DAKSHINA KANNADA
ಉಳ್ಳಾಲ: ಅಕ್ರಮ ಮರಳುಗಾರಿಕೆಯ ಮಾಹಿತಿದಾರನ ಕೊ*ಲೆ ಯತ್ನ..!
ಉಳ್ಳಾಲ: ಉಚ್ಚಿಲ ಬಟ್ಟಪ್ಪಾಡಿಯಲ್ಲಿ ತಿಂಗಳುಗಳ ಹಿಂದೆ ಅಕ್ರಮ ಮರಳುಗಾರಿಕೆಗೆ ಸಿಸಿಬಿ ಪೊಲೀಸರು ದಾಳಿ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರಿಗೆ ಮಾಹಿತಿ ನೀಡಿದ್ದಾನೆ ಎಂದು ಆರೋಪಿಸಿ ಸೋಮೇಶ್ವರ ಉಚ್ಚಿಲದ, ಫಿಶರೀಶ್ ರೋಡ್ ನಿವಾಸಿ ಸೋಮೇಶ್ವರ ಸೋಮನಾಥ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಸದಸ್ಯ ಕಿಶೋರ್ ಎಮ್ ಉಚ್ಚಿಲ (53)ಗೆ ಕಬ್ಬಿಣದ ಸಲಾಕೆಯಿಂದ ಹಲ್ಲೆಗೈಯ್ದು ಚಾಕುವಿನಿಂದ ಇರಿಯಲು ಯತ್ನಿಸಿದ ಘಟನೆ ಸೋಮೇಶ್ವರ ಪುರಸಭಾ ಕಚೇರಿಯ ಬಳಿ ಸೋಮವಾರ (ನ.4) ನಡೆದಿದೆ.
ಉಚ್ಚಿಲ ಬಟ್ಟಪ್ಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ನಡೆಸುತ್ತಿರುವ ಸುನಿಲ್ ಪೂಜಾರಿ ಹ*ಲ್ಲೆಗೈದಿದ್ದು, ಕಿಶೋರ್ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಾಗಿದ್ದಾರೆ.
ಕಿಶೋರ್ ಅವರು ಸೋಮವಾರ ಸ್ನೇಹಿತ ಪುಷ್ಪರಾಜ್ ಎಂಬವರ ಜತೆಯಲ್ಲಿ ಸೋಮೇಶ್ವರದ ಹೊಟೇಲ್ ನಲ್ಲಿ ಚಹಾ ಕುಡಿದು ಸ್ಕೂಟರ್ ನಲ್ಲಿ ಸಹ ಸವಾರನಾಗಿ ಮನೆಗೆ ಹಿಂತಿರುಗುತ್ತಿದ್ದ ವೇಳೆ ಸೋಮೇಶ್ವರ ಪುರಸಭಾ ಕಚೇರಿ ಬಳಿ ಸುನಿಲ್ ಪೂಜಾರಿ ಸ್ಕೂಟರ್ ತಡೆದು ಮರಳುಗಾರಿಕೆಯ ಬಗ್ಗೆ ಪೊಲೀಸರಿಗೆ ಮಾಹಿತಿ ನೀಡುತ್ತೀಯ ಎಂದು ಕೊ*ಲೆ ಬೆದರಿಕೆ ನೀಡಿದ್ದಾನೆ. ಅಲ್ಲದೆ ಭುಜ ಮತ್ತು ಸೊಂಟಕ್ಕೆ ಹಲ್ಲೆ ನಡೆಸಿದ್ದಾನೆ. ಬಳಿಕ ಸೊಂಟದಿಂದ ಚಾ*ಕು ಹೊರ ತೆಗೆದು ಇ*ರಿಯಲು ಮುಂದಾಗಿದ್ದಾನೆ.
ಈ ವೇಳೆ ಸ್ನೇಹಿತ ಪುಷ್ಪರಾಜ್ ಅವರು ಸ್ಕೂಟರನ್ನು ವೇಗವಾಗಿ ಚಲಾಯಿಸಿದರ ಪರಿಣಾಮ ಪ್ರಾಣಾಪಾಯದಿಂದ ಪಾರಾಗಿದ್ದೇನೆಂದು ಹಲ್ಲೆಗೊಳಗಾದ ಕಿಶೋರ್ ದೂರಿನಲ್ಲಿ ತಿಳಿಸಿದ್ದಾರೆ. ಉಚ್ಚಿಲ ಬಟ್ಟಂಪಾಡಿ ಪ್ರದೇಶದಲ್ಲಿ ಅಕ್ರಮ ಮರಳುಗಾರಿಕೆ ಅಡ್ಡೆಗೆ ದಾಳಿ ನಡೆಸಿ ಅಪಾರ ಪ್ರಮಾಣದ ಮರಳನ್ನ ವಶಪಡಿಸಿದ್ದು, ಆ ಪ್ರಕರಣದಲ್ಲಿ ಮರಳುಗಾರಿಕೆ ನಡೆಸುತ್ತಿದ್ದ ಆರೋಪದಲ್ಲಿ ಸುನಿಲ್ ಪೂಜಾರಿ ವಿರುದ್ಧವೂ ಪ್ರಕರಣ ದಾಖಲಾಗಿತ್ತು. ಉಳ್ಳಾಲ ಠಾಣೆಯಲ್ಲಿ ಆರೋಪಿ ಸುನಿಲ್ ಪೂಜಾರಿ ವಿರುದ್ಧ ಪ್ರಕರಣ ದಾಖಲಾಗಿದೆ.
ತಿಂಗಳ ಹಿಂದೆಯಷ್ಠೇ ಕೆಥೋಲಿಕ್ ಮಹಾಸಭಾ ಮುಖಂಡ, ಆಲ್ವಿನ್ ಡಿಸೋಜ ವಿರುದ್ಧ ಅಡ್ಯಾರು ಸಮೀಪ ಮರಳು ಮಾಫಿಯಾ ದವರಿಂದ ಹಲ್ಲೆ ನಡೆದಿತ್ತು. ಪ್ರತಿಭಟನೆ ಹಲ್ಲೆ ಬಳಿಕ ಕೆಲ ದಿನಗಳ ಕಾಲ ಮರಳುಗಾರಿಕೆ ಸ್ಥಗಿತಗೊಂಡಿತ್ತಾದರೂ, ಇದೀಗ ತಡರಾತ್ರಿ ೧೧ ರ ನಂತರ ಉಳ್ಳಾಲ ತಾಲೂಕಿನ ಎಲ್ಲಾ ರಸ್ತೆಗಳಲ್ಲಿಯೂ ಮರಳು ಹೊತ್ತ ಟಿಪ್ಪರ್ ಲಾರಿಗಳ ಅಟ್ಟಹಾಸ ಮುಂದುವರಿದಿದೆ. ಅಕ್ರಮ ಮರಳುಗಾರರ ದರ್ಪ, ದಬ್ಬಾಳಿಕೆಗೆ ಕಡಿವಾಣ ಹಾಕಲು ಪೊಲೀಸರೇ ಭಯಪಡುವಂತಾಗಿದೆ ಎಂದು ಸ್ಥಳೀಯರು ಆಡಿಕೊಳ್ಳುತ್ತಿದ್ದಾರೆ.
DAKSHINA KANNADA
ಪೂಜೆಗೆಂದು ಬಂದಿದ್ದ ವಿದ್ಯಾರ್ಥಿನಿಯ ಮೈ*ಗೆ ಕೈ ಹಾಕಿದ ಕಾ*ಮುಕ
ಮಂಗಳೂರು: ದೇವರ ದರ್ಶನಕ್ಕೆ ಬಂದಿದ್ದಂತಹ ಕಾಲೇಜು ವಿದ್ಯಾರ್ಥಿನಿಯೊಂದಿಗೆ ವ್ಯಕ್ತಿಯೊಬ್ಬ ಅ*ನುಚಿತ ವರ್ತನೆ ತೋರಿ ಅ*ಸಭ್ಯ ಮೆರೆದಿರುವ ಘಟನೆ ಶನಿವಾರ (ನ.2) ದೇವಾಲಯವೊಂದರಲ್ಲಿ ನಡೆದಿದೆ.
ದೀಪಾವಳಿ ಹಬ್ಬದ ರಜೆ ಪ್ರಯುಕ್ತ ವಿದ್ಯಾರ್ಥಿನಿ ಮನೆಗೆ ಬಂದಿದ್ದು, ನ.2 ರಂದು ರಾತ್ರಿ ನಗರದ ಪ್ರತಿಷ್ಠಿತ ದೇವಸ್ಥಾನದಲ್ಲಿ ನಡೆಯುತ್ತಿದ್ದ ಪೂಜೆಯಲ್ಲಿ ಭಾಗವಹಿಸಿ ಮನೆಯವರ ಜೊತೆ ಭೋಜನಾ ಶಾಲೆಯತ್ತ ತೆರಳಿದ್ದರು. ಈ ವೇಳೆ ಶಿವರಾಮ ಭಟ್ ಎಂಬಾತ ದು*ರ್ನಡತೆ ತೋರಿದ್ದಾನೆ.
ಇದನ್ನೂ ಓದಿ : ಪಬ್‌ನಲ್ಲಿ ಮಹಿಳೆಯರೊಂದಿಗೆ ಅನುಚಿತ ವರ್ತನೆ; ನಾಲ್ವರಿಗೆ ನ್ಯಾಯಾಂಗ ಬಂಧನ
ಯುವತಿ ಊಟಕ್ಕೆ ಕುಳಿತುಕೊಳ್ಳಲು ಗೋಡೆ ಬದಿ ನಿಂತು ಕಾಯುತ್ತಿರುವಾಗ ಅಲ್ಲೇ ಪಕ್ಕದಲ್ಲಿ ಓಡಾಟ ಮಾಡುತ್ತಿದ್ದ ಆರೋಪಿ ಶಿವರಾಮ ಭಟ್ ಯುವತಿಯ ಎ*ದೆ ಭಾ*ಗಕ್ಕೆ ಕೈ ಹಾಕಿ ದೈ*ಹಿಕ ಹಿಂಸೆ ನೀಡಿದ್ದು ಮಾತ್ರವಲ್ಲದೇ, ಪ್ರಶ್ನಿಸಿದಕ್ಕೆ ಅ*ವಾಚ್ಯ ಶಬ್ದ ಗಳಿಂದ ಬೈದಿರುವುದಾಗಿ ದೂರಲಾಗಿದೆ.
ಆರೋಪಿ ನಗರದಲ್ಲಿಯೇ ಜೆರಾಕ್ಸ್ ಅಂಗಡಿಯೊಂದನ್ನು ಇಟ್ಟುಕೊಂಡಿದ್ದು ದೇಗುಲ ಪರಿಸರದಲ್ಲಿ ಆಗಾಗ ಕಾಣಿಸಿಕೊಳ್ಳುತ್ತಿದ್ದ.
ಯುವತಿಯ ದೂರನ್ನು ಪರಿಶೀಲಿಸಿ ನಗರ ಪೊಲೀಸರು ಭಾರತೀಯ ನ್ಯಾಯ ಸಂಹಿತಾ ಕಾಯ್ದೆಯಡಿ ( BNS ACT -75,352 ಕಾಲಂ) ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.
DAKSHINA KANNADA
ಹಿಂದುಗಳ ಶ್ರದ್ಧಾಕೇಂದ್ರದ ಗುರುಗಳ ಮೇಲೆ ನಡೆದಿರುವ ದಾ*ಳಿ ಅತ್ಯಂತ ಗಂಭೀ*ರ ವಿಚಾರ: ಸಂಸದ ಕ್ಯಾ. ಬ್ರಿಜೇಶ್ ಚೌಟ
ಮಂಗಳೂರು : ಕಾಸರಗೋಡಿನ ಎಡನೀರು ಮಠದ ಶ್ರೀಸಚ್ಚಿದಾನಂದ ಭಾರತೀ ತೀರ್ಥ ಶ್ರೀಗಳು ಸಂಚರಿಸುತ್ತಿದ್ದ ಕಾರನ್ನು ಸಮಾಜಘಾತುಕ ಶಕ್ತಿಗಳು ಅಡ್ಡಗಟ್ಟಿ ಹಾನಿಗೊಳಿಸಿರುವುದನ್ನು ದಕ್ಷಿಣ ಕನ್ನಡ ಸಂಸದ ಕ್ಯಾ. ಬ್ರಿಜೇಶ್ ಚೌಟ ತೀವ್ರವಾಗಿ ಖಂಡಿಸಿದ್ದಾರೆ.
ಈ ಬಗ್ಗೆ ಪತ್ರಿಕಾ ಹೇಳಿಕೆ ನೀಡಿರುವ ಚೌಟ, 400 ವರ್ಷಗಳ ಪ್ರಾಚೀನ ಇತಿಹಾಸ ಹೊಂದಿರುವ ಎಡನೀರು ಸಂಸ್ಥಾನದ ಪೀಠಾಧಿಪತಿಯಾಗಿರುವ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ವಾಹನದ ಮೇಲೆ ದಾ*ಳಿ ಮಾಡಿದ ದು*ಷ್ಕರ್ಮಿಗಳನ್ನು ಕೇರಳ ಸರ್ಕಾರವು ಕೂಡಲೇ ಬಂಧಿಸಿ ಇಂಥಹ ವಿಕೃತ ಮನಸ್ಥಿತಿಗಳನ್ನು ಮಟ್ಟ ಹಾಕುವ ಕೆಲಸವನ್ನು ಮಾಡಬೇಕು. ಶಾಂತಿ-ಸಾಮರಸ್ಯದ ಮೂಲಕ ಹಿಂದೂ ಸಮಾಜದ ಪರ ಕೆಲಸ ಮಾಡುತ್ತಿರುವ ಸ್ವಾಮೀಜಿ ಮೇಲೆಯೇ ಕಿಡಿಗೇಡಿಗಳು ನಡುರಸ್ತೆಯಲ್ಲೇ ಈ ರೀತಿ ಕಾನೂನು ಕೈಗೆತ್ತಿಕೊಂಡು ಹ*ಲ್ಲೆಗೆ ಮುಂದಾಗಿರುವುದು ಅತ್ಯಂತ ಗಂಭೀ*ರ ವಿಚಾರವಾಗಿದೆ ಎಂದು ಹೇಳಿದ್ದಾರೆ.
ಸಾರ್ವಜನಿಕ ಕಾರ್ಯಕ್ರಮದಿಂದ ಹಿಂದಿರುಗುವಾಗ ಕಾಸರಗೋಡಿನ ಬೋವಿಕ್ಕಾನ–ಇರಿಯಣ್ಣಿ ಮಾರ್ಗ ಮಧ್ಯೆ ಸ್ವಾಮೀಜಿ ಪ್ರಯಾಣಿಸುತ್ತಿದ್ದ ಕಾರನ್ನು ಫಾಲೋ ಮಾಡಿಕೊಂಡು ಬಂದು ದು*ಷ್ಕರ್ಮಿಗಳ ಗುಂಪು ದಾ*ಳಿ ನಡೆಸಿರುವುದು ಅಕ್ಷಮ್ಯ. ಲಕ್ಷಾಂತರ ಹಿಂದೂಗಳು ಭಕ್ತಿಯಿಂದ ಆರಾಧಿಸುವ ಹಾಗೂ ಹಿಂದೂ ಸಮಾಜದ ಆಧರಣೀಯರು, ಮಾರ್ಗದರ್ಶಕರಾಗಿರುವ, ಆಧ್ಯಾತ್ಮಿಕ ಗುರು ಎಡನೀರು ಸಂಸ್ಥಾನದ ಶ್ರೀಗಳ ಮೇಲೆ ನಡೆದಿರುವ ಈ ದಾಳಿಯು ಹಿಂದೂ ಸಮುದಾಯದವರ ಮೇಲೆ ನಡೆಸಿರುವ ದಾ*ಳಿಯಾಗಿದೆ. ಇಂತಹ ಜಿಹಾದಿ ಮನಸ್ಥಿತಿಯ ಘಟನೆಗಳನ್ನು ಇಡೀ ಹಿಂದೂ ಸಮಾಜವು ಒಟ್ಟಾಗಿ ಖಂಡಿಸಬೇಕು ಎಂದು ಕ್ಯಾ. ಚೌಟ ತಿಳಿಸಿದ್ದಾರೆ.
ಇದನ್ನೂ ಓದಿ : ತಪ್ಪಾಯಿತೆಂದು ಕ್ಷಮೆ ಕೇಳಿ ಇಲ್ಲ 5ಕೋಟಿ ನೀಡಿ.. ಸಲ್ಮಾನ್ ಖಾನ್ ಗೆ ಮತ್ತೆ ಬೆದರಿಕೆ
ಹೀಗಿರುವಾಗ, ಕೇರಳ ಸರ್ಕಾರವು ಸ್ವಾಮೀಜಿ ಮೇಲಿನ ಹ*ಲ್ಲೆ ಯತ್ನ ಪ್ರಕರಣದ ತನಿಖೆಯನ್ನು ತ್ವರಿತಗತಿಯಲ್ಲಿ ನಡೆಸಿ ತಪ್ಪಿತಸ್ಥರನ್ನು ಬಂಧಿಸಿ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು. ಜತೆಗೆ ಎಡನೀರು ಶ್ರೀಗಳಿಗೆ ಸೂಕ್ತ ಭದ್ರತೆಯನ್ನು ಸರ್ಕಾರದ ಕಡೆಯಿಂದ ಕಲ್ಪಿಸಬೇಕೆಂದು ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರನ್ನು ಚೌಟ ಒತ್ತಾಯಿಸಿದ್ದಾರೆ
DAKSHINA KANNADA
ಪುತ್ತೂರು: ‘ಕರ್ನಾಟಕ ಜಾನಪದ ಪ್ರಶಸ್ತಿ’ಗೆ ಹಿರಿಯ ನಾಟಿ ವೈದ್ಯೆ ಲೀಲಾವತಿ ಪೂಜಾರಿ ಆಯ್ಕೆ
ಪುತ್ತೂರು : ‘ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ’ಗೆ ಕಾರಣಿಕ ಶಕ್ತಿಗಳಾದ ಕೋಟಿ-ಚೆನ್ನಯ, ದೇಯಿ ಬೈದೇತಿ ಮೂಲಸ್ಥಾನ ಗೆಜ್ಜೆಗಿರಿ ನಂದನಬಿತ್ತಿಲು ನಿವಾಸಿ ನಾಟಿವೈದ್ಯೆ ಲೀಲಾವತಿ ಬೈದೇತಿ (77) ಆಯ್ಕೆಯಾಗಿದ್ದಾರೆ.
ಲೀಲಾವತಿ ನಾಟಿ ವೈದ್ಯರಾಗಿ ಚಿರಪರಿಚಿತವಾಗಿದ್ದು, ಪಡುಮಲೆಯಲ್ಲಿನ ಪ್ರತಿ ಮರ-ಗಿಡ-ಬಳ್ಳಿಗಳಲ್ಲಿ ಸಂಜೀವಿನಿಯಂತಹ ಔಷಧೀಯ ದೃವ್ಯಗುಣಗಳಿವೆ ಎಂಬ ನಂಬಿಕೆ ಇದೆ.
ಸಾವಿರಾರು ಮಂದಿಯ ಬದುಕಿನಲ್ಲಿ ಅಶಾ ಕಿರಣ ಮೂಡಿಸಿರುವುದರೊಂದಿಗೆ ನಾಟಿ ವೈದ್ಯವನ್ನು ಸೇವಾ ಯಜ್ಞದಂತೆ ನಡೆಸಿಕೊಂಡು ಬರುತ್ತಿದ್ದಾರೆ. ಮುಖ್ಯವಾಗಿ ಸರ್ಪಸುತ್ತು, ಕೆಂಪು, ದೃಷ್ಟಿ, ಬೆಸುರುಪು, ಸೊರಿಯಾಸಿಸ್-ಚರ್ಮ ರೋಗವನ್ನೂ ಪರಿಹರಿಸುವ ಚಿಕಿತ್ಸೆ ನೀಡುವಲ್ಲಿ ಪ್ರಖ್ಯಾತರು.
ಮಕ್ಕಳ ಚಿಕಿತ್ಸೆ, ಸಂಧಿವಾತ, ನೋವಿನ ತೈಲ ಅಲ್ಲದೆ ಇವರು ತಯಾರಿಸಿ ಕೊಡುವ ದೇಸೀ ಔಷಧಗಳಿಗೆ ಮತ್ತು ಕೇಶಕಾಂತಿ ತೈಲ, ದೇಯಿ-ಬೈದೈತಿ ತೈಲಕ್ಕೆ ಹಲವಾರು ರಾಜ್ಯದಿಂದ ಬೇಡಿಕೆಗಳಿವೆ.
2016 ರಲ್ಲಿ ಮೂಲ್ಕಿ ಬಿಲ್ಲವ ಸಮಾಜ ಸೇವಾ ಸಂಘದಲ್ಲಿ ನಡೆದ ಮಹಿಳಾ ಸಮಾಗಮ ಸಂದರ್ಭದಲಿ ಸಮ್ಮಾನ ಪುರಸ್ಕಾರ ಸಂದಿದೆ. ಕೋಟಿ-ಚೆನ್ನಯ, ದೇಯಿ ಬೈದೇತಿ ಮೂಲಸ್ಥಾನ ಗೆಜ್ಜೆಗಿರಿಯಯ ನಂದನಬಿತ್ತಿಲಿನಲ್ಲಿ ನಾಟಿ ವೈದ್ಯ ಪದ್ಧತಿಯನ್ನು ಮುಂದುವರಿಸಿಕೊಂಡು ಬಂದಿದ್ದಾರೆ.
ಕುಟುಂಬದ ಹೆಸರಿನಲ್ಲಿ ‘ವೈದ್ಯೆ’ ಎನ್ನುವ ವಿಶೇಷಣವನ್ನು ಪಡುಮಲೆಯ ಬಲ್ಲಾಳರಿಂದ ಪಡೆದ ಸಾರ್ಥಕತೆಯ ಗೌರವ. ದೇಯಿಬೈದ್ಯೆದಿ ಬಳಸುವ ಮದ್ದಿನಗಿಂಡಿಯಲ್ಲಿ ಔಷಧ ನೀಡುವ ಇಂದಿಗೂ ಸರ್ಪರೊಗಗಳಿಗೆ ಮದ್ದನ್ನು ಮಾಡುವ ಇವರ ಕೈಗುಣದ ಬಗ್ಗೆ ಜನರಿಗೆ ಅಪಾರ ಭಕ್ತಿ, ಶ್ರದ್ಧೆ ಮತ್ತು ಗೌರವದ ವಿಶ್ವಾಸ.
ಸಾವಿರಾರು ಮಂದಿಯ ಬದುಕಿನ ಸಂಕಟವನ್ನು ದೂರ ಮಾಡುತ್ತಿರುವ ಸಂಜೀವಿನಿ ಸಸ್ಯಔಷದ ಜ್ಞಾನ ಪರಂಪರೆಯಿಂದ ಸಂರಕ್ಷಿಸಿಕೊಂಡು ಬಂದಿರುವ ಇವರ ಮನೆತನ ಮತ್ತು ಇವರು ನೀಡುವ ಪ್ರತಿ ಔಷಧಿಯಲ್ಲಿ ಅಮೃತಸಿದ್ಧಿ ನೀಡುವ ದೇಯಿಬೈದ್ಯೆದಿ ಶ್ರೀ ರಕ್ಷೆ – ಆಶೀರ್ವಾದ ಇರಲಿದೆ ಎಂಬುದು ಜನರ ವಿಶ್ವಾಸವಾಗಿದೆ.
- LATEST NEWS6 days ago
ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್ : ಇನ್ಮುಂದೆ ಅಕ್ಕಿಯ ಜೊತೆಗೆ ಉಚಿತವಾಗಿ ಸಿಗಲಿವೆ ಈ 9 ವಸ್ತುಗಳು.!
- DAKSHINA KANNADA3 days ago
ಮಂಗಳೂರು: ನೇತ್ರಾವತಿ ಸೇತುವೆ ಬಳಿ ಭೀಕರ ಅ*ಪಘಾತ; ಓರ್ವ ಮೃ*ತ್ಯು, ಮತ್ತೋರ್ವ ಗಂಭೀರ
- kerala6 days ago
ಕಾಸರಗೋಡು : ‘ಮಗು’ ವನ್ನು ರಕ್ಷಿಸಿದ ‘ದೈವ’ನರ್ತಕ ; ವಿರೋಚಿತ ಕಥೆ !!
- LATEST NEWS7 days ago
ಮಹಿಳೆಯರೇ.. ನೀವು ಈ ಪಾನೀಯ ಕುಡಿದ್ರೆ 10 ವರ್ಷ ಸಣ್ಣ ಕಾಣೋದು ಗ್ಯಾರಂಟಿ.. !!