Connect with us

DAKSHINA KANNADA

Puttur: ರಾಮನ ಅಕ್ಷತೆ ಹಂಚುತ್ತಿದ್ದ ಸಂಚಾಲಕನ ಮೇಲೆ ಹಲ್ಲೆ-ಹಿಂದೂ ಸಂಘಟನೆ ಆರೋಪ..!

Published

on

ಪುತ್ತೂರು: ರಾಮಮಂದಿರದ ಅಕ್ಷತೆ ಹಂಚುವ ಜಾವಾಬ್ದಾರಿ ಹೊಂದಿ ಮನೆಮನೆಗೆ ಅಕ್ಷತೆ ವಿತರಿಸುತ್ತಿದ್ದ ಮುಂಡೂರು ಗ್ರಾಮದ ಸಂಚಾಲಕನ ಮೇಲೆ ಪುತ್ತಿಲ ಪರಿವಾರದ ಕಾರ್ಯಕರ್ತರು ಹಲ್ಲೆ ನಡೆಸಿದ ಘಟನೆ ಜ.15ರ ಸೋಮವಾರ ನಡೆದಿದೆ.

ಪುತ್ತೂರು ತಾಲೂಕಿನ ಮುಂಡೂರು ಗ್ರಾಮದಲ್ಲಿ ನಿನ್ನೆ ರಾಮ ಮಂದಿರದ ಅಕ್ಷತೆಯನ್ನು ಹಂಚಿ ವಾಪಾಸಾಗುತ್ತಿದ್ದ ಸಂತೋಷ್ ಮೇಲೆ ಸ್ಥಳಿಯ ನಿವಾಸಿಗಳಾದ ಧನಂಜಯ್ ಹಾಗೂ ಇತರರು ಸೇರಿ ಹಲ್ಲೆ ನಡೆಸಿದ್ದಾರೆ. ಈ ವೇಳೆ ತಡೆಯಲು ಬಂದ ಸಂತೋಷ್ ತಾಯಿಯ ಮೇಲೂ ಹಲ್ಲೆ ನಡೆಸಿದ್ದಾಗಿ ಸಂತೋಷ್ ಪೊಲೀಸರಿಗೆ ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಆರೋಪಿ ಧನಂಜಯ್ ಪುತ್ತಿಲ ಪರಿವಾರದಲ್ಲಿ ಗುರುತಿಸಿಕೊಂಡಿದ್ದಾಗಿ ತಿಳಿಸಿದ್ದು, ಸಂತೋಷ್ ಅಕ್ಷತೆ ಹಂಚುವ ವಿಚಾರದಲ್ಲಿ ಈ ಹಿಂದೆ ಆಕ್ಷೇಪ ವ್ಯಕ್ತಪಡಿಸಿದ್ದ ಎನ್ನಲಾಗಿದೆ. ಸಂತೋಷ್ ಹಾಗೂ ಅವರ ತಾಯಿಯನ್ನು ಪುತ್ತೂರಿನ ಆದರ್ಶ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ. ಆಸ್ಪತ್ರೆಗೆ ಮಾಜಿ ಶಾಸಕ ಸಂಜೀವ ಮಠಂದೂರು ಭೇಟಿ ನೀಡಿ ಹಲ್ಲೆಗೊಳಗಾದ ಇಬ್ಬರ ಆರೋಗ್ಯ ವಿಚಾರಿಸಿದ್ದಾರೆ.

ಇದೊಂದು ರಾಜಕೀಯ ಪ್ರೇರಿತ ಹಲ್ಲೆ ಎಂದು ಆರೋಪಿಸಿರುವ ಮಾಜಿ ಶಾಸಕ ಮಠಂದೂರು ಸರ್ಕಾರ ಹಾಗೂ ಪೊಲೀಸ್ ಇಲಾಖೆ ತಪ್ಪಿತಸ್ಥರ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ. ಜಾಗದ ವಿಚಾರದಲ್ಲಿ ಧನಂಜಯ ಹಾಗೂ ಸಂತೋಷ್ ನಡುವೆ ವಿವಾದವಿದ್ದು ಅದೇ ವಿಚಾರಕ್ಕೆ ಹಲ್ಲೆ ನಡೆದಿರುವ ಬಗ್ಗೆ ಅನುಮಾನವಿದೆ. ಪುತ್ತೂರು ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ.

Click to comment

Leave a Reply

Your email address will not be published. Required fields are marked *

DAKSHINA KANNADA

ದಕ್ಷಿಣ ಕನ್ನಡ ಜಿಲ್ಲೆಯ ಕಲಾವೈವಿಧ್ಯತೆಗೆ ಮಾರುಹೋದ ವಿದೇಶಿಗರು

Published

on

ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯು ವಿವಿಧ ವೈವಿಧ್ಯಮಯ ಕ್ಷೇತ್ರವನ್ನು ಒಳಗೊಂಡಿರುವ ಕರಾವಳಿ ನಗರಿ. ಇಲ್ಲಿಗೆ ಬಂದ ವಿದೇಶಿ ಪ್ರಜೆಗಳು ಇಲ್ಲಿನ ವಿಶೇಷತೆಗಳನ್ನು ನೋಡಿ ಮನಸೋಲುತ್ತಾರೆ. ನವಮಂಗಳೂರು ಬಂದರಿಗೆ ಪ್ರತಿ ವರ್ಷದಂತೆ ಈ ಬಾರಿಯೂ ಹಲವು ವಿದೇಶಿ ಪ್ರವಾಸಿ ಹಡಗುಗಳು ಬಂದಿದ್ದು, ಇಲ್ಲಿನ ವಿಶೇಷ ತಾಣಗಳಿಗೆ ಭೇಟಿ ನೀಡಿ ಆನಂದ ಪಟ್ಟರು.


ವಿದೇಶಿ ಹಡಗಿನಲ್ಲಿ ಬಂದಿಳಿದ ಯುಎಸ್ಎ, ನೆದರ್ ಲ್ಯಾಂಡ್, ಉಕ್ರೇನ್, ಯುನೈಟೆಡ್ ಕಿಂಗ್‌ಡಂ, ಅಸ್ಟ್ರೇಲಿಯಾ, ನ್ಯೂಜಿಲ್ಯಾಂಡ್, ಜಪಾನ್, ಪಿಲಿಫೈನ್ಸ್ ದೇಶದ ಸುಮಾರು 120 ಜನ ವಿದೇಶಿಗಳು, ಜಗತ್ಪ್ರಸಿದ್ದ ಸಾವಿರ ಕಂಬ ಬಸದಿಗೆ ಭೇಟಿ ನೀಡಿ ಅಲ್ಲಿ ಕಲಾಸೌಂದರ್ಯಕ್ಕೆ ಮಾರು ಹೋದರು.

ಇದನ್ನೂ ಓದಿ : ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!


ಮಂಗಳೂರು ಮೂಲದ ಕ್ಯಾಲಿಫೋರ್ನಿಯ ಉದ್ಯೋಗಿ ಸಚಿನ್ ಪಡಿವಾಳ್ ಅವರನ್ನು ಮೂಡುಬಿದಿರೆ ಭಟ್ಟಾರಕ ಸ್ವಾಮೀಜಿ ಸನ್ಮಾನಿಸಿದರು. ಈ ಸಂದರ್ಭ ಮಂಗಳೂರು ಟ್ರಾವೆಲ್ ಗೈಡ್ ರೋಹನ್, ರೋಷನ್, ಶ್ರೀಕಾಂತ್ ಮೊದಲಾದವರು ಉಪಸ್ಥಿತರಿದ್ದರು.

Continue Reading

DAKSHINA KANNADA

ಹರಕೆ ತೀರಿಸಿದ ಕೆಜಿಎಫ್ ನಟಿ ಶ್ರೀನಿಧಿ ಶೆಟ್ಟಿ; ಅಭಯವಿತ್ತ ದೈವ!

Published

on

ಮಂಗಳೂರು : ತುಳುನಾಡು ದೈವಾರಾಧನೆಯ ನೆಲೆಬೀಡು. ಇಲ್ಲಿ ದೈವಗಳ ಮೇಲೆ ಅತೀವ ನಂಬಿಕೆಯಿದೆ. ನಂಬಿದವರ ಕೈಬಿಡದು ದೈವ ಎಂಬ ನಂಬಿಕೆ ತುಳವರದು. ಸೆಲೆಬ್ರಿಟಿಗಳೂ ದೈವಗಳನ್ನು ನಂಬುತ್ತಾರೆ. ಊರಿಗೆ ಬಂದು ದೈವಗಳಿಗೆ ಕೈ ಮುಗಿಯುತ್ತಾರೆ. ನಟಿ ಶ್ರೀನಿಧಿ ಶೆಟ್ಟಿ ಸಿನಿರಂಗದಲ್ಲಿ ಯಶಸ್ಸು ಬಾಚಿಕೊಳ್ಳುತ್ತಿದ್ದರೂ ಕೂಡ ದೈವಾರಾಧನೆ ಮರೆತಿಲ್ಲ. ಅವರು ತಾವು ಹೊತ್ತ ಹರಕೆಯನ್ನು ಪೂರೈಸಿದ್ದಾರೆ.

ಅಭಯವಿತ್ತ ದೈವ :


ಕೆಜಿಎಫ್ ಖ್ಯಾತಿಯ ಶ್ರೀನಿಧಿ ಶೆಟ್ಟಿ ಅವರ ಹರಕೆಯ ನೇಮೋತ್ಸವ ಕಿನ್ನಿಗೋಳಿಯ ಅವರ ಕುಟುಂಬದ ಮನೆ ತಾಳಿಪಾಡಿಗುತ್ತುವಿನಲ್ಲಿ ನಡೆಯಿತು. ಈ ಹಿಂದೆ ತಾನು ಹರಕೆ ಹೊತ್ತಂತೆ ಸೋಮವಾರ ಕಿನ್ನಿಗೋಳಿ ಸಮೀಪ ತಾಳಿಪಾಡಿಗುತ್ತುವಿನಲ್ಲಿ ಜಾರಾಂದಾಯ ಮತ್ತು ಪರಿವಾರ ದೈವಗಳಿಗೆ ನೇಮೋತ್ಸವ ನಡೆದಿದ್ದು, ಶ್ರೀ ನಿಧಿ ಶೆಟ್ಟಿಯವರ ಕುಟುಂಬ ವರ್ಗದವರು ಸಂಬಂಧಿಕರು ಪಾಲ್ಗೊಂಡರು.

ಇದನ್ನೂ ಓದಿ : ಮತ್ತೆ ಡೀಪ್ ಫೇಕ್ ಗೆ ಬಲಿಯಾದ ಆಲಿಯಾ ಭಟ್; ನಟಿಯ ವೀಡಿಯೋ ನೋಡಿ ಫ್ಯಾನ್ಸ್ ಶಾಕ್!


‘ಮುಂದೆ ಇನ್ನಷ್ಟು ಎತ್ತರಕ್ಕೆ ಏರುತ್ತೀರಿ’ ಎಂದು ದೈವಗಳು ಇದೇ ಸಂದರ್ಭ ಶ್ರೀನಿಧಿ ‌ಶೆಟ್ಟಿಗೆ ಅಭಯ ನೀಡಿವೆ. ಸದ್ಯ ಶ್ರೀನಿಧಿ ಶೆಟ್ಟಿ ಸಿನಿಮಾಗಳಲ್ಲು ಬಿಝಿ ಆಗಿದ್ದಾರೆ. ಸಕತ್ ಚ್ಯೂಸಿ ಕೂಡ ಆಗಿದ್ದಾರೆ. ಕೆಜಿಎಫ್ 2 ಚಿತ್ರದಲ್ಲೂ ಬಿಝಿ ಆಗಿದ್ದಾರೆ. ಅತ್ತ ತೆಲುಗು ಸಿನಿರಂಗಕ್ಕೂ ಪದಾರ್ಪಣೆ ಮಾಡಿದ್ದಾರೆ. ಜೊತೆಗೆ ಕಿಚ್ಚ ಸುದೀಪ್ ಅವರ 47 ನೇ ಚಿತ್ರದಲ್ಲಿ ನಟಿಸುತ್ತಿದ್ದಾರೆ.

Continue Reading

DAKSHINA KANNADA

ಖಾಸಗಿ ಕಾಲೇಜಿನ ಮಹಿಳಾ ಟಾಯ್ಲೆಟ್ ನಲ್ಲಿ ಮೊಬೈಲ್ ಪತ್ತೆ; ಆರೋಪಿ ಬಂಧನ

Published

on

ಮಂಗಳೂರು : ಖಾಸಗಿ  ಕಾಲೇಜಿನ 1ನೇ ಮಹಡಿಯಲ್ಲಿರುವ ಲೇಡಿಸ್ ಟಾಯ್ಲೆಟ್ ನಲ್ಲಿ ಮೊಬೈಲ್ ಪೋನ್ ಇಟ್ಟು ವಿಡಿಯೋ ರೆಕಾರ್ಡ್ ಮಾಡಲು ಪ್ರಯತ್ನಿಸಿದ ಘಟನೆ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಪಟ್ಟಂತೆ 17 ವರ್ಷದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ.

ನಗರದ ವೈದ್ಯಕೀಯ ಕಾಲೇಜೊಂದರ ವಿದ್ಯಾರ್ಥಿನಿಯರ ಶೌಚಾಲಯದಲ್ಲಿ ಮೊಬೈಲ್ ಪತ್ತೆಯಾಗಿದ್ದು, ಸಿಸಿ ಕ್ಯಾಮರಾ ಆಧರಿಸಿ ಪರಿಶೀಲನೆ ನಡೆಸಿದಾಗ ಬಾಲಕನೊಬ್ಬ ಮೊಬೈಲ್ ಇಟ್ಟಿರುವುದು ಕಂಡು ಬಂದಿದೆ. ಬಾಲಕನನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗುತ್ತಿದೆ. ಈಗಾಗಲೇ ಬಾಲನ್ಯಾಯ ಮಂಡಳಿ ಮುಂದೆ ಹಾಜರುಪಡಿಸಿದ್ದಾರೆ  ಎಂದು ತಿಳಿದು ಬಂದಿದೆ.

ಮೇ 6 ರಂದು ಮಧ್ಯಾಹ್ನ 3.30 ಗಂಟೆಗೆ ಖಾಸಗಿ ಕಾಲೇಜಿನ 1 ನೇ ಮಹಡಿಯಲ್ಲಿರುವ ಮಹಿಳಾ ಶೌಚಾಲಯದಲ್ಲಿ ಮೊಬೈಲ್ ರಿಂಗ್ ಆಗಿದೆ. ಈ ವೇಳೆ ಭದ್ರತಾ ಸಿಬಂದಿ ಹೋಗಿ ಪರಿಶೀಲನೆ ನಡೆಸಿದಾಗ ಟಾಯ್ಲೆಟ್ ನಲ್ಲಿ ಯಾರೂ ಇರಲ್ಲಿಲ್ಲ. ಅಲ್ಲದೆ ಮೊಬೈಲ್ ನ್ನು ಎಕ್ಸಾಸ್ಟ್ ಫ್ಯಾನ್ ಬಳಿ ಇಡಲಾಗಿದ್ದು ಕಂಡು ಬಂದಿದೆ.

ಇದನ್ನೂ ಓದಿ : ಪತಿ ಇನ್ನಿಲ್ಲ ಅನ್ನೋ ಸುದ್ದಿ ಗೊತ್ತಾಗಿ ಮತದಾನದ ಕೊನೆ ಆಸೆ ತೀರಿಸಿದ ಪತ್ನಿ.‌.!

ಟಾಯ್ಲೆಟ್ ಗೆ ಬರುವ ಮಹಿಳೆಯರ ದೃಶ್ಯ ಸೆರೆ ಮಾಡಲು ಇರಿಸಿದ ಸ್ಥಿತಿಯಲ್ಲಿ ಮೊಬೈಲ್ ಕಂಡು ಬಂದಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಈಗಾಗಲೇ ಮೊಬೈಲನ್ನು ವಶಕ್ಕೆ ಪಡೆದುಕೊಂಡಿದ್ದೇವೆ. ಬಾಲಕ ರೋಗಿಯ ಸೋಗಿನಲ್ಲಿ ವೈದ್ಯಕೀಯ ಕಾಲೇಜಿನ ಒಳಗೆ ಬಂದು ಶೌಚಾಲಯದಲ್ಲಿ ಮೊಬೈಲ್ ಇಟ್ಟಿದ್ದ ಎಂದು ಪೊಲೀಸರು ತಿಳಿಸಿದ್ದಾರೆ.

Continue Reading

LATEST NEWS

Trending