ ಸರ ಎಳೆಯಲು ಹೋಗಿ‌ ಸಿಕ್ಕಿಬಿದ್ದಿದ್ದಾರೆ.

    ಕಳ್ಳರಿಬ್ಬರನ್ನೂ ಉಪ್ಪಿನಂಗಡಿ ಪೊಲೀಸರ ವಶಕ್ಕೆ ಒಪ್ಪಿಸಲಾಗಿದ್ದು, ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.

    Continue Reading

    DAKSHINA KANNADA

    ಗಾಳಿಗೆ ಹಾರಿದ ಶಾಲೆಯ ಹೆಂಚು..! ರಜಾ ದಿನವಾದ ಕಾರಣ ತಪ್ಪಿದ ಅನಾಹುತ..!

    Published

    on

    ಮಂಗಳೂರು ( ಕಡಬ ) : ಕಡಬ ತಾಲೂಕಿನಲ್ಲಿ ಭಾನುವಾರ ಮದ್ಯಾಹ್ನ ಜೋರಾಗಿ ಬೀಸಿದ ಗಾಳಿಗೆ ಶಾಲೆಯೊಂದರ ಹೆಂಚುಗಳು ಹಾರಿ ಹೋದ ಘಟನೆ ನಡೆದಿದೆ. ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಈ ಘಟನೆ ನಡೆದಿದ್ದು, ರಜಾ ದಿನವಾದ ಕಾರಣ ಸಂಭವನೀಯ ಅನಾಹುತ ತಪ್ಪಿದಂತಾಗಿದೆ.


    ಭಾನುವಾರ ಜೋರಾದ ಗಾಳಿಯ ಜೊತೆ ಮಳೆ ಬರುವ ಸಾಧ್ಯತೆ ಬಗ್ಗೆ ಹವಾಮಾನ ಇಲಾಖೆ ಮುನ್ಸೂಚನೆ ನೀಡಿತ್ತು. ಅದರಂತೆ ಮದ್ಯಾಹ್ನದ ವೇಳೆಗೆ ಕಡಬ ತಾಲೂಕಿನ ಬಲ್ಯ ಗ್ರಾಮದಲ್ಲಿ ಜೋರಾದ ಗಾಳಿ ಬೀಸಿದೆ. ಇದರ ಪರಿಣಾಮವಾಗಿ ಬಲ್ಯ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹೆಂಚುಗಳು ಹಾರಿ ಹೋಗಿದೆ. ಒಂದಷ್ಟು ಹೆಂಚುಗಳು ಶಾಲೆಯ ಹೊರಾಂಗಣದಲ್ಲಿ ಬಿದ್ದಿದ್ದರೆ, ಇನ್ನೂ ಕೆಲವು ಹೆಂಚುಗಳು ಶಾಲೆಯ ಕೊಠಡಿಯ ಒಳಗೆ ಬಿದ್ದಿದೆ. ಶಾಲೆಗೆ ಬಹುತೇಕ ಎಲ್ಲಾ ಕೊಠಡಿಯ ಹೆಂಚುಗಳು ಗಾಳಿಗೆ ಹಾರಿ ಹೋಗಿದೆ. ಅದೃಷ್ಟವಶಾತ್ ಭಾನುವಾರವಾದ ಕಾರಣ ಶಾಲೆಯಲ್ಲಿ ಮಕ್ಕಳು ಇರದ ಕಾರಣ ಯಾವುದೇ ಅನಾಹುತ ನಡೆದಿಲ್ಲ.


    ಬೀಸಿದ ಗಾಳಿಗೆ ಶಾಲೆಯ ಹೆಂಚಿನ ಜೊತೆಗೆ ಗ್ರಾಮದ ಕೃಷಿಕರ ಅಡಿಕೆ ತೋಟಕ್ಕೂ ಹಾನಿಯಾಗಿದೆ. ಹಲವು ಅಡಿಕೆ ಮರಗಳು ತುಂಡಾಗಿ ಬಿದ್ದಿದ್ದು, ಕೆಲವೆಡೆ ವಿದ್ಯುತ್ ತಂತಿಯ ಮೇಲೆ ಬಿದ್ದ ಕಾರಣ ವಿದ್ಯುತ್ ಕಂಬಕ್ಕೂ ಕೂಡಾ ಹಾನಿ ಸಂಭವಿಸಿದೆ.
    ಜುಲೈ 15 ಮತ್ತು 16 ರಂದು ಕೂಡಾ ಜೋರಾದ ಗಾಳಿಯ ಜೊತೆ ಮಳೆ ಸುರಿಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ.

    Continue Reading

    BANTWAL

    ಚುನಾವಣಾ ಮತದಾನ ಹಿನ್ನೆಲೆ ಜಿಲ್ಲೆಯಲ್ಲಿ ಮೂರು ದಿನ ಮದ್ಯ ನಿಷೇಧ

    Published

    on

    ದ.ಕ: ಲೋಕಸಭಾ ಚುನಾವಣಾ ಹಿನ್ನೆಲೆಯಲ್ಲಿ ಮೊದಲ ಹಂತದ ಮತದಾನ ಹಾಗೂ ಚುನಾವಣಾ ಮತ ಎಣಿಕಾ ಕಾರ್ಯ ನಡೆಯಲಿರುವ ಹಿನ್ನೆಲೆ ದ.ಕ ಕ್ಷೇತ್ರ ಸೇರಿದಂತೆ 14 ಕ್ಷೇತ್ರಗಳಲ್ಲಿ ಎ.24ರ ಸಂಜೆ 6 ಗಂಟೆಯಿಂದ ಮದ್ಯ ನಿಷೇಧ ಮಾಡಲಾಗಿದೆ.

    drinks ban for 3 days

    ಮುಂದೆ ಓದಿ..; ಉಡುಪಿ : ಕರಾವಳಿ ಜನರ ರಕ್ತದಲ್ಲೇ ಹಿಂದುತ್ವ ಇದೆ : ಬಿ.ವೈ.ವಿಜಯೇಂದ್ರ

    ಏ. 24ರ ಸಂಜೆ 6ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೆ ಎಲ್ಲಾ ಹೋಟೆಲ್, ರೆಸ್ಟೋರೆಂಟ್ ಮತ್ತು ಪರವಾನಿಗೆ ಹೊಂದಿರುವ ಅಂಗಡಿಗಳಲ್ಲಿ ಯಾವುದೇ ರೀತಿಯ ಮದ್ಯಪಾನ, ಮಾರಾಟವನ್ನು ನಿಷೇಧ ಮಾಡಲಾಗಿದೆ, ಪರವಾನಗಿ ಪಡೆಯದ ಆವರಣಗಳಲ್ಲಿ ಮದ್ಯ ಶೇಖರಣೆಯನ್ನು ನಿಷೇಧ ಮಾಡಲಾಗಿದೆ. ಜಿಲ್ಲೆಯಾದ್ಯಂತ ಸಿಆರ್ಪಿಸಿ ಕಲಂ 144ರ ಅನ್ವಯ ಏಪ್ರಿಲ್ 24ರ ಸಂಜೆ 6ರಿಂದ ಪ್ರಾರಂಭಿಸಿ ಏಪ್ರಿಲ್ 26ರ ಮತದಾನ ಮುಕ್ತಾಯದ ವರೆಗೂ ಸೆಕ್ಷನ್ 144 ರಡಿ ಪ್ರತಿಬಂಧಕಾಜ್ಞೆಯನ್ನು ಜಿಲ್ಲೆಯಾದ್ಯಂತ ಹೊರಡಿಸಲಾಗಿದೆ. ಅದೇ ರೀತಿ ಏ. 24ರ ಸಂಜೆ 6 ರಿಂದ‌ ಮತದಾನ ಕೊನೆಗೊಳ್ಳುವ ಏ.26ರ ಅವಧಿಯಲ್ಲಿ ಧ್ವನಿವರ್ಧಕಗಳನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ದ.ಕ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ನಿಡಿದ್ದಾರೆ.

    Continue Reading

    LATEST NEWS

    Trending