ಸಿಡ್ನಿ : ಆಸ್ಟ್ರೇಲಿಯಾದ ಲೆಜೆಂಡರಿ ಲೆಗ್ ಸ್ಪಿನ್ನರ್ ಶೇನ್ ವಾರ್ನ್ ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ಕ್ರಿಕೆಟ್ ಮಾಂತ್ರಿಕನ ಸಾವು ಕ್ರಿಕೆಟ್ ಅಭಿಮಾನಿಗಳನ್ನು ಶೋಕ ಸಾಗರದಲ್ಲಿ ಮುಳುಗಿಸಿದೆ.
ಅವರಿಗೆ 52 ವರ್ಷ ವಯಸ್ಸಾಗಿತ್ತು. ಥೈಲ್ಯಾಂಡ್‌ನಲ್ಲಿದ್ದ ಶೇನ್ ವಾರ್ನ್ ಇದ್ದಕ್ಕಿದ್ದಂತೆ ಅನುಮಾನಾಸ್ಪದ ಸ್ಥಿತಿಯಲ್ಲಿ ಸಾವನ್ನಪ್ಪಿದ್ದಾರೆ ಎಂದು ಆಸ್ಟ್ರೇಲಿಯನ್ ಮಾದ್ಯಮ ವರದಿ ಮಾಡಿದೆ.
ವಾರ್ನ್ ಅವರು ಥಾಯ್ಲೆಂಡ್‌ನ ವಿಲ್ಲಾದಲ್ಲಿ ನೆಲೆಸಿದ್ದರು. ಶನಿವಾರ ಬೆಳಿಗ್ಗೆ ಅವರು ತಮ್ಮ ವಿಲ್ಲಾದಲ್ಲಿ ಪ್ರಜ್ಞಾಹೀನ ಸ್ಥಿತಿಯಲ್ಲಿ ಬಿದ್ದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಲಾಯಿತು.
ಆದರೂ ವೈದ್ಯಕೀಯ ತಂಡದ ಎಲ್ಲಾ ಪ್ರಯತ್ನಗಳ ಹೊರತಾಗಿಯೂ, ಅವರನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ ಎಂದು ವಾರ್ನ್ ಅವರ ಆಪ್ತ ವಲಯ ಮಾಹಿತಿ ನೀಡಿದೆ.
ಆಸ್ಟ್ರೇಲಿಯಾದ ತಂಡದಲ್ಲಿ ಗೂಗ್ಲಿ ಎಸೆತದ ಮೂಲಕ ಸಾಕಷ್ಟು ಪ್ರಸಿದ್ಧಿ ಪಡೆದಿದ್ದ ವಾರ್ನ್ ಕ್ರಿಕೆಟ್‍ಗೆ ನಿವೃತ್ತಿ ನೀಡಿದ ಬಳಿಕ ಹಲವು ತಂಡಗಳಿಗೆ ಕೋಚ್ ಮತ್ತು ಮೆಂಟರ್ ಆಗಿ ಕಾರ್ಯ ನಿರ್ವಹಿಸಿದ್ದರು.
ಐಪಿಎಲ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ನಾಯಕರಾಗಿ ತಂಡವನ್ನು ಮುನ್ನಡೆಸಿದ್ದರು.