STATE
ಅಜ್ಜಿ ಮೇಲೆ ಅ*ತ್ಯಾಚಾರ ಯತ್ನ; ಮೊಮ್ಮಗನಿಂದಲೇ ವೃದ್ಧ ದಂಪತಿ ದಾ*ರುಣ ಅಂ*ತ್ಯ
Published
1 week agoon
ಚಿಕ್ಕಮಂಗಳೂರು : ವೃದ್ಧ ದಂಪತಿಯ ಕೊ*ಲೆ ಪ್ರಕರಣ ಚಿಕ್ಕಮಂಗಳೂರು ತಾಲೂಕಿನ ಕೊಳಗಾಮೆ ಗ್ರಾಮದಲ್ಲಿ ನಡೆದಿದ್ದು, ಇದೀಗ ಅಸಲಿ ಕಾರಣ ಬಯಲಾಗಿದೆ. ಮೊಮ್ಮಗ ತನಗಿರುವ ಕಾಯಿಲೆ ಹುಷಾರಾಗಲಿ ಎಂದು ತನ್ನ ಅಜ್ಜಿಯ ಮೇಲೆ ಅ*ತ್ಯಾಚಾರಕ್ಕೆ ಯತ್ನಿಸಿ, ಅಜ್ಜ ಅಜ್ಜಿ ಇಬ್ಬರನ್ನು ಕೊ*ಲೆ ಮಾಡಿದ್ದಾನೆ.
ನ.21 ರಂದು ಕೊಳಗಾಮೆ ಗ್ರಾಮದಲ್ಲಿ ಕರಿಬಸವಯ್ಯ (65) ಅವರ ಪತ್ನಿ ಲಲೀತಮ್ಮ (60) ಎಂಬವರ ಕೊ*ಲೆಯಾಗಿತ್ತು. ದಂಪತಿ ಮೊಮ್ಮಗ ನಿಶಾಂತ್ ಕೊ*ಲೆ ಆರೋಪಿ ಎಂದು ಗುರುತಿಸಲಾಗಿದೆ. ಜೋಡಿ ಕೊ*ಲೆ ನಡೆದ ಹಿನ್ನಲೆ, ಮಲ್ಲಂದೂರು ಪೊಲೀಸರು ಆರೋಪಿಯನ್ನು ಬೆಂಗಳೂರಿನಲ್ಲಿ ಬಂಧಿಸಿ ಕೊ*ಲೆಗೆ ಅಸಲಿ ಕಾರಣ ಏನು ಎಂಬುದನ್ನು ಬಾಯಿ ಬಿಡಿಸಿದ್ದಾರೆ.
ಮೂಲತಃ ನಿಶಾಂತ್ ಬೆಂಗಳೂರಿನಲ್ಲಿ ಫುಡ್ ಡೆಲಿವರಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಮಹಿಳೆಯರ ಚಟ ಹೊಂದಿದ್ದ. ಆದರೆ ಇತ್ತೀಚೆಗೆ ಆತನ ಮೈನಲ್ಲಿ ಸಾಕಷ್ಟು ಕಜ್ಜಿಗಳಾಗಿದ್ದವು. ಅದಕ್ಕಾಗಿ ಆತನ ಸ್ನೇಹಿತರು, ‘ನೀನು ಮಹಿಳೆಯರ ಬಳಿ ಹೋದಾಗ ಕಾಂ*ಡೋಮ್ ಬಳಸಬೇಡ. ಆಗ ಕಜ್ಜಿ ಹೋಗುತ್ತೆ’ ಎಂದು ಹೇಳಿದ್ದರಂತೆ. ಅದರೆ ಬೆಂಗಳೂರಿನಲ್ಲಿ ಕಾಂ*ಡೋಮ್ ಹಾಕದೆ ಸೆ*ಕ್ಸ್ ಮಾಡಲು ಮಹಿಳೆಯರು ಒಪ್ಪದ ಕಾರಣ ಅಜ್ಜ-ಅಜ್ಜಿಯ ಮನೆಗೆ ಬಂದಿದ್ದನು.
ಅಲ್ಲಿ ಅಜ್ಜಿಯ ಮೇಲೆ ಅ*ತ್ಯಾಚಾರ ಮಾಡುವುದು ಆತನ ಮೂಲ ಉದ್ದೇಶವಾಗಿತ್ತು. ಹಾಗಾಗಿ, ಮೊದಲಿಗೆ ಅಜ್ಜನನ್ನ ಕಲ್ಲಿನಿಂದ ಚ*ಚ್ಚಿ, ಕೊ*ಲೆ ಮಾಡಿ ನಂತರ ಅಜ್ಜಿಯ ಮೇಲೆ ಅ*ತ್ಯಾಚಾರಕ್ಕೆ ಯತ್ನಿಸಿದ್ದಾನೆ. ಈ ವೇಳೆ ಅಜ್ಜಿ ವಿರೋಧ ವ್ಯಕ್ತಪಡಿಸಿದಾಗ ಆಕೆಯ ಬಾಯಿಯನ್ನು ಬಿಗಿಯಾಗಿ ಹಿಡಿದಿದ್ದರಿಂದ ಆಕೆಯು ಸಾ*ವನ್ನಪ್ಪಿದ್ದಳು ಎಂದು ತಿಳಿದು ಬಂದಿದೆ.
ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ.
bangalore
ಎರಡನೇ ಪತ್ನಿಯನ್ನು ಕೊಂ*ದು ಮೂರನೇ ಮದುವೆಗೆ ಸಿದ್ದತೆ ಮಾಡುತ್ತಿದ್ದವನಿಗೆ ಪೊಲೀಸರ ಶಾಕ್ !
Published
11 hours agoon
05/12/2024By
NEWS DESK3ಮಂಗಳೂರು/ಬೆಂಗಳೂರು: ಪತ್ನಿಯ ಶೀಲ ಶಂಕಿಸಿ ಪದೇ ಪದೇ ಹಲ್ಲೆ ಮಾಡುತ್ತಿದ್ದ ಆರೋಪಿಯು ಪತ್ನಿಯನ್ನು ಕೊ*ಲೆ ಮಾಡಿರುವ ಘಟನೆ ಬೆಂಗಳೂರು ಹೊರವಲಯದ ಅನೇಕಲ್ ತಾಲೂಕಿನ ಸರ್ಜಾಪುರದಲ್ಲಿ ನಡೆದಿದೆ.
ಈ ಘಟನೆ ಕಳೆದ ತಿಂಗಳು ನಡೆದಿದ್ದು, ಸರ್ಜಾಪುರ ಪೊಲೀಸರ ಕಾರ್ಯಾಚರಣೆಯಿಂದ ಪತ್ನಿಯನ್ನು ಕೊಂ*ದ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ. ಬಿಹಾರ ಮೂಲದ ಮಹಮ್ಮದ್ ನಸೀಮ್ (39) ಬಂಧಿತ ಆರೋಪಿಯಾಗಿದ್ದು, ಬಿಹಾರ ಮೂಲದ ರುಮೇಶ್ ಖಾತುನ್ (22) ಕೊ*ಲೆಯಾದ ಮಹಿಳೆಯಾಗಿದ್ದಾಳೆ.
ಇದನ್ನೂ ಓದಿ: ಕ್ರಿಕೆಟ್ ದೇವರ ಮಗನಾದರೂ ಯಾರಿಗೂ ಬೇಡವಾದ ಅರ್ಜುನ್ ತೆಂಡೂಲ್ಕರ್ !
ಕೊಲೆ ಮಾಡಿದ ಬಳಿಕ ಆರೋಪಿ, ಪತ್ನಿಯ ಶ*ವವನ್ನು ವಿವಸ್ತ್ರಗೊಳಿಸಿ ಹಗ್ಗದಿಂದ ಕೈ ಕಾಲು ಕಟ್ಟಿ ಯಾರಿಗೂ ಅನುಮಾನ ಬಾರದಂತೆ ಚರಂಡಿಗೆ ಎಸೆದು ಬಿಹಾರಕ್ಕೆ ಎಸ್ಕೇಪ್ ಆಗಿದ್ದನು. ಶವ ಕೊಳೆತು ದುರ್ವಾಸನೆಯಿಂದ ಪೊಲೀಸರಿಗೆ ಮಾಹಿತಿ ನೀಡಲಾಗಿತ್ತು.
ಕೊಲೆ ಪ್ರಕರಣ ದಾಖಲಿಸಿಕೊಂಡ ಸರ್ಜಾಪುರ ಪೊಲೀಸರು ತನಿಖೆ ಮುಂದುವರಿಸಿದರು. ಆರೋಪಿಯ ಜಾಡು ಹಿಡಿದು ಬಿಹಾರಕ್ಕೆ ತೆರಳಿದ ಪೊಲೀಸರಿಗೆ ಶಾಕ್ ಕಾದಿತ್ತು. ಏಕೆಂದರೆ ಆರೋಪಿ ಮಹಮ್ಮದ್ ನಸೀಮ್ ಮೂರನೇ ಮದುವೆ ಸಂಭ್ರಮದಲ್ಲಿದ್ದ. ಪೊಲೀಸರು ಮದುವೆ ಮನೆಯಲ್ಲಿಯೇ ಆರೋಪಿಯನ್ನು ಅರೆಸ್ಟ್ ಮಾಡಿದ್ದಾರೆ.
LATEST NEWS
ಶಬರಿಮಲೆ ಯಾತ್ರಾರ್ಥಿಗಳಿಗೆ ಶುಭ ಸುದ್ದಿ: ಬೆಂಗಳೂರಿನಿಂದ ಶಬರಿಮಲೆಗೆ ವೋಲ್ವೋ ಬಸ್ ಸೌಲಭ್ಯ.!
Published
13 hours agoon
05/12/2024By
NEWS DESK2ಬೆಂಗಳೂರು: ಶಬರಿಮಲೆ ಯಾತ್ರಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಸಿಹಿಸುದ್ದಿ ನೀಡಿದ್ದು, ಕೆಎಸ್ಆರ್ಟಿಸಿಯು ಬೆಂಗಳೂರು ಮತ್ತು ಕೇರಳದ ಪಂಪಾ ನಡುವೆ ಐರಾವತ ವೋಲ್ವೊ ಬಸ್ ಸೇವೆ ಆರಂಭಿಸಿದೆ.
ಶಾಂತಿ ನಗರ ಬಸ್ ನಿಲ್ದಾಣದಿಂದ ಮಧ್ಯಾಹ್ನ 1.50ಕ್ಕೆ ವೋಲ್ವೊ ಬಸ್ ಹೊರಡಲಿದೆ. ಮೈಸೂರು ರಸ್ತೆ ಸ್ಯಾಟ್ಲೈಟ್ ಬಸ್ ನಿಲ್ದಾಣದಿಂದ 2.20ಕ್ಕೆ ಹೊರಟು ಸಂಜೆ 5.10ಕ್ಕೆ ಮೈಸೂರು ತಲುಪಲಿದೆ. ಮರುದಿನ ಬೆಳಗ್ಗೆ 6.45ಕ್ಕೆ ನಿಲಕ್ಕಲ್ ಬಸ್ ನಿಲ್ದಾಣವನ್ನು ತಲುಪಲಿದೆ.
ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶ ನೀಡಲಾಗಿದ್ದು, ಬರುವಾಗ ನಿಲಕ್ಕಲ್ ಬಸ್ ನಿಲ್ದಾಣಕ್ಕೆ ಬರಬೇಕಾಗುತ್ತದೆ. ಪ್ರತಿದಿನ ಸಂಜೆ 6ಕ್ಕೆ ನಿಲಕ್ಕಲ್ನಿಂದ ವೋಲ್ವೊ ಬಸ್ ಹೊರಡಲಿದ್ದು, ಮರುದಿನ ಬೆಳಗ್ಗೆ 10ಕ್ಕೆ ಮೆಜೆಸ್ಟಿಕ್ ತಲುಪಲಿದೆ. ನಿಮ್ಮ ಹತ್ತಿರದ ಖಾಸಗಿ ಟಿಕೆಟ್ ಕೌಂಟರ್ಗಳಲ್ಲದೆ, ಬೆಂಗಳೂರು ಮತ್ತು ಕರ್ನಾಟಕದ ವಿವಿಧ ಬುಕ್ಕಿಂಗ್ ಕೌಂಟರ್ಗಳಲ್ಲಿ ಟಿಕೆಟ್ ಕಾಯ್ದಿರಿಸಬಹುದು. ವೆಬ್ಸೈಟ್ https://www.ksrtc.in/ ಟಿಕೆಟ್ ಬುಕ್ಕಿಂಗ್ ಮಾಡಬಹುದು.
ವೋಲ್ವೋ ಪ್ರಯಾಣ ವಿವರ:
ಮಧ್ಯಾಹ್ನ 1:50ಕ್ಕೆ ಶಾಂತಿನಗರ ಬಸ್ ನಿಲ್ದಾಣದಿಂದ ಹೊರಟು ಸಂಜೆ 5:10ಕ್ಕೆ ಮೈಸೂರು ತಲುಪಿ ಮರುದಿನ ಬೆಳಿಗ್ಗೆ 6:45ಕ್ಕೆ ನಿಲಕ್ಕಲ್ ತಲುಪಲಿದೆ. ಅದೇ ದಿನ ಸಂಜೆ 6:00 ಗಂಟೆಗೆ ಬಸ್ ನಿಲಕ್ಕಲ್ ನಿಂದ ಹೊರಟು ಮರುದಿನ ಬೆಳಿಗ್ಗೆ 10:00 ಗಂಟೆಗೆ ಮೆಜೆಸ್ಟಿಕ್ ತಲುಪಲಿದೆ. ಹೋಗುವಾಗ ಪಂಪಾದಲ್ಲಿ ಇಳಿಯುವ ಅವಕಾಶವನ್ನು ಸಹ ನೀಡಲಾಗಿದೆ. ಭಕ್ತಾದಿಗಳು ಈ ಸೌಲಭ್ಯವನ್ನು ಸದುಪಯೋಗ ಪಡಿಸಿಕೊಳ್ಳಬೇಕಾಗಿ ವಿನಂತಿ.
LATEST NEWS
ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ; ಓರ್ವ ಮಹಿಳೆ ಸಾವು
Published
14 hours agoon
05/12/2024By
NEWS DESK2ಹೈದರಾಬಾದ್: ಸ್ಟಾರ್ ನಟ ಅಲ್ಲು ಅರ್ಜುನ್ ಅಭಿನಯದ ಪುಷ್ಪ 2 ಪ್ರೀಮಿಯರ್ ಶೋ ವೇಳೆ ಕಾಲ್ತುಳಿತ ಸಂಭವಿಸಿ ಓರ್ವ ಮಹಿಳೆ ಮೃತಪಟ್ಟಿರುವ ಘಟನೆ ನಡೆದಿದೆ.
ಹೈದರಾಬಾದ್‌ನ RTC ಕ್ರಾಸ್‌ರೋಡ್ಸ್‌ನ ಸಂಧ್ಯಾ ಥಿಯೇಟರ್‌ನಲ್ಲಿ ಈ ದುರಂತ ಸಂಭವಿಸಿತು. ದಿಲ್‌ಸುಖ್‌ನಗರದ ರೇವತಿ ಮೃತ ಮಹಿಳೆ. ಪತಿ ಭಾಸ್ಕರ್ ಮತ್ತು ಇಬ್ಬರು ಮಕ್ಕಳೊಂದಿಗೆ ಕಾರ್ಯಕ್ರಮಕ್ಕೆ ಬಂದಿದ್ದರು.
ರಾತ್ರಿ 10:30 ರ ಸುಮಾರಿಗೆ ಥಿಯೇಟರ್‌ನಲ್ಲಿ ಪ್ರೇಕ್ಷಕರು ಕಿಕ್ಕಿರಿದು ನೆರೆದಿದ್ದರು. ಸಿನಿಮಾ ಸ್ಕ್ರೀನಿಂಗ್‌ನಲ್ಲಿ ಅಲ್ಲು ಅರ್ಜುನ್ ಹಾಜರಿದ್ದರು. ಈ ವೇಳೆ ನೂಕುನುಗ್ಗಲು ಜಾಸ್ತಿಯಾಗಿ ಕಾಲ್ತುಳಿತ ಸಂಭವಿಸಿತು. ಪರಿಣಾಮವಾಗಿ 39 ವರ್ಷದ ಮಹಿಳೆ ಸಾವನ್ನಪ್ಪಿದ್ದಾರೆ. ಆಕೆಯ ಚಿಕ್ಕ ಮಗನ ಸ್ಥಿತಿ ಗಂಭೀರವಾಗಿದೆ.
ಜನರ ಗುಂಪನ್ನು ನಿಯಂತ್ರಿಸಲು ಪೊಲೀಸರು ಲಾಠಿ ಚಾರ್ಜ್ ನಡೆಸಿದ್ದಾರೆ. ಘಟನೆಯಲ್ಲಿ ಇಬ್ಬರಿಗೆ ಗಾಯವಾಗಿದ್ದು, ಬಾಲಕನ ಸ್ಥಿತಿ ಗಂಭೀರವಾಗಿದೆ.