International news
ಟೀಂ ಇಂಡಿಯಾ ವಿರುದ್ದದ 3ನೇ ಟೆಸ್ಟ್ ಗೆ ಬಲಿಷ್ಠ ಪ್ಲೇಯಿಂಗ್ 11 ಪ್ರಕಟಿಸಿದ ಆಸ್ಟ್ರೇಲಿಯಾ !
Published
1 week agoon
By
NEWS DESK3ಮಂಗಳೂರು/ಬ್ರಿಸ್ಬೇನ್: ಭಾರತ ಹಾಗೂ ಆಸ್ಟ್ರೇಲಿಯಾ ನಡುವಿನ ಮೂರನೇ ಟೆಸ್ಟ್ ಪಂದ್ಯವು ಬ್ರಿಸ್ಬೇನ್ ನ ಗಾಬಾ ಮೈದಾನದಲ್ಲಿ ಡಿಸೆಂಬರ್ 14ರಿಂದ ನಡೆಯಲಿದೆ. ಹಿಗಾಗೀ ಟೀಂ ಇಂಡಿಯಾ ವಿರುದ್ದದ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಆಸ್ಟ್ರೇಲಿಯಾ ತನ್ನ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ.
ಈಗಾಗಲೇ ಸರಣಿಯಲ್ಲಿ ಉಭಯ ತಂಡಗಳು 1-1 ರಿಂದ ಸಮಬಲ ಸಾಧಿಸಿರುವುದರಿಂದ ನಾಳೆಯಿಂದ ನಡೆಯಲಿರುವ ಮೂರನೇ ಟೆಸ್ಟ್ ಎರಡೂ ತಂಡಗಳಿಗೆ ಅತ್ಯಂತ ಮಹತ್ವದಾಗಿದೆ. ಇದೀಗ ಈ ಮೂರನೇ ಟೆಸ್ಟ್ ಪಂದ್ಯಕ್ಕಾಗಿ ಅತಿಥೇಯ ಆಸ್ಟ್ರೇಲಿಯಾ ಆಡುವ ಹನ್ನೊಂದರ ಬಳಗವನ್ನು ಘೋಷಿಸಿದೆ. ಆ ಪ್ರಕಾರ ಆಸ್ಟ್ರೇಲಿಯಾ ತಂಡದಲ್ಲಿ 1 ಬದಲಾವಣೆಯಾಗಿದ್ದು, ಸ್ಕಾಟ್ ಬೋಲ್ಯಾಂಡ್ ಬದಲಿಗೆ ಜೋಶ್ ಹೇಜಲ್ ವುಡ್ ತಂಡಕ್ಕೆ ಮರಳಿದ್ದಾರೆ.
ಇದನ್ನೂ ಓದಿ: ವಿದೇಶಿ ಆಟಗಾರನನ್ನು ಹೊಗಳಿ ಇಶಾನ್ ಕಿಶಾನ್ ಗೆ ಅವಮಾನ ಮಾಡಿದ ಆರ್ ಸಿಬಿ ಕೋಚ್ ಡಿಕೆ !
ಆಸ್ಟ್ರೇಲಿಯಾ ಪ್ಲೇಯಿಂಗ್ 11: ಉಸ್ಮಾನ್ ಖವಾಜಾ, ನಾಥನ್ ಮೆಕ್‌ಸ್ವೀನಿ, ಮಾರ್ನಸ್ ಲಬುಶೇನ್, ಸ್ಟೀವ್ ಸ್ಮಿತ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಅಲೆಕ್ಸ್ ಕ್ಯಾರಿ, ಪ್ಯಾಟ್ ಕಮ್ಮಿನ್ಸ್, ಮಿಚೆಲ್ ಸ್ಟಾರ್ಕ್, ನಾಥನ್ ಲಿಯಾನ್, ಜೋಶ್ ಹೇಜಲ್‌ವುಡ್
International news
ರಷ್ಯಾದ ಮೇಲೆ ಉಕ್ರೇನ್ ಡ್ರೋನ್ ದಾಳಿ; ಬೆಚ್ಚಿಬಿದ್ದ ಕಜಾನ್ ಜನತೆ !
Published
15 hours agoon
21/12/2024By
NEWS DESK3ಮಂಗಳೂರು/ಕೀವ್: ಉಕ್ರೇನ್ ನ 8 ಸ್ಪೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜನ್ ನಗರದ ಮೇಲೆ ದಾಳಿ ನಡೆಸಿದೆ ಎಂದು ಹೇಳಲಾಗುತ್ತಿದೆ. ಇದೇ ನಗರದಲ್ಲಿ ಇತ್ತೀಚೆಗೆ ಬ್ರಿಕ್ಸ್ ರಾಷ್ಟ್ರಗಳ ಶೃಂಗಸಭೆ ನಡೆದಿದ್ದು, ಭಾರತದ ಪ್ರಧಾನಿ ಸೇರಿದಂತೆ ಹಲವು ವಿಶ್ವ ನಾಯಕರು ಆಗಮಿಸಿದ್ದರು.
ಇತ್ತೀಚೆಗೆ ಉಕ್ರೇನ್ ಮೇಲೆ ಕ್ಷೀಪಣಿ ದಾಳಿ ನಡೆಸಿದ್ದ ರಷ್ಯಾಗೆ ಡ್ರೋನ್ ದಾಳಿ ಮೂಲಕ ಉಕ್ರೇನ್ ತಿರುಗೇಟು ನೀಡಿದ್ದು, ಉಕ್ರೇನ್ ದಿಢೀರ್ ಕ್ರಮಕ್ಕೆ ರಷ್ಯಾದ ಕಜಾನ್ ಜನತೆ ಬೆಚ್ಚಿ ಬಿದ್ದಿದ್ದಾರೆ.
ಘಟನೆಯಲ್ಲಿ ಇಲ್ಲಿಯವರೆಗೆ ಯಾವುದೇ ಸಾವು ನೋವು ಸಂಭವಿಸಿದ ಬಗ್ಗೆ ವರದಿಯಾಗಿಲ್ಲ. ಆದರೆ ಕಟ್ಟಡಗಳು ವ್ಯಾಪಕವಾಗಿ ಹಾನಿಗೊಳಗಾಗಿರುವುದಾಗಿ ವರದಿಗಳು ತಿಳಿಸಿವೆ.
ಉಕ್ರೇನ್ 8 ಸ್ಪೋಟಕ ಡ್ರೋನ್ ವಿಮಾನಗಳು ರಷ್ಯಾದ ಕಜಾನ್ ನಗರದ ಮೇಲೆ ದಾಳಿ ನಡೆಸಿವೆ ಎಂದು ಹೇಳಲಾಗುತ್ತಿದೆ. ದಾಳಿಯಲ್ಲಿ 3 ಕಟ್ಟಡಗಳು ಹಾನಿಗೊಳಗಾಗಿದ್ದು, ಜನರನ್ನು ಅಲ್ಲಿಂದ ಸ್ಥಳಾಂತರಿಸಿ ಸುರಕ್ಷಿತ ಸ್ಥಳಕ್ಕೆ ಕರೆದೊಯ್ಯಲಾಗಿದೆ. ಸ್ಥಳೀಯ ಆಡಳಿತವು ಜನರಿಗೆ ಊಟ, ಬಟ್ಟೆಗಳನ್ನು ಒದಗಿಸಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ: ಡೋಕ್ಲಾಂನಲ್ಲಿ 22 ಗ್ರಾಮಗಳನ್ನು ನಿರ್ಮಾಣ ಮಾಡಿದ ಚೀನಾ !
ಕಜನ್ ಮಾಸ್ಕೋದಿಂದ ಪೂರ್ವಕ್ಕೆ ಸುಮಾರು 800 ಕಿಲೋಮೀಟರ್ ದೂರದಲ್ಲಿದೆ. ರಷ್ಯಾದ ಸುದ್ದಿ ಸಂಸ್ಥೆ ಸ್ಪುಟ್ನಿಕ್ ಪ್ರಕಾರ, ರಷ್ಯಾದ ವಾಯು ರಕ್ಷಣಾ ವ್ಯವಸ್ಥೆಯ ಕಜಾನ್ ನಗರದಲ್ಲಿ ಡ್ರೋನ್ ಅನ್ನು ಉರುಳಿಸಿದ್ದು, ಕೆಲವು ಡ್ರೋನ್ ಗಳು ಅದನ್ನು ಭೇದಿಸಿ ದಾಳಿನಡೆಸಿವೆ ಎಂದು ತಿಳಿಸಿದೆ.
9/11 ಶೈಲಿಯ ದಾಳಿ
ಉಕ್ರೇನ್ ದಾಳಿಯು, ಸಪ್ಟೆಂಬರ್ 11, 2001ರಂದು ನ್ಯೂಯಾರ್ಕ್ ವಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಕ್ಕೆ ವಿಮಾನದ ಮೂಲಕ ದಾಳಿ ನಡೆಸಿದ ಘಟನೆಯನ್ನು ನೆನಪಿಸುವಂತಿದೆ.
ಸೆಪ್ಟೆಂಬರ್ 11, 2001ರಂದು ಅಮೆರಿಕಗೆ ಅಲ್ ಕೈದಾ ಉಗ್ರ ಸಂಘಟನೆ ಶಾಕ್ ಕೊಟ್ಟಿದ್ದರು. ಈ ಭೀಕರ ಉಗ್ರ ದಾಳಿಯಲ್ಲಿ 2977 ಅಮಾಯಕರು ಮೃತರಾಗಿದ್ದರು.
ಅಲ್ ಖೈದಾ ಎಂಬ ಇಸ್ಲಾಮಿಕ್ ಉಗ್ರ ಸಂಘಟನೆ ಅಧಿನಾಯಕ ಒಸಾಮಾ ಬಿನ್ ಲಾಡೆನ್ ನೇತೃತ್ವದಲ್ಲಿ ಅಮೆರಿಕದ ಮೇಲೆ ಉಗ್ರ ದಾಳಿ ನಡೆಸಿತ್ತು. ನ್ಯೂಯಾರ್ಕ್ ನ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರದ ಮೇಲೆ ವಿಮಾನ ದಾಳಿ ನಡೆದಿತ್ತು. ಸೆಪ್ಟೆಂಬರ್ 11, 2001 ಈ ಘಟನೆ ನಡೆದಿದ್ದು ಇಡೀ ಜಗತ್ತನ್ನೇ ಬೆಚ್ಚಿಬೀಳಿಸಿತ್ತು. ಇದೀಗ ಉಕ್ರೇನ್ ನ ಈ ದಢೀರ್ ದಾಳಿಯು 9/11ರ ಅಟ್ಯಾಕ್ ಸ್ಮರಿಸುವಂತೆ ಮಾಡಿದೆ.
International news
ಡೋಕ್ಲಾಂನಲ್ಲಿ 22 ಗ್ರಾಮಗಳನ್ನು ನಿರ್ಮಾಣ ಮಾಡಿದ ಚೀನಾ !
Published
19 hours agoon
21/12/2024By
NEWS DESK3ಮಂಗಳೂರು/ನವದೆಹಲಿ: ಭಾರತದ ವಿರುದ್ಧ ಯಾವಾಗ್ಲೂ ಕುತಂತ್ರಿ ಚೀನಾ ಕತ್ತಿಮಸಿಯುತ್ತಲೇ ಇರುತ್ತೆ. ಸುಮ್ಮನೆ ಇರಲಾರದೇ ಗಡಿಯಲ್ಲಿ ಭಾರತವನ್ನು ಕೆಣಕುತ್ತೆ. ಇತ್ತೀಚೆಗೆ ರಾಷ್ಟ್ರೀಯ ಭದ್ರತಾ ಸಲಹೆಗಾರ ಅಜಿತ್ ದೋವಲ್, ಚೀನಾ ವಿದೇಶಾಂಗ ಸಚಿವ ವಾಂಗ್ ಯಿಯನ್ನ ಭೇಟಿ ಮಾಡಿ ಮಹತ್ವದ ಮಾತುಕತೆ ನಡೆಸಿದ್ದರು.
ಆದರೆ, ಭೂತಾನ್ ಭಾಗ ಎನ್ನಲಾಗುವ ಪ್ರದೇಶದಲ್ಲಿ ಕಳೆದ ಎಂಟು ವರ್ಷಗಳಲ್ಲಿ ಚೀನಾ 22 ಗ್ರಾಮಗಳನ್ನು ನಿರ್ಮಾಣ ಮಾಡಿದೆ. ಉಪಗ್ರಹ ಚಿತ್ರಗಳನ್ನು ಆಧರಿಸಿ ಈ ವರದಿಯನ್ನು ತಯಾರಿಸಲಾಗಿದೆ. ಭಾರತದ ಸಿಕ್ಕಿಂ ಸಮೀಪ ಈ ಗ್ರಾಮಗಳ ನಿರ್ಮಾಣವಾಗಿದ್ದು, ಕಳವಳ ವ್ಯಕ್ತವಾಗಿದೆ.
ಇದನ್ನೂ ಓದಿ: ಟ್ರಂಪ್ ಜೊತೆಗೆ ಮಾತುಕತೆಗೆ ಸಿದ್ದವಿದ್ದೇನೆ ಎಂದ ವ್ಲಾಡಿಮಿರ್ ಪುಟಿನ್ !
ಚೀನಾದ ಸೇನಾಪಡೆಗಳಿಗೆ ಸುಲಭ ಸಂಚಾರ
ಡೋಕ್ಲಾಂನಲ್ಲಿ ಗ್ರಾಮ ನಿರ್ಮಾಣವಾಗುತ್ತಿರುವುದರಿಂದ ಈ ಪ್ರಸ್ಥಭೂಮಿಯ ಅತ್ಯಂತ ದಕ್ಷಿಣಕ್ಕೆ ಚೀನಾದ ಸೇನಾಪಡೆಗಳು ಸಂಚಾರ ಮಾಡಲು ಅವಕಾಶ ದೊರೆಯುತ್ತದೆ. ಇದು ಭಾರತಕ್ಕೆ ತೀರ ಸಮೀಪವಾಗಿದ್ದು, ಇದು ಚೀನಾದ ಮಿಲಿಟರಿ ನೆಲೆಗಳಿಗೂ ಸಮೀಪದಲ್ಲಿದೆ.
ಡೋಕ್ಲಾಂ ಬಿಕ್ಕಟ್ಟು
2017ರಲ್ಲಿ ಡೋಕ್ಲಾಂನ ಈ ಪ್ರದೇಶವು ಭಾರತ ಮತ್ತು ಚೀನಾದ ಸೈನಿಕರ ನಡುವೆ 73 ದಿನಗಳ ಕಾಲದ ಬಿಕ್ಕಟ್ಟಿನ ಪ್ರದೇಶವಾಗಿತ್ತು. ಹೀಗಾಗಿ ಈ ಪ್ರಸ್ಥಭೂಮಿಯ ದಕ್ಷಿಣಕ್ಕೆ ಚೀನಾದ ಸೇನೆಗಳು ತಲುಪುವ ರಸ್ತೆ ಮಾರ್ಗಗಳ ನಿರ್ಮಾಣವನ್ನು ತಡೆಯಲು ಭಾರತ ಸರಕಾರ ಮಧ್ಯಪ್ರವೇಶಿಸಿತ್ತು.
ಇದೀಗ ಮತ್ತೆ ಡೋಕ್ಲಾಂನಲ್ಲಿ ಗ್ರಾಮಗಳ ನಿರ್ಮಾಣ ವೇಗ ಪಡೆಯುತ್ತಿದ್ದು ಉಪಗ್ರಹ ಚಿತ್ರಗಳು ಭಾರತದ ಆತಂಕಕ್ಕೆ ಕಾರಣವಾಗಿದೆ.
International news
ಟ್ರಂಪ್ ಜೊತೆಗೆ ಮಾತುಕತೆಗೆ ಸಿದ್ದವಿದ್ದೇನೆ ಎಂದ ವ್ಲಾಡಿಮಿರ್ ಪುಟಿನ್ !
Published
2 days agoon
20/12/2024By
NEWS DESK3ಮಂಗಳೂರು/ಮಾಸ್ಕೊ: ಉಕ್ರೇನ್ ಭಾಗವನ್ನು ಸಂಪೂರ್ಣ ನಾಶಗೊಳಿಸಲು ಪಣತೊಟ್ಟು ನಿಂತಿರುವ ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟೀನ್, ಈಗ ಅಮೆರಿಕಾದ ನೂತನ ಅಧ್ಯಕ್ಷರಾಗಿ ಚುನಾಯಿತರಾಗಿರುವ ಡೊನಾಲ್ಡ್ ಟ್ರಂಪ್ ಅವರೊಂದಿಗೆ ಉಕ್ರೇನ್ ಯುದ್ದ ಸಂಬಂಧ ಮಾತುಕತೆಗೆ ಸಿದ್ದವಿರುವುದಾಗಿ ಹೇಳಿದ್ದಾರೆ.
ಅಮೆರಿಕಾದ ಚುನಾಯಿತ ಅಧ್ಯಕ್ಷರೊಂದಿಗೆ ಎಂದಾದರೂ ಚರ್ಚೆ ನಡೆಸಲು ಅವಕಾಶ ಸಿಕ್ಕರೆ ಖಂಡತವಾಗಿಯೂ ಉಕ್ರೇನ್ ಒಪ್ಪಂದದ ಕುರಿತು ಮಾತುಕತೆಗೆ ಸಿದ್ದವಿರುವುದಾಗಿ ಪುಟಿನ್ ಹೇಳಿದ್ದಾರೆ.
ಟ್ರಂಪ್ ಅವರೊಂದಿಗೆ ಮಾತುಕತೆಯನ್ನು ಸ್ವಾಗತಿಸಿರುವ ಪುಟಿನ್, ‘ನಾನು ಟ್ರಂಪ್ ಅವರನ್ನು ಯಾವಾಗ ಭೇಟಿಯಾಗಲಿದ್ದೇನೆ ಎಂಬುದು ತಿಳಿದಿಲ್ಲ. ಅವರು ಕೂಡ ಏನನ್ನೂ ಹೇಳಿಲ್ಲ. ಕಳೆದ ನಾಲ್ಕು ವರ್ಷಗಳಿಂದ ಅವರ ಜೊತೆ ಮಾತುಕತೆ ನಡೆಸಿಲ್ಲ. ಆದರೆ ಯಾವಾಗ ಬೇಕಾದರೂ ಭೇಟಿಯಾಗಲು ಸಿದ್ದವಿದ್ದೇನೆ’ ಎಂದು ಹೇಳಿದ್ದಾರೆ.
ಇದನ್ನೂ ಓದಿ: ಯೆಮೆನ್ ಮೇಲೆ ವಾಯು ದಾಳಿ ನಡೆಸಿದ ಇಸ್ರೇಲ್ !
ಈ ಬಗ್ಗೆ ವಾರ್ಷಿಕವಾಗಿ ನಡೆಯುವ ವರ್ಷದ ಅಂತ್ಯದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಪುಟಿನ್, ‘ಉಕ್ರೇನ್ ವಿರುದ್ದದ ಯುದ್ದದಲ್ಲಿ ರಷ್ಯಾ ಮೇಲುಗೈ ಸಾಧಿಸಿದೆ. ಆದರೆ ಬಹಳ ಹಿಂದೆಯೇ ಪೂರ್ಣ ಪ್ರಮಾಣದ ಆಕ್ರಮಣ ಆರಂಭಿಸದೇ ಇರುವುದಕ್ಕೆ ವಿಷಾದ ವ್ಯಕ್ತಪಡಿಸಿದರು. ಈಗ ಏನಾಗುತ್ತಿದೆ ಎಂದು ಗಮನಿಸಿದಾಗ ಆ ನಿರ್ಧಾರವನ್ನು ಹಿಂದೆಯೇ ತೆಗೆದುಕೊಳ್ಳಬೇಕಿತ್ತು’ ಎಂದು ಹೇಳಿದ್ದಾರೆ.
ಇದರ ನಡುವೆ ಸಿರಿಯಾದಲ್ಲಿ ರಷ್ಯಾಕ್ಕೆ ಸೋಲು ಎದುರಾಗಿದೆ ಎಂಬುದನ್ನು ಒಪ್ಪಿಕೊಳ್ಳಲು ಪುಟಿನ್ ನಿರಾಕರಿಸಿದ್ದಾರೆ. ಅಲ್ಲದೆ, ಪಲಾಯನ ಮಾಡಿರುವ ಬಶರ್ ಅಲ್ ಅಸ್ಸಾದ್ ಅವರನ್ನು ಭೇಟಿಯಾಗುವ ಯೋಜನೆಯಿದೆ ಎಂದು ತಿಳಿಸಿದ್ದಾರೆ.
ಇನ್ನೂ 2025ರ ಜನವರಿಯಲ್ಲಿ ಅಮೆರಿಕ ಅಧ್ಯಕ್ಷರಾಗಿ ಟ್ರಂಪ್ ಅಧಿಕಾರ ವಹಿಸಲಿದ್ದಾರೆ. ನೂತನ ಅಧ್ಯಕ್ಷ ಟ್ರಂಪ್, ‘ನರಮೇಧ ಕೊನೆಗೊಳಿಸಲು ಪುಟಿನ್ ಹಾಗೂ ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ ಸ್ಕಿ ಅವರೊಂದಿಗೆ ಮಾತುಕತೆ ನಡೆಸುತ್ತೇನೆ’ ಎಂದು ಹೇಳಿದ್ದರು.
LATEST NEWS
3 ಮಕ್ಕಳ ತಾಯಿಗೆ, 2 ಮಕ್ಕಳ ತಂದೆ ಜೊತೆ ಅ*ಫೇರ್; ಜೋಡಿಗೆ ಭರ್ಜರಿ ಮರುವಿವಾಹ
BBK11: ಆಟದ ದಿಕ್ಕು, ದಾರಿ ತಪ್ಪಿಸಿದ್ರಾ ಚೈತ್ರಾ ಕುಂದಾಪುರ? ಕಿಚ್ಚ ಸುದೀಪ್ ಖಡಕ್ ಕ್ಲಾಸ್!
ಟಿವಿ ರಿಮೋಟ್ ಕೊಡದಿದ್ದಕ್ಕೆ ಬಾಲಕಿ ಆತ್ಮಹ*ತ್ಯೆ
ಉಡುಪಿಯ ರೆಸಾರ್ಟ್ ನಲ್ಲಿ ಭಾರಿ ಅಗ್ನಿ ಅವಘಡ : ಪ್ರಾಣಾಪಾಯದಿಂದ ಪಾರಾದ ಪ್ರವಾಸಿಗರು!
ಮೂಲ್ಕಿ: ವಿವಿಧ ರಂಗಗಳ ಸಾಧಕರಿಗೆ ‘ಅರಸು ಕಂಬಳ’ ಪ್ರಶಸ್ತಿ ಪ್ರದಾನ
ಬಿಗ್ಬಾಸ್ ಮನೆಯಲ್ಲಿ ದೆವ್ವ, ಭೂತಗಳ ಓಡಾಟ
Trending
- BIG BOSS6 days ago
ಡ್ರೋನ್ ಪ್ರತಾಪ್ ಪೊಲೀಸ್ ಕಸ್ಟಡಿ ಇಂದಿಗೆ ಅಂತ್ಯ; ವಿಚಾರಣೆಯಲ್ಲಿ ಪೊಲೀಸರಿಗೆ ಸಿಕ್ತು ಮಹತ್ವದ ಮಾಹಿತಿ
- DAKSHINA KANNADA7 days ago
ಕ್ಯಾಟ್ಕದ ನೂತನ ಅಧ್ಯಕ್ಷರಾಗಿ ಲಂಚುಲಾಲ್ ಅವಿರೋಧವಾಗಿ ಆಯ್ಕೆ
- BIG BOSS7 days ago
ದಿಢೀರ್ ನಿರ್ಧಾರ ಕೈಗೊಂಡ ಗೋಲ್ಡ್ ಸುರೇಶ್; ಕಿಚ್ಚ ಸುದೀಪ್ ಶಾಕ್ !
- LATEST NEWS4 days ago
ದಹಿ ಪುರಿ ಚಾಟ್ಸ್ ಬದಲು ಪೂರಿ, ಮೊಸರು ಕಳುಹಿಸಿಕೊಟ್ಟ ರೆಸ್ಟೋರೆಂಟ್