ಬಂಟ್ವಾಳ: ಆಟೋ ಗ್ಯಾಸ್ ಸಿಲಿಂಡರ್ ಅನ್ನು ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡು ವ್ಯಕ್ತಿಯೊಬ್ಬರು ಗಾಯಗೊಂಡಿರುವ ಘಟನೆ ಬಂಟ್ವಾಳ ಫರಂಗಿಪೇಟೆ ಸಮೀಪದ ಅಮ್ಮೆಮಾರ್ ಎಂಬಲ್ಲಿ ನಡೆದಿದೆ.
ಬಂಟ್ವಾಳ ಕಾರಾಜೆ ನಿವಾಸಿ ಅಬ್ದುಲ್ ರಝಾಕ್ ಎಂಬವರು ಗಾಯಗೊಂಡವರಾಗಿದ್ದಾರೆ.
ಗುಜುರಿ ವ್ಯಾಪಾರಿ ಅಮ್ಮೆಮಾರ್ ನಿವಾಸಿ ತಸ್ಲೀಮ್ ಎಂಬವರ ಮನೆಯಲ್ಲಿ ಗುರಿಗೆ ಬಂದಿದ್ದ ಆಟೋ ಗ್ಯಾಸ್ ಸಿಲಿಂಡರ್ ಕತ್ತರಿಸಲು ಅಬ್ದುಲ್ ರಝಾಕ್ ಅವರು ಆಟೋ ರಿಕ್ಷಾದಲ್ಲಿ ಬಂದಿದ್ದು ಸಿಲಿಂಡರ್ ಕತ್ತರಿಸುತ್ತಿದ್ದ ವೇಳೆ ಸಿಲಿಂಡರ್ ಸ್ಫೋಟಗೊಂಡಿದೆ ಎನ್ನಲಾಗಿದೆ.
ಘಟನೆಯಲ್ಲಿ ಅಬ್ದುಲ್ ರಝಾಕ್ ಗಾಯಗೊಂಡಿದ್ದು ತುಂಬೆ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಅವರು ಬಂದಿದ್ದ ಆಟೋ ರಿಕ್ಷಾ ಭಸ್ಮವಾಗಿದ್ದು ,ಸಮೀಪದ ಮನೆಗಳ ಗೋಡೆಗಳು ಬಿರುಕು ಬಿಟ್ಟಿದೆ.
ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.