ಮಂಗಳೂರು/ಬೆಂಗಳೂರು : ಟೆಕ್ಕಿ ಅತುಲ್ ಸುಭಾಷ್ ಆ*ತ್ಮಹತ್ಯೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಮೂವರನ್ನು ಮಾರತ್ತಹಳ್ಳಿ ಪೊಲೀಸರು ಬಂಧಿಸಿದ್ದಾರೆ.
ಅತುಲ್ ಪತ್ನಿ, ಎ1 ನಿಖಿತಾ ಸಿಂಘಾನಿಯ, ಅತ್ತೆ ಎ2 ನಿಶಾ ಸಿಂಘಾನಿಯಾ, ಭಾಮೈದ ಎ3 ಅನುರಾಗ್ನನ್ನು ತಡರಾತ್ರಿ ಪೊಲೀಸರು ಬಂಧಿಸಿದ್ದಾರೆ. ಹರಿಯಾಣದ ಗುರುಗ್ರಾಮದಲ್ಲಿ ಅತುಲ್ ಪತ್ನಿ ನಿಖಿತಾಳನ್ನು ಬಂಧಿಸಲಾಗಿದೆ. ಉತ್ತರಪ್ರದೇಶದ ಅಲಹಾಬಾದ್ನಲ್ಲಿ ನಿಶಾ ಹಾಗೂ ಅನುರಾಗ್ನನ್ನು ಬಂಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಮೂವರನ್ನೂ ನ್ಯಾಯಾಲಕ್ಕೆ ಹಾಜರು ಪಡಿಸಿದ್ದು, ಆರೋಪಿಗಳಿಗೆ ನ್ಯಾಯಾಂಗ ಬಂಧನ ವಿಧಿಸಲಾಗಿದೆ.
ಇದನ್ನೂ ಓದಿ: ಸನ್ಯಾಸಿನಿಯಾಗಲು ಹೊರಟಿದ್ದ ಮಹಿಳೆಗೆ ಶಿಶು ಜನನ !! ಮುಂದೇನಾಯ್ತು ಗೊತ್ತಾ ??
ಸಂಚಲನ ಮೂಡಿಸಿದ ಕೇಸ್:
ಡಿಸೆಂಬರ್ 9 ರಂದು ಟೆಕ್ಕಿ ಅತುಲ್ ಸುಭಾಷ್(34) ಡೆತ್ ನೋಟ್ ಬರೆದಿಟ್ಟು ಆ*ತ್ಮಹತ್ಯೆ ಮಾಡಿಕೊಂಡಿದ್ದರು. ಆತ್ಮಹತ್ಯೆಗೂ ಮುನ್ನ 90 ನಿಮಿಷಗಳ ವೀಡಿಯೋ ಮಾಡಿ ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದರು. ಅದರಲ್ಲಿ ತನಗೆ ಪತ್ನಿ ಹಾಗೂ ಆಕೆಯ ಮನೆಯವರು ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಸಿದ್ದರು. ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನೀಡಿದ ದೂರಿನ ಮೇರೆಗೆ ಆ*ತ್ಮಹತ್ಯೆಗೆ ಪ್ರಚೋದನೆ ಅರೋಪದಡಿ ಮಾರತ್ತಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಕೇಸ್ ದೇಶಾದ್ಯಂತ ಭಾರಿ ಸುದ್ದಿ ಮಾಡಿದೆ.
ದೂರಿನಲ್ಲಿ ಏನಿದೆ?
2019ರಲ್ಲಿ ಅತುಲ್ ಸುಭಾಷ್ – ನಿಕಿತಾ ಸಿಂಘಾನಿಯಾ ಮದುವೆಯಾಗಿದ್ದು, ಗಂಡು ಮಗು ಇದೆ. ನಿಕಿತಾ ಸಿಂಘಾನಿಯಾ, ತಾಯಿ ನಿಶಾ ಸಿಂಘಾನಿಯಾ, ಸಹೋದರ ಅನುರಾಗ್ ಹಾಗೂ ಸಂಬಂಧಿ ಸುಶೀಲ್ ಸಿಂಘಾನಿಯಾ ಸೇರಿ ಅತುಲ್ ಮೇಲೆ ಸುಳ್ಳು ಕೇಸ್ ಹಾಕಿದ್ದಾರೆ. ಈ ಕೇಸ್ ಇತ್ಯರ್ಥಕ್ಕಾಗಿ 3 ಕೋಟಿ ಕೊಡಬೇಕೆಂದು ಒತ್ತಾಯಿಸಿದ್ದರು. ಮಗನ ಭೇಟಿಗೆ 30 ಲಕ್ಷ ಬೇಡಿಕೆ ಇಟ್ಟಿದ್ದರು. 3 ಕೋಟಿ ಕೊಡಲಾಗದಿದ್ದಲ್ಲಿ ಬದುಕಬೇಡ, ಆತ್ಮಹತ್ಯೆ ಮಾಡಿಕೋ ಎಂದು ಅಣಕಿಸುತ್ತಿದ್ದರು. ಇದರಿಂದ ಮಾನಸಿಕ ಹಾಗೂ ದೈಹಿಕವಾಗಿ ನೊಂದು ಆ*ತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ.