ಮಂಗಳೂರು/ ಆಸ್ಟ್ರೇಲಿಯಾ: ಬ್ರಿಸ್ಬೇನ್ ನಲ್ಲಿ ಗಾಬಾ ಮೈದಾನದಲ್ಲಿ ನಡೆಯುತ್ತಿರುವ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೂರನೇ ಪಂದ್ಯದ 2ನೇ ದಿನದಾಟವು ಅಂತ್ಯಗೊಂಡಿದೆ. ದ್ವಿತೀಯ ದಿನದಾಟದಲ್ಲಿ ಆಸ್ಟ್ರೇಲಿಯಾದ ಇಬ್ಬರು ಬ್ಯಾಟರ್ ಗಳು ಪರಾಕ್ರಮ ಮೆರೆದರೂ ಟೀಮ್ ಇಂಡಿಯಾ ವೇಗಿ ಜಸ್ ಪ್ರೀತ್ ಬುಮ್ರಾ 5 ವಿಕೆಟ್ ಕಬಳಿಸುವಲ್ಲಿ ಯಶಸ್ವಿಯಾಗಿರುವುದು ವಿಶೇಷ.
ಈ ಪಂದ್ಯದಲ್ಲಿ ಟಾಸ್ ಗೆದ್ದ ಟೀಮ್ ಇಂಡಿಯಾ ನಾಯಕ ರೋಹಿತ್ ಶರ್ಮಾ ಬೌಲಿಂಗ್ ಆಯ್ದುಕೊಂಡಿದ್ದರು. ಮಳೆಯ ಕಾರಣ ಮೊದಲ ದಿನದಾಟವು ಕೇವಲ 13.2 ಓವರ್ ಗಳಿಗೆ ಸೀಮಿತವಾಗಿತ್ತು. 28 ರನ್ ಗಳೊಂದಿಗೆ ದ್ವಿತೀಯ ದಿನದಾಟ ಆರಂಭಿಸಿದ ಆಸ್ಟ್ರೇಲಿಯಾ ತಂಡಕ್ಕೆ ಆರಂಭಿಕ ಆಘಾತ ನೀಡುವಲ್ಲಿ ಬುಮ್ರಾ ಯಶಸ್ವಿಯಾದರು.
ಉಸ್ಮಾನ್ ಖ್ವಾಜಾ (21) ಹಾಗೂ ನಾಥನ್ ಮೆಕ್ಸ್ವೀನಿ (9) ವಿಕೆಟ್ ಕಬಳಿಸಿ ಬುಮ್ರಾ ಟೀಮ್ ಇಂಡಿಯಾಗೆ ಆರಂಭಿಕ ಮೇಲುಗೈ ತಂದುಕೊಟ್ಟರು. ಈ ಹಂತದಲ್ಲಿ ಕಣಕ್ಕಿಳಿದ ಮಾರ್ನಸ್ ಲಾಬುಶೇನ್ (12) ನಿತೀಶ್ ಕುಮಾರ್ ರೆಡ್ಡಿ ಎಸೆತದಲ್ಲಿ ಔಟಾದರು.
ನಂತರ ಜೊತೆಗೂಡಿದ ಟ್ರಾವಿಸ್ ಹೆಡ್ ಹಾಗೂ ಸ್ಟೀವ್ ಸ್ಮಿತ್ ಅಮೋಘ ಜೊತೆಯಾಟದೊಂದಿಗೆ ಟೀಮ್ ಇಂಡಿಯಾ ಬೌಲರ್ ಗಳ ಬೆಂಡೆತ್ತಿದರು. ಅದರಲ್ಲೂ ಬಿರುಸಿನ ಬ್ಯಾಟಿಂಗ್ ಪ್ರದರ್ಶಿಸಿದ ಹೆಡ್ ಕೇವಲ 115 ಎಸೆತಗಳಲ್ಲಿ ಶತಕ ಪೂರೈಸಿದರು. ಮತ್ತೊಂದೆಡೆ ಉತ್ತಮ ಸಾಥ್ ನೀಡಿದ ಸ್ಮಿತ್ 185 ಎಸೆತಗಳಲ್ಲಿ ತಮ್ಮ 33ನೇ ಟೆಸ್ಟ್ ಸೆಂಚುರಿ ಸಿಡಿಸಿದರು.
ಈ ಹಂತದಲ್ಲಿ ದಾಳಿಗಿಳಿದ ಬುಮ್ರಾ ಶತಕ ಬಾರಿಸಿದ ಸ್ಟೀವ್ ಸ್ಮಿತ್(101) ವಿಕೆಟ್ ಪಡೆಯುವಲ್ಲಿ ಯಶಸ್ವಿಯಾದರು. ಇದರ ಬೆನ್ನಲ್ಲೇ ಮಚೆಲ್ ಮಾರ್ಷ್(5) ಕೂಡ ವಿಕೆಟ್ ಒಪ್ಪಿಸಿದರು.
ಇನ್ನು 160 ಎಸೆತಗಳಲ್ಲಿ 18 ಫೋರ್ಗಳೊಂದಿಗೆ 152 ರನ್ ಸಿಡಿಸಿ ಅಬ್ಬರಿಸಿದ್ದ ಟ್ರಾವಿಸ್ ಹೆಡ್ಗೂ ಪೆವಿಲಿಯನ್ ಹಾದಿ ತೋರಿಸುವಲ್ಲಿ ಬುಮ್ರಾ ಯಶಸ್ವಿಯಾದರು. ಈ ಮೂಲಕ ಜಸ್ಪ್ರೀತ್ ಬುಮ್ರಾ 5 ವಿಕೆಟ್ಗಳ ಸಾಧನೆ ಮಾಡಿದರು.
ನಂತರ ಬಂದ ನಾಯಕ ಪ್ಯಾಟ್ ಕಮಿನ್ಸ್ (20) ಮೊಹಮ್ಮದ್ ಸಿರಾಜ್ ಗೆ ವಿಕೆಟ್ ಒಪ್ಪಿಸಿದರು. 2ನೇ ದಿನದಾಟದ ಮುಕ್ತಾಯದ ವೇಳೆಗೆ ಆಸ್ಟ್ರೇಲಿಯಾ ತಂಡವು 7 ವಿಕೆಟ್ ಕಳೆದುಕೊಂಡು 405 ರನ್ ಕಲೆಹಾಕಿದೆ. ಕ್ರೀಸ್ ನಲ್ಲಿ ಅಲೆಕ್ಸ್ ಕ್ಯಾರಿ (45) ಹಾಗೂ ಮಿಚೆಲ್ ಸ್ಟಾರ್ಕ್ (7) ಬ್ಯಾಟಿಂಗ್ ಕಾಯ್ದುಕೊಂಡಿದ್ದಾರೆ.
ಮಂಗಳೂರು/ಮೆಕ್ಸಿಕೊ: ತನ್ನದೇ ವಿಭಿನ್ನ ಶೈಲಿಯಲ್ಲಿ ಎಂಟ್ರಿ ಕೊಡುತ್ತಿದ್ದ ರೇಯ್ ಮಿಸ್ಟೀರಿಯೋ ಅಬ್ಬರ ನೋಡೋದೇ ಒಂದು ಆನಂದವಾಗಿತ್ತು. 66 ವರ್ಷದ ರೇ ಮಿಸ್ಟೀರಿಯೋ ಸೀನಿಯರ್ ಸಾವನ್ನಪ್ಪಿರುವ ಸುದ್ದಿ ವರದಿಯಾಗಿದೆ.
WWE ಸ್ಟಾರ್ ಗಳ ಸಾವಿನ ಸುದ್ದಿ ಬಗ್ಗೆ ಆಗಾಗ ಸುಳ್ಳು ಸುದ್ದಿ ಕೇಳಿ ಬರುತ್ತಲೇ ಇರುತ್ತದೆ. ಆದರೆ ಈ ಬಾರಿ ರೇ ಮಿಸ್ಟೀರಿಯೋ ಅಭಿಮಾನಿಗಳು ಇದು ಕೂಡ ಸುಳ್ಳಾಗಲಿ ಎಂದು ಬಯಸಿದ್ದರು. ಆದರೆ ಈ ಬಾರಿ ಮಿಸ್ಟೀರಿಯೋ ಕುಟುಂಬಸ್ಥರು ಈ ಶಾಕಿಂಗ್ ಸುದ್ದಿಯನ್ನು ಖಚಿತಪಡಿಸಿದ್ದಾರೆ.
ರೇಯ್ ಮಿಸ್ಟೀರಿಯೋ, 1990ರ ಮಕ್ಕಳ ಹಾಟ್ ಫೇವರೆಟ್ WWE ಸ್ಟಾರ್. ರೇಯ್ ಮಿಸ್ಟೀರಿಯೋ ಫೈಟಿಂಗ್ ಹಾಗೂ ಪಲ್ಟಿ ಹೊಡೆಯೋ ಸ್ಟೈಲ್ ಅಷ್ಟು ರೋಮಾಂಚನಕಾರಿ.
ಸಾಮಾನ್ಯವಾಗಿ WWEನಲ್ಲಿ ದಢೂತಿ ದೇಹ. 6 ಅಡಿಗಿಂತ ಎತ್ತರದ ಕುಸ್ತಿಪಟುಗಳು ಅಖಾಡಕ್ಕೆ ಇಳಿಯುತ್ತಾರೆ. ಆದರೆ ಮಿಸ್ಟೀರಿಯೋ ಸೀನಿಯರ್ WWE ಸೂಪರ್ ಸ್ಟಾರ್‌ಗಳ ಮಧ್ಯೆ ಕುಳ್ಳನಂತೆ ಕಾಣುತ್ತಿದ್ದರು. ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಅನ್ನೋ ಹಾಗೇ ಮಿಸ್ಟೀರಿಯೋ ಸೀನಿಯರ್ ಅನ್ನ ಸೋಲಿಸೋದು ಅಷ್ಟು ಸುಲಭವಲ್ಲ.
ರೇಯ್ ಮಿಸ್ಟೀರಿಯೋ ಆಡಿದ ಒಂದೊಂದು ಮ್ಯಾಚ್‌ಗಳು ರೋಚಕ ಫಲಿತಾಂಶಗಳನ್ನೇ ಕೊಡುತ್ತಿದ್ದವು. ರೇಯ್ ಮಿಸ್ಟೀರಿಯೋ ಫೈಟಿಂಗ್ ಸ್ಟೈಲ್ ಹಾಗೂ ರೋಚಕ ಟ್ವಿಸ್ಟ್‌ಗಳು ನೋಡುಗರನ್ನ ತುದಿಗಾಲಲ್ಲಿ ನಿಲ್ಲುವಂತೆ ಮಾಡುತ್ತಿದ್ದವು.
ಕುಸ್ತಿ ಪ್ರಪಂಚದ ಮೇಲೆ ರೇ ಮಿಸ್ಟೀರಿಯೋ ಸೀನಿಯರ್ ಅವರ ಪ್ರಭಾವವು ಮುಂದಿನ ಪೀಳಿಗೆಯೂ ಕೂಡ ನೆನಪಿಸುವಂತೆ ಮಾಡುತ್ತದೆ. ಅವರ ವಿಶಿಷ್ಟ ಶೈಲಿಯ ಫೈಟಿಂಗ್ ಗಳು, ರಿಂಗ್ ನಲ್ಲಿ ಆಡುವ ರೀತಿ, ಪಲ್ಟಿ ಹೊಡೆಯೋ ಸ್ಟೈಲ್ ಅಭಿಮಾನಿಗಳನ್ನು ರೋಮಾಂಚನಗೊಳಿಸುತ್ತಿತ್ತು. ಆದರೆ ಇವರ ನಿಧನ ಕುಟುಂಬಸ್ಥರು ಹಾಗೂ ಅಭಿಮಾನಿಗಳಿಗೆ ಅತೀವ ದುಃಖ ಉಂಟುಮಾಡಿದೆ.
4.28 ಶತಕೋಟಿ ಡಾಲರ್ ಮೊತ್ತದ ವಿದ್ಯಾರ್ಥಿ ಸಾಲವನ್ನು ಮನ್ನಾ ಮಾಡುವ ಯೋಜನೆಯನ್ನು ಅಧ್ಯಕ್ಷರು ಘೋಷಿಸಿದ್ದಾರೆ. ಇದರೊಂದಿಗೆ ವಿದ್ಯಾರ್ಥಿ ಸಾಲದಿಂದ ಮುಕ್ತರಾದವರ ಸಂಖ್ಯೆ ಸುಮಾರು 5 ದಶಲಕ್ಷಕ್ಕೆ ತಲುಪಿದೆ ಎಂದು ಶ್ವೇತಭವನದ ಹೇಳಿಕೆಯಲ್ಲಿ ತಿಳಿಸಿದೆ.
ಮಂಗಳೂರು/ಕೀವ್: ಉಕ್ರೇನ್ ನ 8 ಸ್ಪೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜನ್ ನಗರದ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದೇ ನಗರದಲ್ಲಿ ಇತ್ತೀಚೆಗೆ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ ನಡೆದಿದ್ದು, ಭಾರತದ ಪ್ರಧಾನಿ ಸೇರಿದಂತೆ ಹಲವು ವಿಶ್ವ ನಾಯಕರು ಆಗಮಿಸಿದ್ದರು.
ಇತ್ತೀಚೆಗೆ ಉಕ್ರೇನ್ ಮೇಲೆ ಕ್ಷೀಪಣಿ ದಾಳಿ ನಡೆಸಿದ್ದ ರಷ್ಯಾಗೆ ಡ್ರೋನ್ ದಾಳಿ ಮೂಲಕ ಉಕ್ರೇನ್ ತಿರುಗೇಟು ನೀಡಿದ್ದು, ಉಕ್ರೇನ್ ದಿಢೀರ್ ಕ್ರಮಕ್ಕೆ ರಷ್ಯಾದ ಕಜಾನ್ ಜನತೆ ಬೆಚ್ಚಿ ಬಿದ್ದಿದ್ದಾರೆ.
ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದರೆ ಕಟ್ಟಡಗಳು ವ್ಯಾಪಕವಾಗಿ ಹಾನಿಗೊಳಗಾಗಿರುವುದಾಗಿ ವರದಿಗಳು ತಿಳಿಸಿವೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜಾನ್ ನಗರದ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ. ದಾಳಿಯಲ್ಲಿ 3 ಕಟ್ಟಡಗಳು ಹಾನಿಗೊಳಗಾಗಿದ್ದು, ಜನರನ್ನು ಅಲ್ಲಿಂದ ಸ್ಥಳಾಂತರಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಆಡಳಿತವು ಜನರಿಗೆ ಊಟ, ಬಟ್ಟೆಗಳನ್ನು ಒದಗಿಸಿದೆ ಎಂದು ತಿಳಿದುಬಂದಿದೆ.
ಕಜನ್ ಮಾಸ್ಕೋದಿಂದ ಪೂರ್ವಕ್ಕೆ ಸುಮಾರು 800 ಕಿಲೋಮೀಟರ್ ದೂರದಲ್ಲಿದೆ. ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಪ್ರಕಾರ, ರಷ್ಯಾದ ವಾಯು ರಕ್ಷಣಾ ವ್ಯವಸ್ಥೆಯ ಕಜಾನ್ ನಗರದಲ್ಲಿ ಡ್ರೋನ್ ಅನ್ನು ಉರುಳಿಸಿದ್ದು, ಕೆಲವು ಡ್ರೋನ್ ಗಳು ಅದನ್ನು ಭೇದಿಸಿ ದಾಳಿನಡೆಸಿವೆ ಎಂದು ತಿಳಿಸಿದೆ.
9/11 ಶೈಲಿಯ ದಾಳಿ
ಉಕ್ರೇನ್ ದಾಳಿಯು, ಸಪ್ಟೆಂಬರ್ 11, 2001ರಂದು ನ್ಯೂಯಾರ್ಕ್ ವಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಕ್ಕೆ ವಿಮಾನದ ಮೂಲಕ ದಾಳಿ ನಡೆಸಿದ ಘಟನೆಯನ್ನು ನೆನಪಿಸುವಂತಿದೆ.
ಸೆಪ್ಟೆಂಬರ್ 11, 2001ರಂದು ಅಮೆರಿಕಗೆ ಅಲ್ ಕೈದಾ ಉಗ್ರ ಸಂಘಟನೆ ಶಾಕ್ ಕೊಟ್ಟಿದ್ದರು. ಈ ಭೀಕರ ಉಗ್ರ ದಾಳಿಯಲ್ಲಿ 2977 ಅಮಾಯಕರು ಮೃತರಾಗಿದ್ದರು.
ಅಲ್ ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ ಅಧಿನಾಯಕ ಒಸಾಮಾ ಬಿನ್ ಲಾಡೆನ್ ನೇತೃತ್ವದಲ್ಲಿ ಅಮೆರಿಕದ ಮೇಲೆ ಉಗ್ರ ದಾಳಿ ನಡೆಸಿತ್ತು. ನ್ಯೂಯಾರ್ಕ್ ನ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರದ ಮೇಲೆ ವಿಮಾನ ದಾಳಿ ನಡೆದಿತ್ತು. ಸೆಪ್ಟೆಂಬರ್ 11, 2001 ಈ ಘಟನೆ ನಡೆದಿದ್ದು ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಉಕ್ರೇನ್ ನ ಈ ದಢೀರ್ ದಾಳಿಯು 9/11ರ ಅಟ್ಯಾಕ್ ಸ್ಮರಿಸುವಂತೆ ಮಾಡಿದೆ.