Connect with us

    BANTWAL

    ಉಪ್ಪಿನಂಗಡಿ: ಚಿಕಿತ್ಸೆಗಾಗಿ ಪರದಾಡುತ್ತಿರುವ ಕುಟುಂಬವನ್ನೇ ದೋಚಲು ಯತ್ನ

    Published

    on

    ಉಪ್ಪಿನಂಗಡಿ: ಅಪಘಾತಕ್ಕೀಡಾಗಿ ಚಿಕಿತ್ಸೆಗೆ ತುತ್ತಾಗಿರುವ ಬಡಪಾಯಿ ಕುಟುಂಬವನ್ನು ವ್ಯಕ್ತಿಯೋರ್ವ ದೋಚಲು ಯತ್ನಿಸಿದ ಘಟನೆ ಉಪ್ಪಿನಂಗಡಿಯಲ್ಲಿ ನಡೆದಿದೆ.

    ಇಲ್ಲಿನ ಪೆರಿಯಡ್ಕ ಕಿ೦ಡೋವು ಮನೆ ನಿವಾಸಿ ಶೇಖರ್ ಪೂಜಾರಿ ಮಗ ಕಾಲೇಜು ವಿದ್ಯಾರ್ಥಿ ವಂದಿತ್ ಎಸ್. ಕಳೆದ ಜನವರಿ ತಿಂಗಳಲ್ಲಿ ಬಸ್ಸಿನಿಂದ ಬಿದ್ದು ಗಂಭೀರ ಗಾಯಗೊಂಡು ಚಿಕಿತ್ಸೆಗೆ ಒಳಗಾಗಿದ್ದರು. ಇವರ ಚಿಕಿತ್ಸೆಗಾಗಿ ಹೆಚ್ಚಿನ ಹಣದ ಅಗತ್ಯತೆ ಮೂಡಿದ ಕಾರಣ ದಾನಿಗಳ ಸಹಕಾರ ಬಯಸಿ ಸಾಮಾಜಿಕ ಜಾಲತಾಣಗಳಲ್ಲಿ ಮನವಿ ಮಾಡಲಾಗಿತ್ತು.

    ಈ ಮನವಿ ಗಮನಿಸಿದ ಓರ್ವ ವ್ಯಕ್ತಿ ತಾವು ಗುಲ್ಬರ್ಗದ ಪ್ರಖ್ಯಾತ ದರ್ಗಾವೊಂದರ ಸಾಮಾಜಿಕ ಸೇವಾ ಯೋಜನೆಯ ಪದಾಧಿಕಾರಿ ಎಂದು ಪರಿಚಯಿಸಿ, ನಿಮ್ಮ ಸಮಸ್ಯೆಯನ್ನು ಪರಿಶೀಲಿಸಿ ಸಮಾಜದ ಮುಂದೆ ಪ್ರಸ್ತಾಪಿಸಲಾಗಿತ್ತು. ಇದೀಗ 1. 98 ಲಕ್ಷ ರು. ಸಂಗ್ರಹಣೆಗೊಂಡಿದೆ.


    ಈ ಮೊತ್ತ ಪಡೆಯಲು ತಾವು ಖುದ್ದಾಗಿ ಬರುವಿರೋ ಅಥವಾ ನಾವು ಬ೦ದು ಕೊಡಬೇಕಾ ಎಂದು ತಿಳಿಸಿದ್ದರು. 1. 98 ಲಕ್ಷದ ದೊಡ್ಡ ಮೊತ್ತ ಸಿಗುವುದಾದರೆ ಗುಲ್ಬರ್ಗಕ್ಕೆ ಹೋಗುವುದಕ್ಕೆ ಮನಸ್ಸು ಮಾಡಿ, ವಿಚಾರವನ್ನು ಉಪ್ಪಿನಂಗಡಿ ಪಂಚಾಯಿತಿ ಸದಸ್ಯ ಯು. ಟಿ. ಕೌಶಿಫ್ ಗಮನಕ್ಕೆ ತರಲಾಯಿತು.

    ದೂರದ ಗುಲ್ಬರ್ಗದ ಸಂಘ ಸಂಸ್ಥೆಗಳ ಬಗ್ಗೆ ಪೂರ್ಣ ಮಾಹಿತಿ ಹೊ೦ದಿರದ ಅವರು ನಲಪ್ಪಾಡ್ ಹಾಗೂ ಯು.ಟಿ. ಖಾದರ್ ಮೂಲಕ ಗುಲ್ಬರ್ಗದ ಕಾಂಗ್ರೆಸ್ ಮುಂದಾಳು ಸಂಪರ್ಕ ಸಾಧಿಸಿ ಸಂಸ್ಥೆ ಬಗ್ಗೆ ಮಾಹಿತಿ ಪಡೆದುಕೊಂಡರು. ಈ ವೇಳೆ ಸದ್ರಿ ಸಂಸ್ಥೆಯು ಬಹಳಷ್ಟು ಮ೦ದಿಗೆ ಆರ್ಥಿಕ ಸಹಾಯ ಒದಗಿಸುತ್ತಿದೆ ಎಂಬ ವಿಚಾರ ತಿಳಿದಿದೆ.

    ಸಂಸ್ಥೆ ಶೇಖರ್‌ ಪೂಜಾರಿ ಮಗನಿಗೆ ಹಣಕಾಸಿನ ಸಹಾಯ ಒದಗಿಸುವ ಬಗ್ಗೆ ಯಾವುದೇ ನಿರ್ಧಾರ ತಳೆದಿಲ್ಲ ಎಂದು ತಿಳಿದು ಬಂದಿದೆ. ಕೂಡಲೇ ಫೋನಾಯಿಸಿದ ವ್ಯಕ್ತಿಯ ಬಗ್ಗೆ ವಿಚಾರಿಸಿದಾಗ ಆತನಿಗೂ ದರ್ಗಾದ ಸಮಿತಿಗೂ ಯಾವುದೇ ಸಂಬಂಧವಿಲ್ಲ ಎಂದು ಖಚಿತವಾಗಿತ್ತು.

    ಇದೊಂದು ವಂಚನಾ ತಂಡದ ಕೃತ್ಯ ಎನ್ನುವುದು ಖಚಿತವಾದೊಡನೆ ಆತನಿಗೆ ಖುದ್ದು ಗುಲ್ಬರ್ಗಕ್ಕೆ ಬರಲು ಕಷ್ಟವಾಗುತ್ತಿದೆ. ನೀವು ಕೊಡುವ ಮೊತ್ತವನ್ನು ಬ್ಯಾಂಕ್ ಖಾತೆಗೆ ವರ್ಗಾಯಿಸಿ ಎಂದು ತಿಳಿಸಲಾಯಿತು.

    ನಮ್ಮದೇನೇ ಕೊಡುಗೆ ಇದ್ದರೂ ಹಣ ಪಾವತಿಸುವ ಸ್ವೀಕರಿಸುವ ಪೋಟೋ ದಾಖಲೆ ಬೇಕಾಗಿರುವುದರಿಂದ ನಾವೇ ಬಂದು ನಿಮಗೆ ಹಣ ಕೊಡುತ್ತೇವೆ. ಸದ್ಯ ನೀವು ವಾಹನದ ಪೆಟ್ರೋಲ್‌ನ 4000 ರೂ. ಮೊತ್ತವನ್ನು ನನ್ನ ಖಾತೆಗೆ ಫೋನ್ ಪೇ ಮಾಡಿ ಎಂದು ತಿಳಿಸುತ್ತಾನೆ.

    ನೀವು ಕೊಡಲು ಉದ್ದೇಶಿಸಿದ 1.98 ಲಕ್ಷ ರು. ಮೊತ್ತದಿಂದಲೇ ನಾಲ್ಕು ಸಾವಿರ ತೆಗೆದುಕೊಂಡು ಬನ್ನಿ ಎಂದು ತಿಳಿಸಿದ ಬಳಿಕ ಪೋನು ಮಾಡುವುದನ್ನೇ ನಿಲ್ಲಿಸಿದ್ದಾನೆ. ಈ ಮೂಲಕ ಹಣ ಲಪಟಾಯಿಸಲು ಯೋಜನೆ ಹೂಡಿದ್ದ ಎಂಬುವುದು ಬಯಲಾಗಿದೆ.

    BANTWAL

    ಕಲ್ಲಡ್ಕದಲ್ಲಿ ಸರ್ವೀಸ್ ರಸ್ತೆಗೆ ಡಾಮರು

    Published

    on

    ಬಂಟ್ವಾಳ: ಹೆದ್ದಾರಿ ಕಾಮಗಾರಿ ಅವ್ಯವಸ್ಥೆಯಿಂದ ಟೀಕೆಗೆ ಗುರಿಯಾಗಿದ್ದ ಕಲ್ಲಡ್ಕದಲ್ಲಿ ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    ಮಳೆ ದೂರವಾದ ಹಿನ್ನೆಲೆಯಲ್ಲಿ ಕಲ್ಲಡ್ಕದ ಪೂರ್ಲಿಪ್ಪಾಡಿ ಭಾಗದಿಂದ ಒಂದು ಬದಿಯಲ್ಲಿ ಡಾಮರು ಹಾಕಲಾಗುತ್ತಿದೆ.

    ಕಳೆದ 2-3 ವರ್ಷಗಳಿಂದ ಹೆದ್ದಾರಿ ಪ್ರಯಾಣಿಕರು ಸಾಕಷ್ಟು ತೊಂದರೆ ಅನುಭವಿಸಿದ್ದು, ಈ ಬಾರಿಯ ಮಳೆಗಾಲದಲ್ಲಿ ಕಲ್ಲಡ್ಕ ಪೇಟೆಯನ್ನು ಎಲ್ಲ ರೀತಿಯಿಂದಲೂ ಹಿಂಡಿ ಹಿಪ್ಪೆ ಮಾಡಲಾಗಿತ್ತು. ಮಳೆ ಬಂದರೆ ಕೆಸರು, ಬಿಸಿಲಾದರೆ ಧೂಳು ಎಂಬ ಸ್ಥಿತಿ ಇತ್ತು. ಹೆದ್ದಾರಿ ತುಂಬಾ ಕೆಸರು ತುಂಬಿ ನಡೆದಾಡುವುದು ಕಷ್ಟವಾಗಿರುವ ಜತೆಗೆ ಹೊಂಡಗಳು ಸೃಷ್ಟಿಯಾಗಿ ವಾಹನ ಸಾಗುವುದು ತೀರಾ ತ್ರಾಸದಾಯಕವಾಗಿತ್ತು. ಇದೀಗ ಸರ್ವೀಸ್ ರಸ್ತೆಗೆ ಡಾಮರು ಹಾಕುವ ಕಾರ್ಯ ಆರಂಭಗೊಂಡಿದೆ.

    Continue Reading

    BANTWAL

    ಮಂಗಳೂರು: ಯುವತಿ ವಿಚಾರದಲ್ಲಿ ಯುವಕನಿಗೆ ಥಳಿತ; ಆರೋಪಿಗಳು ಅರೆಸ್ಟ್

    Published

    on

    ಮಂಗಳೂರು: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿ ಉಳ್ಳಾಲ ತಾಲೂಕಿನ ಸಜೀಪನಡು ಗ್ರಾಮದ ಕಂಚಿನಡ್ಕಪದವು ಎಂಬಲ್ಲಿ ಮಹಮ್ಮದ್ ಮುಸ್ತಾಫ(21) ಎಂಬಾತನನ್ನು ಕಂಬಕ್ಕೆ ಕಟ್ಟಿ ಹಾಕಿದ ಥಳಿಸಿದ ಆರು ಮಂದಿ ಆರೋಪಿಗಳನ್ನು ಬಂಟ್ವಾಳ ಠಾಣಾ ಪೊಲೀಸರು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

    ಹಲ್ಲೆ ಮಾಡಿ, ಕೊಲೆ ಬೆದರಿಕೆಯೊಡ್ಡಿದ ಆರೋಪಿಗಳಾದ ಕಂಚಿನಡ್ಕದ ನಿವಾಸಿಗಳಾಗಿರುವ ಮಹಮ್ಮದ್‌ ಸಪ್ವಾನ್( 25), ಮಹಮ್ಮದ್‌ ರಿಜ್ವಾನ್‌ (25), ಇರ್ಪಾನ್‍(27), ಅನೀಸ್‍ ಅಹಮ್ಮದ್‍ (19), ನಾಸೀರ್‍ (27), ಇಬ್ರಾಹಿಂ, ಶಾಕೀರ್‍ (18)ನನ್ನು ಬಂಧಿಸಲಾಗಿದೆ.

    ಎಲ್ಲರನ್ನೂ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು ನ್ಯಾಯಾಂಗ ಬಂಧನ ವಿಧಿಸಲಾಗಿದೆ. ನವೆಂಬರ್ 7ರಂದು ರಾತ್ರಿ 10 ಗಂಟೆ ಸುಮಾರಿಗೆ ಕಂಚಿನಡ್ಕ ಪದವು ನಿವಾಸಿಯಾಗಿರುವ ಯುವತಿಯೊಬ್ಬಳು ಮಹಮ್ಮದ್ ಮುಸ್ತಾಫಾನನ್ನು ಮನೆಗೆ ಬರಲು ಹೇಳಿದ್ದು, ಆಕೆ ಸೂಚನೆಯಂತೆ ಮಹಮ್ಮದ್ ಮುಸ್ತಾಫಾ ಅಲ್ಲಿಗೆ ಹೋಗಿದ್ದ. ಈ ವೇಳೆ ಅಲ್ಲಿದ್ದ ಆರೋಪಿಗಳು ಮಹಮ್ಮದ್‍ ಮುಸ್ತಾಫ್‍ ನ ಬಗ್ಗೆ ಸಂಶಯ ವ್ಯಕ್ತಪಡಿಸಿ ಗುಂಪು ಸೇರಿಕೊಂಡು ಆತನನ್ನು ಹಿಡಿದು ರಕ್ತ ಒಸರುವಂತೆ ಥಳಿಸಿದ್ದಲ್ಲದೇ ಕಂಬಕ್ಕೆ ಕಟ್ಟಿ ಹಾಕಿ ಹೊಡೆದಿದ್ದಾರೆ. ಕೊಲೆ ಬೆದರಿಕೆಯನ್ನೂ ಹಾಕಿದ್ದಾರೆ.

     

    ಇದನ್ನೂ ಓದಿ : ಬಂಟ್ವಾಳ : ಮನೆಗೆ ಬಂದಿದ್ದ ಪ್ರಿಯಕರನ್ನು ಅ*ರೆಬೆತ್ತಲು ಮಾಡಿ ಹ*ಲ್ಲೆ

     

    ಮಹಮ್ಮದ್‍ ಮುಸ್ತಾಫ್‍ ನೀಡಿದ ದೂರಿನಂತೆ ಬಂಟ್ವಾಳ ಗ್ರಾಮಾಂತರ ಪೊಲೀಸ್‍ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹಲ್ಲೆಗೊಳಗಾದ ಬಳಿಕ ಹೈಲ್ಯಾಂಡ್ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಗಾಗಿದ್ದ ಸಂದರ್ಭದಲ್ಲಿ ಪೊಲೀಸರು ವಿಚಾರಣೆ ಮಾಡಲು ತೆರಳಿದಾದ ಮಹಮ್ಮದ್‍ ಮುಸ್ತಾಫ್‍ ಆರೋಪಿಗಳು ತನ್ನನ್ನು ಕೊಲೆ ನಡೆಸುವ ಉದ್ದೇಶದಿಂದ ಗುಂಪು ಸೇರಿ ಕಂಬಕ್ಕೆ ಕಟ್ಟಿ ಹಾಕಿ ಕೊಲೆಯತ್ನ ನಡೆಸಿದ್ದಾನೆ ಎಂದು ದೂರು ನೀಡಿದ ಹಿನ್ನೆಲೆಯಲ್ಲಿ ಕೊಲೆ ಯತ್ನ ಪ್ರಕರಣವನ್ನು ದಾಖಲಿಸಲಾಗಿದೆ.

    Continue Reading

    BANTWAL

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕ ಆತ್ಮಹ*ತ್ಯೆ

    Published

    on

    ಬಂಟ್ವಾಳ: ವಿಷಪದಾರ್ಥ ಸೇವಿಸಿ ಯುವಕನೋರ್ವ ಆತ್ಮಹ*ತ್ಯೆ ಮಾಡಿಕೊಂಡ ಘಟನೆ ಕಡೇಶಿವಾಲಯದಲ್ಲಿ ನಡೆದಿದೆ.

    ಬಂಟ್ವಾಳ ತಾಲೂಕಿನ ಕಡೇಶಿವಾಲಯದ ಕಂಡಿಗ ನಿವಾಸಿ ಗಣೇಶ್(25) ಆತ್ಮಹ*ತ್ಯೆ ಮಾಡಿಕೊಂಡ ಯುವಕ. ಗಣೇಶ್ ಅವರು ಸೋಮವಾರ ಮನೆಯಲ್ಲಿಯೇ ಸಂಜೆ ಹುಲ್ಲಿಗೆ ಬಿಡುವ ವಿಷವನ್ನು ಸೇವಿಸಿದ್ದರು.

    ತಕ್ಷಣ ಅವರನ್ನು ಚಿಕಿತ್ಸೆಗಾಗಿ ಮಂಗಳೂರಿನ ಫಾದರ್ ಮುಲ್ಲರ್ ಆಸ್ಪತ್ರೆಗೆ ದಾಖಲಿಸಲಾಯಿತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃ*ತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.

    Continue Reading

    LATEST NEWS

    Trending